Sign In

By signing in or creating an account, you agree with Associated Broadcasting Company's Terms & Conditions and Privacy Policy.

JEE-NEET 2020: ಪರೀಕ್ಷೆ ಎದುರಿಸಲು ಹೆಚ್ಚುವರಿ ಅವಕಾಶ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮುಂದೂಡಿದ ಸುಪ್ರೀಂ ಕೋರ್ಟ್

Supreme Court on JEE NEET Petition: ಕೋವಿಡ್-19 ಕಾರಣದಿಂದ ಪರೀಕ್ಷೆ ಎದುರಿಸಲಾಗದವರಿಗೆ ಹೆಚ್ಚುವರಿ ಅವಕಾಶ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮುಂದೂಡಿದ ಸುಪ್ರೀಂ ಕೋರ್ಟ್

JEE-NEET 2020: ಪರೀಕ್ಷೆ ಎದುರಿಸಲು ಹೆಚ್ಚುವರಿ ಅವಕಾಶ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮುಂದೂಡಿದ ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್
Follow us
TV9 Web
| Updated By: ganapathi bhat

Updated on:Apr 06, 2022 | 7:59 PM

ದೆಹಲಿ: ಕೊರೊನಾ ಸಾಂಕ್ರಾಮಿಕ ಕಾರಣದಿಂದ JEE (Joint Entrance Examination) ಹಾಗೂ NEET (National Eligibility cum Entrance Test) ಪರೀಕ್ಷೆಯನ್ನು ಬರೆಯಲು ಸಾಧ್ಯವಾಗದವರಿಗೆ ಮತ್ತೊಂದು ಹೆಚ್ಚುವರಿ ಅವಕಾಶ ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು  ಸುಪ್ರೀಂ ಕೋರ್ಟ್ ಮುಂದೂಡಿದೆ. UPSC (Union Public Service Commission) ಪರೀಕ್ಷೆ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಇತ್ತೀಚೆಗಷ್ಟೇ ನಡೆಸಿದೆ. ಇದೀಗ, JEE ಮತ್ತು NEET ಪರೀಕ್ಷೆ ವಿಚಾರವಾಗಿ ತೀರ್ಪಿಗೆ ಕಾದಿರಿ ಎಂದು ಕೋರ್ಟ್ ತಿಳಿಸಿದೆ.

ನ್ಯಾಯಮೂರ್ತಿ ಎ.ಎಮ್. ಖಾನ್ವಿಲ್ಕರ್ ನೇತೃತ್ವದ ನ್ಯಾಯಪೀಠ ವಿಚಾರಣೆಯನ್ನು ಆಲಿಸಿ, ಕೊರೊನಾ ಕಾರಣದಿಂದ ಪರೀಕ್ಷೆ ಬರೆಯಲಾಗದ ಅಭ್ಯರ್ಥಿಗಳು ಮತ್ತೊಮ್ಮೆ ಅವಕಾಶ ಕೇಳಿ ಸಲ್ಲಿಸಿದ್ದ ಅರ್ಜಿ ತೀರ್ಪನ್ನು ಮುಂದೂಡಿದ್ದು, ಅರ್ಜಿದಾರರು ತೀರ್ಪಿಗಾಗಿ ಕಾದಿರುವಂತೆ ತಿಳಿಸಿದೆ.

ಅಕ್ಟೋಬರ್ 2020ರಲ್ಲಿ ಎಲ್ಲಾ ಅವಕಾಶ ಮುಗಿಸಿರುವ ವಿದ್ಯಾರ್ಥಿಗಳಿಗೆ ಕೋವಿಡ್-19 ಕಾರಣದಿಂದಾಗಿ ಮತ್ತೊಮ್ಮೆ ಪರೀಕ್ಷೆ ಎದುರಿಸಲು ಅವಕಾಶ ನೀಡಬೇಕು ಎಂದು ಸುಪ್ರೀಂ ಕೋರ್ಟ್​ನಲ್ಲಿ ಅರ್ಜಿ ಸಲ್ಲಿಸಲಾಗಿತ್ತು. ಇಂದು ನಡೆದ ವಿಚಾರಣೆಯಲ್ಲಿ ನ್ಯಾಯವಾದಿ ಮ್ಯಾಥ್ಯೂ ಜೆ. ನೆಡುಂಪಾರ ಕೋವಿಡ್​ನಿಂದಾಗಿ ಪರೀಕ್ಷೆ ವಂಚಿತರಾಗಿರುವ ಅಭ್ಯರ್ಥಿಗಳಿಗೆ ಮತ್ತೊಂದು ಅವಕಾಶ ನೀಡಬೇಕು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: UPSC Civil Service Exam: ವಯೋಮಿತಿ ಮೀರಿದವರಿಗೆ UPSC ಪರೀಕ್ಷೆ ಬರೆಯಲು ಹೆಚ್ಚುವರಿ ಅವಕಾಶವಿಲ್ಲ: ಕೇಂದ್ರ ಸರ್ಕಾರ

