Jharkhand Exit Poll: ಜಾರ್ಖಂಡ್‌ನಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಪರ ಎಕ್ಸಿಟ್ ಪೋಲ್ ಫಲಿತಾಂಶ
ಮಹಾರಾಷ್ಟ್ರ ಮತ್ತು ಜಾರ್ಖಂಡ್‌ನಲ್ಲಿ ವಿಧಾನಸಭಾ ಚುನಾವಣೆ ಮುಗಿದಿದೆ. ಈ ಹಿನ್ನೆಲೆಯಲ್ಲಿ ಚುನಾವಣೋತ್ತರ ಸಮೀಕ್ಷೆಗಳು ಹೊರಬಿದ್ದಿದ್ದು, ಮಹಾರಾಷ್ಟ್ರ ಮತ್ತು ಜಾರ್ಖಂಡ್ ಎರಡರಲ್ಲೂ ಬಿಜೆಪಿ ಮೈತ್ರಿಕೂಟಕ್ಕೆ ಬಹುಮತ ಸಿಗುವ ಸಾಧ್ಯತೆಯಿದೆ ಎನ್ನಲಾಗಿದೆ. ಜಾರ್ಖಂಡ್‌ನಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಎಂದು ಸಮೀಕ್ಷೆಗಳು ಹೇಳಿವೆ.
ನವದೆಹಲಿ: ಮಹಾರಾಷ್ಟ್ರದಲ್ಲಿ ಬಿಜೆಪಿ ನೇತೃತ್ವದ ಮಹಾಯುತಿಗೆ ಮುನ್ನಡೆಯಾಗಲಿದೆ ಎಂದು ಚುನಾವಣೋತ್ತರ ಸಮೀಕ್ಷೆಗಳು ಭವಿಷ್ಯ ನುಡಿದಿವೆ. ಅದರ ಬೆನ್ನಲ್ಲೇ ಜಾರ್ಖಂಡ್ನಲ್ಲೂ ಕಾಂಗ್ರೆಸ್ ಹಾಗೂ ಅದರ ಮಿತ್ರಪಕ್ಷಗಳಿಗೆ ಭಾರೀ ಹಿನ್ನಡೆಯಾಗಲಿದೆ ಎಂದು ಎಕ್ಸಿಟ್ ಪೋಲ್ ಫಲಿತಾಂಶ ಸೂಚಿಸಿದೆ. ಜಾರ್ಖಂಡ್‌ನಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎಗೆ ಬಹುಮತ ಸಿಗಲಿದೆ ಎಂದು ಬಹುತೇಕ ಎಲ್ಲ ಮತದಾನೋತ್ತರ ಸಮೀಕ್ಷೆಗಳು ಹೇಳಿವೆ. ಆದರೆ, ಕೆಲವು ಸಮೀಕ್ಷೆಗಳು ಮತ್ತೊಮ್ಮೆ ಜಾರ್ಖಂಡ್‌ನಲ್ಲಿ ಹೇಮಂತ್ ಸೊರೇನ್ ನೇತೃತ್ವದ ಸರ್ಕಾರ ರಚನೆಯಾಗುವ ಸಾಧ್ಯತೆಯಿದೆ ಎಂದು ಭವಿಷ್ಯ ನುಡಿದಿವೆ.
ಜಾರ್ಖಂಡ್‌ನಲ್ಲಿ ಇಂದು ಸಂಜೆ ಮತದಾನ ಮುಕ್ತಾಯವಾಗಿದೆ. ಜೆಎಂಎಂ-ಕಾಂಗ್ರೆಸ್-ಆರ್‌ಜೆಡಿ ಮೈತ್ರಿಕೂಟವು ಎನ್‌ಡಿಎಗೆ ತೀವ್ರ ಪೈಪೋಟಿ ನೀಡಲಿದೆ ಎನ್ನಲಾಗಿದೆ. ಆದರೆ, ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟವು 2024ರ ಜಾರ್ಖಂಡ್ ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲುತ್ತದೆ ಎಂದು ಅಂದಾಜಿಸಲಾಗಿದೆ.
ಎಕ್ಸಿಟ್ ಪೋಲ್ ಫಲಿತಾಂಶಗಳ ಮಾಹಿತಿ ಇಲ್ಲಿದೆ.
ಮ್ಯಾಟ್ರಿಜ್ ಎನ್‌ಡಿಎಗೆ 42-47 ಸ್ಥಾನಗಳನ್ನು, ಇಂಡಿಯಾ ಬ್ಲಾಕ್‌ಗೆ 25-30 ಸ್ಥಾನಗಳನ್ನು ಮತ್ತು ಇತರರಿಗೆ 1-4 ಸ್ಥಾನಗಳನ್ನು ನಿರೀಕ್ಷಿಸಿದೆ. ಪೀಪಲ್ಸ್ ಪಲ್ಸ್ ಎನ್‌ಡಿಎಗೆ 44-53 ಸ್ಥಾನಗಳು, ಇಂಡಿಯಾ ಬ್ಲಾಕ್‌ಗೆ 25-37 ಮತ್ತು ಇತರರಿಗೆ 5-9 ಸ್ಥಾನಗಳನ್ನು ಭವಿಷ್ಯ ನುಡಿದಿದೆ.
