Hemant Soren: ಭೂ ಹಗರಣ ಪ್ರಕರಣದಲ್ಲಿ ಜಾರ್ಖಂಡ್ ಮಾಜಿ ಸಿಎಂ ಹೇಮಂತ್ ಸೊರೇನ್‌ಗೆ ಜಾಮೀನು

ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೇನ್‌ ಅವರ ಜಾಮೀನು ಅರ್ಜಿಯ ತೀರ್ಪನ್ನು ಹೈಕೋರ್ಟ್ ಜೂನ್ 13ರಂದು ಕಾಯ್ದಿರಿಸಿತ್ತು. ಸೋರೆನ್‌ಗೆ ಜಾಮೀನು ನೀಡಲಾಗಿದೆ. ನ್ಯಾಯಾಲಯವು ಮೇಲ್ನೋಟಕ್ಕೆ ಅವರು ಅಪರಾಧದಲ್ಲಿ ತಪ್ಪಿತಸ್ಥರಲ್ಲ ಮತ್ತು ಜಾಮೀನಿನ ಮೇಲೆ ಅರ್ಜಿದಾರರು ಅಪರಾಧ ಮಾಡುವ ಸಾಧ್ಯತೆಯಿಲ್ಲ" ಎಂದು ವಕೀಲರು ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ.

Hemant Soren: ಭೂ ಹಗರಣ ಪ್ರಕರಣದಲ್ಲಿ ಜಾರ್ಖಂಡ್ ಮಾಜಿ ಸಿಎಂ ಹೇಮಂತ್ ಸೊರೇನ್‌ಗೆ ಜಾಮೀನು
ಹೇಮಂತ್ ಸೊರೇನ್
Follow us
|

Updated on:Jun 28, 2024 | 12:44 PM

ದೆಹಲಿ ಜೂನ್ 28: ಭೂ ಹಗರಣಕ್ಕೆ ಸಂಬಂಧಿಸಿದ (land scam) ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರ್ಖಂಡ್ ಹೈಕೋರ್ಟ್ (Jharkhand HC) ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೇನ್‌ಗೆ (Hemant Soren)  ಶುಕ್ರವಾರ ಜಾಮೀನು ಮಂಜೂರು ಮಾಡಿದೆ. ಸೊರೇನ್ ಅಪರಾಧದಲ್ಲಿ ಅವರು ತಪ್ಪಿತಸ್ಥರಲ್ಲ ಎಂದು ನ್ಯಾಯಾಲಯವು ತೀರ್ಪು ನೀಡಿದೆ ಎಂದು ಅವರ ವಕೀಲರಾದ ಅರುಣಾಭ್ ಚೌಧರಿ ಹೇಳಿದ್ದಾರೆ. ಸೊರೇನ್‌ ಅವರ ಜಾಮೀನು ಅರ್ಜಿಯ ತೀರ್ಪನ್ನು ಹೈಕೋರ್ಟ್ ಜೂನ್ 13ರಂದು ಕಾಯ್ದಿರಿಸಿತ್ತು. “ಸೊರೇನ್‌ಗೆ ಜಾಮೀನು ನೀಡಲಾಗಿದೆ. ನ್ಯಾಯಾಲಯವು ಮೇಲ್ನೋಟಕ್ಕೆ ಅವರು ಅಪರಾಧದಲ್ಲಿ ತಪ್ಪಿತಸ್ಥರಲ್ಲ ಮತ್ತು ಜಾಮೀನಿನ ಮೇಲೆ ಅರ್ಜಿದಾರರು ಅಪರಾಧ ಮಾಡುವ ಸಾಧ್ಯತೆಯಿಲ್ಲ” ಎಂದು ಚೌಧರಿ ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ.

ಸದ್ಯ ಹೇಮಂತ್ ಸೊರೇನ್ ರಾಂಚಿಯ ಬಿರ್ಸಾ ಮುಂಡಾ ಜೈಲಿನಲ್ಲಿದ್ದಾರೆ. ಸೊರೇನ್ ಜಾರ್ಖಂಡ್ ಮುಕ್ತಿ ಮೋರ್ಚಾದ (ಜೆಎಂಎಂ) ಕಾರ್ಯಕಾರಿ ಅಧ್ಯಕ್ಷರಾಗಿದ್ದಾರೆ.

