Jharkhand: ಹಣೆಯಲ್ಲಿ ಬಿಂದಿ ಇಟ್ಟುಕೊಂಡಿದ್ದಕ್ಕೆ ಥಳಿಸಿದ ಶಿಕ್ಷಕ, ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ

ಹಣೆಗೆ ಬಿಂದಿ ಇಟ್ಟು ಶಾಲೆಗೆ ಹೋಗಿದ್ದಕ್ಕೆ ವಿದ್ಯಾರ್ಥಿನಿಯನ್ನು ಶಿಕ್ಷಕರು ಥಳಿಸಿದ್ದು, ಆಕೆ ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಾರ್ಖಂಡ್​ನಲ್ಲಿ ನಡೆದಿದೆ.

Jharkhand: ಹಣೆಯಲ್ಲಿ ಬಿಂದಿ ಇಟ್ಟುಕೊಂಡಿದ್ದಕ್ಕೆ ಥಳಿಸಿದ ಶಿಕ್ಷಕ, ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
ಸಾಂದರ್ಭಿಕ ಚಿತ್ರ

Updated on: Jul 12, 2023 | 2:31 PM

ಹಣೆಗೆ ಬಿಂದಿ ಇಟ್ಟು ಶಾಲೆಗೆ ಹೋಗಿದ್ದಕ್ಕೆ ವಿದ್ಯಾರ್ಥಿನಿಯನ್ನು ಶಿಕ್ಷಕರು ಥಳಿಸಿದ್ದು, ಆಕೆ ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಾರ್ಖಂಡ್​ನಲ್ಲಿ ನಡೆದಿದೆ. ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ (ಎನ್‌ಸಿಪಿಸಿಆರ್‌) ಅಧ್ಯಕ್ಷ ಪ್ರಿಯಾಂಕ್ ಕಾನೂಂಗೊ ಮಂಗಳವಾರ ಟ್ವೀಟ್‌ನಲ್ಲಿ ವಿದ್ಯಾರ್ಥಿನಿಯೊಬ್ಬಳು ಬಿಂದಿ ಇಟ್ಟು ಶಾಲೆಗೆ ಹೋಗಿದ್ದಕ್ಕೆ ಶಿಕ್ಷಕರು ಆಕೆಗೆ ಹೊಡೆದ ಕಾರಣ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ ಎಂದು ತಿಳಿಸಿದ್ದಾರೆ.

ಈ ವಿಚಾರ ಎನ್‌ಸಿಪಿಸಿಆರ್ ಗಮನಕ್ಕೆ ಬಂದಿದ್ದು, ತಂಡವು ತನಿಖೆಗಾಗಿ ಧನ್‌ಬಾದ್‌ಗೆ ಹೋಗಲಿದೆ ಎಂದು ಅವರು ಹೇಳಿದರು.
ಧನ್‌ಬಾದ್‌ನ ಟೆತುಲ್ಮರಿ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಮೃತ ಬಾಲಕಿಯ ಪೋಷಕರು ಹಾಗೂ ಸ್ಥಳೀಯರು ಮಂಗಳವಾರ ಶಾಲಾ ಆಡಳಿತ ಮಂಡಳಿ ವಿರುದ್ಧ ಪ್ರತಿಭಟನೆ ನಡೆಸಿದ್ದು, ಪೊಲೀಸರು ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.

ಘಟನೆ ಬೆಳಕಿಗೆ ಬಂದ ನಂತರ ಆರೋಪಿ ಶಿಕ್ಷಕನನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಜಾರ್ಖಂಡ್‌ನ ಧನ್‌ಬಾದ್‌ನ ಮಕ್ಕಳ ಕಲ್ಯಾಣ ಸಮಿತಿ (ಸಿಡಬ್ಲ್ಯೂಸಿ) ಅಧ್ಯಕ್ಷ ಉತ್ತಮ್ ಮುಖರ್ಜಿ ಹೇಳಿದ್ದಾರೆ.

ಮತ್ತಷ್ಟು ಓದಿ: ಸದನದಲ್ಲಿ ಗದ್ದಲ ಎಬ್ಬಿಸಿದ KSRTC ಬಸ್ ಚಾಲಕ ಆತ್ಮಹತ್ಯೆ ಯತ್ನ ಕೇಸ್: ಸಚಿವ ಚಲುವರಾಯಸ್ವಾಮಿ ರಾಜೀನಾಮೆಗೆ ಆಗ್ರಹಿಸಿದ ಪ್ರತಿಪಕ್ಷಗಳು

ಇದಕ್ಕೂ ಮುನ್ನ ರಾಜಸ್ಥಾನದ ಕೋಟಾದಲ್ಲಿ ಜೆಇಇಗೆ ತಯಾರಿ ನಡೆಸುತ್ತಿದ್ದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

ಸರ್ಕಲ್ ಇನ್ಸ್‌ಪೆಕ್ಟರ್ ಆಫ್ ಪೋಲೀಸ್ (ಸಿಐ) ಕೋಟಾ ಪರಮ್‌ಜಿತ್ ಸಿಂಗ್ ಪ್ರಕಾರ, ಕೋಟಾದ ಮಹಾವೀರ್ ನಗರದಲ್ಲಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಯಿಂದ ಸಾವನ್ನಪ್ಪಿದ ಬಗ್ಗೆ ಪೊಲೀಸರಿಗೆ ಮಾಹಿತಿ ಬಂದಿದೆ.

ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ ಮತ್ತು ವಿದ್ಯಾರ್ಥಿಯು ಐಐಟಿ-ಜೆಇಇಗೆ ತಯಾರಿ ನಡೆಸುತ್ತಿದ್ದರು ಎಂದು ಅಧಿಕಾರಿ ತಿಳಿಸಿದ್ದಾರೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

 

Published On - 2:31 pm, Wed, 12 July 23

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us