ಜಾರ್ಖಂಡ್​ನಲ್ಲಿ ಕರ್ಮ ಪೂಜೆ ಹಬ್ಬದ ವೇಳೆ ನೀರಿನಲ್ಲಿ ಮುಳುಗಿ 7 ಬಾಲಕಿಯರು ಸಾವು; ಪ್ರಧಾನಿ ಮೋದಿ, ರಾಷ್ಟ್ರಪತಿ ಸಂತಾಪ

ಲತೇಹಾರ್​ನ ಬಕ್ರು ಗ್ರಾಮದಲ್ಲಿ ಕರ್ಮ ಪೂಜೆ ಪ್ರಯುಕ್ತ ಹೊಂಡದಲ್ಲಿ ಮುಳುಗಿ, ಧಾರ್ಮಿಕ ವಿಧಿ ವಿಧಾನಗಳನ್ನು ನೆರವೇರಿಸಲು ಹೋದ 7 ಬಾಲಕಿಯರು ಸಾವನ್ನಪ್ಪಿದ್ದಾರೆ.

ಜಾರ್ಖಂಡ್​ನಲ್ಲಿ ಕರ್ಮ ಪೂಜೆ ಹಬ್ಬದ ವೇಳೆ ನೀರಿನಲ್ಲಿ ಮುಳುಗಿ 7 ಬಾಲಕಿಯರು ಸಾವು; ಪ್ರಧಾನಿ ಮೋದಿ, ರಾಷ್ಟ್ರಪತಿ ಸಂತಾಪ
ನರೇಂದ್ರ ಮೋದಿ
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Sep 19, 2021 | 7:32 AM

ಜಾರ್ಖಂಡ್: ಜಾರ್ಖಂಡ್ ರಾಜ್ಯದಲ್ಲಿ ಆಚರಿಸುವ ಪ್ರಮುಖ ಹಬ್ಬಗಳಲ್ಲಿ ‘ಕರ್ಮ ಪೂಜೆ’ ಕೂಡ ಒಂದು. ಇಲ್ಲಿನ ಬುಡಕಟ್ಟು ಜನಾಂಗದ ಪ್ರಸಿದ್ಧ ಹಬ್ಬವಾದ ಕರ್ಮ ಪೂಜೆ ವೇಳೆ ನೀರಿನ ಹೊಂಡದಲ್ಲಿ ಮುಳುಗಿ ಏಳುವಾಗ 7 ಬಾಲಕಿಯರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಜಾರ್ಖಂಡ್​ನ ಲತೇಹಾರ್‌ ಜಿಲ್ಲೆಯಲ್ಲಿ ಶನಿವಾರ ಈ ದುರಂತ ನಡೆದಿದೆ.

ಲತೇಹಾರ್​ನ ಬಕ್ರು ಗ್ರಾಮದಲ್ಲಿ ಕರ್ಮ ಪೂಜೆ ಪ್ರಯುಕ್ತ ಹೊಂಡದಲ್ಲಿ ಮುಳುಗಿ, ಧಾರ್ಮಿಕ ವಿಧಿ ವಿಧಾನಗಳನ್ನು ನೆರವೇರಿಸಲು ಹೋದ 7 ಬಾಲಕಿಯರು ಸಾವನ್ನಪ್ಪಿದ್ದಾರೆ. ಈ ಕರ್ಮ ಪೂಜೆ ಪ್ರಕೃತಿಯನ್ನು ಪೂಜಿಸುವ ಹಬ್ಬವಾಗಿದ್ದು, ಬುಡಕಟ್ಟು ಸಮುದಾಯಕ್ಕೆ ವಿಶೇಷವಾದುದಾಗಿದೆ. ಈ ವೇಳೆ ಇನ್ನೂ ಕೆಲವರು ಮುಳುಗಿದ್ದು, ವಿಷಯ ತಿಳಿದ ಕೂಡಲೆ ಸ್ಥಳಕ್ಕೆ ತೆರಳಿದ ರಕ್ಷಣಾ ತಂಡಗಳು ಹಲವರನ್ನು ರಕ್ಷಿಸಿವೆ. ಈ ಘಟನೆಯಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಆದರೆ, 12ರಿಂದ 20 ವರ್ಷದೊಳಗಿನ 7 ಯುವತಿಯರು ಸಾವನ್ನಪ್ಪಿದ್ದಾರೆ.

