ನಿಜವಾದ ಭಾರತೀಯ ಯಾರು, ಯಾರಲ್ಲ ಎಂದು ನಿರ್ಧರಿಸುವುದು ನ್ಯಾಯಮೂರ್ತಿಗಳ ಕೆಲಸವಲ್ಲ: ಪ್ರಿಯಾಂಕಾ

ನಿಜವಾದ ಭಾರತೀಯ ಯಾರು, ಯಾರಲ್ಲ ಎಂಬುದನ್ನು ನಿರ್ಧರಿಸುವುದು ನ್ಯಾಯಮೂರ್ತಿ ಅಥವಾ ನ್ಯಾಯಾಲಯದ ಕೆಲಸವಲ್ಲ, ನನ್ನ ಸಹೋದರ ಸೇನೆಯನ್ನು ಗೌರವಿಸುತ್ತಾನೆ’’ ಎಂದು ಸಂಸದೆ ಪ್ರಿಯಾಂಕಾ ಗಾಂಧಿ(Priyanka Gandhi) ಹೇಳಿದ್ದಾರೆ. ಭಾರತೀಯ ಸೇನೆ ವಿರುದ್ಧ ಸಂಸದ ರಾಹುಲ್ ಗಾಂಧಿ ನೀಡಿದ್ದ ಹೇಳಿಕೆಗೆ ಸುಪ್ರೀಂಕೋರ್ಟ್​ ಛೀಮಾರಿ ಹಾಕಿ, ನೀವು ನಿಜವಾದ ಭಾರತೀಯನಾಗಿದ್ದರೆ ಈ ರೀತಿ ಮಾತನಾಡುತ್ತಿರಲಿಲ್ಲ ಎಂದು ಹೇಳಿತ್ತು.

ನಿಜವಾದ ಭಾರತೀಯ ಯಾರು, ಯಾರಲ್ಲ ಎಂದು ನಿರ್ಧರಿಸುವುದು ನ್ಯಾಯಮೂರ್ತಿಗಳ ಕೆಲಸವಲ್ಲ: ಪ್ರಿಯಾಂಕಾ
ಪ್ರಿಯಾಂಕಾ ಗಾಂಧಿ

Updated on: Aug 05, 2025 | 2:16 PM

ನವದೆಹಲಿ, ಆಗಸ್ಟ್​ 05: ‘‘ನಿಜವಾದ ಭಾರತೀಯ ಯಾರು, ಯಾರಲ್ಲ ಎಂಬುದನ್ನು ನಿರ್ಧರಿಸುವುದು ನ್ಯಾಯಮೂರ್ತಿ ಅಥವಾ ನ್ಯಾಯಾಲಯದ ಕೆಲಸವಲ್ಲ, ನನ್ನ ಸಹೋದರ ಸೇನೆಯನ್ನು ಗೌರವಿಸುತ್ತಾನೆ’’ ಎಂದು ಸಂಸದೆ ಪ್ರಿಯಾಂಕಾ ಗಾಂಧಿ(Priyanka Gandhi) ಹೇಳಿದ್ದಾರೆ. ಭಾರತೀಯ ಸೇನೆ ವಿರುದ್ಧ ಸಂಸದ ರಾಹುಲ್ ಗಾಂಧಿ ನೀಡಿದ್ದ ಹೇಳಿಕೆಗೆ ಸುಪ್ರೀಂಕೋರ್ಟ್​ ಛೀಮಾರಿ ಹಾಕಿ, ನೀವು ನಿಜವಾದ ಭಾರತೀಯನಾಗಿದ್ದರೆ ಈ ರೀತಿ ಮಾತನಾಡುತ್ತಿರಲಿಲ್ಲ ಎಂದು ಹೇಳಿತ್ತು.

ಚೀನಾ 2000 ಚದರ ಕಿಲೋಮೀಟರ್ ಭಾರತೀಯ ಭೂಮಿಯನ್ನು ವಶಪಡಿಸಿಕೊಂಡಿದೆ ಎಂದು ನಿಮಗೆ ಹೇಗೆ ಗೊತ್ತು? ನೀವು ನಿಜವಾದ ಭಾರತೀಯರಾಗಿದ್ದರೆ, ನೀವು ಹಾಗೆ ಹೇಳುತ್ತಿರಲಿಲ್ಲ ಎಂದು ನ್ಯಾಯಮೂರ್ತಿಗಳು ಪ್ರಶ್ನಿಸಿದ್ದರು. ಈಗ ಪ್ರಿಯಾಂಕಾ ಗಾಂಧಿ ನ್ಯಾಯಾಲಯದ ಈ ಹೇಳಿಕೆಗೆ ಪ್ರತಿಕ್ರಿಯಿಸಿದ್ದಾರೆ.

