AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುವೇಂದು ಅಧಿಕಾರಿ ಗೆಲುವಿನ ವಿರುದ್ಧ ಮಮತಾ ಬ್ಯಾನರ್ಜಿ ಕಾನೂನು ಹೋರಾಟ; ಅರ್ಜಿ ವಿಚಾರಣೆ ನಡೆಸುತ್ತಿರುವ ನ್ಯಾಯಾಧೀಶರ ಮೇಲೆ ಡೌಟ್​

ಮಮತಾ ಬ್ಯಾನರ್ಜಿ ಪರ ವಕೀಲರ ಮನವಿಯನ್ನು ಬಿಜೆಪಿ ಉಪಾಧ್ಯಕ್ಷ ಜಯ್​ ಪ್ರಕಾಶ್​ ಮಜುಂದಾರ್​ ಟೀಕಿಸಿದ್ದಾರೆ. ನ್ಯಾಯಾಂಗವನ್ನು ಗೌರವಿಸಬೇಕು..ನಂಬಬೇಕು ಎಂದಿದ್ದಾರೆ.

ಸುವೇಂದು ಅಧಿಕಾರಿ ಗೆಲುವಿನ ವಿರುದ್ಧ ಮಮತಾ ಬ್ಯಾನರ್ಜಿ ಕಾನೂನು ಹೋರಾಟ; ಅರ್ಜಿ ವಿಚಾರಣೆ ನಡೆಸುತ್ತಿರುವ ನ್ಯಾಯಾಧೀಶರ ಮೇಲೆ ಡೌಟ್​
ಮಮತಾ ಬ್ಯಾನರ್ಜಿ
TV9 Web
| Updated By: Lakshmi Hegde|

Updated on: Jun 19, 2021 | 1:14 PM

Share

ಪಶ್ಚಿಮಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ನಂದಿಗ್ರಾಮ ವಿಧಾನಸಭಾ ಕ್ಷೇತ್ರದಿಂದ ಗೆದ್ದ ಬಿಜೆಪಿಯ ಸುವೇಂದು ಅಧಿಕಾರಿ ( ಟಿಎಂಸಿ ಮಾಜಿ ಮುಖಂಡ)ಯ ವಿರುದ್ಧ ಮಮತಾ ಬ್ಯಾನರ್ಜಿ ಕಾನೂನು ಹೋರಾಟ ಶುರು ಮಾಡಿದ್ದಾರೆ. ಸುವೇಂದು ಅಧಿಕಾರಿ ಗೆಲುವು ಪ್ರಶ್ನಿಸಿ ಮಮತಾ ಬ್ಯಾನರ್ಜಿ ಸಲ್ಲಿಸಿದ ಅರ್ಜಿ ವಿಚಾರಣೆಯನ್ನು ಕೊಲ್ಕತ್ತ ಹೈಕೋರ್ಟ್​ ಜೂ.24ಕ್ಕೆ ಮುಂದೂಡಿದ ಬೆನ್ನಲ್ಲೇ, ಮಮತಾ ಬ್ಯಾನರ್ಜಿಯವರ ಪರ ವಕೀಲರು ಹೊಸದೊಂದು ಬೇಡಿಕೆಯಿಟ್ಟಿದ್ದಾರೆ. ಮಮತಾ ಬ್ಯಾನರ್ಜಿ ಅರ್ಜಿ ವಿಚಾರಣೆಯನ್ನು ನ್ಯಾಯಾಲಯದ ಬೇರೊಂದು ಪೀಠಕ್ಕೆ ವರ್ಗಾಯಿಸಬೇಕು ಎಂದು ಮನವಿ ಮಾಡಿ ಕೊಲ್ಕತ್ತ ಹೈಕೋರ್ಟ್​​ನ ಕಾರ್ಯಕಾರಿ ಮುಖ್ಯನ್ಯಾಯಮೂರ್ತಿಗಳ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ.

