AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Alamgir Alam: ಇಡಿಯಿಂದ ಬಂಧಿಸಲ್ಪಟ್ಟಿರುವ ಜಾರ್ಖಂಡ್ ಸಚಿವ ಆಲಂಗೀರ್ ಆಲಂ ರಾಜೀನಾಮೆ

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಸರಿಯಾಗಿ ಸ್ಪಂದಿಸದ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯ ಜಾರ್ಖಂಡ್ ಸಚಿವ ಆಲಂಗೀರ್ ಆಲಂ ಅವರನ್ನು ಬಂಧಿಸಿತ್ತು. ನಿನ್ನೆ ಆಲಂಗೀರ್ ಆಲಂ ಅವರನ್ನು 6 ದಿನಗಳ ಕಾಲ ಇಡಿ ವಶಕ್ಕೆ ನೀಡಲಾಗಿತ್ತು.

Alamgir Alam: ಇಡಿಯಿಂದ ಬಂಧಿಸಲ್ಪಟ್ಟಿರುವ ಜಾರ್ಖಂಡ್ ಸಚಿವ ಆಲಂಗೀರ್ ಆಲಂ ರಾಜೀನಾಮೆ
ಆಲಂಗೀರ್ ಆಲಂ
ಸುಷ್ಮಾ ಚಕ್ರೆ
|

Updated on: May 17, 2024 | 9:31 PM

Share

ರಾಂಚಿ: ಜಾರ್ಖಂಡ್ ಕಾಂಗ್ರೆಸ್ ನಾಯಕ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ (Alamgir Alam) ಅವರನ್ನು ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ (Money Laundering) ಸಂಬಂಧಿಸಿದಂತೆ ಗುರುವಾರ 6 ದಿನಗಳ ಇಡಿ ಕಸ್ಟಡಿಗೆ ಕಳುಹಿಸಲಾಗಿತ್ತು. ರಾಂಚಿಯ ಫ್ಲಾಟ್‌ನಿಂದ ಭಾರೀ ನಗದು ವಸೂಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು 9 ಗಂಟೆಗಳ ಕಾಲ ಅವರನ್ನು ವಿಚಾರಣೆಗೆ ಒಳಪಡಿಸಲಾಯಿತು. ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಮುಖ್ಯಮಂತ್ರಿ ಚಂಪೈ ಸೊರೆನ್ ಅವರಿಗೆ ಆಲಂಗೀರ್ ಆಲಂ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಅವರನ್ನು 6 ವರ್ಷಗಳ ಕಾಲ ಪಕ್ಷದಿಂದ ಹೊರಹಾಕಲಾಗಿದೆ. ಅವರ ರಾಜೀನಾಮೆಯನ್ನು ಅಂಗೀಕರಿಸಿರುವ ಮುಖ್ಯಮಂತ್ರಿ ಅವರನ್ನು ಸಂಪುಟದಿಂದ ಕೈಬಿಡುವಂತೆ ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ. ಕೆಲ ಸಮಯದ ಬಳಿಕ ಈ ಪತ್ರದ ಹಿನ್ನೆಲೆಯಲ್ಲಿ ರಾಜಭವನದಿಂದಲೂ ಆದೇಶ ಹೊರಬೀಳಲಿದೆ.

ಹಣ ವಸೂಲಾತಿಗೆ ಸಂಬಂಧಿಸಿದ ಪ್ರಕರಣದಲ್ಲಿ ಇಡಿ ಸಮನ್ಸ್ ನೀಡಿದ ನಂತರ ಗುರುವಾರ (ಮೇ 16) ಆಲಂಗೀರ್ ಅವರನ್ನು 6 ದಿನಗಳ ಇಡಿ ಕಸ್ಟಡಿಗೆ ಕಳುಹಿಸಲಾಗಿದೆ. ಅವರ ವೈಯಕ್ತಿಕ ಕಾರ್ಯದರ್ಶಿ ಸಂಜಯ್ ಲಾಲ್ ಅವರ ಮನೆಕೆಲಸಗಾರ ಜಹಾಂಗೀರ್ ಆಲಂ ಅವರ ಮನೆಯಿಂದ 35 ಕೋಟಿ ರೂ. ಹಣವನ್ನು ಇಡಿ ವಶಪಡಿಸಿಕೊಂಡಿತ್ತು. ನಗದು ವಶಪಡಿಸಿಕೊಂಡ ನಂತರ ಇಡಿ ಈಗಾಗಲೇ ಲಾಲ್ ಮತ್ತು ಜಹಾಂಗೀರ್ ಅವರನ್ನು ಬಂಧಿಸಿತ್ತು. ಮೇ 6ರಂದು, ಇಡಿ ಆಲಂಗೀರ್ ಆಲಂ ಅವರ ಪಿಎಸ್ ಮತ್ತು ಇತರ ನಿಕಟ ಸಹಚರರ ನಿವಾಸಗಳ ಮೇಲೆ ದಾಳಿ ನಡೆಸಿತು. ಆಗ 35.23 ಕೋಟಿ ಮೌಲ್ಯದ ಅಪಾರ ನಗದು ಪತ್ತೆಯಾಗಿತ್ತು.

