
ಹಜಾರಿಬಾಗ್, ನವೆಂಬರ್ 9: ಜಾರ್ಖಂಡ್‌ನ ಹಜಾರಿಬಾಗ್ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ರಸ್ತೆ ಬದಿ ನಿಂತಿದ್ದ ವಾಹನಕ್ಕೆ ಅತಿ ವೇಗವಾಗಿ ಬಂದ ಲಾರಿಯೊಂದು ಹಿಂಭಾಗದಿಂದ ಭೀಕರವಾಗಿ ಡಿಕ್ಕಿ ಹೊಡೆದ ಪರಿಣಾಮವಾಗಿ 7 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ದಾರುಣ ಘಟನೆಯಲ್ಲಿ 12ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೃತದೇಹದ ಅಂತ್ಯಕ್ರಿಯೆ ಹಾಗೂ ಶೋಕ ಆಚರಣೆಗಾಗಿ ಉತ್ತರ ಪ್ರದೇಶದ ವಾರಾಣಸಿಗೆ ಪ್ರಯಾಣಿಸುತ್ತಿದ್ದ ಕುಟುಂಬ ಮತ್ತು ಸಂಬಂಧಿಕರಿದ್ದ ವಾಹನಕ್ಕೆ ಈ ಅಪಘಾತ ಸಂಭವಿಸಿದೆ. ಧನುವಾ ಕಣಿವೆಯ ಮಹಾನೇಟಾಂಡ್ ಬಳಿ ಪ್ರಯಾಣಿಕರಿದ್ದ ಪಿಕ್-ಅಪ್ ವಾಹನವನ್ನು ರಸ್ತೆ ಬದಿ ನಿಲ್ಲಿಸಲಾಗಿತ್ತು. ಈ ವೇಳೆ ವೇಗವಾಗಿ ಬಂದ ಸರಕು ಲಾರಿ ಹಿಂಭಾಗದಿಂದ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ವಾಹನ ಸಂಪೂರ್ಣವಾಗಿ ಜಖಂ ಆಗಿದೆ.
ಇದನ್ನೂ ಓದಿ: ಉತ್ತರ ಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: ಡಿವೈಡರ್‌ಗೆ ಡಿಕ್ಕಿಯಾಗಿ ಹೊತ್ತಿ ಉರಿದ ಕಾರು, 5 ಮಂದಿ ಸಜೀವ ದಹನ
ಜಾರ್ಖಂಡ್ನಲ್ಲಿ ಅಪಘಾತ ಸಂಭವಿಸಿದ ತಕ್ಷಣವೇ 7 ಮಂದಿ ಸ್ಥಳದಲ್ಲೇ ಕೊನೆಯುಸಿರೆಳೆದರು. ಈ ಘಟನೆಯಲ್ಲಿ 12ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ಅವರಲ್ಲಿ ಕೆಲವರ ಸ್ಥಿತಿ ಚಿಂತಾಜನಕವಾಗಿದೆ. ತೀವ್ರವಾಗಿ ಗಾಯಗೊಂಡ ರೋಗಿಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ರಾಂಚಿಯ ಆರ್‌ಐಎಂಎಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಅಪಘಾತವೆಸಗಿದ ಲಾರಿ ಚಾಲಕ ಘಟನೆಯ ನಂತರ ಸ್ಥಳದಿಂದ ತಲೆಮರೆಸಿಕೊಂಡಿದ್ದು, ಪೊಲೀಸರು ಆತನ ಪತ್ತೆಗೆ ಜಾಲ ಬೀಸಿದ್ದಾರೆ. ಮೃತರ ಶರೀರಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ.
ಇದನ್ನೂ ಓದಿ: 7 ಜನರ ಹತ್ಯೆ ಪ್ರಕರಣ: ಕೃತ್ಯ ನಡೆಸಲು ಅಗತ್ಯ ವಸ್ತುಗಳನ್ನು ಏರಿಯಾದ ಸುತ್ತಮುತ್ತಲೇ ಖರೀದಿಸಿದ್ದ ಆರೋಪಿ
ಈ ಘಟನೆಯಲ್ಲಿ 12 ಜನರು ಗಾಯಗೊಂಡಿದ್ದಾರೆ. ಒಬ್ಬರ ಸ್ಥಿತಿ ಗಂಭೀರವಾಗಿದ್ದು, ರಾಂಚಿಯ ಆರ್‌ಐಎಂಎಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಉಳಿದ ಗಾಯಾಳುಗಳಿಗೆ ಪ್ರಥಮ ಚಿಕಿತ್ಸೆ ಹಾಗೂ ಒಳರೋಗಿ ವಿಭಾಗದಲ್ಲಿ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ. ಈ ಅಪಘಾತದ ಕುರಿತು ತೀವ್ರ ಆಘಾತ ವ್ಯಕ್ತಪಡಿಸಿರುವ ಬಿಜೆಪಿ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಅರ್ಜುನ್ ಮುಂಡಾ, ಮೃತರ ಕುಟುಂಬಕ್ಕೆ ಕಂಬನಿ ಮಿಡಿದಿದ್ದಾರೆ. “ವ್ಯಕ್ತಿಯೊಬ್ಬರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ವಾರಾಣಸಿಗೆ ಪ್ರಯಾಣಿಸುತ್ತಿದ್ದ ಕುಟುಂಬವೊಂದು ಈ ದುರಂತಕ್ಕೆ ಬಲಿಯಾಗಿರುವುದು ಅತ್ಯಂತ ದುರದೃಷ್ಟಕರ” ಎಂದು ಅವರು ಶೋಕ ವ್ಯಕ್ತಪಡಿಸಿದ್ದಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