AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jagarnath Mahto Death: ಜಾರ್ಖಂಡ್ ಶಿಕ್ಷಣ ಸಚಿವ ಜಗರ್ನಾಥ್ ಮಹತೋ ನಿಧನ

ಜಾರ್ಖಂಡ್ ಶಿಕ್ಷಣ ಸಚಿವ ಜಗರ್ನಾಥ್ ಮಹತೋ ನಿಧನರಾಗಿದ್ದಾರೆ. ಚೆನ್ನೈನಲ್ಲಿ ಅವರು ಕೊನೆಯುಸಿರೆಳೆದರು. ಈ ಕುರಿತು ಮುಖ್ಯಮಂತ್ರಿ ಹೇಮಂತ್ ಸೊರೆನ್ ಮಾಹಿತಿ ನೀಡಿದ್ದಾರೆ

Jagarnath Mahto Death: ಜಾರ್ಖಂಡ್ ಶಿಕ್ಷಣ ಸಚಿವ ಜಗರ್ನಾಥ್ ಮಹತೋ ನಿಧನ
ಜಗರ್ನಾಥ್ ಮಹತೋ
ನಯನಾ ರಾಜೀವ್
|

Updated on:Apr 06, 2023 | 11:36 AM

Share

ಜಾರ್ಖಂಡ್ ಶಿಕ್ಷಣ ಸಚಿವ ಜಗರ್ನಾಥ್ ಮಹತೋ(Jagarnath Mahto) ನಿಧನರಾಗಿದ್ದಾರೆ. ಚೆನ್ನೈನಲ್ಲಿ ಅವರು ಕೊನೆಯುಸಿರೆಳೆದರು. ಈ ಕುರಿತು ಮುಖ್ಯಮಂತ್ರಿ ಹೇಮಂತ್ ಸೊರೆನ್ ಮಾಹಿತಿ ನೀಡಿದ್ದಾರೆ. ಮಹತೋ ಕೆಲವು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು, ಕೊರೊನಾದಿಂದಾಗಿ ಅವರ ಶ್ವಾಸಕೋಶಕ್ಕೆ ಹಾನಿಯಾಗಿತ್ತು ಹಾಗೂ 2020ರ ನವೆಂಬರ್​ನಲ್ಲಿ ಚೆನ್ನೈನ ಮಹಾತ್ಮ ಗಾಂಧಿ ಸ್ಮಾರಕ ಆಸ್ಪತ್ರೆಯಲ್ಲಿ ಶ್ವಾಸಕೋಶ ಕಸಿ ಮಾಡಲಾಯಿತು.

ಮಹತೋ ಅವರು 2019ರಲ್ಲಿ ದುಮ್ರಿ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾದರು. ಅವರು ಹಲವಾರು ಬಾರಿ ಜಾರ್ಖಂಡ್ ವಿಧಾನಸಭೆ ಸದಸ್ಯರಾಗಿದ್ದರು.

ಮಾರ್ಚ್ 14 ರಂದು ಸಚಿವ ಮಹತೋ ಅವರ ಅನಾರೋಗ್ಯ ಹದಗೆಟ್ಟಿತ್ತು, ಇದಾದ ಬಳಿಕ ಅವರನ್ನು ಚಿಕಿತ್ಸೆಗಾಗಿ ರಾಂಚಿಯ ಪರಾಸ್ ಆಸ್ಪತ್ರೆಗೆ ದಾಖಲಿಸಲಾಯಿತು. ನಂತರ ವಿಮಾನದ ಮೂಲಕ ಅವರನ್ನು ಚೆನ್ನೈಗೆ ಕರೆದೊಯ್ಯಲಾಯಿತು.

ಸೆಪ್ಟೆಂಬರ್ 2020ರಲ್ಲಿ ಮಹತೋ ಕೊರೊನಾ ಸೋಂಕಿಗೆ ತುತ್ತಾದರು. ಅದರಿಂದ ಅವರ ಶ್ವಾಸಕೋಶ ಸಂಪೂರ್ಣವಾಗಿ ಹಾಳಾಗಿತ್ತು. ಅವರನ್ನು 21 ದಿನಗಳ ಕಾಲ ಲೈಫ್ ಸಪೋರ್ಟ್​ನಲ್ಲಿ ಇರಿಸಲಾಗಿತ್ತು. ಇದಾದ ಬಳಿಕ ಚೆನ್ನೈನಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:27 am, Thu, 6 April 23

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