Jharkhand Fire Attack: ಜಾರ್ಖಾಂಡ್​ನಲ್ಲಿ ಬೆಂಕಿ ಅವಘಡ, 14 ಸಾವು, 12 ಮಂದಿಗೆ ಗಾಯ

TV9 Digital Desk

| Edited By: Rakesh Nayak Manchi

Updated on:Jan 31, 2023 | 11:09 PM

ಜಾರ್ಖಂಡ್‌ನ ಧನ್‌ಬಾದ್‌ನಲ್ಲಿ ಬಹುಮಹಡಿ ಕಟ್ಟಡದಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಕನಿಷ್ಠ 14 ಮಂದಿ ಸಾವನ್ನಪ್ಪಿದ್ದು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

Jharkhand Fire Attack: ಜಾರ್ಖಾಂಡ್​ನಲ್ಲಿ ಬೆಂಕಿ ಅವಘಡ, 14 ಸಾವು, 12 ಮಂದಿಗೆ ಗಾಯ
ಜಾರ್ಖಂಡ್‌ನ ಧನ್‌ಬಾದ್‌ನಲ್ಲಿ ಬಹುಮಹಡಿ ಕಟ್ಟಡದಲ್ಲಿ ಅಗ್ನಿ ದುರಂತ

ರಾಂಚಿ: ಜಾರ್ಖಂಡ್‌ನ ಧನ್‌ಬಾದ್‌ನಲ್ಲಿ ಬಹುಮಹಡಿ ಕಟ್ಟಡದಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ (Jharkhand Fire Attack) ಕನಿಷ್ಠ 14 ಮಂದಿ ಸಾವನ್ನಪ್ಪಿದ್ದು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಬೆಂಕಿ ದುರ್ಘಟನೆಯಲ್ಲಿ 10 ಮಹಿಳೆಯರು, 3 ಮಕ್ಕಳು ಮತ್ತು ಒಬ್ಬ ಪುರುಷ ಸಾವನ್ನಪ್ಪಿದ್ದು, ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಧನಬಾದ್ ಜಿಲ್ಲಾಧಿಕಾರಿ ಹೇಳಿದ್ದಾರೆ.  ಮದುವೆ ಸಮಾರಂಭದಲ್ಲಿ ಪಾಲ್ಗೊಳ್ಳಲು ಹಲವರು ಸೇರಿದ್ದ ಅಪಾರ್ಟ್‌ಮೆಂಟ್‌ನಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಸದ್ಯ ಬೆಂಕಿ ಅವಘಡಕ್ಕೆ ಕಾರಣ ತಿಳಿದುಬಂದಿಲ್ಲ, ಆದರೆ ಅನೇಕರು ಅಪಾರ್ಟ್​​ಮೆಂಟ್​ನಲ್ಲಿ ಸಿಲುಕಿದ್ದು, ರಕ್ಷಣಾ ಕಾರ್ಯ ಮುಂದುವರಿದಿದೆ. ಘಟನೆ ಬಗ್ಗೆ ಮಾಹಿತಿ ನೀಡಿದ ಧನಬಾದ್​ ಡಿಸಿ​ಪಿ (ಕಾನೂನು ಮತ್ತು ಸುವ್ಯವಸ್ಥೆ), ಅಪಾರ್ಟ್‌ಮೆಂಟ್‌ನಲ್ಲಿ ಭಾರೀ ಬೆಂಕಿ ಅವಘಡ ಸಂಭವಿಸಿದೆ. ಹಲವರು ಸಿಕ್ಕಿಬಿದ್ದಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿದರು. ಕೆಲವು ಸಾವುಗಳು ವರದಿಯಾಗಿವೆ. ರಕ್ಷಣಾಕಾರ್ಯ ಇನ್ನೂ ನಡೆಯುತ್ತಿರುವುದರಿಂದ ನಿಖರವಾದ ಸಂಖ್ಯೆ ತಿಳಿದುಬರಬೇಕಷ್ಟೆ ಎಂದಿದ್ದಾರೆ.

ಸದ್ಯ ಘಟನೆಯಲ್ಲಿ ಸಿಲುಕಿಕೊಂಡವ ರಕ್ಷಣೆ ಬಗ್ಗೆ ಗಮನ ಹರಿಸುತ್ತಿದ್ದೇವೆ. ಗಾಯಗೊಂಡವರನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಎಸ್‌ಎಸ್‌ಪಿ ಧನಬಾದ್ ಸಂಜೀವ್ ಕುಮಾರ್ ಹೇಳಿದ್ದಾರೆ. ಇನ್ನು ಘಟನೆ ಬಗ್ಗೆ ಟ್ವೀಟ್ ಮಾಡಿದ ಮುಖ್ಯಮಂತ್ರಿ ಹೇಮಂತ್ ಸೊರೆನ್, ಧನಬಾದ್‌ನ ಆಶೀರ್ವಾದ್ ಟವರ್ ಅಪಾರ್ಟ್‌ಮೆಂಟ್‌ನಲ್ಲಿ ಬೆಂಕಿ ಕಾಣಿಸಿಕೊಂಡು ಜನರು ಸಾವನ್ನಪ್ಪಿದವರ ಕುಟುಂಬಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ. ಅಲ್ಲದೆ, “ಜಿಲ್ಲಾಡಳಿತವು ಬಿರುಸಿನ ರಕ್ಷಣಾ ಕಾರ್ಯ ಮಾಡುತ್ತಿದೆ ಮತ್ತು ಅಪಘಾತದಲ್ಲಿ ಗಾಯಗೊಂಡವರಿಗೆ ಚಿಕಿತ್ಸೆ ನೀಡಲಾಗುತ್ತಿದೆ” ಎಂದು ಟ್ವೀಟ್ ಮಾಡಿದ್ದಾರೆ.

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada