Jharkhand Assembly Elections: ಇಂದು ಜಾರ್ಖಂಡ್​ನಲ್ಲಿ ಎರಡು ಕಡೆ ಪ್ರಧಾನಿ ಮೋದಿ ಚುನಾವಣಾ ಪ್ರಚಾರ

ಜಾರ್ಖಂಡ್ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದು, ಪ್ರಧಾನಿ ಮೋದಿ ಅವರು ರಾಜ್ಯದಲ್ಲಿ ಪ್ರಚಾರ ನಡೆಸುತ್ತಿದ್ದಾರೆ. ಬಿಜೆಪಿ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಉಚಿತ ಅಡುಗೆ ಅನಿಲ ಸಿಲಿಂಡರ್‌ಗಳು, ಉದ್ಯೋಗ ಸೃಷ್ಟಿ ಮತ್ತು ಮಹಿಳಾ ಸಬಲೀಕರಣ ಯೋಜನೆಗಳನ್ನು ಘೋಷಿಸಿದೆ. ಏಕರೂಪ ನಾಗರಿಕ ಸಂಹಿತೆ ಜಾರಿಗೆ ಸಂಬಂಧಿಸಿದಂತೆ ಚರ್ಚೆಗಳು ನಡೆಯುತ್ತಿವೆ.

Jharkhand Assembly Elections: ಇಂದು ಜಾರ್ಖಂಡ್​ನಲ್ಲಿ ಎರಡು ಕಡೆ ಪ್ರಧಾನಿ ಮೋದಿ ಚುನಾವಣಾ ಪ್ರಚಾರ
ನರೇಂದ್ರ ಮೋದಿ Image Credit source: PTI
Follow us
ನಯನಾ ರಾಜೀವ್
|

Updated on: Nov 04, 2024 | 9:56 AM

ಜಾರ್ಖಂಡ್​ ವಿಧಾನಸಭಾ ಚುನಾವಣೆ ಸನ್ನಿಹಿತವಾಗುತ್ತಿದ್ದು, ಎಲ್ಲಾ ಪಕ್ಷಗಳು ಪ್ರಚಾರದಲ್ಲಿ ತೊಡಗಿವೆ. ಇಂದು ಜಾರ್ಖಂಡ್​ನ ಎರಡು ಕಡೆಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಪ್ರಚಾರ ನಡೆಸಲಿದ್ದಾರೆ. ಜಾರ್ಖಂಡ್‌ನಲ್ಲಿ ನವೆಂಬರ್ 13 ಮತ್ತು ನವೆಂಬರ್ 20 ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ಮತಗಳ ಎಣಿಕೆ ನವೆಂಬರ್ 23 ರಂದು ನಡೆಯಲಿದೆ. ಪ್ರಧಾನಿ ಇಂದು ಚೈಬಾಸಾ ಮತ್ತು ಗರ್ಹ್ವಾದಲ್ಲಿ ಚುನಾವಣಾ ರ್ಯಾಲಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಪ್ರಧಾನಿ ಮೋದಿ ಅವರು ಬೆಳಿಗ್ಗೆ 11 ಗಂಟೆ ಸುಮಾರಿಗೆ ಬಿಹಾರದ ಗಯಾ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಾರೆ. ಪ್ರಧಾನಿ ಮೋದಿ ಅವರು ಮೊದಲು ಗರ್ವಾದಲ್ಲಿ ಬಿಜೆಪಿ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ,  ನಂತರ ಅವರು ರಾಂಚಿಗೆ ಹೋಗಲಿದ್ದಾರೆ, ಬಳಿಕ ಮಧ್ಯಾಹ್ನ 2.30ರ ವೇಳೆಗೆ ಚೈಬಾಸಾದಲ್ಲಿ ರ್ಯಾಲಿಯುದ್ದೇಶಿಸಿ ಮಾತನಾಡಲಿದ್ದಾರೆ.

ಜಾರ್ಖಂಡ್‌ನಲ್ಲಿ ಬಿಜೆಪಿ ಏಕರೂಪ ನಾಗರಿಕ ಸಂಹಿತೆ ಜಾರಿಗೊಳಿಸಲಿದೆ: ಶಾ ಬಿಜೆಪಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ ಜಾರ್ಖಂಡ್‌ನಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಿದೆ ಎಂದು ಗೃಹ ಸಚಿವ ಅಮಿತ್ ಶಾ ಘೋಷಿಸಿದರು. ನಮ್ಮ ಸರ್ಕಾರವು ಜಾರ್ಖಂಡ್‌ನಲ್ಲಿ ಯುಸಿಸಿಯನ್ನು ಪರಿಚಯಿಸುತ್ತದೆ ಆದರೆ ಬುಡಕಟ್ಟು ಜನಾಂಗದವರನ್ನು ಅದರ ವ್ಯಾಪ್ತಿಯಿಂದ ಹೊರಗಿಡಲಾಗುತ್ತದೆ.