ಮಮತಾ ಬ್ಯಾನರ್ಜಿಯವರ ಅರ್ಜಿಯನ್ನು ಸದ್ಯ ಹೈಕೋರ್ಟ್​​ನ ಕೌಶಿಕ್​ ಚಂದಾ ಅವರ ನೇತೃತ್ವದ ಪೀಠ ವಿಚಾರಣೆ ನಡೆಸುತ್ತಿದೆ. ಆದರೆ ಈ ಕೌಶಿಕ್​ ಚಂದಾ ಬಿಜೆಪಿಯ ಸಕ್ರಿಯ ಸದಸ್ಯ ಎಂದು ದೀದಿ ಪರ ವಕೀಲರು ಆರೋಪ ಮಾಡಿದ್ದಾರೆ. ಕೌಶಿಕ್​ ಚಂದಾ ಬಿಜೆಪಿಯ ಸಕ್ರಿಯ ಸದಸ್ಯರಾಗಿರುವ ಕಾರಣ ಅರ್ಜಿ ವಿಚಾರಣೆಯಲ್ಲಿ ರಾಜಕೀಯ ಲೇಪಗಳು ಇರುವ ಸಾಧ್ಯತೆ ಇರುತ್ತದೆ. ಹಾಗಾಗಿ ಈ ವಿಷಯವನ್ನು ಇನ್ನೊಬ್ಬರು ನ್ಯಾಯಾಧೀಶರ ಪೀಠಕ್ಕೆ ವರ್ಗಾಯಿಸಬೇಕು ಎಂದು ವಕೀಲರು ಮನವಿ ಮಾಡಿದ್ದಾರೆ.

ಇನ್ನು ತೃಣಮೂಲ ಕಾಂಗ್ರೆಸ್ ಕೂಡ ಒಂದು ಫೋಟೋವನ್ನು ಪೋಸ್ಟ್ ಮಾಡಿಕೊಂಡಿದೆ. ಸದ್ಯ ಅರ್ಜಿ ವಿಚಾರಣೆ ನಡೆಸುತ್ತಿರುವ ನ್ಯಾಯಾಧೀಶ ಕೌಶಿಕ್​ ಚಾಂದ್​, ಪಶ್ಚಿಮ ಬಂಗಾಳ ಬಿಜೆಪಿ ನಾಯಕ ದಿಲೀಪ್​ ಘೋಷ್​ರೊಟ್ಟಿಗೆ ವೇದಿಕೆಯೊಂದರ ಮೇಲೆ ಕುಳಿತಿರುವ ಫೋಟೋ ಇದು. ಫೋಟೋ ಪೋಸ್ಟ್ ಮಾಡಿದ ಟಿಎಂಸಿ, ಕೌಶಿಕ್ ಚಾಂದ್​ ಅರ್ಜಿ ವಿಚಾರಣೆ ನಡೆಸುತ್ತಿರುವ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದೆ.

ಮಮತಾ ಬ್ಯಾನರ್ಜಿ ಪರ ವಕೀಲರ ಮನವಿಯನ್ನು ಬಿಜೆಪಿ ಉಪಾಧ್ಯಕ್ಷ ಜಯ್​ ಪ್ರಕಾಶ್​ ಮಜುಂದಾರ್​ ಟೀಕಿಸಿದ್ದಾರೆ. ನ್ಯಾಯಾಂಗವನ್ನು ಗೌರವಿಸಬೇಕು..ನಂಬಬೇಕು. ಆದರೆ ದುರಾದೃಷ್ಟಕ್ಕೆ ಪಶ್ಚಿಮ ಬಂಗಾಳದ ಆಡಳಿತ ಪಕ್ಷ ಟಿಎಂಸಿ ನ್ಯಾಯಾಂಗ ವ್ಯವಸ್ಥೆಯ ಮೇಲೆಯೇ ಅಪನಂಬಿಕೆ ತೋರುತ್ತಿದೆ ಎಂದೂ ಹೇಳಿದ್ದಾರೆ.

