ಜಿ20 ಶೃಂಗಸಭೆಯು ವಿಶ್ವದ ಪ್ರಮುಖ ಸಮಸ್ಯೆಗಳನ್ನು ಪರಿಹರಿಸಬಹುದೆಂದು ಸಾಬೀತುಪಡಿಸಿದೆ: ಜೋ ಬೈಡನ್
ಈ ಜಿ20 ಶೃಂಗಸಭೆಯಿಂದ ವಿಶ್ವದ ಪ್ರಮುಖ ಸಮಸ್ಯೆಗಳನ್ನು ಪರಿಹರಿಸಬಹುದೆಂದು ಸಾಬೀತುಪಡಿಸಿದೆ ಎಂದು ಅಮೆರಿಕ ಅಧ್ಯಕ್ಷ ಜೋ ಬೈಡನ್ ತಿಳಿಸಿದ್ದಾರೆ. ಜೋ ಬೈಡನ್ ಜಿ20 ಶೃಂಗಸಭೆಯ ಎರಡನೇ ಅಧಿವೇಶನದಲ್ಲಿ ಭಾಗವಹಿಸುತ್ತಿಲ್ಲ, ಭಾನುವಾರ ಬೆಳಗ್ಗೆ ವಿಯೆಟ್ನಾಂಗೆ ತೆರಳಿದ್ದಾರೆ. ಜಿ20 ಶೃಂಗಸಭೆಯನ್ನು ಶ್ಲಾಘಿಷಿಸಿರುವ ಜೋ ಬೈಡನ್ ಇದು ನಮ್ಮ ಪ್ರಮುಖ ಸಮಸ್ಯೆಗಳನ್ನು ಪರಿಹರಿಸಬಹುದು ಎಂಬುದನ್ನು ಸಾಬೀತುಪಡಿಸಿದೆ ಎಂದಿದ್ದಾರೆ.
ಈ ಜಿ20 ಶೃಂಗಸಭೆಯಿಂದ ವಿಶ್ವದ ಪ್ರಮುಖ ಸಮಸ್ಯೆಗಳನ್ನು ಪರಿಹರಿಸಬಹುದೆಂದು ಸಾಬೀತುಪಡಿಸಿದೆ ಎಂದು ಅಮೆರಿಕ ಅಧ್ಯಕ್ಷ ಜೋ ಬೈಡನ್(Joe Biden) ತಿಳಿಸಿದ್ದಾರೆ. ಜೋ ಬೈಡನ್ ಜಿ20 ಶೃಂಗಸಭೆಯ ಎರಡನೇ ಅಧಿವೇಶನದಲ್ಲಿ ಭಾಗವಹಿಸುತ್ತಿಲ್ಲ, ಭಾನುವಾರ ಬೆಳಗ್ಗೆ ವಿಯೆಟ್ನಾಂಗೆ ತೆರಳಿದ್ದಾರೆ. ಜಿ20 ಶೃಂಗಸಭೆಯನ್ನು ಶ್ಲಾಘಿಷಿಸಿರುವ ಜೋ ಬೈಡನ್ ಇದು ನಮ್ಮ ಪ್ರಮುಖ ಸಮಸ್ಯೆಗಳನ್ನು ಪರಿಹರಿಸಬಹುದು ಎಂಬುದನ್ನು ಸಾಬೀತುಪಡಿಸಿದೆ ಎಂದಿದ್ದಾರೆ.
ಜೋ ಬೈಡನ್ ಟ್ವೀಟ್ ಮಾಡಿದ್ದು, ಅದರಲ್ಲಿ ವಿಶ್ವದ ಆರ್ಥಿಕತೆಯು ಹವಾಮಾನ ಬಿಕ್ಕಟ್ಟು ಇನ್ನಿತರೆ ಸಮಸ್ಯೆಗಳಿಂದ ಬಳಲುತ್ತಿದೆ, ಈ ಶೃಂಗಸಭೆ ಈ ಎಲ್ಲಾ ಪ್ರಮುಖ ಸಮಸ್ಯೆಗಳನ್ನು ಪರಿಹರಿಸಬಲ್ಲದು. ಭಾರತ-ಪಶ್ಚಿಮ ಏಷ್ಯಾ-ಯುರೋಪ್‌ನ ಆರ್ಥಿಕ ಸಮಸ್ಯೆಗಳನ್ನು ಪರಿಹರಿಸಲು ಅಮೆರಿಕ, ಭಾರತ, ಸೌದಿ ಅರೇಬಿಯಾ, ಯುಎಇ, ಫ್ರಾನ್ಸ್, ಜರ್ಮನಿ, ಇಟಲಿ ಮತ್ತು ಯುರೋಪಿಯನ್ ಒಕ್ಕೂಟಗಳು ಒಪ್ಪಿಕೊಂಡಿವೆ, ಇದರಿಂದ ನನಗೆ ತುಂಬಾ ಸಂತೋಷವಾಗಿದೆ. ಇದಕ್ಕಾಗಿ ಐತಿಹಾಸಿಕ ಒಪ್ಪಂದವನ್ನು ಅಂತಿಮಗೊಳಿಸಲಾಗಿದೆ.
ಮತ್ತಷ್ಟು ಓದಿ: ಜಿ20- ಶೃಂಗಸಭೆ: ಹಸಿರು ಹವಾಮಾನ ನಿಧಿಗೆ 2 ಬಿಲಿಯನ್ ಡಾಲರ್ ಸಹಾಯ ಘೋಷಿಸಿದ ಬ್ರಿಟನ್ ಪ್ರಧಾನಿ ರಿಷಿ ಸುನಕ್
ದೆಹಲಿಯಿಂದ ಹೊರಡುವ ಮುನ್ನ ಬೈಡನ್ ರಾಜ್ಘಾಟ್ನಲ್ಲಿ ಮಹಾತ್ಮ ಗಾಂಧಿಗೆ ಗೌರವ ಸಲ್ಲಿಸಿದರು. ಇನ್ನು ವಿಯೆಟ್ನಾಂನಲ್ಲಿ ಅಮೆರಿಕ ಹಾಗೂ ವಿಯೆಟ್ನಾಂ ನಡುವಿನ ಸಹಕಾರದ ಕುರಿತು ಚರ್ಚೆ ನಡೆಸಲಿದ್ದಾರೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