ದೆಹಲಿ, ಸೆ.14: ವಿದ್ಯಾರ್ಥಿನಿಯೊಬ್ಬಳಿಗೆ ಮದುವೆಯಾಗುದಾಗಿ ನಂಬಿಸಿ ಆಕೆಯ ಜತೆಗೆ ದೈಹಿಕ ಸಂಪರ್ಕ ನಡೆಸಿ, ಇದೀಗ ಮದುವೆಯಾಗುವುದಿಲ್ಲ ಎಂದು ಮೋಸ ಮಾಡಿರುವ ಘಟನೆ ಉತ್ತರ ದೆಹಲಿಯ (Delhi) ವಜೀರಾಬಾದ್ ಪ್ರದೇಶದಲ್ಲಿ ನಡೆದಿದೆ. ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ವಿದ್ಯಾರ್ಥಿನಿಯೊಬ್ಬಳಿಗೆ ಮದುವೆ ಮಾಡಿಕೊಳ್ಳುವುದಾಗಿ ಭರವಸೆ ನೀಡಿ ಆಕೆಯ ಜತೆಗೆ ಲೈಂಗಿಕ ಸಂಪರ್ಕ ಹೊಂದಿದ್ದು. ಇದೀಗ ಮದುವೆಯಾಗುವುದಿಲ್ಲ ಎಂದು ಹೇಳಿ, ಆಕೆಗೆ ಮೋಸ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಪೊಲೀಸರು ತಿಳಿಸಿರುವ ಪ್ರಕಾರ ಆರೋಪಿ ದಕ್ಷಿಣ ದೆಹಲಿಯ ಜೆಎನ್‌ಯು ಕ್ಯಾಂಪಸ್‌ನ ನಿವಾಸಿಯಾಗಿದ್ದು, ಸುಮಾರು ನಾಲ್ಕು ವರ್ಷಗಳ ಹಿಂದೆ ಸಂಘಟನೆಯೊಂದರ ಮೂಲಕ ಆರೋಪಿಯನ್ನು ಈ ವಿದ್ಯಾರ್ಥಿನಿ ಭೇಟಿಯಾಗಿದ್ದಾಳೆ ಎಂದು ಪೊಲೀಸರು ಹೇಳಿದ್ದಾರೆ.
ನಂತರ ಇಬ್ಬರ ನಡುವೆ ಸ್ನೇಹವಾಗಿ ಮದುವೆ ಹಂತಕ್ಕೆ ಹೋಗಿದೆ. ಏಪ್ರಿಲ್ 3 ರಂದು ಆಕೆಯನ್ನು ಆರೋಪಿಯು ವಜೀರಾಬಾದ್‌ನಲ್ಲಿರುವ ಫ್ಲಾಟ್‌ಗೆ ಕರೆಸಿಕೊಂಡು. ಆಕೆಗೆ ಮದುವೆಯಾಗುವುದಾಗಿ ಭರವಸೆ ನೀಡಿದ್ದಾನೆ. ಬಳಿಕ ಆಕೆಯ ಜತೆಗೆ ಲೈಂಗಿಕ ಸಂಪರ್ಕ ನಡೆಸಿ, ಇದೀಗ ಆಕೆಯನ್ನು ಮದುವೆಯಾಗುವುದಿಲ್ಲ ಎಂದು ಹೇಳಿದ್ದಾನೆ. ಈ ಬಗ್ಗೆ ವಿದ್ಯಾರ್ಥಿನಿ ದೂರು ನೀಡಿದ್ದು, ಸೂಕ್ತ ಕ್ರಮವನ್ನು ತೆಗೆದುಕೊಳ್ಳಲಾಗುವುದು ಎಂದು ಪೊಲೀಸ್ ಅಧಿಕಾರಿ ಸಾಗರ್ ಸಿಂಗ್ ಕಲ್ಸಿ ಹೇಳಿದ್ದಾರೆ.
ಇದನ್ನೂ ಓದಿ: ಬ್ರಾಹ್ಮಣರೇ ಕ್ಯಾಂಪಸ್ ಬಿಟ್ಟು ತೊಲಗಿ; ಜೆಎನ್‌ಯು ಗೋಡೆಗಳಲ್ಲಿ ಬ್ರಾಹ್ಮಣ ವಿರೋಧಿ ಘೋಷಣೆ
ಆರೋಪಿಯ ಮೇಲೆ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 376 (ಅತ್ಯಾಚಾರ) ಅಡಿಯಲ್ಲಿ ವಜೀರಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ ಮತ್ತು ಈಗಾಗಲೇ ತನಿಖೆಯನ್ನು ಪ್ರಾರಂಭಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ಸಾಗರ್ ಸಿಂಗ್ ಕಲ್ಸಿ ಹೇಳಿದ್ದಾರೆ.