ಹೇಮಂತ್ ಸೋರೆನ್ ಮತ್ತು ಜೆಎಂಎಂ ಸರ್ಕಾರವು ಯುಸಿಸಿ ಬುಡಕಟ್ಟು ಹಕ್ಕುಗಳು, ಸಂಸ್ಕೃತಿ ಮತ್ತು ಸಂಬಂಧಿತ ಶಾಸನಗಳ ಮೇಲೆ ಪರಿಣಾಮ ಬೀರುತ್ತದೆ ಎಂದು ಸುಳ್ಳು ಪ್ರಚಾರವನ್ನು ಮಾಡುತ್ತಿದ್ದಾರೆ. ಇದು ಸಂಪೂರ್ಣವಾಗಿ ಆಧಾರರಹಿತವಾಗಿದೆ ಎಂದು ಹೇಳಿದರು. ಯುಸಿಸಿ ಜಾರಿಯಾಗಿದ್ದರೂ ಬುಡಕಟ್ಟು ಜನಾಂಗದವರ ಹಕ್ಕುಗಳಿಗೆ ಧಕ್ಕೆಯಾಗದಂತೆ ನೋಡಿಕೊಳ್ಳುತ್ತದೆ ಎಂದು ಹೇಳಿದರು.

ಬಿಜೆಪಿ ಪ್ರಣಾಳಿಕೆ ಬಿಡುಗಡೆ

ಜಾರ್ಖಂಡ್​ನ ಕುಟುಂಬಗಳು 500 ರೂ.ಗೆ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಖರೀದಿಸಲು ಸಾಧ್ಯವಾಗುತ್ತದೆ. ಜೊತೆಗೆ, ಒಂದು ವರ್ಷದಲ್ಲಿ ಎರಡು ಸಿಲಿಂಡರ್‌ಗಳನ್ನು ಉಚಿತವಾಗಿ ನೀಡಲಾಗುವುದು. ಇದಲ್ಲದೇ ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ 2.87 ಲಕ್ಷ ಹುದ್ದೆಗಳನ್ನು ಭರ್ತಿ ಮಾಡಲಾಗುವುದು. ಮೊಟ್ಟ ಮೊದಲ ಸಂಪುಟ ಸಭೆಯ ನಂತರ ನೇಮಕಾತಿ ಪ್ರಕ್ರಿಯೆ ಆರಂಭವಾಗಲಿದ್ದು, 2025ರ ನವೆಂಬರ್ ವೇಳೆಗೆ 1.5 ಲಕ್ಷ ಹುದ್ದೆಗಳನ್ನು ಭರ್ತಿ ಮಾಡಲಾಗುವುದು.

