ಸಿಎಂ ಹೇಮಂತ್ ಸೊರೇನ್ ವಿರುದ್ಧ ಸಿಬಿಐ ತನಿಖೆಗೆ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಜಾರ್ಖಂಡ್ ಸರ್ಕಾರ

ಮುಖ್ಯಮಂತ್ರಿ ಮತ್ತು ಇತರ ವ್ಯಕ್ತಿಗಳ ವಿರುದ್ಧ ಜಾರ್ಖಂಡ್‌ನ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ ಎಂದು ಸಿಬಲ್ ಹೇಳಿದ್ದಾರೆ. ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಇನ್ನೂ ಒಪ್ಪಿಕೊಳ್ಳದಿದ್ದರೂ, ಇಡಿ ಅಧಿಕಾರಿಯೊಬ್ಬರು ಮುಚ್ಚಿದ ಕವರ್‌ನಲ್ಲಿ...

ಸಿಎಂ ಹೇಮಂತ್ ಸೊರೇನ್ ವಿರುದ್ಧ ಸಿಬಿಐ ತನಿಖೆಗೆ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಜಾರ್ಖಂಡ್ ಸರ್ಕಾರ
ಸುಪ್ರೀಂಕೋರ್ಟ್
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:May 20, 2022 | 2:07 PM

ಗಣಿಗಾರಿಕೆ ಗುತ್ತಿಗೆ ನೀಡುವುದಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಸಲ್ಲಿಸಿದ “ಸೀಲ್ಡ್ ಕವರ್” ದಾಖಲೆಗಳನ್ನು ಆಧರಿಸಿ ಮುಖ್ಯಮಂತ್ರಿ ಹೇಮಂತ್ ಸೊರೇನ್ (Hemant Soren) ವಿರುದ್ಧ ಸಿಬಿಐ ತನಿಖೆಗೆ ಆದೇಶಿಸಿದ್ದ ಜಾರ್ಖಂಡ್ (Jharkhand)  ಹೈಕೋರ್ಟ್‌ನ ಕ್ರಮವನ್ನು ಪ್ರಶ್ನಿಸಿ ಜಾರ್ಖಂಡ್ ಸರ್ಕಾರ ಸುಪ್ರೀಂಕೋರ್ಟ್‌ (Supreme Court) ಮೊರೆ ಹೋಗಿದೆ. ಶುಕ್ರವಾರ ನ್ಯಾಯಮೂರ್ತಿ ಯುಯು ಲಲಿತ್ ನೇತೃತ್ವದ ಪೀಠವು ವಿಚಾರಣೆ ಮುಂದೂಡಿದ್ದು ಮುಂದಿನ ಮಂಗಳವಾರ (ಮೇ 24) ರಜಾಕಾಲದ ಪೀಠದ ಮುಂದೆ ವಿಚಾರಣೆ ನಡೆಸುವುದಾಗಿ ಹೇಳಿದೆ. ರಾಜ್ಯದ ಪರ ವಾದ ಮಂಡಿಸಿದ ಹಿರಿಯ ವಕೀಲ ಕಪಿಲ್ ಸಿಬಲ್ ಅವರು, ಭಾರತದ ಮುಖ್ಯ ನ್ಯಾಯಾಧೀಶರ ನೇತೃತ್ವದ ಪೀಠವು ಮೊಹರು ಮಾಡಿದ ಕವರ್ ದಾಖಲೆಗಳನ್ನು ಆಧರಿಸಿರುವ ಹೈಕೋರ್ಟ್ ತೀರ್ಪನ್ನು ರದ್ದುಗೊಳಿಸಲು ಇಂದು ಒಂದು ಪ್ರಕರಣದಲ್ಲಿ ತೀರ್ಪು ಪ್ರಕಟಿಸಿದೆ ಎಂದು ಹೇಳಿದೆ. ನಾನು ನ್ಯಾಯಾಲಯದ ಮುಂದೆ ಹೇಳುವುದೇನೆಂದರೆ ಸಿಜೆಐ ಪೀಠದ ಮುಂದಿರುವ ಪ್ರಕರಣ 1502. ಇಂದು ಕೇವಲ ಆದೇಶ, ಅಲ್ಲಿ ಮೊಹರು ಮಾಡಿದ ಕವರ್ ಅನ್ನು ನ್ಯಾಯಾಲಯವು ತೆಗೆದುಕೊಂಡಿದೆ. ಇದನ್ನು ಆಧರಿಸಿ ಆದೇಶಗಳನ್ನು ಜಾರಿಗೊಳಿಸಲಾಗಿದೆ. ಇದು ಸ್ವೀಕಾರಾರ್ಹವಲ್ಲ ಎಂದು ನ್ಯಾಯಾಲಯವು ಅದನ್ನು ಬದಿಗೊತ್ತಿ ಮತ್ತೆ ಹೈಕೋರ್ಟ್‌ಗೆ ಕಳುಹಿಸಿದೆ ಎಂದು ಸಿಬಲ್ ಹೇಳಿದ್ದಾರೆ. ನ್ಯಾಯಮೂರ್ತಿಗಳಾದ ಎಸ್ ರವೀಂದ್ರ ಭಟ್ ಮತ್ತು ಸುಧಾಂಶು ಧುಲಿಯಾ ಅವರನ್ನೊಳಗೊಂಡ ಪೀಠ,  ವಿಚಾರಣೆಯನ್ನು ಮುಂದೂಡಿತು. ನಿನ್ನೆ ಸಿಜೆಐ ಮುಂದೆ ಸಿಬಲ್ ಅವರು ತುರ್ತು ಪ್ರಸ್ತಾಪವನ್ನು ಮಾಡಿದ ನಂತರ ಅರ್ಜಿಯನ್ನು ಇಂದು ವಿಚಾರಣೆ ನಡೆಸಲಾಗಿದೆ.

