AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rahul Gandhi: ರಾಹುಲ್ ಗಾಂಧಿಗೆ 1000 ರೂ. ದಂಡ ವಿಧಿಸಿದ ಜಾರ್ಖಂಡ್ ಹೈಕೋರ್ಟ್

ಯಾವ ಕೊಲೆಗಾರನೂ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರಾಗಲು ಸಾಧ್ಯವಿಲ್ಲ ಎಂದು ರಾಹುಲ್ ಗಾಂಧಿ ಹೇಳಿದ್ದರು. ಕಾಂಗ್ರೆಸ್ಸಿಗರು ಕೊಲೆ ಮಾಡಿದವರನ್ನು ರಾಷ್ಟ್ರಾಧ್ಯಕ್ಷರನ್ನಾಗಿ ಒಪ್ಪಿಕೊಳ್ಳಲು ಸಾಧ್ಯವಿಲ್ಲ, ಇದು ಬಿಜೆಪಿಯಲ್ಲಿ ಮಾತ್ರ ಸಾಧ್ಯ ಎಂದು ಹೇಳಿದ್ದರು. ಈ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ 1,000 ರೂ. ದಂಡ ವಿಧಿಸಲಾಗಿದೆ.

Rahul Gandhi: ರಾಹುಲ್ ಗಾಂಧಿಗೆ 1000 ರೂ. ದಂಡ ವಿಧಿಸಿದ ಜಾರ್ಖಂಡ್ ಹೈಕೋರ್ಟ್
ರಾಹುಲ್ ಗಾಂಧಿ
ಸುಷ್ಮಾ ಚಕ್ರೆ
|

Updated on:May 17, 2024 | 5:03 PM

Share

ರಾಂಚಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಜಾರ್ಖಂಡ್ ಹೈಕೋರ್ಟ್ 1000 ರೂ. ದಂಡ ವಿಧಿಸಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ದಂಡ ವಿಧಿಸಲಾಗಿದೆ. ಪ್ರತಾಪ್ ಕುಮಾರ್ ಎಂಬ ಬಿಜೆಪಿ ಕಾರ್ಯಕರ್ತ ಚೈಬಾಸಾದ ಕೆಳ ನ್ಯಾಯಾಲಯದಲ್ಲಿ ರಾಹುಲ್ ಗಾಂಧಿ (Rahul Gandhi) ವಿರುದ್ಧ ದೂರು ದಾಖಲಿಸಿದ್ದರು. ಇದನ್ನು ಕೆಳ ನ್ಯಾಯಾಲಯವು ಪರಿಗಣನೆಗೆ ತೆಗೆದುಕೊಂಡಿತ್ತು. ಕಳೆದ ತಿಂಗಳು ಈ ಅರ್ಜಿಯ ವಿಚಾರಣೆ ವೇಳೆ ಹೈಕೋರ್ಟ್ ರಾಹುಲ್ ಗಾಂಧಿಗೆ ರಿಲೀಫ್ ನೀಡಿತ್ತು. ಚೈಬಾಸಾ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆಗೆ ತಡೆ ನೀಡಿತ್ತು. ಆ ಕಾಗ್ನಿಜೆನ್ಸ್ ರದ್ದುಗೊಳಿಸುವಂತೆ ರಾಹುಲ್ ಗಾಂಧಿ ಪರವಾಗಿ ಜಾರ್ಖಂಡ್ ಹೈಕೋರ್ಟ್​ನಲ್ಲಿ ಅರ್ಜಿ ಸಲ್ಲಿಸಲಾಗಿದೆ.

ಇದೇ ಪ್ರಕರಣದ ವಿಚಾರಣೆ ಇಂದು ನ್ಯಾಯಮೂರ್ತಿ ಅನಿಲ್ ಕುಮಾರ್ ಚೌಧರಿ ಅವರ ಸಮ್ಮುಖದಲ್ಲಿ ನಡೆಯಿತು. ಆದರೆ, ರಾಹುಲ್ ಗಾಂಧಿ ಪರ ವಕೀಲರು ತಮ್ಮ ಪರ ವಾದ ಮಂಡಿಸಲು ಕಾಲಾವಕಾಶ ಕೋರಿದರು. ಇದಕ್ಕೆ ನ್ಯಾಯಾಲಯ 1 ಸಾವಿರ ರೂ. ದಂಡ ವಿಧಿಸಿದೆ. ಪ್ರಕರಣದ ಮುಂದಿನ ವಿಚಾರಣೆ ಬೇಸಿಗೆ ರಜೆಯ ನಂತರ ನಡೆಯಲಿದೆ ಎಂದು ಜಾರ್ಖಂಡ್ ಹೈಕೋರ್ಟ್ ವಕೀಲ ಧೀರಜ್ ಕುಮಾರ್ ಈ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಮೋದಿ ಒಪ್ಪಿದರೆ ನಾನು ಸಿದ್ಧ; ಚುನಾವಣೆ ಕುರಿತ ಚರ್ಚೆಗೆ ತಯಾರೆಂದ ರಾಹುಲ್ ಗಾಂಧಿ

