AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾರ್ಖಂಡ್​: ಪೊಲೀಸರಿಂದ ತಪ್ಪಿಸಿಕೊಳ್ಳಲು ನದಿಗೆ ಹಾರಿದ 6 ಸೈಬರ್ ಅಪರಾಧಿಗಳು

ಪೊಲೀಸರಿಂದ ತಪ್ಪಿಸಿಕೊಳ್ಳಲು 6 ಸೈಬರ್ ಅಪರಾಧಿಗಳು ನದಿಗೆ ಹಾರಿರುವ ಘಟನೆ ಜಾರ್ಖಂಡ್​ನಲ್ಲಿ ನಡೆದಿದೆ. ಸೈಬರ್ ಅಪರಾಧಗಳಲ್ಲಿ ಭಾಗಿಯಾಗಿರುವ ಆರು ಮಂದಿಯನ್ನು ಇತ್ತೀಚೆಗೆ ಜಾರ್ಖಂಡ್ ಪೊಲೀಸರು ಬಂಧಿಸಿದ್ದಾರೆ. ಗಮನಾರ್ಹವಾಗಿ, ಅಧಿಕಾರಿಗಳು ಬಂಧಿಸಲು ಶಂಕಿತರನ್ನು ಬೆನ್ನಟ್ಟುವಾಗ ನದಿಯನ್ನು ದಾಟಬೇಕಾಯಿತು.

ಜಾರ್ಖಂಡ್​: ಪೊಲೀಸರಿಂದ ತಪ್ಪಿಸಿಕೊಳ್ಳಲು ನದಿಗೆ ಹಾರಿದ 6 ಸೈಬರ್ ಅಪರಾಧಿಗಳು
ಸೈಬರ್ ಅಪರಾಧಿಗಳುImage Credit source: India Today
ನಯನಾ ರಾಜೀವ್
|

Updated on: Dec 11, 2023 | 7:51 AM

Share

ಪೊಲೀಸರಿಂದ ತಪ್ಪಿಸಿಕೊಳ್ಳಲು 6 ಸೈಬರ್ ಅಪರಾಧಿಗಳು ನದಿಗೆ ಹಾರಿರುವ ಘಟನೆ ಜಾರ್ಖಂಡ್​ನಲ್ಲಿ ನಡೆದಿದೆ. ಸೈಬರ್ ಅಪರಾಧಗಳಲ್ಲಿ ಭಾಗಿಯಾಗಿರುವ ಆರು ಮಂದಿಯನ್ನು ಇತ್ತೀಚೆಗೆ ಜಾರ್ಖಂಡ್ ಪೊಲೀಸರು ಬಂಧಿಸಿದ್ದಾರೆ. ಗಮನಾರ್ಹವಾಗಿ, ಅಧಿಕಾರಿಗಳು ಬಂಧಿಸಲು ಶಂಕಿತರನ್ನು ಬೆನ್ನಟ್ಟುವಾಗ ನದಿಯನ್ನು ದಾಟಬೇಕಾಯಿತು.

ಕಾರ್ಯಾಚರಣೆಯ ಸಮಯದಲ್ಲಿ, ಪೊಲೀಸ್ ತಂಡವು ಸಾಮಾನ್ಯ ಬಟ್ಟೆಗಳನ್ನು ಧರಿಸಿ, ಬರಾಕರ್ ನದಿಯ ದಡದಲ್ಲಿ ಸೈಬರ್ ಅಪರಾಧಿಗಳಿಗೆ ಬಲೆ ಬೀಸಿತ್ತು. ಅವರು ಪೊಲೀಸ್ ಅಧಿಕಾರಿಗಳು ಎಂದು ತಿಳಿಯುತ್ತಿದ್ದಂತೆ ಕ್ರಿಮಿನಲ್​ಗಳು ನದಿಗೆ ಹಾರಿ ಪರಾರಿಯಾಗಲು ಯತ್ನಿಸಿದ್ದಾರೆ. ಆದರೆ ಅಧಿಕಾರಿಗಳು ಅವರನ್ನು ಬೆನ್ನಟ್ಟಿ ಎಲ್ಲ ಶಂಕಿತರನ್ನು ಬಂಧಿಸುವಲ್ಲಿ ಯಶಸ್ವಿಯಾದರು.

