ಜಾರ್ಖಂಡ್ ಸಿಎಂ ಆಗಿ ನಾಲ್ಕನೇ ಬಾರಿ ಜೆಎಂಎಂ ನಾಯಕ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ
ಜೆಎಂಎಂ ನಾಯಕ ಹೇಮಂತ್ ಸೊರೇನ್ ಅವರು ಜಾರ್ಖಂಡ್‌ನ ರಾಂಚಿಯಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ಜಾರ್ಖಂಡ್‌ನ 14ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಈ ಸಮಾರಂಭದಲ್ಲಿ ಇಂಡಿಯ ಬ್ಲಾಕ್‌ನ ಹಲವಾರು ಹಿರಿಯ ನಾಯಕರು ಭಾಗವಹಿಸಿದ್ದರು.
ರಾಂಚಿ: ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ನಾಯಕ ಹೇಮಂತ್ ಸೊರೇನ್ ಇಂದು (ಗುರುವಾರ) ರಾಂಚಿಯಲ್ಲಿ ಜಾರ್ಖಂಡ್‌ನ 14ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಜಾರ್ಖಂಡ್ ರಾಜ್ಯಪಾಲ ಸಂತೋಷ್ ಕುಮಾರ್ ಗಂಗ್ವಾರ್ ಅವರು ಹೇಮಂತ್ ಸೊರೇನ್ ಅವರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದ್ದಾರೆ. ಇದು ಮುಖ್ಯಮಂತ್ರಿಯಾಗಿ ಹೇಮಂತ್ ಸೊರೇನ್ ಅವರ ನಾಲ್ಕನೇ ಅವಧಿಯಾಗಿದೆ.
ಹೇಮಂತ್ ಸೊರೇನ್ ಸರ್ಕಾರದ ಪ್ರಮಾಣ ವಚನ ಸ್ವೀಕಾರದ ಹಿನ್ನೆಲೆಯಲ್ಲಿ ರಾಂಚಿ ನಗರದಲ್ಲಿ ಇಂದು ಶಾಲೆಗಳನ್ನು ಮುಚ್ಚಲಾಗಿತ್ತು. ಹೇಮಂತ್ ಸೋರೆನ್ ಪ್ರಮಾಣ ವಚನ ಸ್ವೀಕಾರ ಸಮಾರಂಭ ರಾಂಚಿಯ ಮೊರಾಬಾಡಿ ಮೈದಾನದಲ್ಲಿ ನಡೆಯಿತು. ರಾಜ್ಯಪಾಲ ಸಂತೋಷ್ ಕುಮಾರ್ ಗಂಗ್ವಾರ್ ಪ್ರಮಾಣ ವಚನ ಬೋಧಿಸಿದರು. ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ನೇತೃತ್ವದ ಇಂಡಿಯಾ ಬ್ಲಾಕ್ ಈ ಕಾರ್ಯಕ್ರಮವನ್ನು ಏಕತೆಯ ಪ್ರದರ್ಶನವಾಗಿ ಆಯೋಜಿಸಿತು.
#WATCH | Ranchi: RJD leader Tejashwi Yadav, Congress leader Tariq Anwar, SP chief Akhilesh Yadav, Independent MP Pappu Yadav and others arrive at the oath ceremony of Jharkhand CM-designate Hemant Soren. pic.twitter.com/VRZgWnysRu
— ANI (@ANI) November 28, 2024
ಇದನ್ನೂ ಓದಿ: ಜಾರ್ಖಂಡ್ ಸಿಎಂ ಆಗಿ ನಾಳೆ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ ಸಾಧ್ಯತೆ
ಹೇಮಂತ್ ಸೊರೇನ್ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಮತ್ತು ಬಿಹಾರದ ವಿರೋಧ ಪಕ್ಷದ ನಾಯಕ ತೇಜಸ್ವಿ ಯಾದವ್ ಸೇರಿದಂತೆ ಹಲವು ನಾಯಕರು ಉಪಸ್ಥಿತರಿದ್ದರು.