ನಿಜವಾದ ಭಾರತೀಯ ಯಾರು ಮತ್ತು ಯಾರು ಅಲ್ಲ ಎಂಬುದನ್ನು ನ್ಯಾಯಮೂರ್ತಿಗಳು ನಿರ್ಧರಿಸಲು ಸಾಧ್ಯವಿಲ್ಲ ,ಇದು ಅವರ ವ್ಯಾಪ್ತಿಗೆ ಬರುವುದಿಲ್ಲ.

ಮತ್ತಷ್ಟು ಓದಿ: ನಿಜವಾದ ಭಾರತೀಯ ಎಂದೂ ಈ ರೀತಿ ಮಾತನಾಡೋದಿಲ್ಲ: ಸೇನೆ ಬಗ್ಗೆ ರಾಹುಲ್ ಹೇಳಿಕೆಗೆ ಸುಪ್ರೀಂ ಛೀಮಾರಿ

ರಾಹುಲ್ ಗಾಂಧಿ ಅವರ ಹೃದಯದಲ್ಲಿ ಸೈನ್ಯದ ಬಗ್ಗೆ ಗೌರವ ಮತ್ತು ಮೆಚ್ಚುಗೆ ಇದೆ. ನನ್ನ ಸಹೋದರ ಎಂದಿಗೂ ಸೈನ್ಯದ ವಿರುದ್ಧ ಮಾತನಾಡುವುದಿಲ್ಲ, ಅವರಿಗೆ ಅವರ ಬಗ್ಗೆ ಹೆಚ್ಚಿನ ಗೌರವವಿದೆ. ಇದನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಸಮಜಾಯಿಶಿ ನೀಡಿದ್ದಾರೆ.

ಸೇನೆಯ ಬಗ್ಗೆ ರಾಹುಲ್ ಗಾಂಧಿ ನೀಡಿರುವ ಹೇಳಿಕೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸೋಮವಾರ ವಿಚಾರಣೆ ನಡೆಸಿತ್ತು. ಈ ಪ್ರಕರಣದಲ್ಲಿ ಕೆಳ ನ್ಯಾಯಾಲಯ ಸಮನ್ಸ್ ಜಾರಿ ಮಾಡಿತ್ತು. ಸೇನೆಯ ವಿರುದ್ಧದ ಆರೋಪದ ಮೇಲೆ ತಮ್ಮ ವಿರುದ್ಧದ ಮಾನನಷ್ಟ ಮೊಕದ್ದಮೆಯನ್ನು ಪ್ರಶ್ನಿಸಿ ರಾಹುಲ್ ಗಾಂಧಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.

ರಾಹುಲ್ ಅರ್ಜಿಯ ಮೇರೆಗೆ ಸುಪ್ರೀಂ ಕೋರ್ಟ್ ಉತ್ತರ ಪ್ರದೇಶ ಸರ್ಕಾರ ಮತ್ತು ದೂರುದಾರರಿಬ್ಬರಿಗೂ ನೋಟಿಸ್ ಜಾರಿ ಮಾಡಿದೆ. ನ್ಯಾಯಾಲಯವು ಪ್ರಸ್ತುತ ರಾಹುಲ್ ಗಾಂಧಿಗೆ ರಿಲೀಫ್ ನೀಡಿದೆ ಮತ್ತು ಕೆಳ ನ್ಯಾಯಾಲಯದಲ್ಲಿನ ಮಾನನಷ್ಟ ಪ್ರಕರಣದ ವಿಚಾರಣೆಗೆ ತಡೆ ನೀಡಿದೆ ಮತ್ತು ವಿಚಾರಣೆಗೆ ಮೂರು ವಾರಗಳನ್ನು ನಿಗದಿಪಡಿಸಿದೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us