JEE Main Exam 2021 Date: ಜೆಇಇ ಮುಖ್ಯ ಪರೀಕ್ಷೆಯ ವೇಳಾಪಟ್ಟಿ ಪ್ರಕಟ

ಜುಲೈ 20ರಿಂದ ಜುಲೈ 25ರವರೆಗೆ ಹಾಗೂ ಜುಲೈ 27ರಿಂದ ಆಗಸ್ಟ್​​ 2ರವರೆಗೆ ಜೆಇಇ ಮುಖ್ಯ ಪರೀಕ್ಷೆ ನಡೆಯಲಿದೆ.

JEE Main Exam 2021 Date: ಜೆಇಇ ಮುಖ್ಯ ಪರೀಕ್ಷೆಯ ವೇಳಾಪಟ್ಟಿ ಪ್ರಕಟ
ಸಾಂಕೇತಿಕ ಚಿತ್ರ
Follow us
guruganesh bhat
| Updated By: Skanda

Updated on:Jul 07, 2021 | 6:44 AM

ದೆಹಲಿ: ಜೆಇಇ ಮುಖ್ಯ ಪರೀಕ್ಷೆ ದಿನಾಂಕ ಪ್ರಕಟವಾಗಿದ್ದು, ಜುಲೈ 20ರಿಂದ ಜುಲೈ 25ರವರೆಗೆ ಹಾಗೂ ಜುಲೈ 27ರಿಂದ ಆಗಸ್ಟ್​​ 2ರವರೆಗೆ ಜೆಇಇ ಮುಖ್ಯ ಪರೀಕ್ಷೆ ನಡೆಯಲಿದೆ.  ಈ ಕುರಿತು ಕೇಂದ್ರ ಶಿಕ್ಷಣ ಸಚಿವ ಡಾ.ರಮೇಶ್ ಪೋಖ್ರಿಯಾಲ್ ನಿಶಾಂಕ್ ಅಧಿಕೃತ ವೇಳಾಪಟ್ಟಿ ಬಿಡುಗಡೆ ಮಾಡಿದ್ದಾರೆ. ಪರೀಕ್ಷೆಗಳಿಗೆ ಹಾಜರಾಗಲು ಅರ್ಜಿ ನಮೂನೆಗಳು ಇಂದಿನಿಂದಲೇ (ಜುಲೈ 6)  ದೊರೆಯಲಿವೆ ಎಂದು ಅವರು ವಿದ್ಯಾರ್ಥಿಗಳ ಜತೆಗೆ ನಡೆಸಿದ ನೇರ ಸಂವಾದದ ಸಮಯದಲ್ಲಿ ಮಾಹಿತಿ ನೀಡಿದರು. ಕೊವಿಡ್ ಸೋಂಕಿನ ಹಿನ್ನೆಲೆಯಲ್ಲಿ  ಪರೀಕ್ಷಾ ಕೇಂದ್ರಗಳ ಸಂಖ್ಯೆಯನ್ನು ಹೆಚ್ಚಿಸಲಾಗಿದೆ. ಕೊವಿಡ್ ತಡೆ ಮತ್ತು ಅಗತ್ಯ ಕಟ್ಟುನಿಟ್ಟಿನ ಕ್ರಮಗಳ ಜತೆಗೆ ಪರೀಕ್ಷೆಯನ್ನು ನಡೆಸಲಾಗುವುದು ಎಂದು ಸಹ ಕೇಂದ್ರ ಶಿಕ್ಷಣ ಸಚಿವ ಡಾ.ರಮೇಶ್ ಪೋಖ್ರಿಯಾಲ್ ನಿಶಾಂಕ್ ತಿಳಿಸಿದರು.

20 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಜೆಇಇ 2021ರ ಮುಖ್ಯಪರೀಕ್ಷೆಗೆ ಹೆಸರು ನೋಂದಾಯಿಸಿಕೊಂಡಿದ್ದಾರೆ. ಈವರೆಗೆ 12 ಲಕ್ಷ ವಿದ್ಯಾರ್ಥಿಗಳು ಈ ಪರೀಕ್ಷೆಯನ್ನು ಬರೆದಿದ್ದಾರೆ. ಇನ್ನೂ ಲಕ್ಷಾಂತರ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಕಾಯುತ್ತಿದ್ದಾರೆ.

ಜೆಇಇ ಮೊದಲ ಹಂತದ ಪರೀಕ್ಷೆ ಫೆಬ್ರವರಿ ತಿಂಗಳಲ್ಲಿಯೂ, ಎರಡನೇ ಹಂತದ ಪರೀಕ್ಷೆ ಮಾರ್ಚ್ ತಿಂಗಳಲಲ್ಇಯೂ ನಡೆಸಲಾಗಿತ್ತು.  ಆದರೆ ಕೊವಿಡ್ ಸೋಂಕು ಹೆಚ್ಚಾದ ಕಾರಣ ಎಪ್ರಿಲ್ ಮತ್ತು ಮೇ ತಿಂಗಳಲ್ಲಿ ನಡೆಯಬೇಕಿದ್ದ ಪರೀಕ್ಷೆಗಳನ್ನು ನಡೆಸಲು ಸಾಧ್ಯವಾಗಿರಲಿಲ್ಲ.

ಇದನ್ನೂ ಓದಿ:

2nd PUC Results 2021: ದ್ವಿತೀಯ ಪಿಯುಸಿ ಅಂಕ ನಿಗದಿ ಹೇಗೆ? ವಿದ್ಯಾರ್ಥಿಗಳೇ, ತಪ್ಪದೇ ಈ ಸುದ್ದಿ ಓದಿ

SSLC Exams 2021: ಎಸ್​ಎಸ್​ಎಲ್​ಸಿ ಪರೀಕ್ಷೆ ರದ್ದು ಮಾಡುವಂತೆ ಕೋರಿ ಹೈಕೋರ್ಟ್​ಗೆ ಪಿಐಎಲ್ ಸಲ್ಲಿಕೆ

(JEE Exam 2021 Date announced July 20 to 25 and July 27 to August 2)

Published On - 7:47 pm, Tue, 6 July 21

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