ಜಾರ್ಖಂಡ್​: ಹೊಸ ವರ್ಷದ ಸಂಭ್ರದಲ್ಲಿರಬೇಕಿದ್ದ ಮನೆಗಳಲ್ಲಿ ಸೂತಕದ ಛಾಯೆ, ಡಿವೈಡರ್​ಗೆ ಕಾರು ಡಿಕ್ಕಿ ಹೊಡೆದು 6 ಮಂದಿ ಸಾವು

ಕಾರು ನಿಯಂತ್ರಣ ತಪ್ಪಿ ಡಿವೈಡರ್​ಗೆ ಡಿಕ್ಕಿ ಹೊಡೆದ ಪರಿಣಾಮ ಆರು ಮಂದಿ ಸಾವನ್ನಪ್ಪಿರುವ ಘಟನೆ ಜಾರ್ಖಂಡ್​ನ ಜೆಮ್​ಶೆಡ್​ಪುರದಲ್ಲಿ ನಡೆದಿದೆ. ಅಪಘಾತದ ವೇಳೆ ಕಾರಿನಲ್ಲಿ ಆದಿತ್ಯಪುರ ನಿವಾಸಿಗಳಾದ ಒಟ್ಟು 8 ಮಂದಿ ಇದ್ದರು. ಐವರು ಸ್ಥಳದಲ್ಲೇ ಮೃತಪಟ್ಟರೆ, ಒಬ್ಬರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಜಾರ್ಖಂಡ್​: ಹೊಸ ವರ್ಷದ ಸಂಭ್ರದಲ್ಲಿರಬೇಕಿದ್ದ ಮನೆಗಳಲ್ಲಿ ಸೂತಕದ ಛಾಯೆ, ಡಿವೈಡರ್​ಗೆ ಕಾರು ಡಿಕ್ಕಿ ಹೊಡೆದು 6 ಮಂದಿ ಸಾವು
ಜಾರ್ಖಂಡ್​

Updated on: Jan 01, 2024 | 11:38 AM

ಕಾರು ನಿಯಂತ್ರಣ ತಪ್ಪಿ ಡಿವೈಡರ್​ಗೆ ಡಿಕ್ಕಿ ಹೊಡೆದ ಪರಿಣಾಮ ಆರು ಮಂದಿ ಸಾವನ್ನಪ್ಪಿರುವ ಘಟನೆ ಜಾರ್ಖಂಡ್​ನ ಜೆಮ್​ಶೆಡ್​ಪುರದಲ್ಲಿ ನಡೆದಿದೆ. ಅಪಘಾತದ ವೇಳೆ ಕಾರಿನಲ್ಲಿ ಆದಿತ್ಯಪುರ ನಿವಾಸಿಗಳಾದ ಒಟ್ಟು 8 ಮಂದಿ ಇದ್ದರು. ಐವರು ಸ್ಥಳದಲ್ಲೇ ಮೃತಪಟ್ಟರೆ, ಒಬ್ಬರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಪೊಲೀಸರ ಪ್ರಕಾರ, ಗಾಯಗೊಂಡ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಜಮ್ಶೆಡ್‌ಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ. ಮಾಹಿತಿ ಪ್ರಕಾರ ಕಾರಿನಲ್ಲಿ ಒಟ್ಟು 8 ಮಂದಿ ಇದ್ದರು, ಗಾಯಗೊಂಡ ಇಬ್ಬರು ಯುವಕರಲ್ಲಿ ಒಬ್ಬರು ಡಿಎಂಎಚ್​ನಲ್ಲಿ ಮತ್ತು ಇನ್ನೊಬ್ಬರು ಸ್ಟೀಲ್ ಸಿಟಿ ನರ್ಸಿಂಗ್ ಹೋಂನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಎಲ್ಲಾ ಆರು ಮಂದಿಯ ಮೃತದೇಹಗಳನ್ನು ಎಂಜಿಎಂ ಆಸ್ಪತ್ರೆಯಲ್ಲಿ ಇರಿಸಲಾಗಿದೆ. ಸೋಮವಾರ ಬೆಳಗ್ಗೆ 7 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ.
ಅಪಘಾತದ ಮಾಹಿತಿ ಪಡೆದು ಸ್ಥಳಕ್ಕಾಗಮಿಸಿದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಮಾಹಿತಿ ಪ್ರಕಾರ ಎಲ್ಲಾ ಯುವಕರು ಆದಿತ್ಯಪುರದ ಬಾಬಾ ಕುಟಿ ಪ್ರದೇಶದವರಾಗಿದ್ದಾರೆ. ಬಿಸ್ತುಪುರದಿಂದ ಮರೈನ್ ಡ್ರೈವ್ ಕಡೆಗೆ ಕಾರಿನಲ್ಲಿ ಪಿಕ್​ನಿಕ್​ಗೆ ಹೋಗುತ್ತಿದ್ದರು.

ಮತ್ತಷ್ಟು ಓದಿ: ನೆಲಮಂಗಲ: ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸರಣಿ ಅಪಘಾತ, 30 ಜನರಿಗೆ ಗಾಯ

ಅವರ ಕಾರಿನ ವೇಗ ತುಂಬಾ ಹೆಚ್ಚಿತ್ತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಇದೇ ವೇಳೆ ಡಿಸಿ ನಿವಾಸದ ಬಳಿ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಬ್ಬಿಣದ ಕಂಬಕ್ಕೆ ಡಿಕ್ಕಿ ಹೊಡೆದು ನಂತರ ಮರಕ್ಕೆ ಡಿಕ್ಕಿ ಹೊಡೆದಿದೆ. ರಸ್ತೆ ಅಪಘಾತದ ಬಗ್ಗೆ ಮಾಹಿತಿ ಪಡೆದ ಬಿಸ್ತಪುರ್ ಮತ್ತು ಸೋನಾರಿ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು ಈ ಕುರಿತು ತನಿಖೆ ಆರಂಭಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Loading...
Unable to load recommendations.
Follow Us