ಝಾನ್ಸಿಯಲ್ಲಿ ಕಾರು ಅಪಘಾತ: ಗ್ಯಾಂಗ್​ಸ್ಟರ್ ಅತೀಕ್ ಅಹ್ಮದ್ ಕಿರಿಯ ಮಗ ಅಬಾನ್ ಸೇರಿ ಇಬ್ಬರು ಸಾವು

ಝಾನ್ಸಿಯಲ್ಲಿ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ಗ್ಯಾಂಗ್‌ಸ್ಟರ್ ಅತೀಕ್ ಅಹ್ಮದ್ ಕಿರಿಯ ಮಗ ಅಬಾನ್ ಮತ್ತು ಸ್ನೇಹಿತ ಸೋನು ಮೃತಪಟ್ಟಿದ್ದಾರೆ. ಅತಿ ವೇಗದಲ್ಲಿದ್ದ ಹುಂಡೈ ಕ್ರೆಟಾ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ. ಅಬಾನ್, ಸಹೋದರ ಅಲಿ ಅಹ್ಮದ್ ಭೇಟಿ ಮಾಡಿ ಪ್ರಯಾಗ್‌ರಾಜ್‌ಗೆ ಹಿಂತಿರುಗುತ್ತಿದ್ದಾಗ ಈ ಘಟನೆ ನಡೆದಿದೆ. ಅತೀಕ್ ಕುಟುಂಬಕ್ಕೆ ಇದು ಮತ್ತೊಂದು ಆಘಾತವಾಗಿದೆ.

ಝಾನ್ಸಿಯಲ್ಲಿ ಕಾರು ಅಪಘಾತ: ಗ್ಯಾಂಗ್​ಸ್ಟರ್ ಅತೀಕ್ ಅಹ್ಮದ್ ಕಿರಿಯ ಮಗ ಅಬಾನ್ ಸೇರಿ ಇಬ್ಬರು ಸಾವು
ಆತಿಕ್ ಅಹ್ಮದ್ ಮಗ ಸಾವು

Updated on: Aug 06, 2026 | 1:03 PM

ಝಾನ್ಸಿ, ಆಗಸ್ಟ್ 06: ಗ್ಯಾಂಗ್​ಸ್ಟರ್, ರಾಜಕಾರಣಿ ಅತೀಕ್ ಅಹ್ಮದ್ ಕಿರಿಯ ಮಗ ಅಬಾನ್ ಅಪಘಾತ(Accident)ದಲ್ಲಿ ಸಾವನ್ನಪ್ಪಿದ್ದಾರೆ. ಉತ್ತರ ಪ್ರದೇಶದ ಝಾನ್ಸಿ ಬಳಿ ಗುರುವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಝಾನ್ಸಿ ಜೈಲಿನಲ್ಲಿರುವ ತಮ್ಮ ಸಹೋದರ ಅಲಿ ಅಹ್ಮದ್ ಅವರನ್ನು ಭೇಟಿಯಾಗಿ ವಾಪಸ್ ಪ್ರಯಾಗ್‌ರಾಜ್‌ಗೆ ತೆರಳುತ್ತಿದ್ದಾಗ ಝಾನ್ಸಿ-ಕಾನ್ಪುರ ರಾಷ್ಟ್ರೀಯ ಹೆದ್ದಾರಿಯ ಪೂಂಚ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ದುರಂತ ಸಂಭವಿಸಿದೆ.

ಅಬಾನ್ ಹಾಗೂ ಅವರ ಸಹಚರರು ಪ್ರಯಾಣಿಸುತ್ತಿದ್ದ ಬಿಳಿ ಬಣ್ಣದ ಹುಂಡೈ ಕ್ರೆಟಾ ಕಾರು ಅತಿ ವೇಗದಲ್ಲಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ (Divider) ರಭಸವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಅಬಾನ್ ಹಾಗೂ ಅವರ ಸ್ನೇಹಿತ ಸೋನು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಇತರ ಮೂವರು ಯುವಕರು ತೀವ್ರವಾಗಿ ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ತಕ್ಷಣವೇ ಮಾತ್‌ನ ಸಮುದಾಯ ಆರೋಗ್ಯ ಕೇಂದ್ರಕ್ಕೆ ಮತ್ತು ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಹಾರಾಣಿ ಲಕ್ಷ್ಮೀ ಬಾಯಿ ವೈದ್ಯಕೀಯ ಕಾಲೇಜಿಗೆ ರವಾನಿಸಲಾಗಿದೆ. ಝಾನ್ಸಿ ಜೈಲಿನಲ್ಲಿ ಬಂಧಿಯಾಗಿರುವ ಅತೀಕ್ ಅಹ್ಮದ್ ಅವರ ಹಿರಿಯ ಮಗ ಅಲಿ ಅಹ್ಮದ್ ಅವರನ್ನು ಭೇಟಿ ಮಾಡಲು ಅಬಾನ್ ಪ್ರಯಾಗ್‌ರಾಜ್‌ನಿಂದ ಬಂದಿದ್ದರು.

ಮತ್ತಷ್ಟು ಓದಿ: ಪ್ರತ್ಯೇಕ ರಸ್ತೆ ಅಪಘಾತ: ಮೂವರ ದಾರುಣ ಸಾವು, ಓರ್ವನ ಸ್ಥಿತಿ ಗಂಭೀರ

ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಆಸ್ಪತ್ರೆ ಹಾಗೂ ಝಾನ್ಸಿ ಜೈಲಿನ ಸುತ್ತಮುತ್ತ ಪೊಲೀಸರು ಬಿಗಿ ಭದ್ರತೆಯನ್ನು ಕೈಗೊಂಡಿದ್ದಾರೆ. ಪೊಲೀಸರು ಶವಗಳನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಮಾಫಿಯಾ ನಾಯಕ ಹಾಗೂ ಮಾಜಿ ಸಂಸದ ಅತೀಕ್ ಅಹ್ಮದ್ ಮತ್ತು ಅವರ ಸಹೋದರ ಅಶ್ರಫ್ ಅವರನ್ನು 2023 ರಲ್ಲಿ ಪ್ರಯಾಗ್‌ರಾಜ್‌ನಲ್ಲಿ ವೈದ್ಯಕೀಯ ತಪಾಸಣೆಗೆ ಕರೆದೊಯ್ಯುತ್ತಿದ್ದಾಗ ಕ್ಯಾಮೆರಾಗಳ ಎದುರಲ್ಲೇ ಗುಂಡಿಕ್ಕಿ ಕೊಲ್ಲಲಾಗಿತ್ತು.

ಅತೀಕ್ ಅವರ ಮತ್ತೊಬ್ಬ ಮಗ ಅಸದ್ 2023 ರ ಏಪ್ರಿಲ್‌ನಲ್ಲಿ ಝಾನ್ಸಿಯಲ್ಲೇ ನಡೆದ ಯುಪಿ ಎಸ್‌ಟಿಎಫ್ ಎನ್‌ಕೌಂಟರ್‌ನಲ್ಲಿ ಹತ್ಯೆಯಾಗಿದ್ದ. ಅಲಿ ಮತ್ತು ಉಮರ್ ಜೈಲಿನಲ್ಲಿದ್ದರೆ, ಕಿರಿಯ ಮಗ ಅಬಾನ್ ಈಗ ರಸ್ತೆ ಅಪಘಾತದಲ್ಲಿ ಅಕಾಲಿಕ ಮರಣ ಹೊಂದಿದ್ದಾರೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
Loading...
Unable to load recommendations.
Follow Us