AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭದ್ರತಾ ಪಡೆ ಮತ್ತು ಜಮ್ಮು ಕಾಶ್ಮೀರ ಪೊಲೀಸರ ಜಂಟಿ ಕಾರ್ಯಾಚರಣೆ: ಎಲ್‌ಇಟಿ ಉಗ್ರ ಸಂಘಟನೆಯ ನಂಟು ಹೊಂದಿದ್ದ ಮೂವರು ಅರೆಸ್ಟ್

ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮತ್ತು ಭದ್ರತಾ ಪಡೆಗಳು ಜಂಟಿ ಕಾರ್ಯಾಚರಣೆ ನಡೆಸಿ ಎಲ್‌ಇಟಿ ಉಗ್ರ ಸಂಘಟನೆಯೊಂದಿಗೆ ನಂಟು ಹೊಂದಿದ್ದ ಮೂವರನ್ನು ಬಂಧಿಸಿದ್ದಾರೆ. ಉತ್ತರ ಕಾಶ್ಮೀರದ ಸೊಪೋರ್‌ನಲ್ಲಿ ಅನುಮಾನಸ್ಪದವಾಗಿ ಓಡಾಡುತ್ತಿರುವುದನ್ನು ಗಮನಿಸಿ ವಿಚಾರಿಸಿದಾಗ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದಾರೆ. ಈ ವೇಳೆ ಮೂವರನ್ನು ಬಂಧಿಸಲಾಗಿದೆ.

ಭದ್ರತಾ ಪಡೆ ಮತ್ತು ಜಮ್ಮು ಕಾಶ್ಮೀರ ಪೊಲೀಸರ ಜಂಟಿ ಕಾರ್ಯಾಚರಣೆ: ಎಲ್‌ಇಟಿ ಉಗ್ರ ಸಂಘಟನೆಯ ನಂಟು ಹೊಂದಿದ್ದ ಮೂವರು ಅರೆಸ್ಟ್
ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳುImage Credit source: ANI
TV9 Web
| Edited By: Rakesh Nayak Manchi|

Updated on:Aug 27, 2022 | 8:02 AM

Share

ಸೋಪೋರ್: ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮತ್ತು ಭದ್ರತಾ ಪಡೆಗಳು ಜಂಟಿ ಕಾರ್ಯಾಚರಣೆ ನಡೆಸಿ ಲಷ್ಕರ್-ಎ-ತೊಯ್ಬಾ (LeT) ಭಯೋತ್ಪಾದಕ ಸಂಘಟನೆಯೊಂದಿಗೆ ನಂಟು ಹೊಂದಿದ್ದ ಮೂವರನ್ನು (OGWs) ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. 22 ರಾಷ್ಟ್ರೀಯ ರೈಫಲ್ಸ್ (RR), ಮತ್ತು 179 BN ಸೆಂಟ್ರಲ್ ರಿಸರ್ವ್ ಪೊಲೀಸ್ ಫೋರ್ಸ್ (CRPF) ಸೇರಿದಂತೆ ಭದ್ರತಾ ಪಡೆಗಳೊಂದಿಗೆ ಸೋಪೋರ್ ಜಿಲ್ಲೆಯ ಪೊಲೀಸರು ಶುಕ್ರವಾರ ಸಂಜೆ ಬೊಮೈ ಪೊಲೀಸ್ ಠಾಣೆ ವ್ಯಾಪ್ತಿಯ ಬೊಮೈ ಚೌಕ್‌ನಲ್ಲಿ ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸಿದರು.

ಶಾರಿಕ್ ಅಶ್ರಫ್, ಸಕ್ಲೇನ್ ಮುಷ್ತಾಕ್ ಮತ್ತು ತೌಫೀಕ್ ಹಸನ್ ಶೇಖ್ ಎಂಬವನ್ನು ಬಂಧಿಸಲಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಹೇಳಿದ್ದಾರೆ. ಉತ್ತರ ಕಾಶ್ಮೀರದ ಬೊಮೈ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪೊಲೀಸರು ಮತ್ತು ಭದ್ರತಾ ಪಡೆಗಳು ಜಂಟಿ ಕಾರ್ಯಾಚರಣೆ ಕೈಗೊಂಡಿದ್ದರು. ಈ ವೇಳೆ ಬೊಮೈ ಚೌಕ್‌ನಲ್ಲಿ ತಪಾಸಣೆ ನಡೆಸುತ್ತಿದ್ದಾಗ ಗೋರಿಪುರದಿಂದ ಬೊಮೈ ಕಡೆಗೆ ಬರುತ್ತಿದ್ದ ಮೂವರ ಅನುಮಾನಾಸ್ಪದ ಚಲನವಲನವನ್ನು ಗಮನಿಸಲಾಗಿದೆ. ಕೂಡಲೇ ಅವರನ್ನು ತಡೆದು ವಿಚಾರಣೆ ನಡೆಸಲಾಗಿದೆ. ಈ ವೇಳೆ ಅವರು ಪರಾರಿಯಾಗಲು ಪ್ರಯತ್ನಿಸಿದರು, ಆದರೆ ಭದ್ರತಾ ಪಡೆಗಳು ಚಾಕಚಕ್ಯತೆಯಿಂದ ಮೂವರನ್ನು ವಶಪಡಿಸಿಕೊಂಡರು ಎಂದು ಪೊಲೀಸರು ತಿಳಿಸಿದ್ದಾರೆ.

ವಿಚಾರಣೆ ವೇಳೆ ಉಗ್ರರ ಬಳಿ ಇದ್ದ ಮೂರು ಹ್ಯಾಂಡ್ ಗ್ರೆನೇಡ್‌ಗಳು, ಒಂಬತ್ತು ಪೋಸ್ಟರ್‌ಗಳು ಮತ್ತು 12 ಪಾಕಿಸ್ತಾನಿ ಧ್ವಜಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತರು ನಿಷೇಧಿತ ಭಯೋತ್ಪಾದಕ ಸಂಘಟನೆ ಸಹಚರರಾಗಿದ್ದಾರೆ. ಇವರು ಭದ್ರತಾ ಪಡೆಗಳು ಮತ್ತು ನಾಗರಿಕರ ಮೇಲೆ ದಾಳಿ ನಡೆಸಲು ಸಮಯಕ್ಕಾಗಿ ಕಾಯುತ್ತಿದ್ದರು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಉಗ್ರರ ವಿರುದ್ಧ ಬೋಮಾಯಿ ಪೊಲೀಸ್ ಠಾಣೆಯಲ್ಲಿ ಸಂಬಂಧಪಟ್ಟ ಕಾನೂನು ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಮುಂದುವರಿದಿದೆ.

ಮತ್ತಷ್ಟು ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:02 am, Sat, 27 August 22

Follow Us
Web contact
Web contact

TV9 Kannada

Read More
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!
ಕ್ಯಾಪ್ಸಿ ಆರ್ಭಟಕ್ಕೆ ತತ್ತರಿಸಿದ ಟೀಮ್ ಇಂಡಿಯಾ
ಕ್ಯಾಪ್ಸಿ ಆರ್ಭಟಕ್ಕೆ ತತ್ತರಿಸಿದ ಟೀಮ್ ಇಂಡಿಯಾ