ಚಂದ್ರಯಾನ-3ರ ಯಶಸ್ಸಿಗೆ ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಿದ ಅಮೆರಿಕ ಅಧ್ಯಕ್ಷ ಜೋ ಬೈಡನ್

PM Modi, Joe Biden Bilateral Talks; ಉಭಯ ದೇಶಗಳ ನಡುವೆ ರಾಜಕೀಯ ಪಾಲುದಾರಿಕೆಗಾಗಿ ತಾಂತ್ರಿಕ ಸಹಕಾರದ ಬಗ್ಗೆ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದು ಜಂಟಿ ಹೇಳಿಕೆಯಲ್ಲಿ ತಿಳಿಸಲಾಗಿದೆ. ಜತೆಗೆ ಚೀನಾದ ಬಗ್ಗೆಯೂ ಮಾತುಕತೆ ನಡೆದಿದೆ. ಕ್ವಾಡ್ ಸಭೆಯಲ್ಲಿ ಪಾಲ್ಗೊಳ್ಳಲು ಮುಂದಿನ ವರ್ಷ ಭಾರತಕ್ಕೆ ಭೇಟಿ ನೀಡುವಂತೆ ಬೈಡನ್ ಅವರನ್ನು ಪ್ರಧಾನಿ ಮೋದಿ ಆಹ್ವಾನಿಸಿದ್ದಾರೆ.

ಚಂದ್ರಯಾನ-3ರ ಯಶಸ್ಸಿಗೆ ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಿದ ಅಮೆರಿಕ ಅಧ್ಯಕ್ಷ ಜೋ ಬೈಡನ್
ಜೋ ಬೈಡನ್, ಪ್ರಧಾನಿ ಮೋದಿ

Updated on: Sep 08, 2023 | 10:11 PM

ನವದೆಹಲಿ, ಸೆಪ್ಟೆಂಬರ್ 8: ಭಾರತದ ಚಂದ್ರಯಾನ-3 ಯೋಜನೆಯ ಯಶಸ್ಸಿಗಾಗಿ ಭಾರತೀಯ ಬಾಹ್ಯಾಕಾಶ ಸಂಸ್ಥೆ ಇಸ್ರೋದ (ISRO) ವಿಜ್ಞಾನಿಗಳನ್ನು ಅಮೆರಿಕದ ಅಧ್ಯಕ್ಷ ಜೋ ಬೈಡನ್ (Joe Biden) ಅಭಿನಂದಿಸಿದರು. ಜಿ20 ಶೃಂಗಸಭೆಯಲ್ಲಿ ಭಾಗವಹಿಸುವ ಸಲುವಾಗಿ ಭಾರತಕ್ಕೆ ಬಂದಿರುವ ಅವರು ಶುಕ್ರವಾರ ರಾತ್ರಿ ಪ್ರಧಾನಿ ನರೇಂದ್ರ ಮೋದಿ (Narendra Modi) ಜತೆ ದ್ವಿಪಕ್ಷೀಯ ಮಾತುಕತೆ ನಡೆಸಿದರು. ಆ ಬಳಿಕ ಭಾರತ, ಅಮೆರಿಕದಿಂದ ಜಂಟಿ ಹೇಳಿಕೆ ಬಿಡುಗಡೆ ಮಾಡಲಾಗಿದ್ದು, ಉಭಯ ನಾಯಕರು ನಡೆಸಿರುವ ಮಾತುಕತೆಯ ವಿವರ ನೀಡಲಾಗಿದೆ.

ಉಭಯ ದೇಶಗಳ ನಡುವೆ ರಾಜಕೀಯ ಪಾಲುದಾರಿಕೆಗಾಗಿ ತಾಂತ್ರಿಕ ಸಹಕಾರದ ಬಗ್ಗೆ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದು ಜಂಟಿ ಹೇಳಿಕೆಯಲ್ಲಿ ತಿಳಿಸಲಾಗಿದೆ. ಜತೆಗೆ ಚೀನಾದ ಬಗ್ಗೆಯೂ ಮಾತುಕತೆ ನಡೆದಿದೆ. ಕ್ವಾಡ್ ಸಭೆಯಲ್ಲಿ ಪಾಲ್ಗೊಳ್ಳಲು ಮುಂದಿನ ವರ್ಷ ಭಾರತಕ್ಕೆ ಭೇಟಿ ನೀಡುವಂತೆ ಬೈಡನ್ ಅವರನ್ನು ಪ್ರಧಾನಿ ಮೋದಿ ಆಹ್ವಾನಿಸಿದ್ದಾರೆ.