UPSC ಪರೀಕ್ಷೆ ವಿಚಾರದಲ್ಲಿ ಏನು ನಿರ್ಧಾರ ಕೈಗೊಳ್ಳಲಾಗಿತ್ತೋ, ಅದೇ ನೀತಿ ಇಲ್ಲಿಯೂ ಅಳವಡಿಕೆಯಾಗುತ್ತದೆ ಎಂದು ಕೋರ್ಟ್ ಪ್ರತಿಕ್ರಿಯೆ ನೀಡಿದೆ.

ನಿಗದಿತ ವಯೋಮಾನ ಮೀರಿದ, ಯುಪಿಎಸ್​ಸಿ ನಾಗರಿಕ ಸೇವಾ (UPSC Civil Service Examination) ಅಭ್ಯರ್ಥಿಗಳಿಗೆ ಪರೀಕ್ಷೆ ಎದುರಿಸಲು ಹೆಚ್ಚುವರಿ ಅವಕಾಶ ನೀಡುವ ವಿಚಾರವನ್ನು ಕೇಂದ್ರ ಸರ್ಕಾರ ವಿರೋಧಿಸುತ್ತದೆ ಎಂದು ಸುಪ್ರೀಂ ಕೋರ್ಟ್​ಗೆ ಮಂಗಳವಾರ (ಫೆ. 9) ಹೇಳಿಕೆ ನೀಡಿತ್ತು. 2020ರಲ್ಲಿ ಕೋವಿಡ್ ಸಾಂಕ್ರಾಮಿಕ ರೋಗದ ಕಾರಣದಿಂದ ಕೊನೆಯ ಬಾರಿ ಪರೀಕ್ಷೆ ಎದುರಿಸಲು ವಿಫಲರಾದವರು ಕೂಡ ವಯಸ್ಸು ಮೀರಿದ್ದರೆ ಪರೀಕ್ಷೆಗೆ ಹಾಜರಾಗುವ ಅವಕಾಶ ನೀಡಲು ಬಯಸುವುದಿಲ್ಲ ಎಂದು ಸರ್ಕಾರ ಕೋರ್ಟ್​ಗೆ ತಿಳಿಸಿತ್ತು.

  ಇದನ್ನೂ ಓದಿ: UPSC CSE ನಾಗರಿಕ ಸೇವಾ ಪರೀಕ್ಷೆ; ಇನ್ನೊಂದು ಅವಕಾಶ ನೀಡಲು ಕೇಂದ್ರ ಸಮ್ಮತಿ

ಕೊರೊನಾ ಕಾರಣದಿಂದ ಕೊನೆಯ ಬಾರಿ ಪರೀಕ್ಷೆ ಬರೆಯಲು ಅವಕಾಶ ವಂಚಿತರಾದವರು, ನಿಗದಿತ ವಯೋಮಾನ ಮೀರಿಲ್ಲವಾದರೆ, ಮತ್ತೊಂದು ಬಾರಿ ಪರೀಕ್ಷೆ ಎದುರಿಸಬಹುದು ಎಂದು ಕೋರ್ಟ್ ತಿಳಿಸಿತ್ತು.

