ಸರಳ ಬಹುಮತದತ್ತ JMM-ಕಾಂಗ್ರೆಸ್ ಮೈತ್ರಿ, ಬಿಜೆಪಿಗೆ ಶಾಕ್
ರಾಂಚಿ: ಜಾರ್ಖಂಡ್ ವಿಧಾನಸಭಾ ಚುನಾವಣಾ ಫಲಿತಾಂಶದಲ್ಲಿ ಜೆಎಂಎಂ ನೇತೃತ್ವದ ಮಹಾಮೈತ್ರಿಕೂಟಕ್ಕೆ ಸರಳ ಬಹುಮತ ದೊರಕಿದೆ. ಜೆಎಂಎಂ, ಕಾಂಗ್ರೆಸ್ ಮತ್ತು ಆರ್ಜೆಡಿ ಮಹಾಮೈತ್ರಿಕೂಟವು 45 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಬಿಜೆಪಿಗೆ ತೀವ್ರ ಹಿನ್ನಡೆಯಾಗಿದ್ದು, 26 ಕ್ಷೇತ್ರಗಳಲ್ಲಿ ಮಾತ್ರ ಬಿಜೆಪಿ ಮುನ್ನಡೆ ಸಾಧಿಸಿದೆ. ಪಕ್ಷೇತರ ಅಭ್ಯರ್ಥಿಗಳು ಒಟ್ಟು 10 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ. 81 ವಿಧಾನಸಭಾ ಕ್ಷೇತ್ರಗಳ ಬಲಾಬಲದಲ್ಲಿ 41 ಸ್ಥಾನ ಮ್ಯಾಜಿಕ್ ನಂಬರ್ ಆಗಿದೆ. ಒಟ್ಟು 81 ಸ್ಥಾನಗಳಿಗೆ ನ. 30ರಿಂದ ಡಿ. 20ರವರೆಗೆ 5 ಹಂತಗಳಲ್ಲಿ ಚುನಾವಣೆ […]
ರಾಂಚಿ: ಜಾರ್ಖಂಡ್ ವಿಧಾನಸಭಾ ಚುನಾವಣಾ ಫಲಿತಾಂಶದಲ್ಲಿ ಜೆಎಂಎಂ ನೇತೃತ್ವದ ಮಹಾಮೈತ್ರಿಕೂಟಕ್ಕೆ ಸರಳ ಬಹುಮತ ದೊರಕಿದೆ. ಜೆಎಂಎಂ, ಕಾಂಗ್ರೆಸ್ ಮತ್ತು ಆರ್ಜೆಡಿ ಮಹಾಮೈತ್ರಿಕೂಟವು 45 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಬಿಜೆಪಿಗೆ ತೀವ್ರ ಹಿನ್ನಡೆಯಾಗಿದ್ದು, 26 ಕ್ಷೇತ್ರಗಳಲ್ಲಿ ಮಾತ್ರ ಬಿಜೆಪಿ ಮುನ್ನಡೆ ಸಾಧಿಸಿದೆ. ಪಕ್ಷೇತರ ಅಭ್ಯರ್ಥಿಗಳು ಒಟ್ಟು 10 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ.
81 ವಿಧಾನಸಭಾ ಕ್ಷೇತ್ರಗಳ ಬಲಾಬಲದಲ್ಲಿ 41 ಸ್ಥಾನ ಮ್ಯಾಜಿಕ್ ನಂಬರ್ ಆಗಿದೆ. ಒಟ್ಟು 81 ಸ್ಥಾನಗಳಿಗೆ ನ. 30ರಿಂದ ಡಿ. 20ರವರೆಗೆ 5 ಹಂತಗಳಲ್ಲಿ ಚುನಾವಣೆ ನಡೆದಿತ್ತು. ಬಿಜೆಪಿ ವಿರುದ್ಧ ಜಾರ್ಖಂಡ್ ಮುಕ್ತಿ ಮೋರ್ಚಾ(ಜೆಎಂಎಂ) 43 ಸ್ಥಾನಗಳಲ್ಲಿ ಕಣಕ್ಕಿಳಿದಿದ್ರೆ, ಕಾಂಗ್ರೆಸ್ 31 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಿದೆ. ಇನ್ನು ಲಾಲೂ ಪ್ರಸಾದ್ ಯಾದವ್ರ ರಾಷ್ಟ್ರೀಯ ಜನತಾ ದಳ(ಆರ್ಜೆಡಿ) 7 ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ.
Published On - 11:24 am, Mon, 23 December 19