ಜನವರಿ 31 ರಂದು ಜಾರಿ ನಿರ್ದೇಶನಾಲಯ ಸೊರೇನ್ ಅವರನ್ನು ಬಂಧಿಸಿತ್ತು.

ಸೊರೇನ್ ಅವರನ್ನು ರಾಜಕೀಯ ಪ್ರೇರಿತ ಮತ್ತು  ಕಲ್ಪಿತ ಎಂದು ವಿವರಿಸಿರುವ ಪ್ರಕರಣದಲ್ಲಿ ಅನ್ಯಾಯವಾಗಿ ಗುರಿಯಾಗಿಸಲಾಗಿದೆ ಎಂದು ಅವರ ವಕೀಲೆ ಮೀನಾಕ್ಷಿ ಅರೋರಾ ವಾದಿಸಿದ್ದರು.

ರಾಜ್ಯ ರಾಜಧಾನಿಯಲ್ಲಿ 8.86 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಅವರು ತಮ್ಮ ಸ್ಥಾನವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಜಾರಿ ನಿರ್ದೇಶನಾಲಯ ನ್ಯಾಯಾಲಯಕ್ಕೆ ತಿಳಿಸಿತ್ತು.

ಇದನ್ನೂ ಓದಿ: ದೆಹಲಿ ಮಳೆಗೆ ಮನೆಗೆ ನುಗ್ಗಿದ ನೀರು, ಎಸ್​​ಪಿ ಸಂಸದರನ್ನು ಎತ್ತಿಕೊಂಡು ಕಾರಿನಲ್ಲಿ ಕುಳ್ಳಿರಿಸಿದ ಸಿಬ್ಬಂದಿ: ವಿಡಿಯೋ ನೋಡಿ

ಅಕ್ರಮ ಭೂ ವ್ಯವಹಾರದಲ್ಲಿ ಹೇಮಂತ್ ಸೊರೇನ್ ಭಾಗಿಯಾಗಿರುವುದನ್ನು ಸಾಕ್ಷಿಗಳು ಖಚಿತಪಡಿಸಿದ್ದಾರೆ. ಸೊರೇನ್ ಅವರ ಮಾಧ್ಯಮ ಸಲಹೆಗಾರ ಅಭಿಷೇಕ್ ಪ್ರಸಾದ್ ಅವರು ಜಮೀನಿನ ಮಾಲೀಕತ್ವದ ವಿವರಗಳನ್ನು ಬದಲಾಯಿಸಲು ಅಧಿಕೃತ ದಾಖಲೆಗಳನ್ನು ತಿರುಚುವಂತೆ ಮಾಜಿ ಸಿಎಂ ಅವರಿಗೆ ಸೂಚನೆ ನೀಡಿದ್ದರು ಎಂದು ಒಪ್ಪಿಕೊಂಡಿದ್ದಾರೆ ಎಂದು ಇಡಿ ವಕೀಲ ಎಸ್‌ವಿ ರಾಜು ಹೇಳಿದ್ದಾರೆ.

ಇಡಿ ಮ್ಯಾರಥಾನ್ ಪ್ರಶ್ನೋತ್ತರ ಅವಧಿಯನ್ನು ಪ್ರಾರಂಭಿಸಿದ ಕೆಲವೇ ಗಂಟೆಗಳ ನಂತರ  ಅವರನ್ನು ಬಂಧಿಸಲಾಗುವುದು ಎಂದು ತಿಳಿದಾಗ ಸೊರೇನ್ ಜನವರಿ 31 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಆದಾಗ್ಯೂ, ಬಂಧನಕ್ಕೆ ಒಳಗಾದ ಮೊದಲ ಹಾಲಿ ಮುಖ್ಯಮಂತ್ರಿಯಾಗುವುದನ್ನು ತಪ್ಪಿಸಲು, ಅವರು ತಮ್ಮ ಹುದ್ದೆಯನ್ನು ತ್ಯಜಿಸುವವರೆಗೂ ಬಂಧನ ಮೆಮೊವನ್ನು ಸ್ವೀಕರಿಸಲು ನಿರಾಕರಿಸಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:25 pm, Fri, 28 June 24

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