AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Joshimath Sinking: ಉತ್ತರಾಖಂಡದ ಜೋಶಿಮಠದಲ್ಲಿ ಕುಸಿಯುತ್ತಿದೆ ಭೂಮಿ; ನೂರಾರು ಮನೆಗಳಲ್ಲಿ ಬಿರುಕು

ಬದರಿನಾಥದ ಹೆಬ್ಬಾಗಿಲು ಎಂದೇ ಪ್ರಸಿದ್ಧಿ ಪಡೆದಿರುವ ಜೋಶಿಮಠದಲ್ಲಿ ಸುಮಾರು 20 ಸಾವಿರ ನಿವಾಸಿಗಳು ಇದ್ದಾರೆ ಎನ್ನಲಾಗಿದೆ. ಈ ಊರಿಗೆ ಈಗ ಭಾರೀ ಭೂಕುಸಿತದ ಭೀತಿ ಎದುರಾಗಿದೆ. ಶುಕ್ರವಾರ ಸಂಜೆ ಜೋಶಿಮಠದ ಸಿಂಗ್ಧರ್ ವಾರ್ಡ್‌ನಲ್ಲಿ ದೇವಾಲಯವೊಂದು ಕುಸಿದು ಬಿದ್ದಿತ್ತು.

Joshimath Sinking: ಉತ್ತರಾಖಂಡದ ಜೋಶಿಮಠದಲ್ಲಿ ಕುಸಿಯುತ್ತಿದೆ ಭೂಮಿ; ನೂರಾರು ಮನೆಗಳಲ್ಲಿ ಬಿರುಕು
ಜೋಶಿಮಠದಲ್ಲಿ ರಸ್ತೆಯೊಂದು ಬಿರುಕು ಬಿಟ್ಟಿರುವುದರ ಸಂಗ್ರಹ ಚಿತ್ರ (ಪಿಟಿಐ ಸಂಗ್ರಹ ಚಿತ್ರ)Image Credit source: PTI
TV9 Web
| Updated By: Ganapathi Sharma|

Updated on:Jan 07, 2023 | 9:28 AM

Share

ಡೆಹ್ರಾಡೂನ್: ಉತ್ತರಾಖಂಡದ (Uttarakhand) ಜೋಶಿಮಠದಲ್ಲಿ (Joshimath) ಭಾರಿ ಪ್ರಮಾಣದಲ್ಲಿ ಭೂಮಿ ಕುಸಿಯುತ್ತಿದ್ದು, ಒಂದಿಡೀ ಊರೇ ನಾಶವಾಗುವ ಭೀತಿ ಎದುರಾಗಿದೆ. ನೂರಾರು ಮನೆಗಳಲ್ಲಿ ಬಿರುಕು ಕಾಣಿಸಿಕೊಂಡಿದ್ದು, ತಕ್ಷಣವೇ ನಿವಾಸಿಗಳನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸುವಂತೆ ಅಲ್ಲಿನ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ (Pushkar Singh Dhami) ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಜೀವಗಳನ್ನು ಉಳಿಸುವುದಕ್ಕೇ ನಮ್ಮ ಮೊದಲ ಆದ್ಯತೆ. 600 ಕುಟುಂಗಳ ಸ್ಥಳಾಂತರಕ್ಕೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಜೋಶಿಮಠದ ಸಮಸ್ಯೆಗೆ ತಾತ್ಕಾಲಿಕ ಮತ್ತು ದೀರ್ಘಾವಧಿಯ ಪರಿಹಾರ ಕಂಡುಕೊಳ್ಳಲು ಕ್ರಮ ಕೈಗೊಳ್ಳಲಾಗುವುದು ಎಂದೂ ಅವರು ಹೇಳಿದ್ದಾರೆ. ಅಧಿಕಾರಿಗಳ ಜತೆ ವಿಡಿಯೊ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ ಬಳಿಕ ಅವರು ಮಾಧ್ಯಮಗಳಿಗೆ ಈ ಮಾಹಿತಿ ನೀಡಿದ್ದಾರೆ.

