AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾರ್ಖಂಡ್​​ನಲ್ಲಿ ಪರೀಕ್ಷಾ ಅಕ್ರಮ; ಸಿಐಡಿಯಿಂದ ಜೆಪಿಎಸ್‌ಸಿ ಮಾಜಿ ಅಧ್ಯಕ್ಷ ಎಲ್. ಖಿಯಾಂಗ್ತೆ ಬಂಧನ

ಜಾರ್ಖಂಡ್ ಸಾರ್ವಜನಿಕ ಸೇವಾ ಆಯೋಗದ (JPSC) ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ ತೀವ್ರಗೊಂಡ ಬೆನ್ನಲ್ಲೇ ರಾಂಚಿಯಲ್ಲಿ ಪ್ರಮುಖ ಬೆಳವಣಿಗೆಯೊಂದು ನಡೆದಿದೆ. ಜೆಪಿಎಸ್‌ಸಿ ಮಾಜಿ ಅಧ್ಯಕ್ಷ ಎಲ್. ಖಿಯಾಂಗ್ತೆ ಅವರನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ. ವಿಚಾರಣೆಯ ಭಾಗವಾಗಿ ಹಲವು ಸುತ್ತುಗಳ ಸುದೀರ್ಘ ತನಿಖೆಯ ನಂತರ ಖಿಯಾಂಗ್ತೆ ಅವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಮೂಲಗಳು ತಿಳಿಸಿವೆ. ಪರೀಕ್ಷಾ ಅಕ್ರಮಗಳ ಆರೋಪ ಕೇಳಿಬಂದ ನಂತರ ಅವರು ಜೆಪಿಎಸ್‌ಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಜಾರ್ಖಂಡ್​​ನಲ್ಲಿ ಪರೀಕ್ಷಾ ಅಕ್ರಮ; ಸಿಐಡಿಯಿಂದ ಜೆಪಿಎಸ್‌ಸಿ ಮಾಜಿ ಅಧ್ಯಕ್ಷ ಎಲ್. ಖಿಯಾಂಗ್ತೆ ಬಂಧನ
L KhiangteImage Credit source: x
ಸುಷ್ಮಾ ಚಕ್ರೆ
|

Updated on: Aug 10, 2026 | 4:55 PM

Share

ರಾಂಚಿ, ಆಗಸ್ಟ್ 10: ಜಾರ್ಖಂಡ್‌ನ ಉದ್ಯೋಗ ಆಕಾಂಕ್ಷಿ ವಿದ್ಯಾರ್ಥಿಗಳ ತೀವ್ರ ಪ್ರತಿಭಟನೆಯ ನಡುವೆ ಜಾರ್ಖಂಡ್ ಸಾರ್ವಜನಿಕ ಸೇವಾ ಆಯೋಗದ (JPSC) ಮಾಜಿ ಅಧ್ಯಕ್ಷ ಎಲ್. ಖಿಯಾಂಗ್ತೆ (L. Khiangte) ಅವರನ್ನು ಸಿಐಡಿ (CID) ಅಧಿಕಾರಿಗಳು ಬಂಧಿಸಿದ್ದಾರೆ. ಜೆಪಿಎಸ್‌ಸಿ ಮತ್ತು ಜೆಎಸ್ಎಸ್‍ಸಿ (JSSC) ಉದ್ಯೋಗ ನೇಮಕಾತಿ ಅಕ್ರಮಗಳಿಗೆ ಸಂಬಂಧಿಸಿದಂತೆ ಅವರನ್ನು ಬಂಧಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ನೇಮಕಾತಿ ಪರೀಕ್ಷೆಗಳ ಅಕ್ರಮಗಳಿಗೆ ಸಂಬಂಧಿಸಿದಂತೆ ಸಿಐಡಿ ಎಡಿಜಿ ಮನೋಜ್ ಕೌಶಿಕ್ ಅವರು ಖಿಯಾಂಗ್ತೆ ಅವರ ಬಂಧನವನ್ನು ಖಚಿತಪಡಿಸಿದ್ದಾರೆ. “ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿರುವ ಅಕ್ರಮಗಳಿಗೆ ಸಂಬಂಧಿಸಿದಂತೆ ಜೆಪಿಎಸ್‌ಸಿ ಮಾಜಿ ಅಧ್ಯಕ್ಷ ಎಲ್. ಖಿಯಾಂಗ್ತೆ ಅವರನ್ನು ಬಂಧಿಸಲಾಗಿದೆ” ಎಂದು ಅವರು ಪ್ರಕಟಿಸಿದ್ದಾರೆ.

