ಜಾರ್ಖಂಡ್: ಹೊಸ ವರ್ಷದ ಸಂಭ್ರದಲ್ಲಿರಬೇಕಿದ್ದ ಮನೆಗಳಲ್ಲಿ ಸೂತಕದ ಛಾಯೆ, ಡಿವೈಡರ್ಗೆ ಕಾರು ಡಿಕ್ಕಿ ಹೊಡೆದು 6 ಮಂದಿ ಸಾವು
ಕಾರು ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡೆದ ಪರಿಣಾಮ ಆರು ಮಂದಿ ಸಾವನ್ನಪ್ಪಿರುವ ಘಟನೆ ಜಾರ್ಖಂಡ್ನ ಜೆಮ್ಶೆಡ್ಪುರದಲ್ಲಿ ನಡೆದಿದೆ. ಅಪಘಾತದ ವೇಳೆ ಕಾರಿನಲ್ಲಿ ಆದಿತ್ಯಪುರ ನಿವಾಸಿಗಳಾದ ಒಟ್ಟು 8 ಮಂದಿ ಇದ್ದರು. ಐವರು ಸ್ಥಳದಲ್ಲೇ ಮೃತಪಟ್ಟರೆ, ಒಬ್ಬರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಪೊಲೀಸರ ಪ್ರಕಾರ, ಗಾಯಗೊಂಡ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಜಮ್ಶೆಡ್‌ಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ. ಮಾಹಿತಿ ಪ್ರಕಾರ ಕಾರಿನಲ್ಲಿ ಒಟ್ಟು 8 ಮಂದಿ ಇದ್ದರು, ಗಾಯಗೊಂಡ ಇಬ್ಬರು ಯುವಕರಲ್ಲಿ ಒಬ್ಬರು ಡಿಎಂಎಚ್ನಲ್ಲಿ ಮತ್ತು ಇನ್ನೊಬ್ಬರು ಸ್ಟೀಲ್ ಸಿಟಿ ನರ್ಸಿಂಗ್ ಹೋಂನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಎಲ್ಲಾ ಆರು ಮಂದಿಯ ಮೃತದೇಹಗಳನ್ನು ಎಂಜಿಎಂ ಆಸ್ಪತ್ರೆಯಲ್ಲಿ ಇರಿಸಲಾಗಿದೆ. ಸೋಮವಾರ ಬೆಳಗ್ಗೆ 7 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಅಪಘಾತದ ಮಾಹಿತಿ ಪಡೆದು ಸ್ಥಳಕ್ಕಾಗಮಿಸಿದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಮಾಹಿತಿ ಪ್ರಕಾರ ಎಲ್ಲಾ ಯುವಕರು ಆದಿತ್ಯಪುರದ ಬಾಬಾ ಕುಟಿ ಪ್ರದೇಶದವರಾಗಿದ್ದಾರೆ. ಬಿಸ್ತುಪುರದಿಂದ ಮರೈನ್ ಡ್ರೈವ್ ಕಡೆಗೆ ಕಾರಿನಲ್ಲಿ ಪಿಕ್ನಿಕ್ಗೆ ಹೋಗುತ್ತಿದ್ದರು.
ಮತ್ತಷ್ಟು ಓದಿ: ನೆಲಮಂಗಲ: ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸರಣಿ ಅಪಘಾತ, 30 ಜನರಿಗೆ ಗಾಯ
ಅವರ ಕಾರಿನ ವೇಗ ತುಂಬಾ ಹೆಚ್ಚಿತ್ತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಇದೇ ವೇಳೆ ಡಿಸಿ ನಿವಾಸದ ಬಳಿ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಬ್ಬಿಣದ ಕಂಬಕ್ಕೆ ಡಿಕ್ಕಿ ಹೊಡೆದು ನಂತರ ಮರಕ್ಕೆ ಡಿಕ್ಕಿ ಹೊಡೆದಿದೆ. ರಸ್ತೆ ಅಪಘಾತದ ಬಗ್ಗೆ ಮಾಹಿತಿ ಪಡೆದ ಬಿಸ್ತಪುರ್ ಮತ್ತು ಸೋನಾರಿ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು ಈ ಕುರಿತು ತನಿಖೆ ಆರಂಭಿಸಿದ್ದಾರೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