ಕೇವಲ 23 ನಿಮಿಷದಲ್ಲಿ ಪಾಕಿಸ್ತಾನದ ಭಯೋತ್ಪಾದಕರ ಸರ್ವನಾಶ; ಐಎಎಫ್ ಸಾಧನೆಗೆ ರಾಜನಾಥ್ ಸಿಂಗ್ ಶ್ಲಾಘನೆ

ಭುಜ್ ವಾಯುನೆಲೆಯಲ್ಲಿ ಇಂದು ಮಾತನಾಡಿದ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, 'ಪಾಕಿಸ್ತಾನದಲ್ಲಿ ಪೋಷಿಸಲ್ಪಟ್ಟ ಭಯೋತ್ಪಾದನೆಯನ್ನು ಹತ್ತಿಕ್ಕಲು ಐಎಎಫ್‌ಗೆ ಕೇವಲ 23 ನಿಮಿಷಗಳು ಸಾಕಾಯ್ತು' ಎಂದು ಹೇಳಿದ್ದಾರೆ. ಭುಜ್ ವಾಯುನೆಲೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಪಾಕಿಸ್ತಾನ ಕೂಡ ಬ್ರಹ್ಮೋಸ್ ಕ್ಷಿಪಣಿಯ ಶಕ್ತಿಯನ್ನು ಒಪ್ಪಿಕೊಂಡಿದೆ ಎಂದು ಹೇಳಿದರು. ಭಾರತದಲ್ಲಿ ತಯಾರಿಸಲಾದ ಬ್ರಹ್ಮೋಸ್ ಕ್ಷಿಪಣಿಯು ಪಾಕಿಸ್ತಾನಕ್ಕೆ ತನ್ನ ಸಾಮರ್ಥ್ಯವನ್ನು ತೋರಿಸಿದೆ ಎಂದು ಅವರು ಹೇಳಿದರು.

ಕೇವಲ 23 ನಿಮಿಷದಲ್ಲಿ ಪಾಕಿಸ್ತಾನದ ಭಯೋತ್ಪಾದಕರ ಸರ್ವನಾಶ; ಐಎಎಫ್ ಸಾಧನೆಗೆ ರಾಜನಾಥ್ ಸಿಂಗ್ ಶ್ಲಾಘನೆ
Rajnath Singh

Updated on: May 16, 2025 | 4:43 PM

ಭುಜ್, ಮೇ 16: ಇಂದು ಭುಜ್ ವಾಯುನೆಲೆಯಲ್ಲಿ ವಾಯುಪಡೆಯ ಯೋಧರನ್ನು ಉದ್ದೇಶಿಸಿ ಮಾತನಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್ (Rajnath Singh), ಆಪರೇಷನ್ ಸಿಂಧೂರ್ ಮೂಲಕ ಭಾರತ 23 ನಿಮಿಷಗಳಲ್ಲಿ ಪಾಕಿಸ್ತಾನಿ ಭಯೋತ್ಪಾದಕರನ್ನು ನಾಶಪಡಿಸಿದೆ ಎಂದು ಹೇಳಿದರು. “1965ರಲ್ಲಿ ಪಾಕಿಸ್ತಾನದ ವಿರುದ್ಧ ನಮ್ಮ ಗೆಲುವಿಗೆ ಭುಜ್ ಸಾಕ್ಷಿಯಾಗಿತ್ತು. ಇಂದು ಮತ್ತೆ ಅದೇ ಜಾಗ ಪಾಕಿಸ್ತಾನದ ವಿರುದ್ಧ ನಮ್ಮ ಗೆಲುವಿಗೆ ಸಾಕ್ಷಿಯಾಗಿದೆ. ಇಲ್ಲಿ ಉಪಸ್ಥಿತರಿರುವುದು ನನಗೆ ಹೆಮ್ಮೆ ತಂದಿದೆ” ಎಂದು ಅವರು ಹೇಳಿದರು. ಭಾರತೀಯ ವಾಯುಪಡೆಯು ತನ್ನ ಶೌರ್ಯ, ಧೈರ್ಯ ಮತ್ತು ವೈಭವದಿಂದ ಹೊಸ ಮತ್ತು ಹೆಚ್ಚಿನ ಎತ್ತರವನ್ನು ತಲುಪಿದೆ ಎಂದು ಅವರು ಹೇಳಿದರು.

