AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಹನ ತಪಾಸಣೆ ವೇಳೆ ಮಹಿಳಾ ಪೊಲೀಸ್ ಮೇಲೆ ವ್ಯಾನ್​ ಹತ್ತಿಸಿ ಕೊಲೆ; ಜಾರ್ಖಂಡ್​​ನಲ್ಲಿ ಮತ್ತೊಂದು ಆಘಾತಕಾರಿ ಘಟನೆ

ಪೊಲೀಸ್ ಸಬ್​ ಇನ್​ಸ್ಪೆಕ್ಟರ್​​ ಸಂಧ್ಯಾ ಅವರನ್ನು ಕೊಂದು ಸ್ಥಳದಿಂದ ಪರಾರಿಯಾಗಿದ್ದ ಆರೋಪಿಯನ್ನು ಸಿಸಿಟಿವಿ ದೃಶ್ಯಾವಳಿಗಳ ಸಹಾಯದಿಂದ ಪೊಲೀಸರು ಬಂಧಿಸಿದ್ದಾರೆ.

ವಾಹನ ತಪಾಸಣೆ ವೇಳೆ ಮಹಿಳಾ ಪೊಲೀಸ್ ಮೇಲೆ ವ್ಯಾನ್​ ಹತ್ತಿಸಿ ಕೊಲೆ; ಜಾರ್ಖಂಡ್​​ನಲ್ಲಿ ಮತ್ತೊಂದು ಆಘಾತಕಾರಿ ಘಟನೆ
ಜಾರ್ಖಂಡ್ ಪೊಲೀಸ್ ಸಂಧ್ಯಾImage Credit source: India Today
TV9 Web
| Edited By: |

Updated on: Jul 20, 2022 | 10:27 AM

Share

ರಾಂಚಿ: ಜಾರ್ಖಂಡ್‌ನ ರಾಂಚಿಯಲ್ಲಿ (Ranchi) ವಾಹನ ತಪಾಸಣೆಯ ವೇಳೆ ಮಹಿಳಾ ಸಬ್ ಇನ್​ಸ್ಪೆಕ್ಟರ್ ಸಂಧ್ಯಾ ಅವರ ಮೇಲೆ ಪಿಕಪ್ ವ್ಯಾನ್ ಹತ್ತಿಸಿ ಕೊಲೆ ಮಾಡಲಾಗಿದೆ. ಈ ಘಟನೆ ಬುಧವಾರ ನಸುಕಿನ ಜಾವ ತುಪುಡಾನಾ ಪ್ರದೇಶದಲ್ಲಿ ನಡೆದಿದೆ. ರಾಂಚಿಯಲ್ಲಿ ಇಂದು ಮುಂಜಾನೆ 3 ಗಂಟೆಯ ಸುಮಾರಿಗೆ ನಡೆದಿದ್ದು, ಸಬ್ ಇನ್ಸ್‌ಪೆಕ್ಟರ್ ಸಂಧ್ಯಾ ವಾಹನ ತಪಾಸಣೆಗೆ ತೆರಳಿದ್ದರು. ಅವರ ಮೇಲೆ ವ್ಯಾನ್ ಹತ್ತಿಸಿ ಹತ್ಯೆ ಮಾಡಿದ ಆರೋಪಿಯನ್ನು ಬಂಧಿಸಲಾಗಿದೆ ಎಂದು ರಾಂಚಿ ಎಸ್‌ಎಸ್‌ಪಿ ಮಾಹಿತಿ ನೀಡಿದ್ದಾರೆ.

ಈ ಕೃತ್ಯಕ್ಕೆ ಬಳಸಿದ ವಾಹನವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಡಿಎಸ್ಪಿ ಶ್ರೇಣಿಯ ಹರಿಯಾಣ ಪೊಲೀಸ್ ಅಧಿಕಾರಿ ಸುರೇಂದ್ರ ಸಿಂಗ್ ಅವರನ್ನು ನುಹ್‌ನಲ್ಲಿ ಗಣಿಗಾರಿಕೆ ಮಾಫಿಯಾದವರು ಹತ್ಯೆ ಮಾಡಿದ ಬೆನ್ನಲ್ಲೇ ಈ ಘಟನೆ ವರದಿಯಾಗಿದೆ. ಪೊಲೀಸ್ ಸಬ್​ ಇನ್​ಸ್ಪೆಕ್ಟರ್​​ ಸಂಧ್ಯಾ ಅವರನ್ನು ಕೊಂದು ಸ್ಥಳದಿಂದ ಪರಾರಿಯಾಗಿದ್ದ ಆರೋಪಿಯನ್ನು ಸಿಸಿಟಿವಿ ದೃಶ್ಯಾವಳಿಗಳ ಸಹಾಯದಿಂದ ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ: Mysore News: ಸೋಶಿಯಲ್​ ಮೀಡಿಯಾದಲ್ಲಿ ಕಮೆಂಟ್​​​​ ಸ್ನೇಹಿತನ ಕೊಲೆ ಪ್ರಕರಣ: ಮೂವರು ಆರೋಪಿಗಳು ಅಂದರ್

“ಸಂಧ್ಯಾ ಟೋಪ್ನೋ ಎಂಬ ಮಹಿಳಾ ಸಬ್ ಇನ್ಸ್‌ಪೆಕ್ಟರ್ ಇಂದು ಮುಂಜಾನೆ ವಾಹನ ತಪಾಸಣೆಯ ವೇಳೆ ಹತ್ಯೆಗೀಡಾಗಿದ್ದಾರೆ. ಅವರನ್ನು ತುಪುಡಾನ ಓಪಿಯ ಉಸ್ತುವಾರಿಯಾಗಿ ನಿಯೋಜಿಸಲಾಗಿತ್ತು. ಆರೋಪಿಯನ್ನು ಬಂಧಿಸಲಾಗಿದೆ ಮತ್ತು ವಾಹನವನ್ನು ವಶಪಡಿಸಿಕೊಳ್ಳಲಾಗಿದೆ” ಎಂದು ರಾಂಚಿ ಎಸ್‌ಎಸ್‌ಪಿ ತಿಳಿಸಿದ್ದಾರೆ.

