AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಗ ಜೀತ್ ಅದಾನಿ ಮದುವೆಯ ಮೊದಲ ಫೋಟೋ ಹಂಚಿಕೊಂಡ ಗೌತಮ್ ಅದಾನಿ

Jeet Adani-Diva Shah Wedding: ಭಾರತದ ಅತ್ಯಂತ ಶ್ರೀಮಂತ ಉದ್ಯಮಿಗಳಲ್ಲಿ ಒಬ್ಬರಾಗಿರುವ ಗೌತಮ್ ಅದಾನಿ ಅವರ ಮಗ ಜೀತ್ ಅದಾನಿಯ ಮದುವೆ ಗುಜರಾತ್​ನ ಅಹಮದಾಬಾದ್​ನಲ್ಲಿರುವ ಶಾಂತಿಗ್ರಾಮ ಎಂಬ ಸ್ಥಳದಲ್ಲಿ ಅತ್ಯಂತ ಸಾಂಪ್ರದಾಯಿಕವಾಗಿ ನಡೆದಿದೆ. ಹೆಚ್ಚು ಆಡಂಬರವಿಲ್ಲದೆ ಇಂದು ಮಧ್ಯಾಹ್ನ 2 ಗಂಟೆಗೆ ಮದುವೆ ನಡೆದಿದೆ. ಸಾಂಪ್ರದಾಯಿಕ ಜೈನ ಮತ್ತು ಗುಜರಾತಿ ಸಂಸ್ಕೃತಿಯ ಪ್ರಕಾರ ವಿವಾಹದ ಆಚರಣೆಗಳನ್ನು ನಡೆಸಲಾಯಿತು.

ಮಗ ಜೀತ್ ಅದಾನಿ ಮದುವೆಯ ಮೊದಲ ಫೋಟೋ ಹಂಚಿಕೊಂಡ ಗೌತಮ್ ಅದಾನಿ
Jeet Adani Wedding
ಸುಷ್ಮಾ ಚಕ್ರೆ
|

Updated on: Feb 07, 2025 | 9:12 PM

Share

ಅಹಮದಾಬಾದ್: ಭಾರತದ ಬಿಲಿಯನೇರ್, ಅದಾನಿ ಗ್ರೂಪ್ ಅಧ್ಯಕ್ಷ ಗೌತಮ್ ಅದಾನಿ ಅವರ ಕಿರಿಯ ಮಗ ಜೀತ್ ಅದಾನಿ ಇಂದು ಗುಜರಾತ್​ನ ಅಹಮದಾಬಾದ್‌ನಲ್ಲಿ ನಡೆದ ಅತ್ಯಂತ ಖಾಸಗಿ ಸಮಾರಂಭದಲ್ಲಿ ವಿವಾಹ ಜೀವನಕ್ಕೆ ಕಾಲಿರಿಸಿದ್ದಾರೆ. ಭಾರತದ ಶ್ರೀಮಂತ ಉದ್ಯಮಿಯಾಗಿದ್ದರೂ ಹೆಚ್ಚು ವೈಭವವಿಲ್ಲದೆ, ಸೆಲೆಬ್ರಿಟಿಗಳಿಗೆ ಆಹ್ವಾನ ನೀಡದೆ ಎರಡೂ ಕುಟುಂಬಸ್ಥರ ಮುಂದೆ ಗೌತಮ್ ಅದಾನಿ ತಮ್ಮ ಮಗ ಜೀತ್ ಅದಾನಿಯ ಮದುವೆ ಮಾಡಿದ್ದಾರೆ. ಜೀತ್ ಅದಾನಿ ವಜ್ರದ ವ್ಯಾಪಾರಿ ಜೈಮಿನ್ ಶಾ ಅವರ ಪುತ್ರಿಯಾದ ದಿವಾ ಜೈಮಿನ್ ಶಾ ಅವರನ್ನು ವಿವಾಹವಾಗಿದ್ದಾರೆ. ತಮ್ಮ ಮಗನ ಮದುವೆಯ ಮೊದಲ ಫೋಟೋವನ್ನು ಖುದ್ದು ಗೌತಮ್ ಅದಾನಿ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಸಾಮಾಜಿಕ ಮಾಧ್ಯಮದಲ್ಲಿ, ಗೌತಮ್ ಅದಾನಿ ತಮ್ಮ ಮಗನ ವಿವಾಹದ ಫೋಟೋಗಳನ್ನು ಹಂಚಿಕೊಂಡಿದ್ದಾರೆ. “ಸರ್ವಶಕ್ತನಾದ ದೇವರ ಆಶೀರ್ವಾದದೊಂದಿಗೆ, ಜೀತ್ ಮತ್ತು ದಿವಾ ಇಂದು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಈ ವಿವಾಹವು ಇಂದು ಅಹಮದಾಬಾದ್‌ನಲ್ಲಿ ಸಾಂಪ್ರದಾಯಿಕ ಆಚರಣೆಗಳು ಮತ್ತು ಶುಭ ಮಂಗಲ್ ಭಾವದೊಂದಿಗೆ ಪ್ರೀತಿಪಾತ್ರರ ನಡುವೆ ನಡೆಯಿತು. ಇದು ಒಂದು ಸಣ್ಣ ಮತ್ತು ಅತ್ಯಂತ ಖಾಸಗಿ ಕಾರ್ಯಕ್ರಮವಾಗಿತ್ತು. ಆದ್ದರಿಂದ ನಾವು ಬಯಸಿದ್ದರೂ ಸಹ ಎಲ್ಲಾ ಹಿತೈಷಿಗಳನ್ನು ಆಹ್ವಾನಿಸಲು ಸಾಧ್ಯವಾಗಲಿಲ್ಲ. ಇದಕ್ಕಾಗಿ ನಾನು ಕ್ಷಮೆ ಯಾಚಿಸುತ್ತೇನೆ. ನನ್ನ ಮಗ ಜೀತ್ ಮತ್ತು ಸೊಸೆ ದಿವಾಗಾಗಿ ನಾನು ನಿಮ್ಮೆಲ್ಲರಿಂದ ಆಶೀರ್ವಾದ ಮತ್ತು ಪ್ರೀತಿಯನ್ನು ಬಯಸುತ್ತೇನೆ” ಎಂದು ಕೈಗಾರಿಕೋದ್ಯಮಿ ಗೌತಮ್ ಅದಾನಿ ಎಕ್ಸ್ ಪೋಸ್ಟ್‌ನಲ್ಲಿ ಬರೆದಿದ್ದಾರೆ.

