Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾಕುಂಭದಿಂದ ಹಿಂದಿರುಗುವಾಗ ಅಪಘಾತ, ಸಂಸದೆ ಮಹುವಾಗೆ ಗಂಭೀರ ಗಾಯ

ಮಹಾಕುಂಭ ಮೇಳದಿಂದ ಹಿಂದಿರುಗುತ್ತಿರುವಾಗ ಜೆಎಂಎಂನ ರಾಜ್ಯಸಬಾ ಸಂಸದೆ ಮಹುವಾ ಮಾಜಿ ಇದ್ದ ಕಾರು ಅಪಘಾತಕ್ಕೀಡಾಗಿದ್ದು, ಅವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ವರದಿಯಾಗಿದೆ. ರಾಜ್ಯಸಭಾ ಸದಸ್ಯೆಯಾಗಿರುವ ಮಹುವಾ ಎಡ ಮಣಿಕಟ್ಟಿನಲ್ಲಿ ಮೂಳೆ ಮುರಿತ ಉಂಟಾಗಿದ್ದು, ಪಕ್ಕೆಲುಬುಗಳಿಗೆ ಸ್ವಲ್ಪ ಹಾನಿಯಾಗಿದೆ. ಅವರನ್ನು ರಾಂಚಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಹಾಕುಂಭದಿಂದ ಹಿಂದಿರುಗುವಾಗ ಅಪಘಾತ, ಸಂಸದೆ ಮಹುವಾಗೆ ಗಂಭೀರ ಗಾಯ
ಮಹುವಾ
Follow us
ನಯನಾ ರಾಜೀವ್
|

Updated on: Feb 26, 2025 | 12:01 PM

ರಾಂಚಿ, ಫೆಬ್ರವರಿ 26: ಜಾರ್ಖಂಡ್ ಮುಕ್ತಿ ಮೋರ್ಚಾದ ರಾಜ್ಯಸಭಾ ಸಂಸದೆ ಮಹುವಾ ಮಾಜಿ ಪ್ರಯಾಣಿಸುತ್ತಿದ್ದ ಕಾರು ಮಹಾಕುಂಭದಿಂದ ಹಿಂದಿರುಗುವಾಗ ಲತೇಹಾರ್ ಬಳಿ ಅಪಘಾತಕ್ಕೀಡಾಗಿದ್ದು, ಸಂಸದೆ ಗಂಭೀರವಾಗಿ ಗಾಯಗೊಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಅವರನ್ನು ರಾಂಚಿಯ ಆರ್ಕಿಡ್ ವೈದ್ಯಕೀಯ ಕೇಂದ್ರದಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಜ್ಯಸಭಾ ಸದಸ್ಯೆಯಾಗಿರುವ ಮಹುವಾ ಎಡ ಮಣಿಕಟ್ಟಿನಲ್ಲಿ ಮೂಳೆ ಮುರಿತ ಉಂಟಾಗಿದ್ದು, ಪಕ್ಕೆಲುಬುಗಳಿಗೆ ಸ್ವಲ್ಪ ಹಾನಿಯಾಗಿದೆ.

ಅವರನ್ನು ರಾಂಚಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತ ನಡೆದಾಗ ಅವರ ಮಗ ಮತ್ತು ಸೊಸೆ ಕೂಡ ಕಾರಿನಲ್ಲಿದ್ದರು. ಮಹುವಾ ಅವರ ಮಗ ಸೋಮ್ವಿತ್ ಮಾಜಿ ಅವರು, ತಾವು ಕಾರನ್ನು ಚಾಲನೆ ಮಾಡುತ್ತಿದ್ದಾಗ ಬೆಳಗಿನ ಜಾವ ನಿದ್ರೆ ಬಂದಂತಾದಾಗ ಈ ಘಟನೆ ಸಂಭವಿಸಿದೆ.

