ಸರಳ ಬಹುಮತದತ್ತ JMM-ಕಾಂಗ್ರೆಸ್​ ಮೈತ್ರಿ, ಬಿಜೆಪಿಗೆ ಶಾಕ್

ರಾಂಚಿ: ಜಾರ್ಖಂಡ್ ವಿಧಾನಸಭಾ ಚುನಾವಣಾ ಫಲಿತಾಂಶದಲ್ಲಿ ಜೆಎಂಎಂ ನೇತೃತ್ವದ ಮಹಾಮೈತ್ರಿಕೂಟಕ್ಕೆ ಸರಳ ಬಹುಮತ ದೊರಕಿದೆ. ಜೆಎಂಎಂ, ಕಾಂಗ್ರೆಸ್​ ಮತ್ತು ಆರ್​ಜೆಡಿ ಮಹಾಮೈತ್ರಿಕೂಟವು 45 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಬಿಜೆಪಿಗೆ ತೀವ್ರ ಹಿನ್ನಡೆಯಾಗಿದ್ದು, 26 ಕ್ಷೇತ್ರಗಳಲ್ಲಿ ಮಾತ್ರ ಬಿಜೆಪಿ ಮುನ್ನಡೆ ಸಾಧಿಸಿದೆ. ಪಕ್ಷೇತರ ಅಭ್ಯರ್ಥಿಗಳು ಒಟ್ಟು 10 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ. 81 ವಿಧಾನಸಭಾ ಕ್ಷೇತ್ರಗಳ ಬಲಾಬಲದಲ್ಲಿ 41 ಸ್ಥಾನ ಮ್ಯಾಜಿಕ್ ನಂಬರ್ ಆಗಿದೆ. ಒಟ್ಟು 81 ಸ್ಥಾನಗಳಿಗೆ ನ. 30ರಿಂದ ಡಿ. 20ರವರೆಗೆ 5 ಹಂತಗಳಲ್ಲಿ ಚುನಾವಣೆ […]

ಸರಳ ಬಹುಮತದತ್ತ JMM-ಕಾಂಗ್ರೆಸ್​ ಮೈತ್ರಿ, ಬಿಜೆಪಿಗೆ ಶಾಕ್
ಸಾಧು ಶ್ರೀನಾಥ್​

Updated on: Dec 23, 2019 | 8:13 PM

ರಾಂಚಿ: ಜಾರ್ಖಂಡ್ ವಿಧಾನಸಭಾ ಚುನಾವಣಾ ಫಲಿತಾಂಶದಲ್ಲಿ ಜೆಎಂಎಂ ನೇತೃತ್ವದ ಮಹಾಮೈತ್ರಿಕೂಟಕ್ಕೆ ಸರಳ ಬಹುಮತ ದೊರಕಿದೆ. ಜೆಎಂಎಂ, ಕಾಂಗ್ರೆಸ್​ ಮತ್ತು ಆರ್​ಜೆಡಿ ಮಹಾಮೈತ್ರಿಕೂಟವು 45 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಬಿಜೆಪಿಗೆ ತೀವ್ರ ಹಿನ್ನಡೆಯಾಗಿದ್ದು, 26 ಕ್ಷೇತ್ರಗಳಲ್ಲಿ ಮಾತ್ರ ಬಿಜೆಪಿ ಮುನ್ನಡೆ ಸಾಧಿಸಿದೆ. ಪಕ್ಷೇತರ ಅಭ್ಯರ್ಥಿಗಳು ಒಟ್ಟು 10 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ.

81 ವಿಧಾನಸಭಾ ಕ್ಷೇತ್ರಗಳ ಬಲಾಬಲದಲ್ಲಿ 41 ಸ್ಥಾನ ಮ್ಯಾಜಿಕ್ ನಂಬರ್ ಆಗಿದೆ. ಒಟ್ಟು 81 ಸ್ಥಾನಗಳಿಗೆ ನ. 30ರಿಂದ ಡಿ. 20ರವರೆಗೆ 5 ಹಂತಗಳಲ್ಲಿ ಚುನಾವಣೆ ನಡೆದಿತ್ತು. ಬಿಜೆಪಿ ವಿರುದ್ಧ ಜಾರ್ಖಂಡ್ ಮುಕ್ತಿ ಮೋರ್ಚಾ(ಜೆಎಂಎಂ) 43 ಸ್ಥಾನಗಳಲ್ಲಿ ಕಣಕ್ಕಿಳಿದಿದ್ರೆ, ಕಾಂಗ್ರೆಸ್​ 31 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಿದೆ. ಇನ್ನು ಲಾಲೂ ಪ್ರಸಾದ್ ಯಾದವ್​ರ ರಾಷ್ಟ್ರೀಯ ಜನತಾ ದಳ(ಆರ್​ಜೆಡಿ) 7 ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ.

Published On - 11:24 am, Mon, 23 December 19

ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Loading...
Unable to load recommendations.
Follow Us