ಮೊದಲ ಹಂತದಲ್ಲಿ 43 ಕ್ಷೇತ್ರಗಳಿಗೆ ಮತದಾನ ನಡೆದರೆ, ಉಳಿದ 38 ಕ್ಷೇತ್ರಗಳಿಗೆ ಎರಡನೇ ಹಂತದಲ್ಲಿ ಮತದಾನ ನಡೆದಿದೆ. ಬಿಜೆಪಿ 68 ಸ್ಥಾನಗಳಲ್ಲಿ ಸ್ಪರ್ಧಿಸಿದರೆ, ಅದರ ಮೈತ್ರಿ ಪಾಲುದಾರ ಆಲ್ ಜಾರ್ಖಂಡ್ ವಿದ್ಯಾರ್ಥಿ ಒಕ್ಕೂಟ (ಎಜೆಎಸ್‌ಯು) 10 ಸ್ಥಾನಗಳಲ್ಲಿ, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಜೆಡಿಯು ಎರಡು ಮತ್ತು ಚಿರಾಗ್ ಪಾಸ್ವಾನ್ ನೇತೃತ್ವದ ಲೋಕ ಜನಶಕ್ತಿ ಪಕ್ಷ (ರಾಮ್ ವಿಲಾಸ್) ಕೇವಲ ಒಂದರಲ್ಲಿ ಸ್ಪರ್ಧಿಸಿದೆ.
ಇಂಡಿಯಾ ಬ್ಲಾಕ್ ಘಟಕಗಳ ಪೈಕಿ, ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) 41 ಸ್ಥಾನಗಳಲ್ಲಿ, ಕಾಂಗ್ರೆಸ್ 30, ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) 6 ಮತ್ತು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ-ಲೆನಿನಿಸ್ಟ್) 4 ಸ್ಥಾನಗಳಲ್ಲಿ ಸ್ಪರ್ಧಿಸಿವೆ.
ಮ್ಯಾಟ್ರಿಜ್ ಸಮೀಕ್ಷೆ:
ಜಾರ್ಖಂಡ್‌ನಲ್ಲಿ ಮ್ಯಾಟ್ರಿಜ್ ಸಮೀಕ್ಷೆಯಂತೆ ಎನ್‌ಡಿಎ ಅಧಿಕಾರಕ್ಕೆ ಬರಲಿದೆ.
ಎನ್‌ಡಿಎ: 42-47 ಸ್ಥಾನ
ಕಾಂಗ್ರೆಸ್: 25-30
ಇತರರು: 1-4 ಸ್ಥಾನ
ಇದನ್ನೂ ಓದಿ: ಜಮ್ಮು ಕಾಶ್ಮೀರ ಮತಗಟ್ಟೆ ಸಮೀಕ್ಷೆ ಪ್ರಕಟ; ಯಾರಿಗೂ ಇಲ್ಲ ಬಹುಮತ
ಪೋಲ್ ಆಫ್ ಪೋಲ್ ಸಮೀಕ್ಷೆ:
ಎನ್‌ಡಿಎ: 47 ಸ್ಥಾನ
ಕಾಂಗ್ರೆಸ್: 30
ಇತರರು: 4 ಸ್ಥಾನ
ಟೈಮ್ಸ್ ನೌ ಸಮೀಕ್ಷೆ:
ಎನ್‌ಡಿಎ: 40-44
ಕಾಂಗ್ರೆಸ್: 30-40
ಇತರರು: 1 ಸ್ಥಾನ
ಅಗ್ನಿ ನ್ಯೂಸ್:
ಬಿಜೆಪಿ: 42
ಕಾಂಗ್ರೆಸ್: 36
ಇತರೆ: 3
ಪೀಪಲ್ ಪಲ್ಸ್ ಸಮೀಕ್ಷೆ:
ಬಿಜೆಪಿ: 44-53
ಕಾಂಗ್ರೆಸ್: 25-32
ಇತರೆ: 5-9
ಆ್ಯಕ್ಸಿಸ್ ಮೈ ಇಂಡಿಯಾ ಸಮೀಕ್ಷೆ:
ಆ್ಯಕ್ಸಿಸ್ ಮೈ ಇಂಡಿಯಾ ಸಮೀಕ್ಷೆ ಮಾತ್ರ ಎನ್‌ಡಿಎ ಬದಲಾಗಿ ಇಂಡಿಯಾ ಮೈತ್ರಿಕೂಟಕ್ಕೆ ಅಧಿಕಾರ ಸಿಗಲಿದೆ ಎಂದು ಭವಿಷ್ಯ ನುಡಿದಿದೆ.
ಇಂಡಿಯಾ: 53
ಎನ್‌ಡಿಎ: 25
ಇತರರು: 3
81 ಸದಸ್ಯ ಬಲದ ಜಾರ್ಖಂಡ್ ಅಸೆಂಬ್ಲಿ ಚುನಾವಣೆ ನವೆಂಬರ್ 13 ಮತ್ತು ನವೆಂಬರ್ 20ರಂದು 2 ಹಂತಗಳಲ್ಲಿ ನಡೆದಿದೆ. ಜಾರ್ಖಂಡ್ ಮತಗಳ ಎಣಿಕೆ ನವೆಂಬರ್ 23ರಂದು ನಡೆಯಲಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 8:40 pm, Wed, 20 November 24