ಮುಖ್ಯಮಂತ್ರಿ ಮತ್ತು ಇತರ ವ್ಯಕ್ತಿಗಳ ವಿರುದ್ಧ ಜಾರ್ಖಂಡ್‌ನ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ ಎಂದು ಸಿಬಲ್ ಹೇಳಿದ್ದಾರೆ. ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಇನ್ನೂ ಒಪ್ಪಿಕೊಳ್ಳದಿದ್ದರೂ, ಇಡಿ ಅಧಿಕಾರಿಯೊಬ್ಬರು ಮುಚ್ಚಿದ ಕವರ್‌ನಲ್ಲಿ ನೀಡಿದ ಕೆಲವು ದಾಖಲೆಗಳನ್ನು ಆಧರಿಸಿ ಪ್ರಕರಣವನ್ನು ಸಿಬಿಐಗೆ ವರ್ಗಾಯಿಸಲಾಗುವುದು ಎಂದು ನ್ಯಾಯಾಲಯವು ಗಮನಿಸಿದೆ.

“ಪಿಐಎಲ್ ಇನ್ನೂ ಅಂಗೀಕಾರವಾಗಿಲ್ಲ, ಇಡಿ ಬಂದು ಮುಚ್ಚಿದ ಲಕೋಟೆಯಲ್ಲಿದಾಖಲೆ ಹಸ್ತಾಂತರಿಸಿದೆ. ನಾನು ಅದನ್ನು ವಿರೋಧಿಸುತ್ತೇನೆ. ಈ ಪ್ರಕ್ರಿಯೆಗಳಲ್ಲಿ ಎಫ್‌ಐಆರ್ ದಾಖಲಾಗಿಲ್ಲ. ಹೈಕೋರ್ಟ್ ಸೀಲ್ಡ್ ಕವರ್ ಅನ್ನು ನೋಡಿದೆ ಮತ್ತು ಅವರು ಈಗ ಅದನ್ನು ಸಿಬಿಐಗೆ ವರ್ಗಾಯಿಸುವುದಾಗಿ ಹೇಳಿದ್ದಾರೆ. ನಾನು ಅದನ್ನು ಇಲ್ಲಿ ಉಲ್ಲೇಖಿಸುತ್ತೇನೆ ಎಂದು ನಾನು ಅವರಿಗ ಹೇಳಿರುವುದಾಗಿ ಸಿಬಲ್ ನಿನ್ನೆ ಹೇಳಿದ್ದಾರೆ.