ಇದನ್ನೂ ಓದಿ: ಜಾರ್ಖಂಡ್​ನಲ್ಲಿ 17ನೇ ದಿನಕ್ಕೆ ಕಾಲಿಟ್ಟ ವಿದ್ಯಾರ್ಥಿಗಳ ಪ್ರತಿಭಟನೆ; ವಿಧಾನಸೌಧ ಮುತ್ತಿಗೆಗೆ ಯತ್ನ; ಜಲಫಿರಂಗಿಗೂ ಬೆದರದ ಯುವಜನರು

ಬಂಧನಕ್ಕೂ ಮುನ್ನ 4 ಬಾರಿ ವಿಚಾರಣೆ:

1988ರ ಬ್ಯಾಚ್‌ನ ಐಎಎಸ್ ಅಧಿಕಾರಿಯಾಗಿರುವ ಖಿಯಾಂಗ್ತೆ ಅವರು ಜಾರ್ಖಂಡ್ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ನಿವೃತ್ತರಾದ ನಂತರ ಕಳೆದ ವರ್ಷದ ಫೆಬ್ರವರಿಯಲ್ಲಿ ಜೆಪಿಎಸ್‌ಸಿ ಅಧ್ಯಕ್ಷರಾಗಿ ನೇಮಕಗೊಂಡಿದ್ದರು. ಈ ಪ್ರಕರಣದ ತನಿಖೆಯ ಭಾಗವಾಗಿ ಜುಲೈ 28ರಿಂದ ಸಿಐಡಿ ಅವರನ್ನು 4 ಬಾರಿ ವಿಚಾರಣೆಗೆ ಒಳಪಡಿಸಿತ್ತು. ಬಳಿಕ ಜುಲೈ 22ರಂದು ಅವರು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಜೆಪಿಎಸ್‌ಸಿಯ ಮೂವರೂ ಸದಸ್ಯರ ರಾಜೀನಾಮೆ:

ಈ ಹಗರಣದ ತನಿಖೆ ತೀವ್ರಗೊಳ್ಳುತ್ತಿದ್ದಂತೆ ಜೆಪಿಎಸ್‌ಸಿಯ ಹಾಲಿ ಸದಸ್ಯರಾದ ಅಜೀತಾ ಭಟ್ಟಾಚಾರ್ಯ, ಅನಿಮಾ ಹನ್ಸ್ಡಾ ಮತ್ತು ಜಮಾಲ್ ಅಹ್ಮದ್ ಭಾನುವಾರ ತಮ್ಮ ಹುದ್ದೆಗಳಿಗೆ ರಾಜೀನಾಮೆ ನೀಡಿದ್ದರು. ಸಿಐಡಿ ವಿಚಾರಣೆಗೆ ಹಾಜರಾಗಲು ಸಮನ್ಸ್ ನೀಡಿದ ಬೆನ್ನಲ್ಲೇ ಈ ಮೂವರೂ ರಾಜೀನಾಮೆ ನೀಡಿದ್ದರು. ಅಜೀತಾ ಭಟ್ಟಾಚಾರ್ಯ ಅವರು ಜೆಎಂಎಂ ನಾಯಕ ಸುಪ್ರಿಯೋ ಭಟ್ಟಾಚಾರ್ಯ ಅವರ ಪತ್ನಿಯಾಗಿದ್ದಾರೆ. ಈ ಪ್ರಕರಣದಲ್ಲಿ ಇಲ್ಲಿಯವರೆಗೆ ಒಟ್ಟು 20 ಜನರನ್ನು ಸಿಐಡಿ ಬಂಧಿಸಿದೆ.

ಇದನ್ನೂ ಓದಿ: ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ ವಿರುದ್ಧ ಕೇಸ್ ದಾಖಲಿಸದಿರಲು ಬದ್ಧ; ಸುಪ್ರೀಂ ಕೋರ್ಟ್‌ಗೆ ಸರ್ಕಾರ ಸ್ಪಷ್ಟನೆ

ಸರ್ಕಾರದ ಪ್ರಸ್ತಾವನೆ ತಿರಸ್ಕರಿಸಿದ ವಿದ್ಯಾರ್ಥಿಗಳು:

ಸಿಎಂ ಹೇಮಂತ್ ಸೊರೆನ್ ನೇತೃತ್ವದ ಜಾರ್ಖಂಡ್ ಸರ್ಕಾರವು 14ನೇ ಜೆಪಿಎಸ್‌ಸಿ ಪರೀಕ್ಷೆ ಹಾಗೂ 2023, 2025ರ ಬಾಕಿ ನೇಮಕಾತಿ ಪರೀಕ್ಷೆಗಳನ್ನು ರದ್ದುಗೊಳಿಸುವುದಾಗಿ ಘೋಷಿಸಿತ್ತು. ಆದರೂ ವಿದ್ಯಾರ್ಥಿಗಳು ಇದನ್ನು ತಿರಸ್ಕರಿಸಿದ್ದರು. ತಮ್ಮ ಮುಖ್ಯ ಬೇಡಿಕೆಯಾದ ಸಿಬಿಐ ತನಿಖೆಗೆ ಸರ್ಕಾರ ಒಪ್ಪಿಲ್ಲ ಮತ್ತು ಸರ್ಕಾರ ತಮಗೆ ಸುಳ್ಳು ಭರವಸೆಗಳನ್ನು ನೀಡುತ್ತಿದೆ ಎಂದು ವಿದ್ಯಾರ್ಥಿ ನಾಯಕರು ಆರೋಪಿಸಿದ್ದಾರೆ.

