AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೂನ್ 25ರಂದು ಸಂವಿಧಾನ್ ಹತ್ಯಾ ದಿವಸ್ ಆಚರಿಸಲು ಕೇಂದ್ರ ನಿರ್ಧಾರ; ‘ಜೂನ್ 4 ಮೋದಿಮುಕ್ತಿ ದಿವಸ್’ ಎಂದ ಕಾಂಗ್ರೆಸ್

ಜೈವಿಕ ಅಲ್ಲದ  ಪ್ರಧಾನ ಮಂತ್ರಿಯ ಬೂಟಾಟಿಕೆಯಲ್ಲಿ ಮತ್ತೊಂದು ಹೆಡ್‌ಲೈನ್-ಹಪಾಹಪಿ ಕಸರತ್ತು. ಮೊದಲು ಹತ್ತು ವರ್ಷಗಳ ಕಾಲ ಅಘೋಷಿತ ತುರ್ತು ಪರಿಸ್ಥಿತಿಯನ್ನು ಹೇರಿದ್ದ ಅವರಿಗೆ 2024 ಜೂನ್ 4ರಂದು ಭಾರತದ ಜನರು ನಿರ್ಣಾಯಕ ವೈಯಕ್ತಿಕ, ರಾಜಕೀಯ ಮತ್ತು ನೈತಿಕ ಸೋಲನ್ನು ನೀಡಿದ್ದಾರೆ. ಆ ದಿನವನ್ನು ಇತಿಹಾಸದಲ್ಲಿ ಮೋದಿ ಮುಕ್ತಿ ದಿವಸ್ ಎಂದು ನೆನಪಿಸಲಾಗುವುದು ಎಂದು ಜೈರಾಮ್ ರಮೇಶ್ ಎಕ್ಸ್ ನಲ್ಲಿ ಬರೆದಿದ್ದಾರೆ.

ಜೂನ್ 25ರಂದು ಸಂವಿಧಾನ್ ಹತ್ಯಾ ದಿವಸ್ ಆಚರಿಸಲು ಕೇಂದ್ರ ನಿರ್ಧಾರ; 'ಜೂನ್ 4 ಮೋದಿಮುಕ್ತಿ ದಿವಸ್' ಎಂದ ಕಾಂಗ್ರೆಸ್
ಜೈರಾಮ್ ರಮೇಶ್
ರಶ್ಮಿ ಕಲ್ಲಕಟ್ಟ
|

Updated on:Jul 12, 2024 | 8:11 PM

Share

ದೆಹಲಿ ಜುಲೈ 12: ಜೂನ್ 25 ರಂದು ಸಂವಿಧಾನ್ ಹತ್ಯಾ ದಿವಸ್ (Samvidhaan Hatya Diwas) ಎಂದು ಆಚರಿಸುವ ಕೇಂದ್ರದ ನಿರ್ಧಾರಕ್ಕೆ ತೀಕ್ಷ್ಣವಾಗಿಯೇ ಪ್ರತಿಕ್ರಿಯಿಸಿರುವ ಕಾಂಗ್ರೆಸ್ (Congress) ಜೂನ್ 4 ಅನ್ನು “ಮೋದಿಮುಕ್ತಿ ದಿವಸ್” (ModiMukti Diwas)ಎಂದು ಆಚರಿಸಬೇಕು ಎಂದು ಹೇಳಿದೆ. ಜೂನ್ 4ರಂದು ಲೋಕಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗಿತ್ತು. 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಕೇವಲ 240 ಸ್ಥಾನಗಳನ್ನು ಗೆಲ್ಲಲು ಸಾಧ್ಯವಾಗಿದ್ದು, ಸರಳ ಬಹುಮತಕ್ಕೆ 32 ಸ್ಥಾನಗಳ ಕೊರತೆ ಇತ್ತು. ಆದರೆ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಎನ್‌ಡಿಎ ಮಿತ್ರಪಕ್ಷಗಳ ಬೆಂಬಲದೊಂದಿಗೆ ಸತತ ಮೂರನೇ ಬಾರಿ ಸರ್ಕಾರವನ್ನು ರಚಿಸಿದರು. ಈ ರೀತಿ ಸೀಟುಗಳನ್ನು ಕಳೆದುಕೊಂಡಿರುವುದು ಪ್ರಧಾನಿ ಮೋದಿಯವರ ನೈತಿಕ ಸೋಲು ಎಂದು ವಿರೋಧ ಪಕ್ಷಗಳ ಇಂಡಿಯಾ ಬಣ ಹೇಳಿದೆ.

ಸಂವಿಧಾನ್ ಹತ್ಯಾ ದಿವಸ್ ಬಗ್ಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, ಕೇಂದ್ರದ ಈ ನಡೆ ಹೆಡ್‌ಲೈನ್ ಹಪಾಹಪಿಯ ಕಸರತ್ತು ಎಂದು ಹೇಳಿದ್ದಾರೆ.

ಜೈವಿಕ ಅಲ್ಲದ  ಪ್ರಧಾನ ಮಂತ್ರಿಯ ಬೂಟಾಟಿಕೆಯಲ್ಲಿ ಮತ್ತೊಂದು ಹೆಡ್‌ಲೈನ್-ಹಪಾಹಪಿ ಕಸರತ್ತು. ಮೊದಲು ಹತ್ತು ವರ್ಷಗಳ ಕಾಲ ಅಘೋಷಿತ ತುರ್ತು ಪರಿಸ್ಥಿತಿಯನ್ನು ಹೇರಿದ್ದ ಅವರಿಗೆ 2024 ಜೂನ್ 4ರಂದು ಭಾರತದ ಜನರು ನಿರ್ಣಾಯಕ ವೈಯಕ್ತಿಕ, ರಾಜಕೀಯ ಮತ್ತು ನೈತಿಕ ಸೋಲನ್ನು ನೀಡಿದ್ದಾರೆ. ಆ ದಿನವನ್ನು ಇತಿಹಾಸದಲ್ಲಿ ಮೋದಿ ಮುಕ್ತಿ ದಿವಸ್ ಎಂದು ನೆನಪಿಸಲಾಗುವುದು ಎಂದು ಅವರು ಎಕ್ಸ್ ನಲ್ಲಿ ಬರೆದಿದ್ದಾರೆ.

