AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾರ್ಖಂಡ್‌ನ ಹಜಾರಿಬಾಗ್‌ನಲ್ಲಿ ಭೀಕರ ರಸ್ತೆ ಅಪಘಾತ; 7 ಮಂದಿ ಸಾವು, 12ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯ

ಜಾರ್ಖಂಡ್‌ನ ಹಜಾರಿಬಾಗ್ ಜಿಲ್ಲೆಯಲ್ಲಿ ಇಂದು ಅತ್ಯಂತ ಶೋಚನೀಯ ರಸ್ತೆ ಅಪಘಾತ ಸಂಭವಿಸಿದ್ದು, ಅತಿ ವೇಗವಾಗಿ ಬಂದ ಲಾರಿಯೊಂದು ಪಿಕ್-ಅಪ್‌ ವಾಹನಕ್ಕೆ ಹಿಂದಿನಿಂದ ಭೀಕರವಾಗಿ ಡಿಕ್ಕಿ ಹೊಡೆದ ಪರಿಣಾಮವಾಗಿ 7 ಜನರು ದುರ್ಮರಣಕ್ಕೀಡಾಗಿದ್ದಾರೆ. ಮೃತ ದೇಹ ಹಾಗೂ ಅಂತ್ಯಕ್ರಿಯೆಗೆ ತೆರಳುತ್ತಿದ್ದ ಶೋಕಾರ್ಥಿಗಳನ್ನು ಉತ್ತರ ಪ್ರದೇಶದ ವಾರಾಣಸಿಗೆ ಕರೆದೊಯ್ಯುತ್ತಿದ್ದಾಗ ಈ ದಾರುಣ ದುರಂತ ಸಂಭವಿಸಿದೆ. ಧನುವಾ ಕಣಿವೆಯ ಸಮೀಪವಿರುವ ಮಹಾನೇಟಾಂಡ್ ಬಳಿ ಇಂದು ಬೆಳಿಗ್ಗೆ ಪಿಕ್-ಅಪ್‌ ವಾಹನವನ್ನು ರಸ್ತೆ ಬದಿ ನಿಲ್ಲಿಸಿದ್ದಾಗ ಈ ಅಪಘಾತ ನಡೆದಿದೆ. ಘಟನೆ ಸಂಭವಿಸಿದಾಗ ವಾಹನದಲ್ಲಿ 19 ಜನರಿದ್ದರು.

ಜಾರ್ಖಂಡ್‌ನ ಹಜಾರಿಬಾಗ್‌ನಲ್ಲಿ ಭೀಕರ ರಸ್ತೆ ಅಪಘಾತ; 7 ಮಂದಿ ಸಾವು, 12ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯ
ಹಜಾರಿಬಾಗ್‌ನಲ್ಲಿ ಭೀಕರ ಅಪಘಾತ
ಸುಷ್ಮಾ ಚಕ್ರೆ
|

Updated on: Nov 09, 2026 | 10:30 PM

Share

ಹಜಾರಿಬಾಗ್, ನವೆಂಬರ್ 9: ಜಾರ್ಖಂಡ್‌ನ ಹಜಾರಿಬಾಗ್ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ರಸ್ತೆ ಬದಿ ನಿಂತಿದ್ದ ವಾಹನಕ್ಕೆ ಅತಿ ವೇಗವಾಗಿ ಬಂದ ಲಾರಿಯೊಂದು ಹಿಂಭಾಗದಿಂದ ಭೀಕರವಾಗಿ ಡಿಕ್ಕಿ ಹೊಡೆದ ಪರಿಣಾಮವಾಗಿ 7 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ದಾರುಣ ಘಟನೆಯಲ್ಲಿ 12ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಮೃತದೇಹದ ಅಂತ್ಯಕ್ರಿಯೆ ಹಾಗೂ ಶೋಕ ಆಚರಣೆಗಾಗಿ ಉತ್ತರ ಪ್ರದೇಶದ ವಾರಾಣಸಿಗೆ ಪ್ರಯಾಣಿಸುತ್ತಿದ್ದ ಕುಟುಂಬ ಮತ್ತು ಸಂಬಂಧಿಕರಿದ್ದ ವಾಹನಕ್ಕೆ ಈ ಅಪಘಾತ ಸಂಭವಿಸಿದೆ. ಧನುವಾ ಕಣಿವೆಯ ಮಹಾನೇಟಾಂಡ್ ಬಳಿ ಪ್ರಯಾಣಿಕರಿದ್ದ ಪಿಕ್-ಅಪ್ ವಾಹನವನ್ನು ರಸ್ತೆ ಬದಿ ನಿಲ್ಲಿಸಲಾಗಿತ್ತು. ಈ ವೇಳೆ ವೇಗವಾಗಿ ಬಂದ ಸರಕು ಲಾರಿ ಹಿಂಭಾಗದಿಂದ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ವಾಹನ ಸಂಪೂರ್ಣವಾಗಿ ಜಖಂ ಆಗಿದೆ.