“ಭುಜ್ ವಾಯುನೆಲೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಬ್ರಹ್ಮೋಸ್ ಕ್ಷಿಪಣಿಯ ಶಕ್ತಿಯನ್ನು ಪಾಕಿಸ್ತಾನ ಕೂಡ ಒಪ್ಪಿಕೊಂಡಿದೆ ಎಂದು ಹೇಳಿದರು. ಭಾರತದಲ್ಲಿ ತಯಾರಿಸಲಾದ ಬ್ರಹ್ಮೋಸ್ ಕ್ಷಿಪಣಿ ಪಾಕಿಸ್ತಾನಕ್ಕೆ ‘ರಾತ್ ಕೆ ಅಂಡ್ ಹೆರೆ ಮೇ ದಿನ್ ಕಾ ಉಜಾಲಾ’ ಎಂದು ತೋರಿಸಿದೆ. ಆಪರೇಷನ್ ಸಿಂಧೂರ್ ಸಮಯದಲ್ಲಿ ನೀವು ಏನೇ ಮಾಡಿದರೂ, ಎಲ್ಲಾ ಭಾರತೀಯರು ಹೆಮ್ಮೆಪಡುವಂತೆ ಮಾಡಿದ್ದೀರಿ. ಪಾಕಿಸ್ತಾನದಲ್ಲಿ ಪೋಷಿಸಲಾಗುತ್ತಿರುವ ಭಯೋತ್ಪಾದನೆಯನ್ನು ಹತ್ತಿಕ್ಕಲು ಭಾರತೀಯ ವಾಯುಪಡೆಗೆ ಕೇವಲ 23 ನಿಮಿಷಗಳು ಸಾಕಾಯಿತು” ಎಂದು ರಾಜನಾಥ್ ಸಿಂಗ್ ಶ್ಲಾಘಿಸಿದ್ದಾರೆ.

ಇದನ್ನೂ ಓದಿ
ಆಪರೇಷನ್ ಸಿಂಧೂರ್ ಕುರಿತು ಭಾರತೀಯ ಸೇನೆಯಿಂದ ಸುದ್ದಿಗೋಷ್ಠಿ
ಹಿಂದೂ ಮಹಿಳೆಯರ ಕುಂಕುಮ ಅಳಿಸಿದವರಿಗೆ ತಕ್ಕ ಶಾಸ್ತಿಯಾಗಿದೆ ಎಂದ ಸೇನೆ
ಪಾಕ್​ನಲ್ಲಿ ಭಾರತದ ದಾಳಿ ಆರಂಭದಿಂದ ಇಲ್ಲಿಯವರೆಗೆ ಏನೇನಾಯ್ತು?
ಪಾಕಿಸ್ತಾನದ ಈ 9 ಸ್ಥಳಗಳ ಮೇಲೆ ಭಾರತದಿಂದ ದಾಳಿ, ಮನೆ ಬಿಟ್ಟು ಓಡಿದ ಜನರು