ಈ ಘಟನೆ ಕುರಿತು ತನಿಖೆ ನಡೆಸುವಂತೆ ಜಿಲ್ಲೆಯ ಉಪ ಅಭಿವೃದ್ಧಿ ಆಯುಕ್ತರಿಗೆ ಸೂಚಿಸಲಾಗಿದೆ. ರಕ್ಷಣಾ ತಂಡಗಳು ಸ್ಥಳಕ್ಕೆ ಬರುವಷ್ಟರಲ್ಲಿ 7 ಜನರು ನೀರಿನಲ್ಲಿ ಮುಳುಗಿ ಪ್ರಾಣ ಬಿಟ್ಟಿದ್ದರು. ಈ ಘಟನೆಯ ಕುರಿತು ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್, ಪ್ರಧಾನಮಂತ್ರಿ ನರೇಂದ್ರ ಮೋದಿ, ರಾಷ್ಟ್ರಪತಿ ರಾಮನಾಥ ಕೋವಿಂದ್ ಸೇರಿ ಹಲವರು ಸಂತಾಪ ಸೂಚಿಸಿದ್ದಾರೆ.

ರಕ್ಷಣಾ ಕಾರ್ಯಾಚರಣೆಗೆ ತೆರಳಿದಾಗ ಸ್ಥಳದಲ್ಲೇ 4 ಬಾಲಕಿಯರು ಸಾವನ್ನಪ್ಪಿದ್ದರು. ಉಳಿದವರನ್ನು ಆಸ್ಪತ್ರೆಗೆ ಕರೆದೊಯ್ಯುವಾಗ ಸಾವನ್ನಪ್ಪಿದರು. ಸಾವನಪ್ಪಿದ ಯುವತಿಯರ ಕುಟುಂಬಗಳಿಗೆ ತಲಾ 4 ಲಕ್ಷ ರೂ. ಪರಿಹಾರ ನೀಡುವುದಾಗಿ ಘೋಷಿಸಲಾಗಿದೆ.

ಈ ಘಟನೆ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ, ಜಾರ್ಖಂಡ್​ನಲ್ಲಿ ನಡೆದ ಕರ್ಮ ಪೂಜೆಯವಿಸರ್ಜನೆ ವೇಳೆ 7 ಯುವತಿಯರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ವಿಷಯ ಕೇಳಿ ಆಘಾತವಾಯಿತು. ಕೊನೆಯುಸಿರೆಳೆದ ಯುವತಿಯರ ಕುಟುಂಬಸ್ಥರಿಗೆ ಈ ಆಘಾತವನ್ನು ತಡೆದುಕೊಳ್ಳುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಆಶಿಸುತ್ತೇನೆ ಎಂದಿದ್ದಾರೆ.

ಇದನ್ನೂ ಓದಿ: Punjab Congress Crisis: ಪಂಜಾಬ್ ಹೊಸ ಮುಖ್ಯಮಂತ್ರಿ ಆಯ್ಕೆ ಜವಾಬ್ದಾರಿ ಸೋನಿಯಾ ಗಾಂಧಿ ಹೆಗಲಿಗೆ

ಜಾರ್ಖಂಡ್ ವಿಧಾನಸಭೆಯಲ್ಲಿ ನಮಾಜ್​ಗೆ ಪ್ರತ್ಯೇಕ ಕೊಠಡಿ ವಿವಾದ; ಜೈ ಶ್ರೀರಾಮ್ ಘೋಷಣೆ ಕೂಗಿ ಬಿಜೆಪಿ ಪ್ರತಿಭಟನೆ

(Jharkhand 7 girls drown in pond during Karma Puja immersion PM Narendra Modi, President Ramnath Kovind condole)

Published On - 7:30 am, Sun, 19 September 21

‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?