ಇದನ್ನೂ ಓದಿ: ಉತ್ತರ ಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: ಡಿವೈಡರ್‌ಗೆ ಡಿಕ್ಕಿಯಾಗಿ ಹೊತ್ತಿ ಉರಿದ ಕಾರು, 5 ಮಂದಿ ಸಜೀವ ದಹನ

ಜಾರ್ಖಂಡ್​​ನಲ್ಲಿ ಅಪಘಾತ ಸಂಭವಿಸಿದ ತಕ್ಷಣವೇ 7 ಮಂದಿ ಸ್ಥಳದಲ್ಲೇ ಕೊನೆಯುಸಿರೆಳೆದರು. ಈ ಘಟನೆಯಲ್ಲಿ 12ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ಅವರಲ್ಲಿ ಕೆಲವರ ಸ್ಥಿತಿ ಚಿಂತಾಜನಕವಾಗಿದೆ. ತೀವ್ರವಾಗಿ ಗಾಯಗೊಂಡ ರೋಗಿಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ರಾಂಚಿಯ ಆರ್‌ಐಎಂಎಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಅಪಘಾತವೆಸಗಿದ ಲಾರಿ ಚಾಲಕ ಘಟನೆಯ ನಂತರ ಸ್ಥಳದಿಂದ ತಲೆಮರೆಸಿಕೊಂಡಿದ್ದು, ಪೊಲೀಸರು ಆತನ ಪತ್ತೆಗೆ ಜಾಲ ಬೀಸಿದ್ದಾರೆ. ಮೃತರ ಶರೀರಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ.

ಇದನ್ನೂ ಓದಿ: 7 ಜನರ ಹತ್ಯೆ ಪ್ರಕರಣ: ಕೃತ್ಯ ನಡೆಸಲು ಅಗತ್ಯ ವಸ್ತುಗಳನ್ನು ಏರಿಯಾದ ಸುತ್ತಮುತ್ತಲೇ ಖರೀದಿಸಿದ್ದ ಆರೋಪಿ