ರಾಷ್ಟ್ರಮಟ್ಟದಲ್ಲಿ ನೀಟ್ (NEET) ಪರೀಕ್ಷಾ ಅಕ್ರಮಗಳ ವಿರುದ್ಧ ನಿರಂತರವಾಗಿ ಧ್ವನಿ ಎತ್ತುತ್ತಿರುವ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ತಮ್ಮದೇ ಮೈತ್ರಿಕೂಟದ ಆಡಳಿತವಿರುವ ಜಾರ್ಖಂಡ್‌ನಲ್ಲಿ ನಡೆಯುತ್ತಿರುವ ವಿದ್ಯಾರ್ಥಿಗಳ ಬೃಹತ್ ಪ್ರತಿಭಟನೆಯ ಕುರಿತು ಮೌನ ವಹಿಸಿರುವುದು ಬಿಜೆಪಿಯ ವಾಗ್ದಾಳಿಗೆ ಕಾರಣವಾಗಿದೆ. ಪ್ರಸ್ತುತ ರಾಂಚಿಯಲ್ಲಿ ಉದ್ಯೋಗ ಆಕಾಂಕ್ಷಿಗಳು ಜೆಎಸ್ಎಸ್‍ಸಿ-ಸಿಜಿಎಲ್ (JSSC-CGL) ಪರೀಕ್ಷೆಯ ಕುರಿತು ಸ್ವತಂತ್ರ ಸಿಬಿಐ ತನಿಖೆಗೆ ಮತ್ತು ನೇಮಕಾತಿ ಮಂಡಳಿಗಳಲ್ಲಿ ಸಮಗ್ರ ಸುಧಾರಣೆಗಳಿಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ ಮುಂದುವರಿಸಿದ್ದಾರೆ.

ಏನಿದು ಹಗರಣ?:

14ನೇ ಜೆಪಿಎಸ್‌ಸಿ ನಾಗರಿಕ ಸೇವೆಗಳ ಪರೀಕ್ಷೆ ಮತ್ತು ಇತರ ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಕುರಿತು ಸಿಐಡಿ ತನಿಖೆ ನಡೆಸುತ್ತಿದೆ. ತನಿಖೆಯ ಭಾಗವಾಗಿ ಜುಲೈ 28ರಂದು ಖಿಯಾಂಗ್ತೆ ಅವರಿಗೆ ಸಿಐಡಿ ಸಮನ್ಸ್ ನೀಡಿತ್ತು. ಅಲ್ಲದೆ ಅವರ ಸರ್ಕಾರಿ ನಿವಾಸ ಮತ್ತು ಜೆಪಿಎಸ್‌ಸಿ ಕಚೇರಿಯ ಮೇಲೆಯೂ ದಾಳಿ ನಡೆಸಿತ್ತು. ಪರಿಶೀಲನೆಯ ವೇಳೆ ಸಿಐಡಿ ಅಧಿಕಾರಿಗಳು ಮಹತ್ವದ ದಾಖಲೆಗಳು, ಒಎಂಆರ್ ಶೀಟ್‌ಗಳು ಮತ್ತು ಡಿಜಿಟಲ್ ಸಾಕ್ಷ್ಯಾಧಾರಗಳನ್ನು ವಶಪಡಿಸಿಕೊಂಡಿದ್ದರು. ಆದರೆ ಖಿಯಾಂಗ್ತೆ ತಮ್ಮ ಮೇಲಿನ ಎಲ್ಲಾ ಆರೋಪಗಳನ್ನು ನಿರಾಕರಿಸಿದ್ದರು. ಈ ಪ್ರಕರಣದಲ್ಲಿ ಈಗಾಗಲೇ ಖಿಯಾಂಗ್ತೆ ಅವರ ಕಂಪ್ಯೂಟರ್ ಆಪರೇಟರ್ ಧರ್ಮೇಂದ್ರ ಅವರನ್ನು ಸಿಐಡಿ ಬಂಧಿಸಿದೆ. ಇದೀಗ ಖಿಯಾಂಗ್ತೆ ಅವರನ್ನು ಕೂಡ ಬಂಧಿಸಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬಿಡದಿ ಟೌನ್​ಶಿಪ್​ ಯೋಜನೆಯ ಹಿಂದಿನ ಉದ್ದೇಶ ಏನು? ಸಿಎಂಗೆ ದೇವೇಗೌಡ ಪ್ರಶ್ನೆ
ಬಿಡದಿ ಟೌನ್​ಶಿಪ್​ ಯೋಜನೆಯ ಹಿಂದಿನ ಉದ್ದೇಶ ಏನು? ಸಿಎಂಗೆ ದೇವೇಗೌಡ ಪ್ರಶ್ನೆ
ಸಂಪುಟದಿಂದ ವಜಾಕ್ಕೆ ಆಗ್ರಹಗಳ ಮಧ್ಯೆ ಸಚಿವ ನಾಗೇಂದ್ರಗೆ ಬಿಗ್ ರಿಲೀಫ್​
ಸಂಪುಟದಿಂದ ವಜಾಕ್ಕೆ ಆಗ್ರಹಗಳ ಮಧ್ಯೆ ಸಚಿವ ನಾಗೇಂದ್ರಗೆ ಬಿಗ್ ರಿಲೀಫ್​
ಸ್ಟಾರ್ ಹೋಟೆಲ್​​​​​ ಬೆನ್ನಲ್ಲೇ ಕಾಸ್ಮೆಟಿಕ್ಸ್ ಅಂಗಡಿಗಳ ಮೇಲೆ ದಾಳಿ
ಸ್ಟಾರ್ ಹೋಟೆಲ್​​​​​ ಬೆನ್ನಲ್ಲೇ ಕಾಸ್ಮೆಟಿಕ್ಸ್ ಅಂಗಡಿಗಳ ಮೇಲೆ ದಾಳಿ
ಬೆಂಗಳೂರಲ್ಲಿ 105 ಮಂದಿ ಬಾಂಗ್ಲಾದೇಶದ ಅಕ್ರಮ ವಲಸಿಗರು ಪತ್ತೆ
ಬೆಂಗಳೂರಲ್ಲಿ 105 ಮಂದಿ ಬಾಂಗ್ಲಾದೇಶದ ಅಕ್ರಮ ವಲಸಿಗರು ಪತ್ತೆ
ಪ್ರಾಯಶ್ಚಿತ್ತ ಯಾತ್ರೆ ಅನ್ನೋರಿಗೆ ದೇವೇಗೌಡರಿಂದ ತಿರುಗೇಟು!
ಪ್ರಾಯಶ್ಚಿತ್ತ ಯಾತ್ರೆ ಅನ್ನೋರಿಗೆ ದೇವೇಗೌಡರಿಂದ ತಿರುಗೇಟು!
ರೇಣುಕಾಸ್ವಾಮಿ ಕೊಲೆ ಕೇಸ್; ದರ್ಶನ್ ಸೇರಿ 6 ಆರೋಪಿಗಳು ವಿಚಾರಣೆಗೆ ಹಾಜರು
ರೇಣುಕಾಸ್ವಾಮಿ ಕೊಲೆ ಕೇಸ್; ದರ್ಶನ್ ಸೇರಿ 6 ಆರೋಪಿಗಳು ವಿಚಾರಣೆಗೆ ಹಾಜರು
ಶಿವಗಂಗೆ ಬೆಟ್ಟದಲ್ಲಿ ವ್ಯಕ್ತಿ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್!
ಶಿವಗಂಗೆ ಬೆಟ್ಟದಲ್ಲಿ ವ್ಯಕ್ತಿ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್!
ಬೆಂಗಳೂರಿನಲ್ಲಿ ಬಿಜೆಪಿ ವತಿಯಿಂದ ಹರ್ ಘರ್ ತಿರಂಗಾ ಯಾತ್ರೆ
ಬೆಂಗಳೂರಿನಲ್ಲಿ ಬಿಜೆಪಿ ವತಿಯಿಂದ ಹರ್ ಘರ್ ತಿರಂಗಾ ಯಾತ್ರೆ
ಮಡಿಕೇರಿಯ ಸ್ಟೋನ್ ಹಿಲ್‌ನಲ್ಲಿ ಭೂಕುಸಿತ
ಮಡಿಕೇರಿಯ ಸ್ಟೋನ್ ಹಿಲ್‌ನಲ್ಲಿ ಭೂಕುಸಿತ
ಬೆಂಗಳೂರಿಗರೇ ಎಚ್ಚರ: ಮನೆಗೆ ಕನ್ನ ಹಾಕಲು ಎಂಟ್ರಿ ಕೊಟ್ಟಿದೆ ಚಡ್ಡಿ ಗ್ಯಾಂಗ್
ಬೆಂಗಳೂರಿಗರೇ ಎಚ್ಚರ: ಮನೆಗೆ ಕನ್ನ ಹಾಕಲು ಎಂಟ್ರಿ ಕೊಟ್ಟಿದೆ ಚಡ್ಡಿ ಗ್ಯಾಂಗ್