AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದೋರ್: ಚಲಿಸುತ್ತಿದ್ದ ಬಸ್ಸಿನಲ್ಲಿ ಕಿರಿಯ ವೈದ್ಯೆಯ ಮೇಲೆ ಹಲ್ಲೆ

ಚಲಿಸುತ್ತಿರುವ ಬಸ್​ನಲ್ಲಿ ವೈದ್ಯೆಯೊಬ್ಬರ ಮೇಲೆ ಪ್ರಯಾಣಿಕರೊಬ್ಬರು ಹಲ್ಲೆ ನಡೆಸಿರುವ ಘಟನೆ ಇಂದೊರ್​ನಲ್ಲಿ ನಡೆದಿದೆ. ಇಂದೋರ್​ನ ಎಂಜಿಎಂ ವೈದ್ಯಕೀಯ ಕಾಲೇಜಿನ ಕಿರಿಯ ವೈದ್ಯೆ ಮೇಲೆ ಚಲಿಸುತ್ತಿರುವ ಬಸ್​ನಲ್ಲಿ ಹಲ್ಲೆ ನಡೆಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಈ ಕುರಿತು ಜ್ಯೂನಿಯರ್ ವೈದ್ಯರ ಸಂಘದ ಉಪಾಧ್ಯಕ್ಷೆ ಡಾ. ದೀಪ್ತಿ ವರ್ಮಾ ಅವರು ಗ್ವಾಲಿಯರ್​ನ ಝಾನ್ಸಿ ರೋಡ್ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಇಂದೋರ್: ಚಲಿಸುತ್ತಿದ್ದ ಬಸ್ಸಿನಲ್ಲಿ ಕಿರಿಯ ವೈದ್ಯೆಯ ಮೇಲೆ ಹಲ್ಲೆ
ವೈದ್ಯೆ-ಸಾಂದರ್ಭಿಕ ಚಿತ್ರImage Credit source: Laser Gastroenterology Clinic
ನಯನಾ ರಾಜೀವ್
|

Updated on: Aug 20, 2024 | 9:23 AM

Share

ಕೋಲ್ಕತ್ತಾದ ಆರ್​ಜಿ ಕರ್ ವೈದ್ಯಕೀಯ ಕಾಲೇಜು, ಆಸ್ಪತ್ರೆಯಲ್ಲಿ ತರಬೇತಿ ನಿರತ ವೈದ್ಯೆ ಮೇಲೆ ಇತ್ತೀಚೆಗೆ ನಡೆದ ಅತ್ಯಾಚಾರ, ಕೊಲೆ ಪ್ರಕರಣ ಮಾಸುವ ಮುನ್ನವೇ ದೇಶಾದ್ಯಂತ ಅಂತಹ ಕೆಲವು ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಇಂದೋರ್​ನ ಎಂಜಿಎಂ ವೈದ್ಯಕೀಯ ಕಾಲೇಜಿನ ಕಿರಿಯ ವೈದ್ಯೆ ಮೇಲೆ ಚಲಿಸುತ್ತಿರುವ ಬಸ್​ನಲ್ಲಿ ಹಲ್ಲೆ ನಡೆಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಈ ಕುರಿತು ಜ್ಯೂನಿಯರ್ ವೈದ್ಯರ ಸಂಘದ ಉಪಾಧ್ಯಕ್ಷೆ ಡಾ. ದೀಪ್ತಿ ವರ್ಮಾ ಅವರು ಗ್ವಾಲಿಯರ್​ನ ಝಾನ್ಸಿ ರೋಡ್ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ದೂರಿನ ಪ್ರಕಾರ, ಗುನಾ ಹಾಗೂ ಬಿಯೋರಾ ಪ್ರದೇಶದ ನಡುವೆ ಸಣ್ಣ ವಾಗ್ವಾದ ನಡೆದಿತ್ತು, ಪ್ರಯಾಣದ ಸಮಯದಲ್ಲಿ ಮಹಿಳಾ ಪ್ರಯಾಣಿಕರೊಬ್ಬರು ದೈಹಿಕವಾಗಿ ಹಲ್ಲೆ ನಡೆಸಿದ್ದಾರೆ ಎಂದು ವರ್ಮಾ ಆರೋಪಿಸಿದ್ದಾರೆ, ಹಲ್ಲೆ ಪರಿಣಾಮ ವರ್ಮಾ ಅವರ ಉಂಗುರದ ಬೆರಳಿನಲ್ಲಿ ಮುರಿತ ಉಂಟಾಗಿದೆ.