JMM executive president Hemant Soren takes oath as the 14th Chief Minister of Jharkhand, in Ranchi. #HemantSoren | pic.twitter.com/Z6s2oxNg64
— All India Radio News (@airnewsalerts) November 28, 2024
ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಇಂಡಿಯ ಬ್ಲಾಕ್ 56 ಸ್ಥಾನಗಳನ್ನು ಗಳಿಸಿ ವಿಜಯದತ್ತ ದಾಪುಗಾಲು ಹಾಕಿತು. 81 ಸದಸ್ಯ ಬಲದ ಜಾರ್ಖಂಡ್ ವಿಧಾನಸಭೆಯಲ್ಲಿ ಜೆಎಂಎಂ ನೇತೃತ್ವದ ಇಂಡಿಯಾ ಬ್ಲಾಕ್ 56 ಸ್ಥಾನಗಳನ್ನು ಗಳಿಸಿದರೆ, ಬಿಜೆಪಿ ನೇತೃತ್ವದ ಎನ್‌ಡಿಎ 24 ಸ್ಥಾನಗಳನ್ನು ಗಳಿಸಿತು. ವಿಧಾನಸಭಾ ಚುನಾವಣೆಯಲ್ಲಿ ಹೇಮಂತ್ ಸೊರೆನ್ 39,791 ಮತಗಳ ಅಂತರದಿಂದ ಬಿಜೆಪಿಯ ಗಮ್ಲಿಯೆಲ್ ಹೆಂಬ್ರೋಮ್ ಅವರನ್ನು ಸೋಲಿಸುವ ಮೂಲಕ ಬರ್ಹೈತ್ ಸ್ಥಾನವನ್ನು ಉಳಿಸಿಕೊಂಡರು.
VIDEO | JMM executive president Hemant Soren (@HemantSorenJMM) takes oath as Jharkhand CM at Morabadi Maidan in Ranchi. #HemantSoren pic.twitter.com/l1eOjtk2Fb
— Press Trust of India (@PTI_News) November 28, 2024
ಇದನ್ನೂ ಓದಿ: ಪ್ರಜಾಪ್ರಭುತ್ವದ ಪರೀಕ್ಷೆಯಲ್ಲಿ ಗೆದ್ದೆವು; ಜಾರ್ಖಂಡ್ ಚುನಾವಣೆಯಲ್ಲಿ ಜೆಎಂಎಂ ಗೆಲುವಿಗೆ ಹೇಮಂತ್ ಸೊರೇನ್ ಸಂತಸ
ಆಪಾದಿತ ಭೂ ಹಗರಣಕ್ಕೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಈ ವರ್ಷದ ಆರಂಭದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಹೇಮಂತ್ ಸೊರೇನ್ ಅವರನ್ನು ಬಂಧಿಸಿತ್ತು. ಹೇಮಂತ್ ಸೊರೇನ್ ಅವರು ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಇಂಡಿಯ ಬಣಕ್ಕೆ ಅದ್ಭುತ ಪುನರಾಗಮನವನ್ನು ನಡೆಸಿದರು. ಎಕ್ಸಿಟ್ ಪೋಲ್ ಭವಿಷ್ಯವನ್ನು ಧಿಕ್ಕರಿಸಿ, ಹೇಮಂತ್ ಸೋರೆನ್ ಅವರ ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ), ಕಾಂಗ್ರೆಸ್, ಆರ್‌ಜೆಡಿ ಮತ್ತು ಸಿಪಿಐ-ಎಂಎಲ್ ಜೊತೆಗಿನ ಮೈತ್ರಿಯಲ್ಲಿ 81 ಅಸೆಂಬ್ಲಿ ಸ್ಥಾನಗಳಲ್ಲಿ 56 ಸ್ಥಾನಗಳನ್ನು ಗಳಿಸಿತು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 4:53 pm, Thu, 28 November 24