ಮಹಾಕುಂಭದಿಂದ ಹಿಂದಿರುಗುವಾಗ ಅಪಘಾತ, ಸಂಸದೆ ಮಹುವಾಗೆ ಗಂಭೀರ ಗಾಯ

ಮಹಾಕುಂಭ ಮೇಳದಿಂದ ಹಿಂದಿರುಗುತ್ತಿರುವಾಗ ಜೆಎಂಎಂನ ರಾಜ್ಯಸಬಾ ಸಂಸದೆ ಮಹುವಾ ಮಾಜಿ ಇದ್ದ ಕಾರು ಅಪಘಾತಕ್ಕೀಡಾಗಿದ್ದು, ಅವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ವರದಿಯಾಗಿದೆ. ರಾಜ್ಯಸಭಾ ಸದಸ್ಯೆಯಾಗಿರುವ ಮಹುವಾ ಎಡ ಮಣಿಕಟ್ಟಿನಲ್ಲಿ ಮೂಳೆ ಮುರಿತ ಉಂಟಾಗಿದ್ದು, ಪಕ್ಕೆಲುಬುಗಳಿಗೆ ಸ್ವಲ್ಪ ಹಾನಿಯಾಗಿದೆ. ಅವರನ್ನು ರಾಂಚಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಹಾಕುಂಭದಿಂದ ಹಿಂದಿರುಗುವಾಗ ಅಪಘಾತ, ಸಂಸದೆ ಮಹುವಾಗೆ ಗಂಭೀರ ಗಾಯ
ಮಹುವಾ

Updated on: Feb 26, 2025 | 12:01 PM

ರಾಂಚಿ, ಫೆಬ್ರವರಿ 26: ಜಾರ್ಖಂಡ್ ಮುಕ್ತಿ ಮೋರ್ಚಾದ ರಾಜ್ಯಸಭಾ ಸಂಸದೆ ಮಹುವಾ ಮಾಜಿ ಪ್ರಯಾಣಿಸುತ್ತಿದ್ದ ಕಾರು ಮಹಾಕುಂಭದಿಂದ ಹಿಂದಿರುಗುವಾಗ ಲತೇಹಾರ್ ಬಳಿ ಅಪಘಾತಕ್ಕೀಡಾಗಿದ್ದು, ಸಂಸದೆ ಗಂಭೀರವಾಗಿ ಗಾಯಗೊಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಅವರನ್ನು ರಾಂಚಿಯ ಆರ್ಕಿಡ್ ವೈದ್ಯಕೀಯ ಕೇಂದ್ರದಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ರಾಜ್ಯಸಭಾ ಸದಸ್ಯೆಯಾಗಿರುವ ಮಹುವಾ ಎಡ ಮಣಿಕಟ್ಟಿನಲ್ಲಿ ಮೂಳೆ ಮುರಿತ ಉಂಟಾಗಿದ್ದು, ಪಕ್ಕೆಲುಬುಗಳಿಗೆ ಸ್ವಲ್ಪ ಹಾನಿಯಾಗಿದೆ.

ಅವರನ್ನು ರಾಂಚಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತ ನಡೆದಾಗ ಅವರ ಮಗ ಮತ್ತು ಸೊಸೆ ಕೂಡ ಕಾರಿನಲ್ಲಿದ್ದರು. ಮಹುವಾ ಅವರ ಮಗ ಸೋಮ್ವಿತ್ ಮಾಜಿ ಅವರು, ತಾವು ಕಾರನ್ನು ಚಾಲನೆ ಮಾಡುತ್ತಿದ್ದಾಗ ಬೆಳಗಿನ ಜಾವ ನಿದ್ರೆ ಬಂದಂತಾದಾಗ ಈ ಘಟನೆ ಸಂಭವಿಸಿದೆ.

ನಾವು ಪ್ರಯಾಗರಾಜ್‌ನ ಮಹಾ ಕುಂಭದಿಂದ ಹಿಂತಿರುಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ, ನನ್ನ ತಾಯಿ ಹಾಗೂ ಪತ್ನಿ ಹಿಂದಿನ ಸೀಟಿನಲ್ಲಿದ್ದರು. ನಾನು ಕಾರು ಓಡಿಸುತ್ತಿದ್ದೆ, ಆಗ ಒಮ್ಮೆ ಕಣ್ಣುಮುಚ್ಚಿದಂತಾಗಿ ಅಪಘಾತ ಸಂಭವಿಸಿದೆ. ತಕ್ಷಣ ಕಾರಿನ ಒಳಗೆಲ್ಲಾ ಹೊಗೆ ತುಂಬಿಕೊಂಡಿತ್ತು, ನಾವು ಹೊರಗೆ ಬರಲು ಎಷ್ಟೇ ಪ್ರಯತ್ನಿಸಿದರೂ ಸಾಧ್ಯವಾಗಲಿಲ್ಲ.

ತಾಯಿಗೆ ಮಣಿಕಟ್ಟಿಗೆ ಪೆಟ್ಟುಬಿದ್ದಿತ್ತು, ಎದೆ ಹಾಗೂ ಕೈ ತುಂಬಾ ನೋಯುತ್ತಿದೆ ಎಂದು ಹೇಳಿದ್ದಾಗಿ ಮಹುವಾ ಪುತ್ರ ತಿಳಿಸಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು.

ಅದರ ನಂತರ, ನಾವು ಅವರನ್ನು ರಾಂಚಿಗೆ ಕರೆದೊಯ್ದೆವು. ಅವರ ಎಡಗೈ ಮುರಿದಿದೆ ಮತ್ತು ಅವಳ ಪಕ್ಕೆಲುಬುಗಳಿಗೆ ಸ್ವಲ್ಪ ಹಾನಿಯಾಗಿದೆ ಎಂದು ವೈದ್ಯರು ಹೇಳಿದ್ದಾರೆ. ಅವರ ಕೈಗಳಿಗೆ ಶಸ್ತ್ರಚಿಕಿತ್ಸೆ ಮಾಡಬೇಕಾಗುತ್ತದೆ. ಅವರು ನಮ್ಮೊಂದಿಗೆ ಮಾತನಾಡುತ್ತಿದ್ದಾರೆ, ಎಲ್ಲಾ ಪರೀಕ್ಷೆಗಳನ್ನು ಮಾಡಲಾಗಿದೆ ಎಂದು ಪುತ್ರ ಸೋಮ್ವಿತ್ ಹೇಳಿದ್ದಾರೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Loading...
Unable to load recommendations.
Follow Us