ಅಪರಿಚಿತ ಮಹಿಳೆ ಘಟನಾ ಸ್ಥಳದಿಂದ ಪತಿಗೆ ಕರೆ ಮಾಡಿ ಕರೆಸಿಕೊಂಡಿದ್ದಾರೆ, ಆತನ ಜತೆಗೆ ತೆರಳುವ ಮೊದಲು ವೈದ್ಯೆಗೆ ಬೆದರಿಕೆ ಹಾಕಿದ್ದಾರೆ ಎನ್ನುವ ಮಾಹಿತಿ ತಿಳಿದುಬಂದಿದೆ. ಪೊಲೀಸರು ಡಾ. ವರ್ಮಾ ಅವರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದು, ಪ್ರಕರಣದ ತನಿಖೆ ನಡೆಸುತ್ತಿದ್ದಾರೆ, ಏತನ್ಮಧ್ಯೆ ಡಾ. ವರ್ಮಾ ಅವರು ಘಟನೆಯ ವಿಡಿಯೋವನ್ನು ರೆಕಾರ್ಡ್​ ಮಾಡಿದ್ದಾರೆ, ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

ಮತ್ತಷ್ಟು ಓದಿ: ಕೋಲ್ಕತ್ತಾ: ತರಾತುರಿಯಲ್ಲಿ ವೈದ್ಯೆಯ ಶವ ಸಂಸ್ಕಾರ ಆರೋಪ, ಸ್ಮಶಾನ ಸಿಬ್ಬಂದಿ ಹೇಳಿದ್ದೇನು?

ಕಿರಿಯ ವೈದ್ಯೆಯ ಅತ್ಯಾಚಾರ ಮತ್ತು ಹತ್ಯೆಯ ಹಿನ್ನೆಲೆಯ ವಿರುದ್ಧ ಆಂದೋಲನದ ವೈದ್ಯರ ಪ್ರತಿಭಟನೆಯ ನಂತರ ಪಶ್ಚಿಮ ಬಂಗಾಳದ ಆರೋಗ್ಯ ಇಲಾಖೆ ಆರ್​ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಮತ್ತು ಉಪ ಪ್ರಾಂಶುಪಾಲ ಸಂಜಯ್ ಬಶಿಷ್ಠ ಅವರನ್ನು ಹುದ್ದೆಯಿಂದ ತೆಗೆದುಹಾಕಿದೆ.

ಕೋಲ್ಕತ್ತಾದ ಆರ್ ಜಿ ಕಾರ್ ವೈದ್ಯಕೀಯ ಕಾಲೇಜ್ ಮತ್ತು ಆಸ್ಪತ್ರೆಯ ವೈದ್ಯೆ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಆರೋಪಿ ಸಂಜಯ್ ರಾಯ್‌ಗೆ ಕೇಂದ್ರೀಯ ತನಿಖಾ ಸಂಸ್ಥೆ(ಸಿಬಿಐ) ಮಾನಸಿಕ ಪರೀಕ್ಷೆಯನ್ನು ನಡೆಸಿದೆ. ವಿಚಾರಣೆ ವೇಳೆ ರಾಯ್ ಹೇಳಿಕೆಗಳು ಬದಲಾಗಿದ್ದು, ಪಾಲಿಗ್ರಾಫ್ ಪರೀಕ್ಷೆ ಅಗತ್ಯ ಇದೆ ಎಂದು ಸಿಬಿಐ ಮೂಲಗಳು ಸೂಚಿಸಿವೆ. ಆರು ದಿನಗಳ ತನಿಖೆಯಲ್ಲಿ ಸಂಜಯ್ ರಾಯ್ ಹೊರತುಪಡಿಸಿ ಯಾವುದೇ ಆರೋಪಿಗಳು ಭಾಗಿಯಾಗಿರುವುದು ಸಿಬಿಐಗೆ ಕಂಡುಬಂದಿಲ್ಲ ಎಂದು ಮೂಲಗಳು ತಿಳಿಸಿವೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?
ರಾಹುಲ್ ಗಾಂಧಿಯ ದಿಮಾಗ್ ಚೋರಿಯಾಗಿದೆ ಎಂದ ಪ್ರಲ್ಹಾದ್ ಜೋಶಿ
ರಾಹುಲ್ ಗಾಂಧಿಯ ದಿಮಾಗ್ ಚೋರಿಯಾಗಿದೆ ಎಂದ ಪ್ರಲ್ಹಾದ್ ಜೋಶಿ