ಎಂಕ್ಯು9 ರೀಪರ್ ಡ್ರೋನ್ ಮತ್ತು ಜೆಟ್ ಎಂಜಿನ್ ಬಗ್ಗೆ ಉಭಯ ದೇಶಗಳ ನಡುವಿನ ಮಾತುಕತೆಗಳು ಪ್ರಗತಿಯಲ್ಲಿವೆ. ಪ್ರಧಾನಿ ಮೋದಿ ಮತ್ತು ಬೈಡನ್ ದ್ವಿಪಕ್ಷೀಯ ಮಾತುಕತೆಯಲ್ಲಿ, ಕ್ವಾಡ್‌ನಲ್ಲಿ ಎರಡೂ ದೇಶಗಳ ಸಕ್ರಿಯ ಪಾತ್ರದ ಬಗ್ಗೆಯೂ ಚರ್ಚಿಸಲಾಗಿದೆ. ಜತೆಗೆ ಜಿ 20 ಅಧ್ಯಕ್ಷ ಸ್ಥಾನಕ್ಕಾಗಿ ಭಾರತವನ್ನು ಬೈಡನ್ ಶ್ಲಾಘಿಸಿದ್ದಾರೆ.

ಉಭಯ ರಾಷ್ಟ್ರಗಳ ಮುಖ್ಯಸ್ಥರ ನಡುವಿನ ದ್ವಿಪಕ್ಷೀಯ ಮಾತುಕತೆ ಒಟ್ಟು ನಲವತ್ತೈದು ನಿಮಿಷಗಳ ಕಾಲ ನಡೆದಿದೆ. ದ್ವಿಪಕ್ಷೀಯ ಮಾತುಕತೆ ಮುಗಿದ ನಂತರ, ಅಮೆರಿಕದ ಅಧ್ಯಕ್ಷರು ಐಟಿಸಿ ಮೌರ್ಯ ಹೋಟೆಲ್‌ಗೆ ತೆರಳಿದ್ದು, ವಿಶ್ರಾಂತಿ ಪಡೆಯಲಿದ್ದಾರೆ. ದೆಹಲಿ ತಲುಪಿದ ನಂತರ ಬೈಡನ್ ಅವರು ನೇರವಾಗಿ ಪ್ರಧಾನಿ ಮೋದಿ ನಿವಾಸಕ್ಕೆ ತಲುಪಿ ದ್ವಿಪಕ್ಷೀಯ ಮಾತುಕತೆ ನಡೆಸಿದ್ದರು.

ಸೆಪ್ಟೆಂಬರ್ 9, 10 ರಂದು ಪ್ರಧಾನಿ ಸಭೆಯ ವೇಳಾಪಟ್ಟಿ

ಸೆಪ್ಟೆಂಬರ್ 9 ರಂದು ಪ್ರಧಾನಿ ಮೋದಿ ಅವರು ಜಪಾನ್, ಜರ್ಮನಿ ಮತ್ತು ಇಟಲಿ ನಾಯಕರ ಜತೆ ಮಾತುಕತೆ ನಡೆಸಲಿದ್ದಾರೆ. ಸೆಪ್ಟೆಂಬರ್ 10 ರಂದು ಪ್ರಧಾನಿ ಮೋದಿ ಅವರು ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್ ಅವರ ಜತೆ ಮಾತುಕತೆ ನಡೆಸಲಿದ್ದಾರೆ.

ಇದನ್ನೂ ಓದಿ: ಜಾಗತಿಕ ಒಳಿತಿನಲ್ಲಿ ಭಾರತ, ಅಮೆರಿಕ ಸ್ನೇಹದ ಪಾತ್ರ ಮಹತ್ವದ್ದು; ಜೋ ಬೈಡನ್ ಜತೆ ದ್ವಿಪಕ್ಷೀಯ ಮಾತುಕತೆ ಬಳಿಕ ಪ್ರಧಾನಿ ಮೋದಿ

ಜಿ 20 ಶೃಂಗಸಭೆಯಲ್ಲಿ ಭಾಗವಹಿಸುವುದಕ್ಕಾಗಿ ಅತಿಥಿಗಳು ದೆಹಲಿಗೆ ಶುಕ್ರವಾರ ಮಧ್ಯಾಹ್ನವೇ ಆಗಮಿಸಲು ಆರಂಭಿಸಿದ್ದಾರೆ. ಬೈಡನ್ ಸೇರಿದಂತೆ ಹಲವು ದೇಶಗಳ ಮುಖ್ಯಸ್ಥರು ಭಾರತಕ್ಕೆ ಆಗಮಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
Loading...
Unable to load recommendations.
Follow Us