Published On - 12:10 pm, Mon, 15 February 21

28 ಸೆಕೆಂಡಲ್ಲಿ 20 ಹೊಡೆತ; ಉತ್ತರಾಖಂಡದ ಮೆಡಿಕಲ್ ಶಾಪ್ ಮಾಲೀಕರ ಮೇಲೆ ಹಲ್ಲೆ
28 ಸೆಕೆಂಡಲ್ಲಿ 20 ಹೊಡೆತ; ಉತ್ತರಾಖಂಡದ ಮೆಡಿಕಲ್ ಶಾಪ್ ಮಾಲೀಕರ ಮೇಲೆ ಹಲ್ಲೆ
ಕಾಮಿಡಿ ಶೋಗಳಲ್ಲಿ ಅಡಲ್ಟ್ ಭಾಷೆ ಯಾಕೆ? ಸಮರ್ಥನೆ ನೀಡಿದ ನಿರೂಪ್, ಶ್ರವಣ್
ಕಾಮಿಡಿ ಶೋಗಳಲ್ಲಿ ಅಡಲ್ಟ್ ಭಾಷೆ ಯಾಕೆ? ಸಮರ್ಥನೆ ನೀಡಿದ ನಿರೂಪ್, ಶ್ರವಣ್
ಲೋಕಾಯುಕ್ತ ಬಿ ರಿಪೋರ್ಟ್ ಸಲ್ಲಿಕೆ ಪ್ರಶ್ನಿಸಿ ದೂರುದಾರರಿಂದ ತಕರಾರು ಅರ್ಜಿ
ಲೋಕಾಯುಕ್ತ ಬಿ ರಿಪೋರ್ಟ್ ಸಲ್ಲಿಕೆ ಪ್ರಶ್ನಿಸಿ ದೂರುದಾರರಿಂದ ತಕರಾರು ಅರ್ಜಿ
ಗೃಹಲಕ್ಷ್ಮಿ ಹಣದಿಂದ ತೋಟದಲ್ಲಿ ಬೋರ್​ವೆಲ್ ಕೊರೆಸಿದ ದಂಪತಿ
ಗೃಹಲಕ್ಷ್ಮಿ ಹಣದಿಂದ ತೋಟದಲ್ಲಿ ಬೋರ್​ವೆಲ್ ಕೊರೆಸಿದ ದಂಪತಿ
ಸಿದ್ದರಾಮಯ್ಯ ದಲಿತರ ಕೈ ಬಿಟ್ಟು ಮುಸಲ್ಮಾನರ ಕೈ ಹಿಡಿದಿದ್ದಾರೆ: ಅಶೋಕ
ಸಿದ್ದರಾಮಯ್ಯ ದಲಿತರ ಕೈ ಬಿಟ್ಟು ಮುಸಲ್ಮಾನರ ಕೈ ಹಿಡಿದಿದ್ದಾರೆ: ಅಶೋಕ
ಸ್ಟ್ಯಾಂಡಪ್ ಕಾಮಿಡಿಯನ್ ನಿರೂಪ್ ಮೋಹನ್ ಬಗ್ಗೆ ನಿಮಗೆಷ್ಟು ಗೊತ್ತು?
ಸ್ಟ್ಯಾಂಡಪ್ ಕಾಮಿಡಿಯನ್ ನಿರೂಪ್ ಮೋಹನ್ ಬಗ್ಗೆ ನಿಮಗೆಷ್ಟು ಗೊತ್ತು?
ಮತೀಯ ಭಾವನೆಗಳನ್ನು ಯಾರೂ ಕೆರಳಿಸಬಾರದು: ಕೋಲಾರ ಮಸೀದಿಯೊಂದರ ಮೌಲ್ವಿ
ಮತೀಯ ಭಾವನೆಗಳನ್ನು ಯಾರೂ ಕೆರಳಿಸಬಾರದು: ಕೋಲಾರ ಮಸೀದಿಯೊಂದರ ಮೌಲ್ವಿ
ವರದಿ ಮೇಲಿನ ಚರ್ಚೆಗೆ ಸಿಎಂ ವಿಶೇಷ ಅಧಿವೇಶನ ಕರೆಯಲು ಮನವಿ: ಜಾರಕಿಹೊಳಿ
ವರದಿ ಮೇಲಿನ ಚರ್ಚೆಗೆ ಸಿಎಂ ವಿಶೇಷ ಅಧಿವೇಶನ ಕರೆಯಲು ಮನವಿ: ಜಾರಕಿಹೊಳಿ
ಮಧ್ಯಂತರ ವರದಿಯನ್ನು ಅಧಿಕಾರಿಗಳು ಅಂತಿಮ ವರದಿ ಅಂದಿದ್ದಾರೆ: ಸ್ನೇಹಮಯಿ
ಮಧ್ಯಂತರ ವರದಿಯನ್ನು ಅಧಿಕಾರಿಗಳು ಅಂತಿಮ ವರದಿ ಅಂದಿದ್ದಾರೆ: ಸ್ನೇಹಮಯಿ
ಬನಶಂಕರಿ ದೇವಿ ಸನ್ನಿಧಿಯಲ್ಲಿ ಪವಿತ್ರಾ ಗೌಡ, ಇಲ್ಲಿದೆ ವಿಡಿಯೋ
ಬನಶಂಕರಿ ದೇವಿ ಸನ್ನಿಧಿಯಲ್ಲಿ ಪವಿತ್ರಾ ಗೌಡ, ಇಲ್ಲಿದೆ ವಿಡಿಯೋ