ಪಕ್ಷವು ಅಧಿಕಾರಕ್ಕೆ ಬಂದರೆ, ಎರಡು ವರ್ಷಗಳವರೆಗೆ ಪದವಿ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ 2,000 ರೂಪಾಯಿಗಳ ಆರ್ಥಿಕ ಸಹಾಯವನ್ನು ನೀಡುತ್ತದೆ, ಇದರಿಂದಾಗಿ ಅವರು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧರಾಗಬಹುದು. ಬಿಜೆಪಿಯು ಮಹಿಳೆಯರ ಸಬಲೀಕರಣದ ಧ್ಯೇಯೋದ್ದೇಶದ ಭಾಗವಾಗಿ ‘ಗೋಗೋ-ದೀದಿ’ ಯೋಜನೆಯನ್ನು ಪ್ರಾರಂಭಿಸಲಿದೆ ಮತ್ತು ಕಾರ್ಯಕ್ರಮದ ಅಡಿಯಲ್ಲಿ ಮಹಿಳೆಯರಿಗೆ ತಿಂಗಳಿಗೆ 2,100 ರೂ. ನೀಡಲಾಗುತ್ತದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಹೇಗಿದೆ ನೋಡಿ ನಟಿ ಶ್ರುತಿ ಹೊಸ ಮನೆ; ಪ್ರಶಸ್ತಿ ಇಡಲು ಪ್ರತ್ಯೇಕ ಶೋಕೇಸ್
ಹೇಗಿದೆ ನೋಡಿ ನಟಿ ಶ್ರುತಿ ಹೊಸ ಮನೆ; ಪ್ರಶಸ್ತಿ ಇಡಲು ಪ್ರತ್ಯೇಕ ಶೋಕೇಸ್
ಧನರಾಜ್ ಮೇಲೆ ಕೈ ಮಾಡಿ ಹೊರ ಹೋದ್ರಾ ರಜತ್?
ಧನರಾಜ್ ಮೇಲೆ ಕೈ ಮಾಡಿ ಹೊರ ಹೋದ್ರಾ ರಜತ್?
ಮೃತ್ಯುಂಜಯ ಮಂತ್ರದ ಅರ್ಥ ಮತ್ತು ಜಪಿಸುವ ವಿಧಾನ ತಿಳಿಯಿರಿ
ಮೃತ್ಯುಂಜಯ ಮಂತ್ರದ ಅರ್ಥ ಮತ್ತು ಜಪಿಸುವ ವಿಧಾನ ತಿಳಿಯಿರಿ
ಶುಕ್ರವಾರದ ದಿನಭವಿಷ್ಯ; ಗ್ರಹಗಳ ಸಂಚಾರ, ಶುಭ, ಅಶುಭ ಬಗ್ಗೆ ತಿಳಿಯಿರಿ
ಶುಕ್ರವಾರದ ದಿನಭವಿಷ್ಯ; ಗ್ರಹಗಳ ಸಂಚಾರ, ಶುಭ, ಅಶುಭ ಬಗ್ಗೆ ತಿಳಿಯಿರಿ
ಹಿಮಾಲಯದಲ್ಲಿ ಸಿಕ್ಕಿ ಬಿದ್ದ ಕಂದು ಕರಡಿಯನ್ನು ರಕ್ಷಿಸಿದ ಭಾರತೀಯ ಸೈನಿಕರು
ಹಿಮಾಲಯದಲ್ಲಿ ಸಿಕ್ಕಿ ಬಿದ್ದ ಕಂದು ಕರಡಿಯನ್ನು ರಕ್ಷಿಸಿದ ಭಾರತೀಯ ಸೈನಿಕರು
ಮಾತಿಗೆ ಅಡ್ಡಿಪಡಿಸುತ್ತಿದ್ದ ರಾಯರೆಡ್ಡಿಯವರಿಗೆ ಸುಮ್ಮನಿರಲು ಹೇಳಿದ ಯತ್ನಾಳ್
ಮಾತಿಗೆ ಅಡ್ಡಿಪಡಿಸುತ್ತಿದ್ದ ರಾಯರೆಡ್ಡಿಯವರಿಗೆ ಸುಮ್ಮನಿರಲು ಹೇಳಿದ ಯತ್ನಾಳ್
ಗೋಡೆ ಬಳಿ ಹೋಗಿ ಅಳುತ್ತಿರುವ ಹನುಮಂತ; ಬಿಗ್ ಬಾಸ್​ ಮನೆಯಲ್ಲಿ ಏನಾಯ್ತು?
ಗೋಡೆ ಬಳಿ ಹೋಗಿ ಅಳುತ್ತಿರುವ ಹನುಮಂತ; ಬಿಗ್ ಬಾಸ್​ ಮನೆಯಲ್ಲಿ ಏನಾಯ್ತು?
ಮಂತ್ರಿಗಳಿಗೆ ಪ್ರಶ್ನೆ ಕೇಳಿದರೆ ಕಾಂಗ್ರೆಸ್ ಶಾಸಕರು ನಿಲ್ಲೋದ್ಯಾಕೆ? ಯತ್ನಾ
ಮಂತ್ರಿಗಳಿಗೆ ಪ್ರಶ್ನೆ ಕೇಳಿದರೆ ಕಾಂಗ್ರೆಸ್ ಶಾಸಕರು ನಿಲ್ಲೋದ್ಯಾಕೆ? ಯತ್ನಾ
ವಿರೋಧಫಕ್ಷದವರು ಸಭಾತ್ಯಾಗ ಮಾಡೋದು ವಾಡಿಕೆ, ಆದರೆ ಇಲ್ಲಿ ಸಿಎಂ!
ವಿರೋಧಫಕ್ಷದವರು ಸಭಾತ್ಯಾಗ ಮಾಡೋದು ವಾಡಿಕೆ, ಆದರೆ ಇಲ್ಲಿ ಸಿಎಂ!
ಎಲ್ಲರ ಆಟಕ್ಕೆ ಅಡ್ಡಗಾಲು ಹಾಕಿದ ಮಂಜು, ಗೌತಮಿ ಫುಲ್ ಗರಂ
ಎಲ್ಲರ ಆಟಕ್ಕೆ ಅಡ್ಡಗಾಲು ಹಾಕಿದ ಮಂಜು, ಗೌತಮಿ ಫುಲ್ ಗರಂ