JNU Violence: ABVP, ಎಡ ಬೆಂಬಲಿತ ಗುಂಪುಗಳ ನಡುವೆ ತಡರಾತ್ರಿ ಸಂಘರ್ಷ, ವಿಡಿಯೋ ವೈರಲ್
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಮತ್ತು ಎಡ ಬೆಂಬಲಿತ ಗುಂಪುಗಳ ಸದಸ್ಯರಗಳ ನಡುವೆ ಘರ್ಷಣೆ ನಡೆದಿದೆ. ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಮೂವರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ವಿಶ್ವವಿದ್ಯಾನಿಲಯದ ಸ್ಕೂಲ್ ಆಫ್ ಲ್ಯಾಂಗ್ವೇಜಸ್ ಕಟ್ಟಡದಲ್ಲಿ ಗುರುವಾರ ತಡರಾತ್ರಿ ಹಿಂಸಾಚಾರ ಸಂಭವಿಸಿದೆ. ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ( ಎಬಿವಿಪಿ ) ಮತ್ತು ಎಡ ಬೆಂಬಲಿತ ಗುಂಪುಗಳ ವಿದ್ಯಾರ್ಥಿಗಳು ಪರಸ್ಪರರ ವಿರುದ್ಧ ಪೊಲೀಸ್ ದೂರು ನೀಡಿದ್ದಾರೆ.
ದೆಹಲಿ, ಮಾ.1: ಗುರುವಾರ (ಮಾ.1) ರಾತ್ರಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಮತ್ತು ಎಡ ಬೆಂಬಲಿತ ಗುಂಪುಗಳ ಸದಸ್ಯರಗಳ ನಡುವೆ ಘರ್ಷಣೆ ನಡೆದಿದೆ. ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಮೂವರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಚುನಾವಣಾ ಸಮಿತಿ ಸದಸ್ಯರ ಆಯ್ಕೆ ವಿಚಾರವಾಗಿ ಎರಡು ಗುಂಪುಗಳ ನಡುವೆ ಈ ಘರ್ಷಣೆ ನಡೆದಿದೆ. ಈ ಸಂಘರ್ಷದಲ್ಲಿ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಈ ಬಗ್ಗೆ ತಕ್ಷಣದಲ್ಲೇ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಉಪಕುಲಪತಿ ಶಾಂತಿಶ್ರೀ ಡಿ ಪಂಡಿತ್ ಶುಕ್ರವಾರ ಹೇಳಿದ್ದಾರೆ.
ವಿಶ್ವವಿದ್ಯಾನಿಲಯದ ಸ್ಕೂಲ್ ಆಫ್ ಲ್ಯಾಂಗ್ವೇಜಸ್ ಕಟ್ಟಡದಲ್ಲಿ ಗುರುವಾರ ತಡರಾತ್ರಿ ಹಿಂಸಾಚಾರ ಸಂಭವಿಸಿದೆ. ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ( ಎಬಿವಿಪಿ ) ಮತ್ತು ಎಡ ಬೆಂಬಲಿತ ಗುಂಪುಗಳ ವಿದ್ಯಾರ್ಥಿಗಳು ಪರಸ್ಪರರ ವಿರುದ್ಧ ಪೊಲೀಸ್ ದೂರು ನೀಡಿದ್ದಾರೆ. ವಸಂತ್ ಕುಂಜ್ ಉತ್ತರ ಪೊಲೀಸ್ ಠಾಣೆಯಲ್ಲಿ ಈ ದೂರು ದಾಖಲಿಸಲಾಗಿದೆ. ಇನ್ನು ಗಾಯಗೊಂಡಿರುವ ವಿದ್ಯಾರ್ಥಿಗಳನ್ನು ಸಫ್ದರ್‌ಜಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವಿಶ್ವವಿದ್ಯಾಲಯದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಕ್ಯಾಂಪಸ್‌ನಲ್ಲಿ ನಡೆದ ಘರ್ಷಣೆಯ ಬಗ್ಗೆ ಮುಂಜಾನೆ 1.15 ಗಂಟೆಗೆ ಮಾಹಿತಿ ಪೊಲೀಸರಿಗೆ ಸಿಕ್ಕಿದೆ. ನಾಲ್ವರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ವಿದ್ಯಾರ್ಥಿಗಳ ಎರಡೂ ಕಡೆಯಿಂದ ಹಲವಾರು ದೂರುಗಳು ಬಂದಿವೆ. ಹೆಚ್ಚಿನ ವಿಚಾರಣೆ ನಡೆಯುತ್ತಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ.
#WATCH | Delhi | A clash broke out between ABVP and Left-backed student groups at Jawaharlal Nehru University (JNU), last night. The ruckus was reportedly over the selection of election committee members at the School of Languages.