ಇದನ್ನೂ ಓದಿ: Alamgir Alam: ಅಕ್ರಮ ಹಣ ವರ್ಗಾವಣೆ ಪ್ರಕರಣ; ಇಡಿಯಿಂದ ಜಾರ್ಖಂಡ್ ಸಚಿವ ಆಲಂಗೀರ್ ಆಲಂ ಬಂಧನ

ಇಡಿ ಲಾಲ್ ಅವರ ನಿವಾಸದಿಂದ 10 ಲಕ್ಷ ರೂ. ಮತ್ತು ಅವರ ಪತ್ನಿಯ ನಿರ್ಮಾಣ ಕಂಪನಿ ಪಾಲುದಾರ ಮುನ್ನಾ ಸಿಂಗ್ ಅವರ ನಿವಾಸದಿಂದ 2.93 ಕೋಟಿ ರೂ. ವಶಪಡಿಸಿಕೊಂಡಿತ್ತು. ಜಹಾಂಗೀರ್‌ನ ಫ್ಲಾಟ್‌ನಿಂದ ಪಡೆದ ಹಣವು ತನಗೆ ಸೇರಿದ್ದು ಎಂದು ಲಾಲ್ ಆರಂಭದಲ್ಲಿ ನಿರಾಕರಿಸಿದ್ದರು. ಆದರೆ ದೃಢವಾದ ಸಾಕ್ಷ್ಯ ಮತ್ತು ಜಹಾಂಗೀರ್ ಹೇಳಿಕೆಯ ನಂತರ, ತನಿಖಾ ಸಂಸ್ಥೆ ಅವನನ್ನು ಬಂಧಿಸಿತು.

ಇದಕ್ಕೂ ಮುನ್ನ ಬುಧವಾರ ಜಾರ್ಖಂಡ್ ಗ್ರಾಮೀಣ ಸಚಿವರನ್ನು ಪಿಎಂಎಲ್‌ಎಯ ನಿಬಂಧನೆಗಳ ಅಡಿಯಲ್ಲಿ ರಾಂಚಿಯಲ್ಲಿರುವ ಏಜೆನ್ಸಿಯ ವಲಯ ಕಚೇರಿಯಲ್ಲಿ ವಶಕ್ಕೆ ತೆಗೆದುಕೊಳ್ಳಲಾಯಿತು. ಎರಡನೇ ದಿನದ ವಿಚಾರಣೆಯಲ್ಲಿ ಸುಮಾರು 6 ಗಂಟೆಗಳ ಕಾಲ ಅವರನ್ನು ವಿಚಾರಣೆ ನಡೆಸಲಾಯಿತು. ಮಂಗಳವಾರ ಫೆಡರಲ್ ಏಜೆನ್ಸಿ ಅವರನ್ನು 9 ಗಂಟೆಗಳ ಕಾಲ ಗ್ರಿಲ್ ಮಾಡಿತು. ಅವರ ಹೇಳಿಕೆಯನ್ನು ಸಹ ದಾಖಲಿಸಲಾಗಿದೆ. ಆಲಂ ಅವರು ಜಾರ್ಖಂಡ್ ವಿಧಾನಸಭೆಯಲ್ಲಿ ಪಾಕುರ್ ಕ್ಷೇತ್ರದ ಶಾಸಕರಾಗಿದ್ದಾರೆ ಮತ್ತು ಸಂಸದೀಯ ವ್ಯವಹಾರಗಳ ಸಚಿವರೂ ಆಗಿದ್ದಾರೆ.

ಇದನ್ನೂ ಓದಿ: ಅಕ್ರಮ ಹಣ ವರ್ಗಾವಣೆ ಪ್ರಕರಣ: ಜಾರ್ಖಂಡ್ ಸಚಿವ ಆಲಂಗೀರ್ ಆಲಂ 6 ದಿನಗಳ ಇಡಿ ವಶಕ್ಕೆ

