AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆಯೊಳಗೆ ಗುಂಡಿಕ್ಕಿ ಆಭರಣ ವ್ಯಾಪಾರಿ ಮತ್ತವರ ಪತ್ನಿಯ ಹತ್ಯೆ

ಮಧ್ಯಪ್ರದೇಶದ ಮಂದ್ಸೌರ್‌ನಲ್ಲಿ ಆಭರಣ ವ್ಯಾಪಾರಿ ದಿಲೀಪ್ ಜೈನ್, ಅವರ ಪತ್ನಿ ರೇಖಾ ಎಂಬುವವರ ಹತ್ಯೆ ನಡೆದಿದೆ. ಪ್ರಾಥಮಿಕ ತನಿಖೆಯಲ್ಲಿ ಅವರ ಚಿನ್ನದ ವ್ಯವಹಾರದ ಹಣಕಾಸಿನ ವಿವಾದವೇ ಈ ಮಾರಣಾಂತಿಕ ಘಟನೆಗೆ ಕಾರಣ ಎನ್ನಲಾಗಿದೆ. ಪೊಲೀಸರು ಸ್ಥಳದಿಂದ ಪಿಸ್ತೂಲ್ ಮತ್ತು ಚಾಕುವನ್ನು ವಶಪಡಿಸಿಕೊಂಡಿದ್ದು, ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ. ಘಟನೆಯ ಕುರಿತು ತನಿಖೆ ಮುಂದುವರೆದಿದೆ.

ಮನೆಯೊಳಗೆ ಗುಂಡಿಕ್ಕಿ ಆಭರಣ ವ್ಯಾಪಾರಿ ಮತ್ತವರ ಪತ್ನಿಯ ಹತ್ಯೆ
ಆಭರಣ ವ್ಯಾಪಾರಿ ದಂಪತಿImage Credit source: India Today
ನಯನಾ ರಾಜೀವ್
|

Updated on:Jan 01, 2026 | 11:46 AM

Share

ಮಧ್ಯಪ್ರದೇಶ, ಜನವರಿ 01: ಆಭರಣ ವ್ಯಾಪಾರಿ ಮತ್ತವರ ಪತ್ನಿ(Wife) ಮನೆಯೊಳಗೆ ಶವವಾಗಿ ಪತ್ತೆಯಾಗಿರುವ ಘಟನೆ ಮಂಗಳವಾರ ಮಧ್ಯಪ್ರದೇಶದ ಮಂದ್ಸೌರ್​ನಲ್ಲಿ ನಡೆದಿದೆ. ಪ್ರಾಥಮಿಕ ತನಿಖೆಯಲ್ಲಿ ಅವರ ವ್ಯವಹಾರದ ವಿವಾದವೇ ಈ ಸಾವಿಗೆ ಕಾರಣ ಎನ್ನಲಾಗಿದೆ. ಇಬ್ಬರನ್ನೂ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಅದೇ ಸ್ಥಳದಲ್ಲಿ ವಿಕಾಸ್ ಎಂಬುವವರ ಶವವೂ ದೊರೆತಿದೆ.  ಪೊಲೀಸರು ಸಾವಿಗೆ ಕಾರಣವೇನೆಂಬುದ ತಿಳಿಯಲು ಪ್ರಯತ್ನಿಸುತ್ತಿದ್ದಾರೆ. ಮೃತ ದಂಪತಿಯನ್ನು ದಿಲೀಪ್ ಜೈನ್ ಮತ್ತು ಅವರ ಪತ್ನಿ ರೇಖಾ ಎಂದು ಗುರುತಿಸಲಾಗಿದ್ದು, ಮೂರನೇ ವ್ಯಕ್ತಿಯನ್ನು ರಾಜಸ್ಥಾನದ ನಿವಾಸಿ ವಿಕಾಸ್ ಸೋನಿ ಎಂದು ಪೊಲೀಸರು ಗುರುತಿಸಿದ್ದಾರೆ.

ಗುಂಡಿನ ದಾಳಿ ನಡೆಯುವ ಮುನ್ನ ಮೂವರು ವ್ಯಕ್ತಿಗಳ ನಡುವೆ ತೀವ್ರ ವಾಗ್ವಾದ ನಡೆದಿದೆ ಎಂದು ಅಧಿಕಾರಿಗಳು ವರದಿ ಮಾಡಿದ್ದಾರೆ. ಮಂಗಳವಾರ ಸಂಜೆ 8.30 ರ ಸುಮಾರಿಗೆ ಮನೆಯೊಳಗೆ ಗುಂಡು ಹಾರಿಸಿದ ಸದ್ದು ಕೇಳಿಬಂದಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ವಿನೋದ್ ಕುಮಾರ್ ಮೀನಾ ತಿಳಿಸಿದ್ದಾರೆ.