(Video Source: JNU students) (Note: Abusive… pic.twitter.com/BfpFlhUM2T
— ANI (@ANI) March 1, 2024
ಜೆಎನ್‌ಯು (ವಿದ್ಯಾರ್ಥಿಗಳ ಒಕ್ಕೂಟ) ಚುನಾವಣೆಗಳನ್ನು ವಿದ್ಯಾರ್ಥಿಗಳು ನಡೆಸುತ್ತಾರೆ. ಇದು ಶಾಂತಿಯುತ ಪ್ರಜಾಪ್ರಭುತ್ವ ಪ್ರಕ್ರಿಯೆಯ ಮೂಲಕ ನಡೆಸಲಾಗುತ್ತದೆ. ಇದನ್ನು ಇಂಟರ್-ಹಾಸ್ಟೆಲ್ ಆಡಳಿತವು (ಐಎಚ್‌ಎ) ಚುನಾವಣೆಯ ನಿರ್ವಹಣೆಯನ್ನು ಮೇಲ್ವಿಚಾರಣೆ ಮಾಡುತ್ತದೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದೆ. ಹಿಂಸಾಚಾರದಲ್ಲಿ ತೀವ್ರವಾಗಿ ಗಾಯಗೊಂಡ ವಿದ್ಯಾರ್ಥಿಗಳ ವೈದ್ಯಕೀಯ ಚಿಕಿತ್ಸೆ ಮುಗಿದ ನಂತರ ಸಂಬಂಧಪಟ್ಟ ಪ್ರಾಧಿಕಾರವು ವರದಿಯನ್ನು ಸಿದ್ಧಪಡಿಸಿ ಸೂಕ್ತ ಕ್ರಮ ತೆಗೆದುಕೊಳ್ಳುತ್ತದೆ ಎಂದು ಉಪಕುಲಪತಿ ಹೇಳಿದರು.
ಇನ್ನು ಘಟನೆಯ ಬಗ್ಗೆ ಒಂದು ವಿಡಿಯೋ ಕೂಡ ವೈರಲ್ ಆಗಿದೆ.ಆ ವಿಡಿಯೋದಲ್ಲಿ ವ್ಯಕ್ತಿಯೊಬ್ಬ ವಿದ್ಯಾರ್ಥಿಗಳನ್ನು ಕೋಲಿನಿಂದ ಥಳಿಸುತ್ತಿರುವುದನ್ನು ತೋರಿಸಿತ್ತದೆ, ಮತ್ತೊಂದರಲ್ಲಿ ವ್ಯಕ್ತಿಯೊಬ್ಬ ವಿದ್ಯಾರ್ಥಿಗಳ ಮೇಲೆ ಬೈಸಿಕಲ್ ಎಸೆದಿರುವುದು ಕಾಣಬಹುದು. ವಿಶ್ವವಿದ್ಯಾನಿಲಯದ ಭದ್ರತಾ ಸಿಬ್ಬಂದಿ ವಿದ್ಯಾರ್ಥಿಗಳ ನಡುವೆ ನಡೆಯುತ್ತಿದ್ದ ಘರ್ಷಣೆಯನ್ನು ತಡೆಯಲು ಮುಂದಾಗಿದ್ದಾರೆ.
ಇದನ್ನೂ ಓದಿ: ತಡವಾಗಿ ಬಂದಿದ್ದಕ್ಕೆ ಪರೀಕ್ಷೆ ಬರೆಯಲು ಸಿಗಲಿಲ್ಲ ಅವಕಾಶ, ವಿದ್ಯಾರ್ಥಿ ಆತ್ಮಹತ್ಯೆ
ಎಬಿವಿಪಿ ಪಿಟಿಐಗೆ ನೀಡಿದ ವಿಡಿಯೋ ಪ್ರಕಾರ ಇಬ್ಬರು ವಿದ್ಯಾರ್ಥಿಗಳು ಇತರರನ್ನು ಕೋಲಿನಿಂದ ಹೊಡೆಯುತ್ತಿದ್ದಾರೆ ಮತ್ತು ಬೈಸಿಕಲ್ ಎಸೆಯುತ್ತಿದ್ದಾರೆ. ಈ ಕೃತ್ಯವನ್ನು ಮಾಡುತ್ತಿರುವುದು ಜೆಎನ್‌ಯು ಘಟಕದ ಸದಸ್ಯರು ಎಂದು ಹೇಳಲಾಗಿದೆ. ಮತ್ತೊಂದೆಡೆ ಎಡ ಬೆಂಬಲಿತ ವಿದ್ಯಾರ್ಥಿಗಳು ಚುನಾವಣಾ ಸಮಿತಿ ಸದಸ್ಯರ ಆಯ್ಕೆಯಾಗಿದ್ದಾರೆ. ಇದರಿಂದ ಅಸಮಾಧಾನಗೊಂಡ ಎಬಿವಿಪಿ ಸದಸ್ಯರು ಜೆಎನ್‌ಯುಎಸ್‌ಯು ಪದಾಧಿಕಾರಿಗಳು ಮತ್ತು ಇತರ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 11:43 am, Fri, 1 March 24