ಇದನ್ನೂ ಓದಿ: ನಮ್ಮ ತಾಳ್ಮೆ ಪರೀಕ್ಷಿಸಬೇಡಿ; ಪಾಕಿಸ್ತಾನಕ್ಕೆ ರಾಜನಾಥ್ ಸಿಂಗ್ ಎಚ್ಚರಿಕೆ

“ನಿನ್ನೆಯಷ್ಟೇ ನಾನು ಶ್ರೀನಗರದಲ್ಲಿ ನಮ್ಮ ಧೈರ್ಯಶಾಲಿ ಸೇನಾ ಸಿಬ್ಬಂದಿಯನ್ನು ಭೇಟಿಯಾದೆ. ಇಂದು, ನಾನು ಇಲ್ಲಿ ವಾಯುಪಡೆಯ ಯೋಧರನ್ನು ಭೇಟಿಯಾಗುತ್ತಿದ್ದೇನೆ. ನಿನ್ನೆ ನಾನು ಉತ್ತರ ಪ್ರದೇಶದ ನಮ್ಮ ಜವಾನರನ್ನು ಭೇಟಿಯಾದೆ. ಇಂದು ನಾನು ದೇಶದ ಪಶ್ಚಿಮ ಭಾಗದಲ್ಲಿ ವಾಯುಸೇನೆಯ ಯೋಧರು ಮತ್ತು ಇತರ ಭದ್ರತಾ ಸಿಬ್ಬಂದಿಯನ್ನು ಭೇಟಿಯಾಗುತ್ತಿದ್ದೇನೆ. ಎರಡೂ ರಂಗಗಳಲ್ಲಿ ಹೆಚ್ಚಿನ ಉತ್ಸಾಹ ಮತ್ತು ಶಕ್ತಿಯನ್ನು ನೋಡುವ ಉತ್ಸಾಹ ನನಗಿದೆ. ನೀವು ಭಾರತದ ಗಡಿಗಳನ್ನು ಸುರಕ್ಷಿತಗೊಳಿಸುತ್ತೀರಿ ಎಂದು ನನಗೆ ಭರವಸೆ ಇದೆ.” ಎಂದಿದ್ದಾರೆ.


ಇದನ್ನೂ ಓದಿ: ಪಾಕಿಸ್ತಾನದೊಂದಿಗೆ ಹೆಚ್ಚುತ್ತಿರುವ ಉದ್ವಿಗ್ನತೆ; ಸಿಡಿಎಸ್, ಸಶಸ್ತ್ರ ಪಡೆಗಳ ಮುಖ್ಯಸ್ಥರೊಂದಿಗೆ ರಾಜನಾಥ್ ಸಿಂಗ್ ಸಭೆ

ಜಮ್ಮು ಮತ್ತು ಕಾಶ್ಮೀರದ ಶ್ರೀನಗರದ ಬಾದಾಮಿ ಬಾಗ್ ಕ್ಯಾಂಟ್‌ಗೆ ಭೇಟಿ ನೀಡಿದ ಒಂದು ದಿನದ ನಂತರ, ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಇಂದು ಗುಜರಾತ್‌ನ ಭುಜ್ ವಾಯುಪಡೆ ನಿಲ್ದಾಣಕ್ಕೆ ಆಗಮಿಸಿದರು. ಅಲ್ಲಿ ಅವರು ಭಾರತೀಯ ಸೇನಾ ಸೈನಿಕರನ್ನು ಭೇಟಿ ಮಾಡಿ ಸಂವಾದ ನಡೆಸಿದರು. ಶತ್ರುಗಳಿಗೆ ಸ್ಪಷ್ಟ ಸಂದೇಶವನ್ನು ರವಾನಿಸುವ ಮೂಲಕ ಗಡಿಯುದ್ದಕ್ಕೂ ಪಾಕಿಸ್ತಾನಿ ಪೋಸ್ಟ್‌ಗಳು ಮತ್ತು ಬಂಕರ್‌ಗಳನ್ನು ನಾಶಪಡಿಸಿದ ಧೈರ್ಯಶಾಲಿ ಸೈನಿಕರಿಗೆ ರಾಜನಾಥ್ ಸಿಂಗ್ ಕೃತಜ್ಞತೆಗಳನ್ನು ವ್ಯಕ್ತಪಡಿಸಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