Maharashtra: ಥಾಣೆಯಲ್ಲಿ ಎದುರಿನಿಂದ ಬಂದ ಟ್ರಕ್‌ಗೆ ಜೀಪ್‌ ಡಿಕ್ಕಿ, 6 ಮಂದಿ ಸಾವು, ಮೂವರಿಗೆ ಗಾಯ

ಎದುರಿನಿಂದ ಬಂದ ಟ್ರಕ್‌ಗೆ ಜೀಪ್‌ ಡಿಕ್ಕಿ ಹೊಡೆದು 6 ಜನ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಥಾಣೆಯ ಭಿವಂಡಿ ನಾಸಿಕ್ ರಸ್ತೆಯ ಖಡ್ವಾಲಿ ಗ್ರಾಮದಲ್ಲಿ ನಡೆದಿದೆ.

Maharashtra: ಥಾಣೆಯಲ್ಲಿ ಎದುರಿನಿಂದ ಬಂದ ಟ್ರಕ್‌ಗೆ ಜೀಪ್‌ ಡಿಕ್ಕಿ, 6 ಮಂದಿ ಸಾವು, ಮೂವರಿಗೆ ಗಾಯ
ಸಾಂದರ್ಭಿಕ ಚಿತ್ರ
Follow us
ಅಕ್ಷಯ್​ ಪಲ್ಲಮಜಲು​​
|

Updated on:Jul 18, 2023 | 4:44 PM

ಥಾಣೆ, ಜು.18: ಇಂದು ಬೆಳಿಗ್ಗೆ 6.30ಕ್ಕೆ  ಕಂಟೈನರ್​​ ಜೀಪೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ 6 ಜನ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಥಾಣೆಯ ಭಿವಂಡಿ ನಾಸಿಕ್ ರಸ್ತೆಯ ಖಡ್ವಾಲಿ ಗ್ರಾಮದಲ್ಲಿ ನಡೆದಿದೆ. ವೇಗವಾಗಿ ಬಂದ ಕಂಟೈನರ್‌ಗೆ ಎದುರಿನಿಂದ ಬಂದ ಜೀಪ್ ಡಿಕ್ಕಿ ಹೊಡೆದಿದೆ, ಈ ಅಪಘಾತದಲ್ಲಿ 6 ಜನ ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ. ಜೀಪಿನ ವಿರುದ್ಧ ದಿಕ್ಕಿನಿಂದ ಬಂದ ಟ್ರಕ್  ಜೀಪಿಗೆ ಡಿಕ್ಕಿ ಹೊಡೆದು, ಜೀಪನ್ನು ಸುಮಾರು 100 ಮೀಟರ್‌ವರೆಗೆ ಎಳೆದೊಯ್ದು ಪಲ್ಟಿಯಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ . ಮೃತರನ್ನು ಚಿನ್ಮಯಿ ವಿಕಾಸ್ ಶಿಂಧೆ-15, ರಿಯಾ ಕಿಶೋರ್ ಪರದೇಶಿ, ಚೈತಾಲಿ ಸುಶಾಂತ್ ಪಿಂಪಲ್-27, ಸಂತೋಷ್ ಅನಂತ್ ಜಾಧವ್-50, ವಸಂತ್ ಧರ್ಮ ಜಾಧವ್-50, ಪ್ರಜ್ವಲ್ ಶಂಕರ್ ಫಿರ್ಕೆ ಎಂದು ಗುರುತಿಸಲಾಗಿದೆ.

ಗಾಯಗೊಂಡವರನ್ನು ಭಿವಂಡಿಯ ಐಜಿಎಂ ಆಸ್ಪತ್ರೆಗೆ ಮತ್ತು ಕಲ್ವಾದಲ್ಲಿನ ನಾಗರಿಕ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಪೊಲೀಸರು ಪಿಟಿಐಗೆ ತಿಳಿಸಿದ್ದಾರೆ. ಗಾಯಗೊಂಡವರಲ್ಲಿ ದಿಲೀಪ್ ಕುಮಾರ್ ವಿಶ್ವಕರ್ಮ – 29, ಚೇತನ ಗಣೇಶ್ – 19, ಕುನಾಲ್ ಜ್ಞಾನೇಶ್ವರ್ ಭಮ್ರೆ – 22 ಎಂದು ಹೇಳಲಾಗಿದೆ.

ಇದನ್ನೂ ಓದಿ:  ಚಾಲಕನ ನಿಯಂತ್ರಣ ತಪ್ಪಿ ವ್ಯಾನ್ ಡಿವೈಡರ್​ ಮೇಲೆ ಜಿಗಿದು ಎದುರಿನಿಂದ ಬರುತ್ತಿದ್ದ ಡಿಟಿಸಿ ಬಸ್​​ಗೆ ಡಿಕ್ಕಿ ಹೊಡೆದ ಪರಿಣಾಮ 3 ಜನ ಸಾವು

ಇನ್ನೂ ಥಾಣೆಯ ಈ ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ಸವಾರರು ನಿಧಾನವಾಗಿ ವಾಹನ ಚಲಿಸುವಂತೆ ಅಧಿಕಾರಿಗಳು ತಿಳಿಸಿದ್ದಾರೆ. ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮಂಗಳವಾರ ಎಚ್ಚರಿಕೆ ನೀಡಿದ್ದು, ಥಾಣೆಯ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:42 pm, Tue, 18 July 23

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್