ಇದನ್ನೂ ಓದಿ: ಉದ್ಯಮಗಳು ಕುಂಭಮೇಳದಿಂದ ಕಲಿಯಬಹುದಾದ ಪಾಠಗಳು ಹಲವು: ಗೌತಮ್ ಅದಾನಿ

ವಿವಾಹ ಮಹೋತ್ಸವಗಳು ಇಂದು ಮಧ್ಯಾಹ್ನ 2 ಗಂಟೆಗೆ ಪ್ರಾರಂಭವಾದವು ಮತ್ತು ಅಹಮದಾಬಾದ್‌ನ ಶಾಂತಿಗ್ರಾಮ ಎಂಬ ಅದಾನಿ ಪಟ್ಟಣದಲ್ಲಿ ಸಾಂಪ್ರದಾಯಿಕ ಜೈನ ಮತ್ತು ಗುಜರಾತಿ ಸಂಸ್ಕೃತಿಯ ಪ್ರಕಾರ ಆಚರಣೆಗಳನ್ನು ನಡೆಸಲಾಯಿತು. ಈ ಸಂದರ್ಭದಲ್ಲಿ ಗೌತಮ್ ಅದಾನಿ ಅವರು 10,000 ಕೋಟಿ ರೂ.ಗಳನ್ನು ವಿವಿಧ ಸಾಮಾಜಿಕ ಉದ್ದೇಶಗಳಿಗೆ ವಿನಿಯೋಗಿಸಲು ದೇಣಿಗೆ ನೀಡಿದ್ದಾರೆ. ಅವರ ದೇಣಿಗೆಯ ಬಹುಪಾಲು ಭಾಗವು ಆರೋಗ್ಯ ರಕ್ಷಣೆ, ಶಿಕ್ಷಣ ಮತ್ತು ಕೌಶಲ್ಯ ಅಭಿವೃದ್ಧಿಯಲ್ಲಿ ಬೃಹತ್ ಮೂಲಸೌಕರ್ಯ ಉಪಕ್ರಮಗಳಿಗೆ ಹಣಕಾಸು ಒದಗಿಸಲು ವಿನಿಯೋಗವಾಗಲಿದೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಫೆ. 7ರಂದು ಸರಳವಾಗಿ ಅದಾನಿ ಮಗ ಜೀತ್ ಮದುವೆ; ಯಾವ ಸೆಲೆಬ್ರಿಟಿಗಳಿಗೂ ಆಹ್ವಾನವಿಲ್ಲ!

ಗೌತಮ್ ಅದಾನಿ ದಂಪತಿಗಳು ಪ್ರತಿ ವರ್ಷ 500 ಅಂಗವಿಕಲ ಮಹಿಳೆಯರ ಮದುವೆಗೆ ತಲಾ 10 ಲಕ್ಷ ರೂ.ಗಳನ್ನು ನೀಡುವುದಾಗಿ ಪ್ರತಿಜ್ಞೆ ಮಾಡಿದ್ದರು. ಅದರಂತೆ ತಮ್ಮ ಮದುವೆಗೂ ಕೆಲವು ದಿನಗಳ ಮೊದಲು ಜೀತ್ ಅದಾನಿ ತಂದೆ ಘೋಷಿಸಿದ ಈ ಉಪಕ್ರಮವನ್ನು ಪ್ರಾರಂಭಿಸಲು 21 ನವವಿವಾಹಿತ ಅಂಗವಿಕಲ ಮಹಿಳೆಯರು ಮತ್ತು ಅವರ ಗಂಡಂದಿರನ್ನು ಭೇಟಿಯಾಗಿದ್ದರು.

ಈ ಮೂಲಕ ಬಿಲಿಯನೇರ್ ಗೌತಮ್ ಅದಾನಿಯವರ ಕಿರಿಯ ಪುತ್ರ ಜೀತ್ ಇಂದು ಯಾವುದೇ ಪ್ರದರ್ಶನ ಮತ್ತು ಸೆಲೆಬ್ರಿಟಿ ತಾರೆಯರಿಲ್ಲದೆ ಸರಳ ಮತ್ತು ಸಾಂಪ್ರದಾಯಿಕ ಸಮಾರಂಭದಲ್ಲಿ ವಿವಾಹವಾಗಿದ್ದಾರೆ. ಅದಾನಿ ಮಗನ ಮದುವೆ ಕೂಡ ಅವರ ಪ್ರತಿಸ್ಪರ್ಧಿ ಬಿಲಿಯನೇರ್ ಆಗಿರುವ ಮುಖೇಶ್ ಅಂಬಾನಿಯವರ ಕಿರಿಯ ಪುತ್ರ ಅನಂತ್ ಅವರ ವಿವಾಹದಂತೆ ಮತ್ತೊಂದು ಅದ್ದೂರಿ ವಿವಾಹವಾಗಿರಲಿದೆ ಎಂದು ಊಹಿಸಲಾಗಿತ್ತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