Jharkhand: ಜಾರ್ಖಂಡ್‌ನ ಧನ್‌ಬಾದ್ ಬಳಿ ಅಕ್ರಮ ಕಲ್ಲಿದ್ದಲು ಗಣಿ ಕುಸಿದು ಮೂರು ಸಾವು, ಹಲವರು ಸಿಲುಕಿರುವ ಶಂಕೆ

|

Updated on: Jun 09, 2023 | 5:01 PM

Dhanbad coal mine collapse: . ಧನ್‌ಬಾದ್‌ನಿಂದ ಸುಮಾರು 21 ಕಿಮೀ ದೂರದಲ್ಲಿರುವ ಭಾರತ್ ಕೋಕಿಂಗ್ ಕೋಲ್ ಲಿಮಿಟೆಡ್‌ನ (ಬಿಸಿಸಿಎಲ್) ಭೌರಾ ಕಲ್ಲಿದ್ದಲು ಗಣಿ ಪ್ರದೇಶದಲ್ಲಿ ಬೆಳಗ್ಗೆ 10.30ಕ್ಕೆ ಈ ಘಟನೆ ಸಂಭವಿಸಿದೆ

Jharkhand: ಜಾರ್ಖಂಡ್‌ನ ಧನ್‌ಬಾದ್ ಬಳಿ ಅಕ್ರಮ ಕಲ್ಲಿದ್ದಲು ಗಣಿ ಕುಸಿದು ಮೂರು ಸಾವು, ಹಲವರು ಸಿಲುಕಿರುವ ಶಂಕೆ
ಕುಸಿದ ಗಣಿ
Follow us on

ಜಾರ್ಖಂಡ್‌ನ (Jharkhand) ಧನ್‌ಬಾದ್ (Dhanbad) ಬಳಿ ಅಕ್ರಮ ಕಲ್ಲಿದ್ದಲು ಗಣಿ ಕುಸಿದು ಕನಿಷ್ಠ ಮೂವರು ಸಾವನ್ನಪ್ಪಿದ್ದು, ಹಲವರು ಸಿಲುಕಿರುವ ಶಂಕೆ ಇದೆ ಎಂದು ಅಧಿಕಾರಿಗಳು ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ. ಧನ್‌ಬಾದ್‌ನಿಂದ ಸುಮಾರು 21 ಕಿಮೀ ದೂರದಲ್ಲಿರುವ ಭಾರತ್ ಕೋಕಿಂಗ್ ಕೋಲ್ ಲಿಮಿಟೆಡ್‌ನ (BCCL) ಭೌರಾ ಕಲ್ಲಿದ್ದಲು ಗಣಿ ಪ್ರದೇಶದಲ್ಲಿ ಬೆಳಗ್ಗೆ 10.30ಕ್ಕೆ ಈ ಘಟನೆ ಸಂಭವಿಸಿದೆ. ಸಾವಿಗೀಡಾದವರ ಸಂಖ್ಯೆ ಮತ್ತು  ಗಾಯಗೊಂಡವರ ನಿಖರವಾದ ಸಂಖ್ಯೆ ಇನ್ನೂ ತಿಳಿದುಬಂದಿಲ್ಲ ಎಂದು ಸಿಂದ್ರಿ ಉಪ ಪೊಲೀಸ್ ವರಿಷ್ಠಾಧಿಕಾರಿ (ಡಿಎಸ್ಪಿ), ಅಭಿಷೇಕ್ ಕುಮಾರ್ ಹೇಳಿದ್ದಾರೆ. ಒಂದು ಮಗು,ಮಹಿಳೆ ಮತ್ತು 25ರ ಹರೆಯದ ವ್ಯಕ್ತಿಯೊಬ್ಬರು ಈ ದುರಂತದಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ.

ಗಣಿ ಒಳಹೊಕ್ಕಾಗ ಅನೇಕ ಸ್ಥಳೀಯ ಗ್ರಾಮಸ್ಥರು ಅಕ್ರಮ ಗಣಿಗಾರಿಕೆಯಲ್ಲಿ ತೊಡಗಿದ್ದರು. ಸ್ಥಳೀಯರ ಸಹಾಯದಿಂದ ಮೂವರನ್ನು ಅವಶೇಷಗಳಿಂದ ಹೊರತೆಗೆದು ಆಸ್ಪತ್ರೆಗೆ ಸಾಗಿಸಲಾಯಿತು, ಅಲ್ಲಿ ವೈದ್ಯರು ಅವರು ಸಾವನ್ನಪ್ಪಿದ್ದಾರೆ ಎಂದು ಘೋಷಿಸಿದರು ಎಂದು ಪ್ರತ್ಯಕ್ಷದರ್ಶಿಯೊಬ್ಬರು ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ


ಬಿಸಿಸಿಎಲ್ (ಭಾರತ್ ಕೋಕಿಂಗ್ ಕೋಲ್ ಲಿಮಿಟೆಡ್) ತೆರೆದ ಗಣಿ ಭಾಗ ಕುಸಿದಿದೆ. ಒಂದು ಮೃತದೇಹ ಪತ್ತೆಯಾಗಿದೆ. ಎಷ್ಟು ಜನ ಸತ್ತಿದ್ದಾರೆ ಎಂಬುದು ಸ್ಪಷ್ಟ ಮಾಹಿತಿ ಸಿಕ್ಕಿಲ್ಲ. ಬಿಸಿಸಿಎಲ್ ವರದಿಗಾಗಿ ಕಾಯುತ್ತಿದ್ದೇವೆ. ವರದಿ ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು  ಧನಬಾದ್ ಎಸ್‌ಎಸ್‌ಪಿ ಸಂಜೀವ್ ಕುಮಾರ್ ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:43 pm, Fri, 9 June 23