ನಾಲ್ಕು ವರ್ಷಗಳ ಬಳಿಕ ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯ(ಜೆಎನ್‌ಯು)ವು ಚುನಾವಣೆಯನ್ನು ನಡೆಸಲು ಮುಂದಾಗಿದೆ. ಮಾರ್ಚ್ 22ರಂದು ಚುನಾವಣೆ ನಡೆಯಲಿದ್ದು, 24ಕ್ಕೆ ಫಲಿತಾಂಶ ಹೊರಬರಲಿದೆ. ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ ವಿದ್ಯಾರ್ಥಿ ಒಕ್ಕೂಟ ಚುನಾವಣೆಯು ಕೊನೆಯದಾಗಿ 2019ರಲ್ಲಿ ನಡೆದಿತ್ತು. ಜೆಎನ್‌ಯು ಚುನಾವಣಾ ಸಮಿತಿಯು ಮಾರ್ಚ್ 11ರಂದು ಮತದಾರರ ಪಟ್ಟಿಯನ್ನು ತಯಾರಿಸಿದೆ. ಮಾರ್ಚ್ 14ರಿಂದ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ಶುರುವಾಗಲಿದೆ.
ಕೊರೊನಾದಿಂದಾಗಿ ನಿಂತಿತ್ತು ಚುನಾವಣೆ
ಕೊರೊನಾ ಮಹಾಮಾರಿಯಿಂದಾಗಿ ಚುನಾವಣೆಯನ್ನು ತಡೆಹಿಡಿಯಲಾಗಿತ್ತು. ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳು ಚುನಾವಣಾ ಕೆಲಸದಲ್ಲಿ ತೊಡಗಿದ್ದಾರೆ. ಅಧಿಸೂಚನೆ ಪ್ರಕಾರ, ಮಾರ್ಚ್ 12ರಂದು ಮತದಾರರ ಪಟ್ಟಿಯಲ್ಲಿ ತಿದ್ದುಪಡಿಗಳನ್ನು ಮಾಡಬಹುದು. ಇದಾದ ನಂತರ ಮರುದಿನ ಮಾರ್ಚ್ 15ರಂದು ನಾಮಪತ್ರಗಳನ್ನು ಭರ್ತಿ ಮಾಡಲಾಗುತ್ತದೆ. ಯಾವುದೇ ಹೆಸರನ್ನು ತೆಗೆದುಹಾಕಲು ಬಯಸಿದರೆ ಅವರು ಮಾರ್ಚ್ 16ರಂದು ನಾಮಪತ್ರ ಹಿಂಪಡೆಯಬಹುದು.
ಬೆಳಗ್ಗೆ 9ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಮಧ್ಯಾಹ್ನ 2.30ರಿಂದ ಸಂಜೆ 5.30ರವರೆಗೆ ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ಬ್ಯಾಲೆಟ್ ಪೇಪರ್ ಮೂಲಕ ಮಾತ್ರ ಚುನಾವಣೆ ನಡೆಸಲಾಗುವುದು. 42 ಸದಸ್ಯರ ಚುನಾವಣಾ ಸಮಿತಿಯನ್ನು ರಚಿಸಲಾಗಿದೆ. ಇದರೊಂದಿಗೆ 29 ವೀಕ್ಷಕರನ್ನೂ ನೇಮಿಸಲಾಗಿದೆ. ಪ್ರಾಧ್ಯಾಪಕರನ್ನು ಮೇಲ್ವಿಚಾರಕರನ್ನಾಗಿ ಮಾಡಲಾಗಿದೆ.
ಮತ್ತಷ್ಟು ಓದಿ: ಜೆಎನ್ಯುನಲ್ಲಿ ಪೆರಿಯಾರ್, ಕಾರ್ಲ್ ಮಾರ್ಕ್ಸ್ ಭಾವಚಿತ್ರಗಳ ಧ್ವಂಸ: ವಿದ್ಯಾರ್ಥಿಗಳ ಈ ನಡೆಗೆ ಸ್ಟಾಲಿನ್ ಪ್ರತಿಕ್ರಿಯೆ
ಕೋವಿಡ್ ಸಾಂಕ್ರಾಮಿಕ ರೋಗದಿಂದಾಗಿ ಚುನಾವಣೆಗಳು ಸ್ಥಗಿತಗೊಂಡಿವೆ. ಎಲ್ಲಾ ವಿದ್ಯಾರ್ಥಿ ಸಂಘಟನೆಗಳು ಚುನಾವಣೆಗಾಗಿ ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದವು. ಜೆಎನ್‌ಯು ಆಡಳಿತವು ಫೆಬ್ರವರಿಯಲ್ಲಿ ಚುನಾವಣೆಗೆ ಒಪ್ಪಿಗೆ ನೀಡಲಾಗಿತ್ತು.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 8:14 am, Tue, 12 March 24