ಜಾರ್ಖಂಡ್: ಗೆಳತಿಯ ಕೊಂದು, ವಿಡಿಯೋವನ್ನು ಆನ್‌ಲೈನ್‌ನಲ್ಲಿ ಪೋಸ್ಟ್ ಮಾಡಿ, ಆತ್ಮಹತ್ಯೆ ಮಾಡಿಕೊಂಡ ಬಾಲಕ
ಬಾಲಕನೊಬ್ಬ ತನ್ನ ಗೆಳತಿಯನ್ನು ಬರ್ಬರವಾಗಿ ಹತ್ಯೆ(Murder) ಮಾಡಿ, ಅದರ ವಿಡಿಯೋವನ್ನು ಆನ್‌ಲೈನ್‌ನಲ್ಲಿ ಪೋಸ್ಟ್ ಮಾಡಿ ಬಳಿಕ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿರುವ ಘಟನೆ ಜಾರ್ಖಂಡ್ನಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ 17 ವರ್ಷದ ಬಾಲಕನ ಶವವನ್ನು ಲೋಹರ್ದಗಾ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಬಾಲಕ 14 ವರ್ಷದ ಬಾಲಕಿಯ ಮೇಲೆ ಹಲ್ಲೆ ನಡೆಸಿ, ಚಾಕುವಿನಿಂದ ಆಕೆಯ ಕತ್ತು ಸೀಳಿ ಕೊಂದಿದ್ದಾನೆ. ಸೆರೆಂಗ್‌ಡಾಗ್ ಪೊಲೀಸ್ ಠಾಣೆ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಈ ಘಟನೆ ನಡೆದಿದೆ.

ಜಾರ್ಖಂಡ್, ಜೂನ್ 29: ಬಾಲಕನೊಬ್ಬ ತನ್ನ ಗೆಳತಿಯನ್ನು ಬರ್ಬರವಾಗಿ ಹತ್ಯೆ(Murder) ಮಾಡಿ, ಅದರ ವಿಡಿಯೋವನ್ನು ಆನ್‌ಲೈನ್‌ನಲ್ಲಿ ಪೋಸ್ಟ್ ಮಾಡಿ ಬಳಿಕ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿರುವ ಘಟನೆ ಜಾರ್ಖಂಡ್ನಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ 17 ವರ್ಷದ ಬಾಲಕನ ಶವವನ್ನು ಲೋಹರ್ದಗಾ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಬಾಲಕ 14 ವರ್ಷದ ಬಾಲಕಿಯ ಮೇಲೆ ಹಲ್ಲೆ ನಡೆಸಿ, ಚಾಕುವಿನಿಂದ ಆಕೆಯ ಕತ್ತು ಸೀಳಿ ಕೊಂದಿದ್ದಾನೆ. ಸೆರೆಂಗ್‌ಡಾಗ್ ಪೊಲೀಸ್ ಠಾಣೆ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಈ ಘಟನೆ ನಡೆದಿದೆ.
ಆ ಬಾಲಕ ಈ ಭಯಾನಕ ಕೃತ್ಯವನ್ನು ರೆಕಾರ್ಡ್ ಮಾಡಿ, ಅದನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡು, ನಂತರ ಹತ್ತಿರದ ಕಾಡಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಡೇಟಿಂಗ್ ಮಾಡುತ್ತಿದ್ದ ಅಪ್ರಾಪ್ತರು ದಂಡು ಗ್ರಾಮದಲ್ಲಿ ನಡೆದ ರಥಯಾತ್ರೆಯಲ್ಲಿ ಸ್ನೇಹಿತರೊಂದಿಗೆ ಭಾಗವಹಿಸಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಸಂಜೆ ಹಿಂತಿರುಗುವಾಗ, ಜಗಳವಾಡಿ ಜಯನಾಥ್ ಬಾಲಕಿಯನ್ನು ಹಲವು ಬಾರಿ ಇರಿದು ಕೊಂದಿದ್ದಾನೆ ಎಂದು ವರದಿಯಾಗಿದೆ. ಮೂಲಗಳು ಹೇಳುವಂತೆ ಗೆಳತಿ ಇತ್ತೀಚೆಗೆ ಜಯನಾಥ್‌ನಿಂದ ದೂರವಾಗಿದ್ದಳು, ಇದು ಆತನ ಕೋಪಕ್ಕೆ ಕಾರಣವಾಗಿರಬಹುದು ಎಂದು ಊಹಿಸಲಾಗಿದೆ. ಜಯನಾಥ್ ದಾಳಿಯನ್ನು ಚಿತ್ರೀಕರಿಸಿ, ಹುಡುಗಿಯ ದೇಹ ಮತ್ತು ರಕ್ತಸಿಕ್ತ ಚಾಕುವಿನೊಂದಿಗೆ ಸೆಲ್ಫಿ ತೆಗೆದುಕೊಂಡು ಕಾಡಿಗೆ ಹೋಗುವ ಮೊದಲು ಆನ್‌ಲೈನ್‌ನಲ್ಲಿ ಪೋಸ್ಟ್ ಮಾಡಿದ್ದ.
ಮತ್ತಷ್ಟು ಓದಿ: ಲಿವಿಂಗ್ ರಿಲೇಷನ್ಶಿಪ್: ಬಾತ್‌ರೂಮಲ್ಲೇ ವ್ಯಕ್ತಿಯ ಬರ್ಬರ ಹತ್ಯೆ, ಜಾಲಿ ಜಾಲಿ ಎಂದವರು ಜೈಲಿಗೆ
ಗ್ರಾಮಸ್ಥರು ಆತನನ್ನು ಹಿಡಿಯಲು ಪ್ರಯತ್ನಿಸಿದ್ದರು, ಆದರೆ ಅವನು ತಪ್ಪಿಸಿಕೊಂಡು ಓಡಿ ಹೋಗಿ ಬಳಿಕ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದ. ಮೃತ ಬಾಲಕಿಯ ತಂದೆ ರಾಮದಯಾಳ್ ಖೇರ್ವಾರ್ ಮಾತನಾಡಿ, ದುಂದೂರು ಶಾಲೆಯ ವಿದ್ಯಾರ್ಥಿನಿಯಾಗಿರುವ ತನ್ನ ಮಗಳು ಜಯನಾಥ್ ಸೇರಿದಂತೆ ಸ್ನೇಹಿತರೊಂದಿಗೆ ಜಾತ್ರೆಗೆ ಹೋಗಿದ್ದಳು.
ಹಲ್ಲೆಯ ಸಮಯದಲ್ಲಿ ಆಕೆಯನ್ನು ರಕ್ಷಿಸಲು ಹಲವರು ಪ್ರಯತ್ನಿಸಿದರೂ ಸಾಧ್ಯವಾಗಲಿಲ್ಲ ಎಂದಿದ್ದಾರೆ. ಪೊಲೀಸರು ಎರಡೂ ಶವಗಳನ್ನು ವಶಪಡಿಸಿಕೊಂಡು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು, ತನಿಖೆ ಮುಂದುವರೆಸಿದ್ದಾರೆ.
ರಾಷ್ಟ್ರಿಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 12:52 pm, Sun, 29 June 25




