Jharkhand: ಧಾರ್ಮಿಕ ಧ್ವಜಕ್ಕೆ ಅವಮಾನ ಹಿನ್ನೆಲೆ ಜೆಮ್ಶೆಡ್ಪುರದಲ್ಲಿ ಭುಗಿಲೆದ್ದ ಹಿಂಸಾಚಾರ
ಧಾರ್ಮಿಕ ಧ್ವಜಕ್ಕೆ ಅವಮಾನ ಮಾಡಿದ ಹಿನ್ನೆಲೆ ಜೆಮ್ಶೆಡ್ಪುರದಲ್ಲಿ ಹಿಂಸಾಚಾರ ಭುಗಿಲೆದ್ದಿದೆ. ಧಾರ್ಮಿಕ ಧ್ವಜವನ್ನು ಅಪವಿತ್ರಗೊಳಿಸಿರುವ ಹಿನ್ನೆಲೆಯಲ್ಲಿ ಶಾಸ್ತ್ರಿನಗರದಲ್ಲಿ ಎರಡು ಗುಂಪುಗಳ ನಡುವೆ ಹಿಂಸಾತ್ಮಕ ಘರ್ಷಣೆ ನಡೆದಿದೆ ಎಂದು ಹೇಳಲಾಗುತ್ತಿದೆ.
ರಾಮ ನವಮಿ ಧ್ವಜಕ್ಕೆ ಅವಮಾನ ಮಾಡಿದ ಹಿನ್ನೆಲೆ ಜೆಮ್ಶೆಡ್ಪುರದಲ್ಲಿ ಹಿಂಸಾಚಾರ ಭುಗಿಲೆದ್ದಿದೆ. ಧಾರ್ಮಿಕ ಧ್ವಜವನ್ನು ಅಪವಿತ್ರಗೊಳಿಸಿರುವ ಹಿನ್ನೆಲೆಯಲ್ಲಿ ಶಾಸ್ತ್ರಿನಗರದಲ್ಲಿ ಎರಡು ಗುಂಪುಗಳ ನಡುವೆ ಹಿಂಸಾತ್ಮಕ ಘರ್ಷಣೆ ನಡೆದಿದೆ ಎಂದು ಹೇಳಲಾಗುತ್ತಿದೆ. ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿ ಹಲವು ಅಂಗಡಿಗಳಿಗೆ ಮತ್ತು ಆಟೋ ರಿಕ್ಷಾಕ್ಕೆ ಬೆಂಕಿ ಹಚ್ಚಿದ್ದಾರೆ. ನಂತರ, ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಭಾನುವಾರ ಸಂಜೆ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದರು.
ಗುಂಪನ್ನು ಚದುರಿಸಲು ಪೊಲೀಸರು ಅಶ್ರುವಾಯು ಶೆಲ್‌ಗಳನ್ನು ಸಿಡಿಸಿದ್ದಾರೆ. ಈಗ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ತಿಳಿಸಿದ್ದಾರೆ. ಇಡೀ ಪ್ರದೇಶದಲ್ಲಿ ಯೋಧರನ್ನು ನಿಯೋಜಿಸಲಾಗಿದೆ. ಈ ಪ್ರದೇಶದಲ್ಲಿ ಇಂದು ಬೆಳಗ್ಗೆ ಅರೆಸೇನಾ ಪಡೆಗಳು ಧ್ವಜ ಮೆರವಣಿಗೆ ನಡೆಸಿದರು. ಉದ್ವಿಗ್ನತೆಯ ದೃಷ್ಟಿಯಿಂದ ಮೊಬೈಲ್ ಇಂಟರ್ನೆಟ್ ಅನ್ನು ಭಾಗಶಃ ಸ್ಥಗಿತಗೊಳಿಸಲಾಗಿದೆ.
ಮತ್ತಷ್ಟು ಓದಿ: ಕೋಮು ಗಲಭೆ ಸೃಷ್ಟಿಸಲು ಹಿಂದೂ ಮಹಾ ಸಭಾದ ಕಾರ್ಯಕರ್ತರಿಂದ ಗೋಹತ್ಯೆ: ಯುಪಿ ಪೊಲೀಸ್
ಸಮಾಜ ವಿರೋಧಿಗಳು ಶಾಂತಿ ಕದಡಲು ಯತ್ನಿಸುತ್ತಿದ್ದಾರೆ. ಅವರ ಷಡ್ಯಂತ್ರವನ್ನು ವಿಫಲಗೊಳಿಸಲು ಸಾಮಾನ್ಯ ನಾಗರಿಕರಿಂದ ಸಹಕಾರವನ್ನು ಕೋರಿದರು. ಶನಿವಾರ ರಾತ್ರಿಯಿಂದ ಸ್ಥಳೀಯ ಸಂಘಟನೆಯ ಸದಸ್ಯರು ರಾಮನವಮಿ ಧ್ವಜವನ್ನು ಅಪವಿತ್ರಗೊಳಿಸಿರುವುದನ್ನು ಕಂಡು ಸ್ಥಳದಲ್ಲಿ ಉದ್ವಿಗ್ನತೆ ಉಂಟಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
#WATCH | Security forces conduct flag march in Jamshedpur’s Kadma police station area following an incident of stone pelting and arson, in Jharkhand
Section 144 CrPc is enforced in the area and mobile internet is temporarily banned. pic.twitter.com/NhPnWtkQhR
— ANI (@ANI) April 10, 2023
ರಾಮ ನವಮಿಯಂದು ಸಾಕಷ್ಟು ಕಲ್ಲು ತೂರಾಟ ನಡೆದಿದೆ. ಜನರು ರಾಮನವಮಿ ಮೆರವಣಿಗೆ ನಡೆಸುತ್ತಿದ್ದರು. ಮೆರವಣಿಗೆಯು ಜುಗ್ಸಾಲೈ ತಲುಪಿದಾಗ, ಪ್ರತಿಭಟನಾಕಾರರು ಮೆರವಣಿಗೆಯ ಮೇಲೆ ಕಲ್ಲು ತೂರಿದರು. ಈ ಘಟನೆಯಿಂದ ಆಕ್ರೋಶಗೊಂಡ ಜನರು ಬಾಟಾ ಚೌಕ್‌ನಲ್ಲಿ ಹನುಮಾನ್ ಚಾಲೀಸಾ ಪಠಿಸಲು ಆರಂಭಿಸಿದರು.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 10:25 am, Mon, 10 April 23