ಇದನ್ನೂ ಓದಿ: ಕಾಜಲ್​ ಸಂಸಾರದಲ್ಲಿ ಸಹೋದರಿಯ ಸ್ವಾರ್ಥ; ಬಹಿರಂಗವಾಗಿಯೇ ಹೇಳಿಕೊಂಡ ನಟಿ

ಚಿತ್ರರಂಗದಲ್ಲಿ ಒಗ್ಗಟ್ಟಿನ ಕೊರತೆ ಇದೆ: ನಟಿ ರಮ್ಯಾ
ಚಿತ್ರರಂಗದಲ್ಲಿ ಒಗ್ಗಟ್ಟಿನ ಕೊರತೆ ಇದೆ: ನಟಿ ರಮ್ಯಾ
‘ಎಕ್ಕ’ ಸಿನಿಮಾಕ್ಕೂ ಅಪ್ಪುವಿನ ‘ಜಾಕಿ’ ಸಿನಿಮಾಕ್ಕೂ ಲಿಂಕ್ ಏನು?
‘ಎಕ್ಕ’ ಸಿನಿಮಾಕ್ಕೂ ಅಪ್ಪುವಿನ ‘ಜಾಕಿ’ ಸಿನಿಮಾಕ್ಕೂ ಲಿಂಕ್ ಏನು?
ಪುತ್ತೂರಿನಲ್ಲಿ ನೈತಿಕ ಪೊಲೀಸ್‌ಗಿರಿ: ಎಸ್​ಪಿ ಹೇಳಿದ್ದಿಷ್ಟು
ಪುತ್ತೂರಿನಲ್ಲಿ ನೈತಿಕ ಪೊಲೀಸ್‌ಗಿರಿ: ಎಸ್​ಪಿ ಹೇಳಿದ್ದಿಷ್ಟು
ಹುಬ್ಬಳ್ಳಿಯಲ್ಲಿ ವೇಶ್ಯಾವಾಟಿಕೆ ಜಾಲ: ಟಾಯ್ಲೆಟ್ ರೂಮ್​​ನಲ್ಲಿ ಸುರಂಗ ಮಾರ್ಗ
ಹುಬ್ಬಳ್ಳಿಯಲ್ಲಿ ವೇಶ್ಯಾವಾಟಿಕೆ ಜಾಲ: ಟಾಯ್ಲೆಟ್ ರೂಮ್​​ನಲ್ಲಿ ಸುರಂಗ ಮಾರ್ಗ
ನಾವು ಎಷ್ಟೇ ಬೆಳೆದರೂ ನಮ್ಮ ಕಾಲು ನೆಲದ ಮೇಲೆ ಇರಬೇಕು: ಹರ್ಷಿಕಾ ಪೂಣಚ್ಚ
ನಾವು ಎಷ್ಟೇ ಬೆಳೆದರೂ ನಮ್ಮ ಕಾಲು ನೆಲದ ಮೇಲೆ ಇರಬೇಕು: ಹರ್ಷಿಕಾ ಪೂಣಚ್ಚ
ಬೀಗರ ಗಲಾಟೆ: ಕಪಾಳಕ್ಕೆ ಬಾರಿಸಿದ ಶಾಸಕ ಪ್ರಭು ಚೌಹಾಣ್
ಬೀಗರ ಗಲಾಟೆ: ಕಪಾಳಕ್ಕೆ ಬಾರಿಸಿದ ಶಾಸಕ ಪ್ರಭು ಚೌಹಾಣ್
ಹೇಳದೇ ಒಬಿಸಿ ಸಮಿತಿಗೆ ನೇಮಕ: ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು
ಹೇಳದೇ ಒಬಿಸಿ ಸಮಿತಿಗೆ ನೇಮಕ: ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು
‘ಗೋಲಿ ಚಲ್ ಜಾವೇಗಿ’ ಹಾಡಿಗೆ ನೃತ್ಯ ಮಾಡುತ್ತಲೇ ಗುಂಡು ಹಾರಿಸಿದ ವ್ಯಕ್ತಿ
‘ಗೋಲಿ ಚಲ್ ಜಾವೇಗಿ’ ಹಾಡಿಗೆ ನೃತ್ಯ ಮಾಡುತ್ತಲೇ ಗುಂಡು ಹಾರಿಸಿದ ವ್ಯಕ್ತಿ
ರಶ್ಮಿಕಾ ಮಂದಣ್ಣ ತಪ್ಪು ಮಾತಾಡಿದ್ದಾರೆ, ಕ್ಷಮಿಸಿ ಬಿಡೋಣ: ನಟಿ ಹರ್ಷಿಕಾ
ರಶ್ಮಿಕಾ ಮಂದಣ್ಣ ತಪ್ಪು ಮಾತಾಡಿದ್ದಾರೆ, ಕ್ಷಮಿಸಿ ಬಿಡೋಣ: ನಟಿ ಹರ್ಷಿಕಾ
ಭೀಕರ ಅಪಘಾತ: ಡಿಕ್ಕಿ ರಭಸಕ್ಕೆ ಎರಡು ಪೀಸ್ ಆದ ಟೆಂಪೊ, EXCLUSIVE ದೃಶ್ಯ
ಭೀಕರ ಅಪಘಾತ: ಡಿಕ್ಕಿ ರಭಸಕ್ಕೆ ಎರಡು ಪೀಸ್ ಆದ ಟೆಂಪೊ, EXCLUSIVE ದೃಶ್ಯ