ಸ್ಥಳಕ್ಕೆ ಆಗಮಿಸಿದ ಪೊಲೀಸರು ಶವಗಳನ್ನು ಪತ್ತೆ ಮಾಡಿದರು ಮತ್ತು ಒಂದು ಪಿಸ್ತೂಲ್ ಮತ್ತು ಚಾಕುವನ್ನು ವಶಪಡಿಸಿಕೊಂಡರು. ಸಾವಿಗೆ ನಿಖರವಾದ ಕಾರಣವನ್ನು ತಿಳಿಯಲು ಮತ್ತು ಘಟನೆಗಳ ಅನುಕ್ರಮವನ್ನು ನಿರ್ಧರಿಸಲು ಮೂರು ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

ಮತ್ತಷ್ಟು ಓದಿ: ಮನೆಯೊಳಗೆ ಹಿರಿಯ ವಕೀಲರ ಪತ್ನಿಯ ಬರ್ಬರ ಹತ್ಯೆ; ಪಕ್ಕದ ಚೇರ್​​ನಲ್ಲಿದ್ದ ಸಹಾಯಕ!

ಪೊಲೀಸರ ಪ್ರಕಾರ, ದಿಲೀಪ್ ಜೈನ್ ಅವರ ಚಿನ್ನದ ವ್ಯವಹಾರಕ್ಕೆ ಸಂಬಂಧಿಸಿದ ಹಣಕಾಸಿನ ವಿವಾದವೇ ಈ ಮಾರಕ ಘಟನೆಗೆ ಕಾರಣವಾಗಿರುವ ಸಾಧ್ಯತೆಯ ಮೇಲೆ ತನಿಖೆ ಕೇಂದ್ರೀಕರಿಸಿದೆ. ಆದಾಗ್ಯೂ, ಹಿಂಸಾಚಾರವನ್ನು ಯಾರು ಪ್ರಾರಂಭಿಸಿದರು ಮತ್ತು ಹೊರಗಿನವರಾದ ವಿಕಾಸ್ ಸೋನಿ ಆಯುಧವನ್ನು ತಂದಿದ್ದಾರೋ ಅಥವಾ ಘಟನೆಯಲ್ಲಿ ಬೇರೆ ಯಾರದ್ದೋ ಪಾತ್ರವಿದೆಯೋ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.

ಮನೆಯ ಸುತ್ತಲೂ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಸಾವಿಗೆ ಕಾರಣವಾದ ಸಂದರ್ಭಗಳನ್ನು ಸ್ಪಷ್ಟಪಡಿಸಲು ಅಧಿಕಾರಿಗಳು ಪ್ರಸ್ತುತ ದೃಶ್ಯಗಳನ್ನು ಪರಿಶೀಲಿಸುತ್ತಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:45 am, Thu, 1 January 26

ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು
ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಭಕ್ತರ ದಂಡು
ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಭಕ್ತರ ದಂಡು
ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ
ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ
ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!
ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!
ದೊಡ್ಡ ಗಣಪತಿ ದೇವಸ್ಥಾನದಲ್ಲಿ ಮೋದಿ ಹೆಸರಿನಲ್ಲಿ ವಿಶೇಷ ಪೂಜೆ, ಅಭಿಷೇಕ
ದೊಡ್ಡ ಗಣಪತಿ ದೇವಸ್ಥಾನದಲ್ಲಿ ಮೋದಿ ಹೆಸರಿನಲ್ಲಿ ವಿಶೇಷ ಪೂಜೆ, ಅಭಿಷೇಕ
ಬಾಯಿ ಮುಚ್ಕೊಂಡು ಕೂತ್ಗೊ; ಕಾವ್ಯಾಗೆ ಅವಾಜ್ ಹಾಕಿದ ಧ್ರುವಂತ್
ಬಾಯಿ ಮುಚ್ಕೊಂಡು ಕೂತ್ಗೊ; ಕಾವ್ಯಾಗೆ ಅವಾಜ್ ಹಾಕಿದ ಧ್ರುವಂತ್
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?
ಹೊಸ ವರ್ಷದ ಮೊದಲ ದಿನದಂದು ಈ ರಾಶಿಯವರಿಗೆ ಶುಭ ಫಲ
ಹೊಸ ವರ್ಷದ ಮೊದಲ ದಿನದಂದು ಈ ರಾಶಿಯವರಿಗೆ ಶುಭ ಫಲ