ಅಮೆರಿಕ ನೂತನ ಅಧ್ಯಕ್ಷ ಜೋ ಬೈಡನ್​ಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ

ಅಮೆರಿಕ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಜೋ ಬೈಡನ್​ಗೆ ನನ್ನ ಅಭಿನಂದನೆಗಳು. ಭಾರತ-ಅಮೆರಿಕ ಕಾರ್ಯತಂತ್ರದ ಸಹಭಾಗಿತ್ವವನ್ನು ಬಲಪಡಿಸಲು ಅವರೊಂದಿಗೆ ಕೆಲಸ ಮಾಡಲು ನಾನು ಬಯಸುತ್ತೇನೆ, ಎಂದು ಮೋದಿ ಟ್ವೀಟ್​ ಮಾಡಿದ್ದಾರೆ.

ಅಮೆರಿಕ ನೂತನ ಅಧ್ಯಕ್ಷ ಜೋ ಬೈಡನ್​ಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ
ಪ್ರಧಾನಿ ನರೇಂದ್ರ ಮೋದಿ

Updated on: Jan 20, 2021 | 11:09 PM

ನವದೆಹಲಿ: ಅಮೆರಿಕ 46ನೇ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಜೋ ಬೈಡನ್​ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ. ಭಾರತ-ಅಮೆರಿಕ ಕಾರ್ಯತಂತ್ರದ ಸಹಭಾಗಿತ್ವವನ್ನು ಬಲಪಡಿಸಲು ಅವರ ಜೊತೆ ಕೆಲಸ ಮಾಡಲು ನಾನು ಎದುರು ನೋಡುತ್ತೇನೆ ಎಂದು ಮೋದಿ ಹೇಳಿದ್ದಾರೆ.

ಅಮೆರಿಕ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಜೋ ಬೈಡನ್​ಗೆ ನನ್ನ ಅಭಿನಂದನೆಗಳು. ಭಾರತ-ಅಮೆರಿಕ ಕಾರ್ಯತಂತ್ರದ ಸಹಭಾಗಿತ್ವವನ್ನು ಬಲಪಡಿಸಲು ಅವರೊಂದಿಗೆ ಕೆಲಸ ಮಾಡಲು ನಾನು ಬಯಸುತ್ತೇನೆ, ಎಂದು ಮೋದಿ ಟ್ವೀಟ್​ ಮಾಡಿದ್ದಾರೆ.

ಸಾಮಾನ್ಯ ಸವಾಲುಗಳನ್ನು ಎದುರಿಸಲು ಮತ್ತು ಜಾಗತಿಕ ಶಾಂತಿ ಮತ್ತು ಸುರಕ್ಷತೆಯನ್ನು ಮುನ್ನಡೆಸುವಲ್ಲಿ ನಾವು ಒಗ್ಗಟ್ಟಿನಿಂದ ನಿಂತಿದ್ದೇವೆ. ಅಮೆರಿಕವನ್ನು ಅವರು ಯಶಸ್ವಿಯಾಗಿ ಮುನ್ನಡೆಸಲು ನನ್ನ ಶುಭಾಶಯ ಎಂದು ಮೋದಿ ಬರೆದುಕೊಂಡಿದ್ದಾರೆ.

ಭಾರತ ಮತ್ತು ಅಮೆರಿಕ ಸಂಬಂಧವನ್ನು ಇನ್ನೂ ಉನ್ನತ ಮಟ್ಟಕ್ಕೆ ಕೊಂಡು ಹೋಗಲು ಜೋ ಬೈಡನ್​ ಜೊತೆ ಕೆಲಸ ಮಾಡಲು ಬದ್ಧನಾಗಿದ್ದೇನೆ. ಎಂದು ಮೋದಿ ಹೇಳಿದರು.

Joe Biden Inauguration LIVE: ಅಮೆರಿಕ ಅಧ್ಯಕ್ಷರಾಗಿ ಜೋ ಬೈಡನ್​ ಅಧಿಕಾರ ಸ್ವೀಕಾರ

Published On - 11:08 pm, Wed, 20 January 21