ಆಲಂಗೀರ್ ಆಲಂ ಮತ್ತು ಅವರ ಸಹಾಯಕರ ವಿರುದ್ಧದ ಪ್ರಕರಣವು ಜಾರ್ಖಂಡ್ ಟೆಂಡರ್ ಹಗರಣಕ್ಕೆ ಸಂಬಂಧಿಸಿದೆ. ಗ್ರಾಮೀಣ ಭಾಗದಲ್ಲಿ ರಸ್ತೆ ನಿರ್ಮಾಣಕ್ಕೆ ಟೆಂಡರ್‌ಗೆ ಬದಲಾಗಿ ಕಮಿಷನ್‌ನಿಂದ ಬಂದ ಹಣ ಇದಾಗಿದೆ ಎಂದು ಆರೋಪಿಸಲಾಗಿದೆ. ಮೇ 6ರಂದು, ಇಡಿ ಆಲಂಗೀರ್ ಆಲಂ ಅವರ ಪಿಎಸ್ ಮತ್ತು ಇತರ ನಿಕಟ ಸಹಚರರ ನಿವಾಸಗಳ ಮೇಲೆ ದಾಳಿ ನಡೆಸಿತು. ವಶಪಡಿಸಿಕೊಂಡ ಕರೆನ್ಸಿ ನೋಟುಗಳ ಎಣಿಕೆ ವೇಳೆ ಒಟ್ಟು 35.23 ಕೋಟಿ ರೂ. ಪತ್ತೆಯಾಗಿತ್ತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!
ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!
ದೊಡ್ಡ ಗಣಪತಿ ದೇವಸ್ಥಾನದಲ್ಲಿ ಮೋದಿ ಹೆಸರಿನಲ್ಲಿ ವಿಶೇಷ ಪೂಜೆ, ಅಭಿಷೇಕ
ದೊಡ್ಡ ಗಣಪತಿ ದೇವಸ್ಥಾನದಲ್ಲಿ ಮೋದಿ ಹೆಸರಿನಲ್ಲಿ ವಿಶೇಷ ಪೂಜೆ, ಅಭಿಷೇಕ
ಬಾಯಿ ಮುಚ್ಕೊಂಡು ಕೂತ್ಗೊ; ಕಾವ್ಯಾಗೆ ಅವಾಜ್ ಹಾಕಿದ ಧ್ರುವಂತ್
ಬಾಯಿ ಮುಚ್ಕೊಂಡು ಕೂತ್ಗೊ; ಕಾವ್ಯಾಗೆ ಅವಾಜ್ ಹಾಕಿದ ಧ್ರುವಂತ್
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?
ಹೊಸ ವರ್ಷದ ಮೊದಲ ದಿನದಂದು ಈ ರಾಶಿಯವರಿಗೆ ಶುಭ ಫಲ
ಹೊಸ ವರ್ಷದ ಮೊದಲ ದಿನದಂದು ಈ ರಾಶಿಯವರಿಗೆ ಶುಭ ಫಲ
ನ್ಯೂ ಇಯರ್​​​: ಕುಡಿದು ಟೈಟಾದ ಯುವತಿ, ಆಟೋದಲ್ಲಿ ಕೂರಿಸಿ ಕಳಿಸಿದ ಪೊಲೀಸ್​​
ನ್ಯೂ ಇಯರ್​​​: ಕುಡಿದು ಟೈಟಾದ ಯುವತಿ, ಆಟೋದಲ್ಲಿ ಕೂರಿಸಿ ಕಳಿಸಿದ ಪೊಲೀಸ್​​
ಬೆಳಗಾವಿಯಲ್ಲಿ ನ್ಯೂಇಯರ್​​ ಕಿಕ್​​; ಭರ್ಜರಿ ಸ್ಟೆಪ್​ ಹಾಕಿದ ಜನರು
ಬೆಳಗಾವಿಯಲ್ಲಿ ನ್ಯೂಇಯರ್​​ ಕಿಕ್​​; ಭರ್ಜರಿ ಸ್ಟೆಪ್​ ಹಾಕಿದ ಜನರು
New Year 2026: ಹೊಸವರ್ಷಕ್ಕೆ ಅದ್ಧೂರಿ ಸ್ವಾಗತ; ಕುಣಿದು ಕುಪ್ಪಳಿಸಿದ ಜನರು
New Year 2026: ಹೊಸವರ್ಷಕ್ಕೆ ಅದ್ಧೂರಿ ಸ್ವಾಗತ; ಕುಣಿದು ಕುಪ್ಪಳಿಸಿದ ಜನರು
ನ್ಯೂಇಯರ್​ ಸಂಭ್ರಮದ ಮಧ್ಯೆ ಪುಂಡಾಟ: ಮಹಿಳಾ ಪೊಲೀಸರ ಜತೆ ಅನುಚಿತ ವರ್ತನೆ
ನ್ಯೂಇಯರ್​ ಸಂಭ್ರಮದ ಮಧ್ಯೆ ಪುಂಡಾಟ: ಮಹಿಳಾ ಪೊಲೀಸರ ಜತೆ ಅನುಚಿತ ವರ್ತನೆ