ಇವರು ಭಾರತದ ಸಂವಿಧಾನ ಮತ್ತು ಅದರ ತತ್ವಗಳು, ಮೌಲ್ಯಗಳು ಮತ್ತು ಸಂಸ್ಥೆಗಳನ್ನು ವ್ಯವಸ್ಥಿತ ದಾಳಿಗೆ ಒಳಪಡಿಸಿದ ಜೈವಿಕವಲ್ಲದ ಪ್ರಧಾನಿ. ಇವರು ಮನುಸ್ಮೃತಿಯಿಂದ ಸ್ಫೂರ್ತಿ ಪಡೆದಿಲ್ಲ ಎಂಬ ಕಾರಣಕ್ಕಾಗಿ 1949 ರ ನವೆಂಬರ್‌ನಲ್ಲಿ ಭಾರತದ ಸಂವಿಧಾನವನ್ನು ತಿರಸ್ಕರಿಸಿದ ಸೈದ್ಧಾಂತಿಕ ಪರಿವಾರದ ಜೈವಿಕವಲ್ಲದ ಪ್ರಧಾನಿ. ಇವರು ಜೈವಿಕವಲ್ಲದ ಪ್ರಧಾನಿಯಾಗಿದ್ದು, ಅವರಿಗೆ ಪ್ರಜಾಪ್ರಭುತ್ವ ಎಂದರೆ ಡೆಮೊ-ಕುರ್ಸಿ ಮಾತ್ರ ಎಂದು  ಜೈರಾಮ್ ರಮೇಶ್ ಹೇಳಿದ್ದಾರೆ.

ಸಂವಿಧಾನ್ ಹತ್ಯಾ ದಿವಸ್ ಘೋಷಿಸಿದ ಕೇಂದ್ರ

ತುರ್ತು ಪರಿಸ್ಥಿತಿಯ ಸ್ಮರಣೆಗೆ ಪ್ರತಿ ವರ್ಷ ಜೂನ್ 25 ಅನ್ನು ಸಂವಿಧಾನ್ ಹತ್ಯಾ ದಿವಸ್ ಎಂದು ಆಚರಿಸಲಾಗುವುದು ಎಂದು ಕೇಂದ್ರ ಸರ್ಕಾರ ಇಂದು (ಶುಕ್ರವಾರ) ತಿಳಿಸಿದೆ. ಇಂದಿರಾ ಗಾಂಧಿ ಸರ್ಕಾರ ಜೂನ್ 25, 1975 ರಂದು ತುರ್ತು ಪರಿಸ್ಥಿತಿಯನ್ನು ಹೇರಿತ್ತು. ದಬ್ಬಾಳಿಕೆಯ ಸರ್ಕಾರದ ಕೈಯಲ್ಲಿ ವಿವರಿಸಲಾಗದ ಕಿರುಕುಳವನ್ನು ಎದುರಿಸುತ್ತಿದ್ದರೂ ಪ್ರಜಾಪ್ರಭುತ್ವವನ್ನು ಪುನರುಜ್ಜೀವನಗೊಳಿಸಲು ಹೋರಾಡಿದ ಲಕ್ಷಾಂತರ ಜನರ ಆತ್ಮವನ್ನು ಗೌರವಿಸುವ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿಯವರು ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಅಮಿತ್ ಶಾ ಹೇಳಿದರು.

ಇದನ್ನೂ ಓದಿ: ಸ್ಮೃತಿ ಇರಾನಿ ಬಗ್ಗೆ ಅವಹೇಳನಕಾರಿ ಪದ ಬಳಕೆ ಬೇಡ: ಎಕ್ಸ್‌ನಲ್ಲಿ ರಾಹುಲ್ ಗಾಂಧಿ ಮನವಿ

ಕಾಂಗ್ರೆಸ್ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ

ದೇಶದ ಇತಿಹಾಸದ ಕರಾಳ ಘಟ್ಟವನ್ನು ಕಾಂಗ್ರೆಸ್ ಬಿಚ್ಚಿಟ್ಟಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. “ಜೂನ್ 25 ಅನ್ನು ಸಂವಿಧಾನಹತ್ಯದಿವಾಸ್ ಎಂದು ಆಚರಿಸುವುದು ಭಾರತದ ಸಂವಿಧಾನವನ್ನು ತುಳಿದು ಹಾಕಿದಾಗ ಏನಾಗುತ್ತದೆ ಎಂಬುದನ್ನು ನೆನಪಿಸುತ್ತದೆ. ಭಾರತೀಯ ಇತಿಹಾಸದ ಕರಾಳ ಘಟ್ಟವನ್ನು ಬಿಚ್ಚಿಟ್ಟ ಕಾಂಗ್ರೆಸ್ ತುರ್ತುಪರಿಸ್ಥಿತಿಯಿಂದ ನೊಂದ ಪ್ರತಿಯೊಬ್ಬ ವ್ಯಕ್ತಿಗೂ ನಮನ ಸಲ್ಲಿಸುವ ದಿನವೂ ಹೌದು. ” ಎಂದು ಅವರು X ನಲ್ಲಿ ಬರೆದಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:53 pm, Fri, 12 July 24

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