ಡಿಎಸ್‌ಪಿ ಸುರೇಂದ್ರ ಸಿಂಗ್ ಅವರನ್ನು ಮಂಗಳವಾರ ನುಹ್‌ನ ಪಚ್‌ಗಾಂವ್ ಬಳಿ ಗಣಿ ಮಾಫಿಯಾದವರು ಹತ್ಯೆ ಮಾಡಿದ್ದರು. ಅಕ್ರಮ ಗಣಿಗಾರಿಕೆ ತನಿಖೆ ನಡೆಸುತ್ತಿದ್ದ ಸುರೇಂದ್ರ ಸಿಂಗ್ ಟ್ರಕ್ ಡಿಕ್ಕಿ ಹೊಡೆದು ಸ್ಥಳದಲ್ಲೇ ಸಾವನ್ನಪ್ಪಿದ್ದರು. ಬಳಿಕ ತೆರೆದ ಕಸದ ತೊಟ್ಟಿಯಲ್ಲಿ ಅವರ ಶವ ಪತ್ತೆಯಾಗಿತ್ತು.

Follow Us
ನಾಗರ ಪಂಚಮಿಯಂದು ದುಂಡಯ್ಯ ಕಾರ್ಣಿಕ ನುಡಿ
ನಾಗರ ಪಂಚಮಿಯಂದು ದುಂಡಯ್ಯ ಕಾರ್ಣಿಕ ನುಡಿ
ವಿನಯ್​ನೇ ನಾಮಿನೇಟ್ ಮಾಡಿದ ಸ್ಪರ್ಧಿ; ಸ್ಟಾರ್ಟಪ್ ಕಾರಣ ನೀಡಿದ ಕಂಟೆಸ್ಟಂಟ್
ವಿನಯ್​ನೇ ನಾಮಿನೇಟ್ ಮಾಡಿದ ಸ್ಪರ್ಧಿ; ಸ್ಟಾರ್ಟಪ್ ಕಾರಣ ನೀಡಿದ ಕಂಟೆಸ್ಟಂಟ್
ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಧಾರವಾಡದಲ್ಲಿ ಪ್ರತಿಭಟನೆ: ಬಿಗಿ ಭದ್ರತೆ
ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಧಾರವಾಡದಲ್ಲಿ ಪ್ರತಿಭಟನೆ: ಬಿಗಿ ಭದ್ರತೆ
ಶಿವಶಂಕರಪ್ಪ ಸಾಹುಕಾರ್ ಮನೆ ಸೇರಿ 21 ಕಡೆ ಇಡಿ ಮೆಗಾ ರೇಡ್!
ಶಿವಶಂಕರಪ್ಪ ಸಾಹುಕಾರ್ ಮನೆ ಸೇರಿ 21 ಕಡೆ ಇಡಿ ಮೆಗಾ ರೇಡ್!
ವಿಟಿಯು ಸಿಂಡಿಕೇಟ್ ಸದಸ್ಯನಿಂದಲೇ ಪರೀಕ್ಷಾ ಗೋಲ್ಮಾಲ್!
ವಿಟಿಯು ಸಿಂಡಿಕೇಟ್ ಸದಸ್ಯನಿಂದಲೇ ಪರೀಕ್ಷಾ ಗೋಲ್ಮಾಲ್!
‘ನೀ ನಂಗೆ ಅಲ್ಲವ’ ಸಿನಿಮಾಗೆ ‘ಬಿಗ್ ಬಾಸ್’ ಮಾಜಿಸ್ಪರ್ಧಿ ರಾಶಿಕಾ ವಿಶ್
‘ನೀ ನಂಗೆ ಅಲ್ಲವ’ ಸಿನಿಮಾಗೆ ‘ಬಿಗ್ ಬಾಸ್’ ಮಾಜಿಸ್ಪರ್ಧಿ ರಾಶಿಕಾ ವಿಶ್
ಕಳಪೆ ಆಹಾರ ಪೂರೈಸುವ ಹೋಟೆಲ್​ಗಳಿಗೆ 5 ಲಕ್ಷ ರೂ. ವರೆಗೆ ದಂಡ!
ಕಳಪೆ ಆಹಾರ ಪೂರೈಸುವ ಹೋಟೆಲ್​ಗಳಿಗೆ 5 ಲಕ್ಷ ರೂ. ವರೆಗೆ ದಂಡ!
ಇಂದು ಫ್ರೀಡಂಪಾರ್ಕ್​ನಲ್ಲಿ ಜೆಡಿಎಸ್​ ಪ್ರತಿಭಟನೆ; ಸಂಚಾರ ಮಾರ್ಗ ಬದಲಾವಣೆ
ಇಂದು ಫ್ರೀಡಂಪಾರ್ಕ್​ನಲ್ಲಿ ಜೆಡಿಎಸ್​ ಪ್ರತಿಭಟನೆ; ಸಂಚಾರ ಮಾರ್ಗ ಬದಲಾವಣೆ
ಮಂಗಳಗೌರಿ ವ್ರತ ಇಂದು: ಮೇಷಾದಿ ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮಂಗಳಗೌರಿ ವ್ರತ ಇಂದು: ಮೇಷಾದಿ ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ; ದರ್ಶನ್ ಮನವಿ ವಜಾ
ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ; ದರ್ಶನ್ ಮನವಿ ವಜಾ