ನಾವು ಪ್ರಯಾಗರಾಜ್‌ನ ಮಹಾ ಕುಂಭದಿಂದ ಹಿಂತಿರುಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ, ನನ್ನ ತಾಯಿ ಹಾಗೂ ಪತ್ನಿ ಹಿಂದಿನ ಸೀಟಿನಲ್ಲಿದ್ದರು. ನಾನು ಕಾರು ಓಡಿಸುತ್ತಿದ್ದೆ, ಆಗ ಒಮ್ಮೆ ಕಣ್ಣುಮುಚ್ಚಿದಂತಾಗಿ ಅಪಘಾತ ಸಂಭವಿಸಿದೆ. ತಕ್ಷಣ ಕಾರಿನ ಒಳಗೆಲ್ಲಾ ಹೊಗೆ ತುಂಬಿಕೊಂಡಿತ್ತು, ನಾವು ಹೊರಗೆ ಬರಲು ಎಷ್ಟೇ ಪ್ರಯತ್ನಿಸಿದರೂ ಸಾಧ್ಯವಾಗಲಿಲ್ಲ.

ತಾಯಿಗೆ ಮಣಿಕಟ್ಟಿಗೆ ಪೆಟ್ಟುಬಿದ್ದಿತ್ತು, ಎದೆ ಹಾಗೂ ಕೈ ತುಂಬಾ ನೋಯುತ್ತಿದೆ ಎಂದು ಹೇಳಿದ್ದಾಗಿ ಮಹುವಾ ಪುತ್ರ ತಿಳಿಸಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು.

ಅದರ ನಂತರ, ನಾವು ಅವರನ್ನು ರಾಂಚಿಗೆ ಕರೆದೊಯ್ದೆವು. ಅವರ ಎಡಗೈ ಮುರಿದಿದೆ ಮತ್ತು ಅವಳ ಪಕ್ಕೆಲುಬುಗಳಿಗೆ ಸ್ವಲ್ಪ ಹಾನಿಯಾಗಿದೆ ಎಂದು ವೈದ್ಯರು ಹೇಳಿದ್ದಾರೆ. ಅವರ ಕೈಗಳಿಗೆ ಶಸ್ತ್ರಚಿಕಿತ್ಸೆ ಮಾಡಬೇಕಾಗುತ್ತದೆ. ಅವರು ನಮ್ಮೊಂದಿಗೆ ಮಾತನಾಡುತ್ತಿದ್ದಾರೆ, ಎಲ್ಲಾ ಪರೀಕ್ಷೆಗಳನ್ನು ಮಾಡಲಾಗಿದೆ ಎಂದು ಪುತ್ರ ಸೋಮ್ವಿತ್ ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್​ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ
‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್​ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು
ಮಂಗಳೂರಿನಲ್ಲಿ ರಂಜಾನ್: ಸಾಮೂಹಿಕ ಪ್ರಾರ್ಥನೆಯಲ್ಲಿ ಸ್ಪೀಕರ್ ಖಾದರ್ ಭಾಗಿ
ಮಂಗಳೂರಿನಲ್ಲಿ ರಂಜಾನ್: ಸಾಮೂಹಿಕ ಪ್ರಾರ್ಥನೆಯಲ್ಲಿ ಸ್ಪೀಕರ್ ಖಾದರ್ ಭಾಗಿ
ಮಸೀದಿ ಎದುರು ಮಹಿಳೆ-ಭದ್ರತಾ ಅಧಿಕಾರಿ ಪರಸ್ಪರ ಕಪಾಳಮೋಕ್ಷ
ಮಸೀದಿ ಎದುರು ಮಹಿಳೆ-ಭದ್ರತಾ ಅಧಿಕಾರಿ ಪರಸ್ಪರ ಕಪಾಳಮೋಕ್ಷ
ಇಂದು ದೇಶಾದ್ಯಂತ ರಂಜಾನ್ ಹಬ್ಬ ಆಚರಣೆ: 30 ದಿನಗಳ ಉಪವಾಸ ಅಂತ್ಯ
ಇಂದು ದೇಶಾದ್ಯಂತ ರಂಜಾನ್ ಹಬ್ಬ ಆಚರಣೆ: 30 ದಿನಗಳ ಉಪವಾಸ ಅಂತ್ಯ
ನಂಜನಗೂಡು ನಂಜುಂಡೇಶ್ವರ ದೇವಾಲಯದಲ್ಲಿ ಓಕುಳಿ ಉತ್ಸವ ಸಂಭ್ರಮ
ನಂಜನಗೂಡು ನಂಜುಂಡೇಶ್ವರ ದೇವಾಲಯದಲ್ಲಿ ಓಕುಳಿ ಉತ್ಸವ ಸಂಭ್ರಮ