AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯ ಜೆಎನ್‌ಯು ವಿದ್ಯಾರ್ಥಿನಿಗೆ ಮದುವೆಯಾಗುವುದಾಗಿ ನಂಬಿಸಿ, ವ್ಯಕ್ತಿಯಿಂದ ಅತ್ಯಾಚಾರ

ದೆಹಲಿ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ವಿದ್ಯಾರ್ಥಿನಿಯೊಬ್ಬಳಿಗೆ ಮದುವೆ ಮಾಡಿಕೊಳ್ಳುವುದಾಗಿ ಭರವಸೆ ನೀಡಿ ಆಕೆಯ ಜತೆಗೆ ಲೈಂಗಿಕ ಸಂಪರ್ಕ ಹೊಂದಿದ್ದು. ಇದೀಗ ಮದುವೆಯಾಗುವುದಿಲ್ಲ ಎಂದು ಹೇಳಿ, ಆಕೆಗೆ ಮೋಸ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ದೆಹಲಿಯ ಜೆಎನ್‌ಯು ವಿದ್ಯಾರ್ಥಿನಿಗೆ ಮದುವೆಯಾಗುವುದಾಗಿ ನಂಬಿಸಿ, ವ್ಯಕ್ತಿಯಿಂದ ಅತ್ಯಾಚಾರ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on: Sep 14, 2023 | 1:28 PM

Share

ದೆಹಲಿ, ಸೆ.14: ವಿದ್ಯಾರ್ಥಿನಿಯೊಬ್ಬಳಿಗೆ ಮದುವೆಯಾಗುದಾಗಿ ನಂಬಿಸಿ ಆಕೆಯ ಜತೆಗೆ ದೈಹಿಕ ಸಂಪರ್ಕ ನಡೆಸಿ, ಇದೀಗ ಮದುವೆಯಾಗುವುದಿಲ್ಲ ಎಂದು ಮೋಸ ಮಾಡಿರುವ ಘಟನೆ ಉತ್ತರ ದೆಹಲಿಯ (Delhi) ವಜೀರಾಬಾದ್ ಪ್ರದೇಶದಲ್ಲಿ ನಡೆದಿದೆ. ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ವಿದ್ಯಾರ್ಥಿನಿಯೊಬ್ಬಳಿಗೆ ಮದುವೆ ಮಾಡಿಕೊಳ್ಳುವುದಾಗಿ ಭರವಸೆ ನೀಡಿ ಆಕೆಯ ಜತೆಗೆ ಲೈಂಗಿಕ ಸಂಪರ್ಕ ಹೊಂದಿದ್ದು. ಇದೀಗ ಮದುವೆಯಾಗುವುದಿಲ್ಲ ಎಂದು ಹೇಳಿ, ಆಕೆಗೆ ಮೋಸ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರು ತಿಳಿಸಿರುವ ಪ್ರಕಾರ ಆರೋಪಿ ದಕ್ಷಿಣ ದೆಹಲಿಯ ಜೆಎನ್‌ಯು ಕ್ಯಾಂಪಸ್‌ನ ನಿವಾಸಿಯಾಗಿದ್ದು, ಸುಮಾರು ನಾಲ್ಕು ವರ್ಷಗಳ ಹಿಂದೆ ಸಂಘಟನೆಯೊಂದರ ಮೂಲಕ ಆರೋಪಿಯನ್ನು ಈ ವಿದ್ಯಾರ್ಥಿನಿ ಭೇಟಿಯಾಗಿದ್ದಾಳೆ ಎಂದು ಪೊಲೀಸರು ಹೇಳಿದ್ದಾರೆ.

ನಂತರ ಇಬ್ಬರ ನಡುವೆ ಸ್ನೇಹವಾಗಿ ಮದುವೆ ಹಂತಕ್ಕೆ ಹೋಗಿದೆ. ಏಪ್ರಿಲ್ 3 ರಂದು ಆಕೆಯನ್ನು ಆರೋಪಿಯು ವಜೀರಾಬಾದ್‌ನಲ್ಲಿರುವ ಫ್ಲಾಟ್‌ಗೆ ಕರೆಸಿಕೊಂಡು. ಆಕೆಗೆ ಮದುವೆಯಾಗುವುದಾಗಿ ಭರವಸೆ ನೀಡಿದ್ದಾನೆ. ಬಳಿಕ ಆಕೆಯ ಜತೆಗೆ ಲೈಂಗಿಕ ಸಂಪರ್ಕ ನಡೆಸಿ, ಇದೀಗ ಆಕೆಯನ್ನು ಮದುವೆಯಾಗುವುದಿಲ್ಲ ಎಂದು ಹೇಳಿದ್ದಾನೆ. ಈ ಬಗ್ಗೆ ವಿದ್ಯಾರ್ಥಿನಿ ದೂರು ನೀಡಿದ್ದು, ಸೂಕ್ತ ಕ್ರಮವನ್ನು ತೆಗೆದುಕೊಳ್ಳಲಾಗುವುದು ಎಂದು ಪೊಲೀಸ್ ಅಧಿಕಾರಿ ಸಾಗರ್ ಸಿಂಗ್ ಕಲ್ಸಿ ಹೇಳಿದ್ದಾರೆ.

ಇದನ್ನೂ ಓದಿ: ಬ್ರಾಹ್ಮಣರೇ ಕ್ಯಾಂಪಸ್ ಬಿಟ್ಟು ತೊಲಗಿ; ಜೆಎನ್​ಯು ಗೋಡೆಗಳಲ್ಲಿ ಬ್ರಾಹ್ಮಣ ವಿರೋಧಿ ಘೋಷಣೆ

ಆರೋಪಿಯ ಮೇಲೆ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 376 (ಅತ್ಯಾಚಾರ) ಅಡಿಯಲ್ಲಿ ವಜೀರಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ ಮತ್ತು ಈಗಾಗಲೇ ತನಿಖೆಯನ್ನು ಪ್ರಾರಂಭಿಸಲಾಗಿದೆ ಎಂದು ಪೊಲೀಸ್​​ ಅಧಿಕಾರಿ ಸಾಗರ್ ಸಿಂಗ್ ಕಲ್ಸಿ ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!