ವಿವಿಧ ಪ್ರದೇಶಗಳಲ್ಲಿ ಆಯಕಟ್ಟಿನ ದಾಳಿ ನಡೆಸಿದ ನಂತರ ಬಂಧಿಸಲಾಗಿದೆ. ಕಾರ್ಯಾಚರಣೆ ವೇಳೆ ಆರೋಪಿಗಳಿಂದ 8,29,600 ರೂಪಾಯಿ ನಗದು, 12 ಮೊಬೈಲ್ ಫೋನ್‌ಗಳು, 21 ಎಟಿಎಂ ಕಾರ್ಡ್‌ಗಳು, 18 ಸಿಮ್ ಕಾರ್ಡ್‌ಗಳು, 12 ಪಾಸ್‌ಬುಕ್‌ಗಳು, ಆರು ಚೆಕ್‌ಬುಕ್‌ಗಳು, ನಾಲ್ಕು ಪ್ಯಾನ್ ಕಾರ್ಡ್‌ಗಳು ಮತ್ತು ಎರಡು ಆಧಾರ್ ಕಾರ್ಡ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಜಾರ್ಖಂಡ್‌ನ ಗಿರಿದಿಹ್‌ನ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು, ಬಂಧಿತ ಸೈಬರ್ ಅಪರಾಧಿಗಳು ಆ್ಯಪ್‌ಗಳ ಮೂಲಕ ನಗ್ನ ವೀಡಿಯೊ ಕರೆಗಳನ್ನು ಮಾಡುವ ಮೂಲಕ ವಂಚನೆಯ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ ಮತ್ತು ತಮ್ಮ ಸಂತ್ರಸ್ತರನ್ನು ಬ್ಲ್ಯಾಕ್‌ಮೇಲ್ ಮಾಡಲು ಸ್ಕ್ರೀನ್‌ಶಾಟ್‌ಗಳನ್ನು ತೆಗೆದುಕೊಳ್ಳುತ್ತಿದ್ದಾರೆ ಎಂದು ಹೇಳಿದ್ದಾರೆ.

ಮತ್ತಷ್ಟು ಓದಿ: 11 ತಿಂಗಳಲ್ಲಿ 16 ಸಾವಿರ ಸೈಬರ್ ಪ್ರಕರಣಗಳು ದಾಖಲು! ಈ ವರ್ಷ ದೇಶದಲ್ಲೇ ಬೆಂಗಳೂರಿಗೆ ಅಗ್ರಸ್ಥಾನ ಸಾಧ್ಯತೆ

