ಮಹಾರಾಷ್ಟ್ರ ವಿಪಕ್ಷ ನಾಯಕರಾಗಿ ಜಿತೇಂದ್ರ ಅವಾದ್ ನೇಮಕ

ಮಹಾರಾಷ್ಟ್ರ ವಿಪಕ್ಷ ನಾಯಕರಾಗಿದ್ದ ಅಜಿತ್ ಪವಾರ್ ಅವರು ಏಕನಾಥ್ ಶಿಂಧೆ ಸರ್ಕಾರದ ಜೊತೆ ಕೈಜೋಡಿಸಿದ ಹಿನ್ನೆಲೆ ವಿಪಕ್ಷ ಸ್ಥಾನಕ್ಕೆ ಜಿತೇಂದ್ರ ಅವಾದ್ ಅವರನ್ನು ನೇಮಕ ಮಾಡಲಾಗಿದೆ.

ಮಹಾರಾಷ್ಟ್ರ ವಿಪಕ್ಷ ನಾಯಕರಾಗಿ ಜಿತೇಂದ್ರ ಅವಾದ್ ನೇಮಕ
ಮಹಾರಾಷ್ಟ್ರ ವಿಪಕ್ಷ ನಾಯಕರಾಗಿ ಜಿತೇಂದ್ರ ಅವಾದ್ ನೇಮಕ ಮಾಡಿದ ಎನ್​ಸಿಪಿ ಮುಖ್ಯಸ್ಥ ಶರದ್ ಪವಾರ್
Follow us
TV9 Web
| Updated By: Rakesh Nayak Manchi

Updated on:Jul 02, 2023 | 6:15 PM

ಮುಂಬೈ: ಮಹಾರಾಷ್ಟ್ರ ವಿಪಕ್ಷ ನಾಯಕರಾಗಿದ್ದ ಅಜಿತ್ ಪವಾರ್ (Ajit Pawar) ಅವರು ಏಕನಾಥ್ ಶಿಂಧೆ ಸರ್ಕಾರದ ಜೊತೆ ಕೈಜೋಡಿಸಿ ಉಪಮುಖ್ಯಮಂತ್ರಿಯಾಗಿದ್ದು, ಇತ್ತ ಎನ್​ಸಿಪಿ (NCP) ಮುಖ್ಯಸ್ಥ ಶರದ್ ಪವಾರ್ (Sharad Pawar) ಅವರು ವಿಪಕ್ಷ ನಾಯಕನನ್ನಾಗಿ ಜಿತೇಂದ್ರ ಅವಾದ್ (Jitendra Awhad) ಅವರನ್ನು ನೇಮಕ ಮಾಡಿದ್ದಾರೆ. ಈ ಬಗ್ಗೆ ಸಭಾಪತಿ ಅವರಿಗೆ ಶರದ್ ಪವಾರ್ ಪತ್ರ ಬರೆದಿದ್ದಾರೆ.

ಪಕ್ಷದ ಬೆಳವಣಿಗೆಗಳ ಬಗ್ಗೆ ಮುಂಬೈನಲ್ಲಿ ಮಾತನಾಡಿದ ಎನ್​ಸಿಪಿ ಮುಖ್ಯಸ್ಥ ಶರದ್ ಪವಾರ್, ನಾಳೆ ಎನ್​ಸಿಪಿ ನಾಯಕರ ಸಭೆ ಕರೆದಿದ್ದೇವೆ ಎಂದರು. ಈ ಹಿಂದೆಯೂ ಪಕ್ಷದಲ್ಲಿ ವಿಶ್ವಾಸಘಾತಕ ಘಟನೆಗಳು ನಡೆದಿದೆ. ಆಗ ಪಕ್ಷ ಬಿಟ್ಟು ಹೋದವರು ಚುನಾವಣೆಯಲ್ಲಿ ಸೋತಿದ್ದಾರೆ. ನಾನು ಮತ್ತೊಮ್ಮೆ ಪಕ್ಷವನ್ನು ಸಂಘಟಿಸಿ ತೋರಿಸುತ್ತೇನೆ. ಮಮತಾ ಬ್ಯಾನರ್ಜಿ, ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹಲವು ನಾಯಕರು ನನ್ನ ಜೊತೆಗಿದ್ದಾರೆ. ನಿಮ್ಮ ಜೊತೆ ನಾವಿದ್ದೇವೆ ಅಂತಾ ನಾಯಕರು ನನಗೆ ಹೇಳಿದ್ದಾರೆ ಎಂದರು.

ಇದನ್ನೂ ಓದಿ: Maharashtra Politics: ಜನರು ಈ ಆಟವನ್ನು ಸಹಿಸುವುದಿಲ್ಲ: ಶಿಂದೆ ಸರ್ಕಾರ ಸೇರಿದ ಅಜಿತ್ ಪವಾರ್ ವಿರುದ್ಧ ಗುಡುಗಿದ ಸಂಜಯ್ ರಾವತ್

ಎನ್​ಸಿಪಿ ಯಾರದ್ದು ಎಂಬುದನ್ನು ಜನರ ಸಾಬೀತುಪಡಿಸುತ್ತಾರೆ. ಪಕ್ಷ ವಿರೋಧಿ ಚಟುವಟಿಕೆ ನಡೆಸುವವರ ವಿರುದ್ಧ ಕ್ರಮಕೈಗೊಳ್ಳುತ್ಥೇನೆ. ಕೆಲ ದಿನಗಳಲ್ಲಿ ಎಲ್ಲ ಸತ್ಯವೂ ಹೊರ ಬರಲಿದೆ. ಮಹಾರಾಷ್ಟ್ರದ ಜನರ ಮೇಲೆ ನನಗೆ ಸಂಪೂರ್ಣ ವಿಶ್ವಾಸವಿದೆ ಎಂದು ಶರದ್ ಪವಾರ್ ಹೇಳಿದರು.

ಬಿಜೆಪಿ-ಶಿಂಧೆ ಸಮ್ಮಿಶ್ರ ಸರ್ಕಾರಕ್ಕೆ ಅಜಿತ್ ‘ಪವಾರ್’

ಎನ್​ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರ ಸೋದರಳಿನಾಗಿರುವ ಅಜಿತ್ ಪವಾರ್, ಪಕ್ಷದೊಳಗಿನ ಆಂತರಿಕ ಬೆಳವಣಿಗೆಯಿಂದಲೇ ಅಸಮಾಧಾನಗೊಂಡು ಇಂದು ಆಡಳಿತ ಪಕ್ಷ ಬಿಜೆಪಿ ಮತ್ತು ಸಿಎಂ ಏಕನಾಥ್ ಶಿಂಧೆ ಬಣದ ಜೊತೆ ಕೈ ಜೋಡಿಸಿದ್ದಾರೆ. ಅದರಂತೆ ಇಂದೇ ಡಿಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಜಿತ್ ಪವಾರ್ 9 ನಾಯಕರೊಂದಿಗೆ ಮಹಾರಾಷ್ಟ್ರ ಸರ್ಕಾರಕ್ಕೆ ಸೇರ್ಪಡೆಗೊಂಡಿದ್ದಾರೆ. ಪಕ್ಷದ ಮೂಲಗಳ ಪ್ರಕಾರ, 53 ಎನ್‌ಸಿಪಿ ಶಾಸಕರ ಪೈಕಿ 43 ಶಾಸಕರ ಬೆಂಬಲವನ್ನು ಅಜಿತ್ ಪವಾರ್ ಹೊಂದಿದ್ದಾರೆ.

ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:01 pm, Sun, 2 July 23

ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