ಘರ್ವಾಲ್ ಆಯುಕ್ತ ಸುಶೀಲ್ ಕುಮಾರ್ ಮತ್ತು ವಿಪತ್ತು ನಿರ್ವಹಣಾ ಕಾರ್ಯದರ್ಶಿ ರಂಜಿತ್ ಕುಮಾರ್ ಸಿನ್ಹಾ ತಜ್ಞರ ತಂಡದ ಜತೆ ಸ್ಥಳಕ್ಕೆ ಧಾವಿಸಿ ನಿರಂತರವಾಗಿ ಪರಿಸ್ಥಿತಿ ಅವಲೋಕಿಸುತ್ತಿದ್ದಾರೆ ಎಂದು ಧಾಮಿ ತಿಳಿಸಿದ್ದಾರೆ. ಸದ್ಯ ತುರ್ತಾಗಿ ಸ್ಥಳಾಂತರ ನಡೆಯಬೇಕಿದೆ. ವೈದ್ಯಕೀಯ ತಂಡಗಳನ್ನು ಅಗತ್ಯ ಪರಿಕರಗಳೊಂದಿಗೆ ಸನ್ನದ್ಧ ಸ್ಥಿತಿಯಲ್ಲಿ ಇರಿಸಲಾಗಿದೆ. ಅಪಾಯಕರ ಪ್ರದೇಶಗಳಲ್ಲಿ ಚಿಕಿತ್ಸೆಗೆ ಕ್ರಮ ಕೈಗೊಳ್ಳಲಾಗಿದೆ. ನಾಗರಿಕರ ಜೀವ ಬಹು ಮುಖ್ಯ ಎಂದು ಅವರು ಹೇಳಿದ್ದಾರೆ.

ಬದರಿನಾಥದ ಹೆಬ್ಬಾಗಿಲಿಗೆ ನಾಮಾವಶೇಷ ಭೀತಿ

ಬದರಿನಾಥದ ಹೆಬ್ಬಾಗಿಲು ಎಂದೇ ಪ್ರಸಿದ್ಧಿ ಪಡೆದಿರುವ ಜೋಶಿಮಠದಲ್ಲಿ ಸುಮಾರು 20 ಸಾವಿರ ನಿವಾಸಿಗಳು ಇದ್ದಾರೆ ಎನ್ನಲಾಗಿದೆ. ಈ ಊರಿಗೆ ಈಗ ಭಾರೀ ಭೂಕುಸಿತದ ಭೀತಿ ಎದುರಾಗಿದೆ. ಶುಕ್ರವಾರ ಸಂಜೆ ಜೋಶಿಮಠದ ಸಿಂಗ್ಧರ್ ವಾರ್ಡ್‌ನಲ್ಲಿ ದೇವಾಲಯವೊಂದು ಕುಸಿದು ಬಿದ್ದಿತ್ತು. ಘಟನೆ ಸಂಭವಿಸಿದಾಗ ದೇವಾಲಯದ ಒಳಗೆ ಯಾರೂ ಇರಲಿಲ್ಲ ಎನ್ನಲಾಗಿದೆ. ಇದರಿಂದ ಸ್ಥಳೀಯರು ಮತ್ತಷ್ಟು ಆತಂಕಕ್ಕೆ ಒಳಗಾಗಿದ್ದಾರೆ. 2021ರ ಫೆಬ್ರವರಿಯಲ್ಲಿ ಜೋಶಿಮಠ ಸಮೀಪದ ತಪೋವನ ವಿಷ್ಣುಗಡದಲ್ಲಿನ ಅಣೆಕಟ್ಟೆಯ ಸಮೀಪ ಸಂಭವಿಸಿದ್ದ ಮೇಘಸ್ಫೋಟದಲ್ಲಿ ನೂರಾರು ಮಂದಿ ಮೃತಪಟ್ಟಿದ್ದರು. ಹತ್ತಾರು ಮಂದಿ ಕಣ್ಮರೆಯಾಗಿದ್ದರು. ಮೇಘಸ್ಫೋಟ, ಭೂಕುಸಿತ, ಭೂಕಂಪದಂಥ ಅವಘಡಗಳು ಹಿಮಾಲಯದ ತಪ್ಪಲಿನ ಈ ರಾಜ್ಯದಲ್ಲಿ ಆಗಾಗ ವರದಿಯಾಗುತ್ತಿರುತ್ತವೆ.

ಇದನ್ನೂ ಓದಿ: Sinking Joshimath: ಉತ್ತರಾಖಂಡದ ಜೋಶಿಮಠ ಭೂಕುಸಿತಕ್ಕೆ ಕಾರಣವೇನು? ಇಲ್ಲಿದೆ ವಿವರ

ಸುಮಾರು 50 ಕುಟುಂಬಗಳನ್ನು ಈಗಾಗಲೇ ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಗೊಳಿಸಲಾಗಿದೆ. ವಿಷ್ಣುಪ್ರಯಾಗ್​ನಲ್ಲಿ ಜಲವಿದ್ಯುತ್ ಯೋಜನೆಯ ಕಾಮಗಾರಿಯಲ್ಲಿ ತೊಡಗಿಕೊಂಡಿದ್ದವರ 60 ಕುಟುಂಬಗಳನ್ನು ಸ್ಥಳಾಂತರ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:27 am, Sat, 7 January 23

ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್