ಪೌಷ್ಟಿಕಾಂಶ ಟ್ರ್ಯಾಕರ್ ಆ್ಯಪ್ ಮೂಲಕ ಹೆರಿಗೆ ಸೌಲಭ್ಯಗಳ ಸುಳ್ಳು ಭರವಸೆ ನೀಡಿ ವಂಚಿಸುತ್ತಿದ್ದರು. ಮಕ್ಕಳ ಕಳ್ಳತನ ವದಂತಿ, ಸೇರಿದಂತೆ ಹಲವು ಸುದ್ದಿಗಳನ್ನು ಈ ಶಂಕಿತ ಕ್ರಿಮಿನಲ್​ಗಳು ಹಬ್ಬಿಸುತ್ತಿದ್ದರು, ಈ ನಡುವೆ ಸ್ಥಳೀಯರಿಂದಲೂ ಪೊಲೀಸರು ಸವಾಲನ್ನು ಎದುರಿಸಬೇಕಾಯಿತು. ಇಷ್ಟೆಲ್ಲಾ ಕಷ್ಟಗಳ ನಡುವೆಯೂ ಪೊಲೀಸರು ಕಾರ್ಯಾಚರಣೆಯನ್ನು ಯಶಸ್ವಿಯಾಗಿ ನಡೆಸಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
ಮಂಡ್ಯ ಎಳನೀರು ವ್ಯಾಪಾರಿಗಳಿಗೆ ಮಹಾ ದೋಖಾ: 25 ಲಕ್ಷಕ್ಕೂ ಹೆಚ್ಚು ಹಣ ವಂಚನೆ
ಮಂಡ್ಯ ಎಳನೀರು ವ್ಯಾಪಾರಿಗಳಿಗೆ ಮಹಾ ದೋಖಾ: 25 ಲಕ್ಷಕ್ಕೂ ಹೆಚ್ಚು ಹಣ ವಂಚನೆ
ಸಂಧಾನ ಸಭೆ ಯಶಸ್ವಿ: ಮುನಿಸು ಮರೆತು ಪರಸ್ಪರ ಕೈಲುಕಿದ ಹಾಸನ ಡಿಸಿ-ಎಸ್ಪಿ
ಸಂಧಾನ ಸಭೆ ಯಶಸ್ವಿ: ಮುನಿಸು ಮರೆತು ಪರಸ್ಪರ ಕೈಲುಕಿದ ಹಾಸನ ಡಿಸಿ-ಎಸ್ಪಿ
ನಮ್ಮ ಮೆಟ್ರೋದಲ್ಲಿ ಮತ್ತೊಂದು ಜೀವಂತ ಹೃದಯ ಸಾಗಣೆ: ವಿಡಿಯೋ ನೋಡಿ
ನಮ್ಮ ಮೆಟ್ರೋದಲ್ಲಿ ಮತ್ತೊಂದು ಜೀವಂತ ಹೃದಯ ಸಾಗಣೆ: ವಿಡಿಯೋ ನೋಡಿ
ಯಲಹಂಕ ಬಳಿ ನಿಂತಿದ್ದ ರೈಲು ಬೋಗಿಗಳು ಬೆಂಕಿಗೆ ಆಹುತಿ
ಯಲಹಂಕ ಬಳಿ ನಿಂತಿದ್ದ ರೈಲು ಬೋಗಿಗಳು ಬೆಂಕಿಗೆ ಆಹುತಿ
ಈ ಬಾರಿ ಬಿಗ್​​ಬಾಸ್ ಫಿನಾಲೆಗೆ ಬರುವವರು ಯಾರು? ಮಂಜನ ಉತ್ತರ ಹೀಗಿತ್ತು
ಈ ಬಾರಿ ಬಿಗ್​​ಬಾಸ್ ಫಿನಾಲೆಗೆ ಬರುವವರು ಯಾರು? ಮಂಜನ ಉತ್ತರ ಹೀಗಿತ್ತು
ಅಂಬಾರಿ ಹೊರುವ ಆನೆಯ ಆಯ್ಕೆ ಹೇಗೆ ನಡೆಯುತ್ತದೆ?
ಅಂಬಾರಿ ಹೊರುವ ಆನೆಯ ಆಯ್ಕೆ ಹೇಗೆ ನಡೆಯುತ್ತದೆ?
ರಮೇಶ್​​ ಜಾರಕಿಹೊಳಿ ಭೇಟಿ ರಹಸ್ಯ ಬಿಚ್ಚಿಟ್ಟ ಸಿದ್ದರಾಮಯ್ಯ
ರಮೇಶ್​​ ಜಾರಕಿಹೊಳಿ ಭೇಟಿ ರಹಸ್ಯ ಬಿಚ್ಚಿಟ್ಟ ಸಿದ್ದರಾಮಯ್ಯ
ಪರಿಣಾಮ ನೆಟ್ಟಗೆ ಇರಲ್ಲ: ಕಿಚ್ಚ ಸುದೀಪ್ ಅಭಿಮಾನಿಗಳಿಗೆ ಉಗ್ರಪ್ಪ ಎಚ್ಚರಿಕೆ
ಪರಿಣಾಮ ನೆಟ್ಟಗೆ ಇರಲ್ಲ: ಕಿಚ್ಚ ಸುದೀಪ್ ಅಭಿಮಾನಿಗಳಿಗೆ ಉಗ್ರಪ್ಪ ಎಚ್ಚರಿಕೆ
ಕುಟುಂಬದ ಹಿನ್ನೆಲೆ ಬಗ್ಗೆ ಮಾತನಾಡಿದ ‘ಬಿಗ್ ಬಾಸ್ ಕನ್ನಡ 13’ ಸ್ಪರ್ಧಿ ಮಂಜ
ಕುಟುಂಬದ ಹಿನ್ನೆಲೆ ಬಗ್ಗೆ ಮಾತನಾಡಿದ ‘ಬಿಗ್ ಬಾಸ್ ಕನ್ನಡ 13’ ಸ್ಪರ್ಧಿ ಮಂಜ
ಇಸ್ರೋ ರೋಬೋಟಿಕ್ಸ್ ಚಾಲೆಂಜ್‌ನಲ್ಲಿ ಐಐಐಟಿ ಧಾರವಾಡ ವಿದ್ಯಾರ್ಥಿಗಳ ಸಾಧನೆ
ಇಸ್ರೋ ರೋಬೋಟಿಕ್ಸ್ ಚಾಲೆಂಜ್‌ನಲ್ಲಿ ಐಐಐಟಿ ಧಾರವಾಡ ವಿದ್ಯಾರ್ಥಿಗಳ ಸಾಧನೆ