ಈ ಘಟನೆಯಲ್ಲಿ 12 ಜನರು ಗಾಯಗೊಂಡಿದ್ದಾರೆ. ಒಬ್ಬರ ಸ್ಥಿತಿ ಗಂಭೀರವಾಗಿದ್ದು, ರಾಂಚಿಯ ಆರ್‌ಐಎಂಎಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಉಳಿದ ಗಾಯಾಳುಗಳಿಗೆ ಪ್ರಥಮ ಚಿಕಿತ್ಸೆ ಹಾಗೂ ಒಳರೋಗಿ ವಿಭಾಗದಲ್ಲಿ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ. ಈ ಅಪಘಾತದ ಕುರಿತು ತೀವ್ರ ಆಘಾತ ವ್ಯಕ್ತಪಡಿಸಿರುವ ಬಿಜೆಪಿ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಅರ್ಜುನ್ ಮುಂಡಾ, ಮೃತರ ಕುಟುಂಬಕ್ಕೆ ಕಂಬನಿ ಮಿಡಿದಿದ್ದಾರೆ. “ವ್ಯಕ್ತಿಯೊಬ್ಬರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ವಾರಾಣಸಿಗೆ ಪ್ರಯಾಣಿಸುತ್ತಿದ್ದ ಕುಟುಂಬವೊಂದು ಈ ದುರಂತಕ್ಕೆ ಬಲಿಯಾಗಿರುವುದು ಅತ್ಯಂತ ದುರದೃಷ್ಟಕರ” ಎಂದು ಅವರು ಶೋಕ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More
ಎಥೆನಾಲ್​​ ಹೆಸರಲ್ಲಿ 1.68 ಲಕ್ಷ ಕೋಟಿ ಲೂಟಿ? ಲಕ್ಷ್ಮಣ್ ಗಂಭೀರ ಆರೋಪ
ಎಥೆನಾಲ್​​ ಹೆಸರಲ್ಲಿ 1.68 ಲಕ್ಷ ಕೋಟಿ ಲೂಟಿ? ಲಕ್ಷ್ಮಣ್ ಗಂಭೀರ ಆರೋಪ
ನಿರ್ದೇಶಕನ ಮೇಲೆ ಕಾನೂನು ಕ್ರಮ ಕೈಗೋಳ್ಳುತ್ತೇವೆ: ಪ್ರಿಯಾಂಕಾ ಎಚ್ಚರಿಕೆ
ನಿರ್ದೇಶಕನ ಮೇಲೆ ಕಾನೂನು ಕ್ರಮ ಕೈಗೋಳ್ಳುತ್ತೇವೆ: ಪ್ರಿಯಾಂಕಾ ಎಚ್ಚರಿಕೆ
ಮರಿ ನೀರಾನೆಗೆ 'ಡಾ. ಸಮೀಕ್ಷಾ ರೆಡ್ಡಿ' ಹೆಸರು ನಾಮಕರಣ
ಮರಿ ನೀರಾನೆಗೆ 'ಡಾ. ಸಮೀಕ್ಷಾ ರೆಡ್ಡಿ' ಹೆಸರು ನಾಮಕರಣ
ಚೌಡೇಶ್ವರಿ ದೇವಾಲಯಕ್ಕೆ ವಿಜಯಲಕ್ಷ್ಮಿ ಭೇಟಿ, ದರ್ಶನ್​​ಗಾಗಿ ವಿಶೇಷ ಪೂಜೆ
ಚೌಡೇಶ್ವರಿ ದೇವಾಲಯಕ್ಕೆ ವಿಜಯಲಕ್ಷ್ಮಿ ಭೇಟಿ, ದರ್ಶನ್​​ಗಾಗಿ ವಿಶೇಷ ಪೂಜೆ
ಸಿದ್ದರಾಮಯ್ಯರೊಂದಿಗೆ ಡಿಕೆಶಿ ಚರ್ಚೆ: ಕೆಲ ವಿಚಾರ ತಿಳಿಸಿದ್ದೇನೆ; ಸಿಎಂ
ಸಿದ್ದರಾಮಯ್ಯರೊಂದಿಗೆ ಡಿಕೆಶಿ ಚರ್ಚೆ: ಕೆಲ ವಿಚಾರ ತಿಳಿಸಿದ್ದೇನೆ; ಸಿಎಂ
ಇಡೀ ರಾಜ್ಯದ ಮಹಿಳೆಯರಿಗಿದೆ 'ಉಚಿತ ಬಸ್', ನಮಗೇಕಿಲ್ಲ?
ಇಡೀ ರಾಜ್ಯದ ಮಹಿಳೆಯರಿಗಿದೆ 'ಉಚಿತ ಬಸ್', ನಮಗೇಕಿಲ್ಲ?
ರಸ್ತೆ ಗುಂಡಿಗಳ ಕಾಟ: ಖುದ್ದು ಗುಂಡಿ ಮುಚ್ಚಿದ ಸಂಚಾರಿ ಪೊಲೀಸರು
ರಸ್ತೆ ಗುಂಡಿಗಳ ಕಾಟ: ಖುದ್ದು ಗುಂಡಿ ಮುಚ್ಚಿದ ಸಂಚಾರಿ ಪೊಲೀಸರು
ಸ್ಟಿಂಗ್ ಆಪರೇಷನ್: CCB ವಿಚಾರಣೆಗೆ ಬಂದ ಕೃಪಾ ಆಳ್ವಾ; ವಕೀಲೆ ಹೇಳಿದ್ದೇನು?
ಸ್ಟಿಂಗ್ ಆಪರೇಷನ್: CCB ವಿಚಾರಣೆಗೆ ಬಂದ ಕೃಪಾ ಆಳ್ವಾ; ವಕೀಲೆ ಹೇಳಿದ್ದೇನು?
ರಾಜ್ಯ ಸರ್ಕಾರ ಮತ್ತು ರಾಜಮನೆತನದ ನಡುವಿನ ಸಂಘರ್ಷಕ್ಕೆ ಯದುವೀರ್ ರಿಯಾಕ್ಷನ್
ರಾಜ್ಯ ಸರ್ಕಾರ ಮತ್ತು ರಾಜಮನೆತನದ ನಡುವಿನ ಸಂಘರ್ಷಕ್ಕೆ ಯದುವೀರ್ ರಿಯಾಕ್ಷನ್
ಸ್ಪರ್ಧಿಗಳಿಗೆ ಹೊರಗಿನ ವಿಷಯ ರಿವೀಲ್ ಮಾಡಿದ ಮಂಜು; ಇಡೀ ಮನೆ ಅಲ್ಲೋಲ ಕಲ್ಲೋಲ
ಸ್ಪರ್ಧಿಗಳಿಗೆ ಹೊರಗಿನ ವಿಷಯ ರಿವೀಲ್ ಮಾಡಿದ ಮಂಜು; ಇಡೀ ಮನೆ ಅಲ್ಲೋಲ ಕಲ್ಲೋಲ