ರಾಂಚಿ: ಜಾರ್ಖಂಡ್‌ನ ಧನ್‌ಬಾದ್‌ನಲ್ಲಿ ಬಹುಮಹಡಿ ಕಟ್ಟಡದಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ (Jharkhand Fire Attack) ಕನಿಷ್ಠ 14 ಮಂದಿ ಸಾವನ್ನಪ್ಪಿದ್ದು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಬೆಂಕಿ ದುರ್ಘಟನೆಯಲ್ಲಿ 10 ಮಹಿಳೆಯರು, 3 ಮಕ್ಕಳು ಮತ್ತು ಒಬ್ಬ ಪುರುಷ ಸಾವನ್ನಪ್ಪಿದ್ದು, ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಧನಬಾದ್ ಜಿಲ್ಲಾಧಿಕಾರಿ ಹೇಳಿದ್ದಾರೆ. ಮದುವೆ ಸಮಾರಂಭದಲ್ಲಿ ಪಾಲ್ಗೊಳ್ಳಲು ಹಲವರು ಸೇರಿದ್ದ ಅಪಾರ್ಟ್‌ಮೆಂಟ್‌ನಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಸದ್ಯ ಬೆಂಕಿ ಅವಘಡಕ್ಕೆ ಕಾರಣ ತಿಳಿದುಬಂದಿಲ್ಲ, ಆದರೆ ಅನೇಕರು ಅಪಾರ್ಟ್‌ಮೆಂಟ್‌ನಲ್ಲಿ ಸಿಲುಕಿದ್ದು, ರಕ್ಷಣಾ ಕಾರ್ಯ ಮುಂದುವರಿದಿದೆ. ಘಟನೆ ಬಗ್ಗೆ ಮಾಹಿತಿ ನೀಡಿದ ಧನಬಾದ್ ಡಿಸಿಪಿ (ಕಾನೂನು ಮತ್ತು ಸುವ್ಯವಸ್ಥೆ), ಅಪಾರ್ಟ್‌ಮೆಂಟ್‌ನಲ್ಲಿ ಭಾರೀ ಬೆಂಕಿ ಅವಘಡ ಸಂಭವಿಸಿದೆ. ಹಲವರು ಸಿಕ್ಕಿಬಿದ್ದಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿದರು. ಕೆಲವು ಸಾವುಗಳು ವರದಿಯಾಗಿವೆ. ರಕ್ಷಣಾಕಾರ್ಯ ಇನ್ನೂ ನಡೆಯುತ್ತಿರುವುದರಿಂದ ನಿಖರವಾದ ಸಂಖ್ಯೆ ತಿಳಿದುಬರಬೇಕಷ್ಟೆ ಎಂದಿದ್ದಾರೆ.
Jharkhand CM Hemant Soren expresses condolences over the death of people due to fire in Dhanbad’s Ashirwad Tower Apartment
“The district administration is working on a war footing and treatment is being provided to those injured in the accident,” tweets Jharkhand CM Hemant Soren pic.twitter.com/k6eEdqUPG9
— ANI (@ANI) January 31, 2023
Published On - 10:57 pm, Tue, 31 January 23