ಇದನ್ನೂ ಓದಿ
Image
ಜಾರ್ಖಂಡ್​ನಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ವಿಡಿಯೋ ವೈರಲ್; 10 ಜನರ ಬಂಧನ
Image
ಜಾರ್ಖಂಡ್​ನಲ್ಲಿ ಕಲ್ಲಿದ್ದಲು ಗಣಿ ಕುಸಿತ; ಅವಶೇಷಗಳಡಿ ಸಿಲುಕಿದ 50ಕ್ಕೂ ಹೆಚ್ಚು ಜನರು
Image
ಜಾರ್ಖಂಡ್ ಕೇಬಲ್ ಕಾರ್ ಅಪಘಾತ: 3 ಸಾವು, ತನಿಖೆಗೆ ಆದೇಶಿಸಿದ ಸಿಎಂ ಹೇಮಂತ್ ಸೊರೇನ್

ಬೇರೆ ಯಾರಾದರೂ ಪಿಐಎಲ್ ಸಲ್ಲಿಸಿದ್ದಾರೆಯೇ?” ಎಂದು ಪೀಠ ಪ್ರಶ್ನಿಸಿತು. “ಹೌದು ಸಿಎಂ ವಿರುದ್ಧ ವ್ಯಕ್ತಿಗಳು ಸಲ್ಲಿಸಿದ್ದಾರೆ. ಇಡಿ ಮತ್ತು ಸಿಬಿಐ ಸಹ ಪ್ರತಿವಾದಿಗಳು. ನೀವು ಈ ದಾಖಲೆಗಳನ್ನು ಹೇಗೆ ರೆಕಾರ್ಡ್ ನಲ್ಲಿ ತೆಗೆದುಕೊಳ್ಳುತ್ತೀರಿ ಎಂದು ನಾವು ಕೇಳಿದ್ದೇವೆ ಎಂದಿದ್ದಾರೆ ಸಿಬಲ್. ಹೈಕೋರ್ಟ್‌ನಲ್ಲಿ ಇತರ ಕೆಲವು ಪ್ರತಿವಾದಿಗಳ ಪರವಾಗಿ ಹಾಜರಾದ ಹಿರಿಯ ವಕೀಲ ಮುಕುಲ್ ರೋಹ್ಟಗಿ ಕೂಡ ಸಿಬಲ್ ಅವರನ್ನು ಬೆಂಬಲಿಸಿದರು. ಹೈಕೋರ್ಟ್ ರಜೆಯಲ್ಲಿದ್ದರೂ, ಮಧ್ಯಾಹ್ನ 2 ಗಂಟೆಗೆ (ಮೇ 19 ರಂದು)  ತುರ್ತಾಗಿ ವಿಚಾರಣೆ ಮಾಡಿದೆ ಎಂದು ಅವರು ಹೇಳಿದರು.

ಮುಚ್ಚಿದ ಲಕೋಟೆಯಲ್ಲಿ ದಾಖಲೆಗಳನ್ನು ಸಲ್ಲಿಸಲಾಗುತ್ತಿದೆ, ಅದನ್ನು ಕಕ್ಷಿದಾರರಿಗೆ ತೋರಿಸುತ್ತಿಲ್ಲ ಎಂದು ರೋಹ್ಟಗಿ ಪ್ರಕರಣವನ್ನು ನಾಳೆ ವಿಚಾರಣೆ ಮಾಡುವಂತೆ ಪೀಠವನ್ನು ಒತ್ತಾಯಿಸಿದರು. ಅದರಂತೆ, ಸಿಜೆಐ ಈ ವಿಷಯವನ್ನು ವಿಚಾರಣೆ ನಡೆಸಲು ಅವಕಾಶ ನೀಡಿದರು.

ಸಿಎಂ ಅವರು ತಮ್ಮ ಹೆಸರಿನಲ್ಲಿ ಗಣಿಗಾರಿಕೆ ಗುತ್ತಿಗೆ ಪಡೆಯುವಲ್ಲಿ ತಮ್ಮ ಕಚೇರಿಯನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಮತ್ತು ಎಂಜಿಎನ್‌ಆರ್‌ಇಜಿಎ ಹಣವನ್ನು ಬಳಸಿಕೊಂಡು ಹಗರಣ ಮಾಡಿದ್ದಾರೆ ಎಂದು ಆರೋಪಿಸಿ ಸಿಎಂ ವಿರುದ್ಧ ಕಾನೂನು ಕ್ರಮ ಜರುಗಿಸಲು ನಿರ್ದೇಶನ ನೀಡುವಂತೆ ಹೈಕೋರ್ಟ್‌ನಲ್ಲಿ ಪಿಐಎಲ್ ಸಲ್ಲಿಸಲಾಗಿದೆ.

ಮುಖ್ಯ ನ್ಯಾಯಮೂರ್ತಿ ಡಾ ರವಿ ರಂಜನ್ ಮತ್ತು ನ್ಯಾಯಮೂರ್ತಿ ಸುಜಿತ್ ನಾರಾಯಣ ಪ್ರಸಾದ್ ಅವರನ್ನೊಳಗೊಂಡ ಹೈಕೋರ್ಟ್ ವಿಭಾಗೀಯ ಪೀಠ ನೀಡಿದ ಆದೇಶದ ವಿರುದ್ಧ ಜಾರ್ಖಂಡ್ ಸರ್ಕಾರವು ವಿಶೇಷ ರಜಾಕಾಲ ಅರ್ಜಿಯನ್ನು ಸಲ್ಲಿಸಿದೆ. ವಿಭಾಗೀಯ ಪೀಠವು ಮುಚ್ಚಿದ ಕವರ್‌ನಲ್ಲಿ ದಾಖಲೆಗಳನ್ನು ಸ್ವೀಕರಿಸಲು ರಾಜ್ಯದ ಆಕ್ಷೇಪವನ್ನು ತಿರಸ್ಕರಿಸಿತು ಮತ್ತು ಅವುಗಳನ್ನು ದಾಖಲೆಯಲ್ಲಿ ತೆಗೆದುಕೊಳ್ಳಲು ನಿರ್ಧರಿಸಿತು. ಎಂಜಿಎನ್‌ಆರ್‌ಇಜಿಎ ಹಗರಣಕ್ಕೆ ಸಂಬಂಧಿಸಿದ 16 ಎಫ್‌ಐಆರ್‌ಗಳ ವಿವರಗಳನ್ನು ಸಲ್ಲಿಸುವಂತೆ ಪೀಠವು ರಾಜ್ಯಕ್ಕೆ ನಿರ್ದೇಶನ ನೀಡಿದೆ. ರಾಜ್ಯದ ಗಣಿಗಾರಿಕೆ ಕಾರ್ಯದರ್ಶಿಯನ್ನು ಬಂಧಿಸಿದ್ದು, ಅವರನ್ನು ಅಮಾನತುಗೊಳಿಸಲಾಗಿದೆ ಎಂದು ಪೀಠ ಹೇಳಿದೆ.

ದೇಶದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

Published On - 2:02 pm, Fri, 20 May 22

ಬೈ ಎಲೆಕ್ಷನ್ ಸೋಲು: TV ಒಡೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಒಡೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