ಜಾರ್ಖಂಡ್​: 9 ತಿಂಗಳ ಮಗುವಿನಲ್ಲಿ ಹಕ್ಕಿ ಜ್ವರ ಪತ್ತೆ

|

Updated on: Aug 19, 2023 | 11:54 AM

ಜಾರ್ಖಂಡ್​ನಲ್ಲಿ 9 ತಿಂಗಳ ಮಗುವಿನಲ್ಲಿ ಹಕ್ಕಿ ಜ್ವರ ಪತ್ತೆಯಾಗಿದೆ. ಇಲ್ಲಿನ ರಾಜೇಂದ್ರ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ (RIMS) ಒಂಬತ್ತು ತಿಂಗಳ ಮಗುವಿನಲ್ಲಿ ಹಕ್ಕಿ ಜ್ವರ ಪತ್ತೆಯಾಗಿದೆ ಎಂದು ಹಿರಿಯ ವೈದ್ಯರು ತಿಳಿಸಿದ್ದಾರೆ. ಜಾರ್ಖಂಡ್‌ನ ರಾಮಗಢ ಜಿಲ್ಲೆಯ ನಿವಾಸಿಯಾಗಿರುವ ಮಗುವನ್ನು ಜ್ವರ, ಕೆಮ್ಮು ಮತ್ತು ಉಸಿರಾಟದ ತೊಂದರೆಯ ಲಕ್ಷಣಗಳೊಂದಿಗೆ ರಿಮ್ಸ್‌ಗೆ ದಾಖಲಿಸಲಾಗಿದೆ.

ಜಾರ್ಖಂಡ್​: 9 ತಿಂಗಳ ಮಗುವಿನಲ್ಲಿ ಹಕ್ಕಿ ಜ್ವರ ಪತ್ತೆ
ಮಗು
Follow us on

ಜಾರ್ಖಂಡ್​ನಲ್ಲಿ 9 ತಿಂಗಳ ಮಗುವಿನಲ್ಲಿ ಹಕ್ಕಿ ಜ್ವರ ಪತ್ತೆಯಾಗಿದೆ. ಇಲ್ಲಿನ ರಾಜೇಂದ್ರ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ (RIMS) 9 ತಿಂಗಳ ಮಗುವಿನಲ್ಲಿ ಹಕ್ಕಿ ಜ್ವರ ಪತ್ತೆಯಾಗಿದೆ ಎಂದು ಹಿರಿಯ ವೈದ್ಯರು ತಿಳಿಸಿದ್ದಾರೆ. ಜಾರ್ಖಂಡ್‌ನ ರಾಮಗಢ ಜಿಲ್ಲೆಯ ನಿವಾಸಿಯಾಗಿರುವ ಮಗುವನ್ನು ಜ್ವರ, ಕೆಮ್ಮು ಮತ್ತು ಉಸಿರಾಟದ ತೊಂದರೆಯ ಲಕ್ಷಣಗಳೊಂದಿಗೆ ರಿಮ್ಸ್‌ಗೆ ದಾಖಲಿಸಲಾಗಿದೆ.

ಮಗುವಿನ ಮೂಗಿನ ಸ್ವ್ಯಾಬ್ ಅನ್ನು ಜೆನೆಟಿಕ್ಸ್ ಮತ್ತು ಜಿನೋಮಿಕ್ಸ್ ವಿಭಾಗಕ್ಕೆ ಕಳುಹಿಸಲಾಗಿದ್ದು, ಹಕ್ಕಿಜ್ವರ ದೃಢಪಟ್ಟಿದೆ ಎಂದು ಮಕ್ಕಳ ವಿಭಾಗದ ಡಾ.ರಾಜೀವ್ ಮಿಶ್ರಾ ತಿಳಿಸಿದ್ದಾರೆ.

ಮತ್ತಷ್ಟು ಓದಿ: Bird Flu: ಕೇರಳದಲ್ಲಿ ಹೆಚ್ಚಿದ ಹಕ್ಕಿ ಜ್ವರ; ಕೊಟ್ಟಾಯಂನಲ್ಲಿ 6,000ಕ್ಕೂ ಹೆಚ್ಚು ಪಕ್ಷಿಗಳ ಹತ್ಯೆ

ಇದು ಆಸ್ಪತ್ರೆಯಲ್ಲಿ ವರ್ಷದ ಮೊದಲ ಹಕ್ಕಿ ಜ್ವರ ಪ್ರಕರಣವಾಗಿದೆ. ಮಗುವಿಗೆ ನನ್ನ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ಕೋವಿಡ್ -19 ತರಹದ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಲಾಗಿದೆ ಮತ್ತು ಮಗುವನ್ನು ಇತರರಿಂದ ಪ್ರತ್ಯೇಕಿಸಲಾಗಿದೆ ಎಂದು ತಿಳಿಸಿದ್ದಾರೆ. ಕಳೆದ ವರ್ಷ ಕೇರಳದಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡಿತ್ತು, ಸಾವಿರಾರು ಪಕ್ಷಿಗಳು ಮೃತಪಟ್ಟಿದ್ದವು.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