ಈ ವಿಚಾರವಾಗಿ ರಾಹುಲ್ ಗಾಂಧಿಗೆ ಉತ್ತರ ನೀಡುವಂತೆ ಸೂಚಿಸಲಾಗಿತ್ತು. 2018ರಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದರು ಎಂದು ಚೈಬಾಸಾ ನಿವಾಸಿ ಪ್ರತಾಪ್ ಕಟಿಯಾರ್ ಎಂಬವರು ರಾಹುಲ್ ಗಾಂಧಿ ವಿರುದ್ಧ ಸಲ್ಲಿಸಿರುವ ದೂರಿನಲ್ಲಿ ಆರೋಪಿಸಿದ್ದರು.

ಅರ್ಜಿದಾರರ ಪರ ವಕೀಲ ವಿನೋದ್ ಕುಮಾರ್ ಸಾಹು ಅವರು ಈ ಪ್ರಕರಣವು 2018ರಲ್ಲೇ ರದ್ದಾಗಿದೆ ಎಂದು ಹೇಳಿದರು. 2018ರಲ್ಲಿ ಕಾಂಗ್ರೆಸ್ ಸಮಾವೇಶದಲ್ಲಿ ಮಾಡಿದ ಭಾಷಣದಲ್ಲಿ ಓರ್ವ ಕೊಲೆಗಾರ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷನಾಗಿದ್ದಾರೆ. ಆದರೆ, ಇದು ಕಾಂಗ್ರೆಸ್‌ನಲ್ಲಿ ಸಾಧ್ಯವಿಲ್ಲ ಎಂದು ರಾಹುಲ್ ಗಾಂಧಿ ಹೇಳಿದ್ದರು. ಈ ಹೇಳಿಕೆ ಕುರಿತು ಪ್ರತಾಪ್ ಕುಮಾರ್ ಅವರು ಚೈಬಾಸಾದ ಕೆಳ ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದರು. ಇದನ್ನು ಮನಗಂಡ ಕೆಳ ನ್ಯಾಯಾಲಯ ರಾಹುಲ್ ಗಾಂಧಿಗೆ ಸಮನ್ಸ್ ಜಾರಿ ಮಾಡಿತ್ತು.

ಇದನ್ನೂ ಓದಿ: Rahul Gandhi: ಮದುವೆ ಯಾವಾಗ?; ರಾಯ್​ಬರೇಲಿ ಜನರಿಗೆ ನಗುತ್ತಲೇ ಉತ್ತರ ಕೊಟ್ಟ ರಾಹುಲ್ ಗಾಂಧಿ

ಆ ಸಮನ್ಸ್ ಅನ್ನು ರದ್ದುಗೊಳಿಸುವಂತೆ ರಾಹುಲ್ ಗಾಂಧಿ ಅವರು ಹೈಕೋರ್ಟ್‌ನಲ್ಲಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಯುತ್ತಿದೆ. ಈ ಪ್ರಕರಣದಲ್ಲೂ ರಾಹುಲ್ ಗಾಂಧಿ ಪರ ವಕೀಲರು ಈ ಹಿಂದೆ 2 ಬಾರಿ ಸಮಯ ಕೇಳಿದ್ದಾರೆ ಎಂದು ಹೇಳಿದ್ದರು. ಮೂರನೇ ಬಾರಿಗೆ ಕಾಲಾವಕಾಶ ಕೇಳಿದ ಹಿನ್ನೆಲೆಯಲ್ಲಿ ನ್ಯಾಯಮೂರ್ತಿ ಅನಿಲ್ ಕುಮಾರ್ ಚೌಧರಿ ನ್ಯಾಯಾಲಯ ರಾಹುಲ್ ಗಾಂಧಿಗೆ 1 ಸಾವಿರ ರೂ. ದಂಡ ವಿಧಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:03 pm, Fri, 17 May 24

Follow Us
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ಬಂದವು 3 ಹೊಸ ಎಲೆಕ್ಟ್ರಿಕ್ ಕಾರು!
ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ಬಂದವು 3 ಹೊಸ ಎಲೆಕ್ಟ್ರಿಕ್ ಕಾರು!