AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನ್ಯಾಯಮೂರ್ತಿಗಳು ಕೂಡ ಮನುಷ್ಯರೇ ಅವರಿಂದಲೂ ತಪ್ಪಾಗುತ್ತೆ: ನ್ಯಾ.ಅಭಯ್ ಓಕಾ

ನ್ಯಾಯಮೂರ್ತಿಗಳು ಕೂಡ ಮನುಷ್ಯರು ಮತ್ತು ಅವರು ತೀರ್ಪು ನೀಡುವಾಗ ತಪ್ಪುಗಳಾಗುತ್ತವೆ ಎಂದು ನ್ಯಾಯಮೂರ್ತಿ ಅಭಯ್ ಎಸ್ ಓಕಾ ಹೇಳಿದ್ದಾರೆ. 2016 ರಲ್ಲಿ ಬಾಂಬೆ ಹೈಕೋರ್ಟ್ ನ್ಯಾಯರ್ಮೂಯಾಗಿ ಕೌಟುಂಬಿಕ ಹಿಂಸಾಚಾರ ಕಾಯ್ದೆಯ ವ್ಯಾಖ್ಯಾನಕ್ಕೆ ಸಂಬಂಧಿಸಿದ ಪ್ರಕರಣವನ್ನು ನಿರ್ಧರಿಸುವಲ್ಲಿ ತಾನು ತಪ್ಪು ಮಾಡಿದ್ದೇನೆ ಎಂದು ಒಪ್ಪಿಕೊಂಡರು ಮತ್ತು ಇದು ನನ್ಯಾಯಮೂರ್ತಿಗಳ ನಿರಂತರ ಕಲಿಕೆಯ ಭಾಗ ಎಂದು ಹೇಳಿದರು.ನ್ಯಾಯಮೂರ್ತಿ ಓಕಾ, ಅವರು ಸ್ವತಃ ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಅವರನ್ನೊಳಗೊಂಡ ಪೀಠದ ಪರವಾಗಿ ತೀರ್ಪು ನೀಡಿದ್ದರು. ಕೌಟುಂಬಿಕ ಹಿಂಸಾಚಾರ ಕಾಯ್ದೆಯ ಸೆಕ್ಷನ್ 12(1) ರ ಅಡಿಯಲ್ಲಿ ಸಲ್ಲಿಸಲಾದ ಅರ್ಜಿಯ ವಿಚಾರಣೆಯನ್ನು ರದ್ದುಗೊಳಿಸಲು ಹೈಕೋರ್ಟ್​ಗೆ ಅಧಿಕಾರವಿದೆ ಎಂದು ಹೇಳಿದ್ದರು.

ನ್ಯಾಯಮೂರ್ತಿಗಳು ಕೂಡ ಮನುಷ್ಯರೇ ಅವರಿಂದಲೂ ತಪ್ಪಾಗುತ್ತೆ: ನ್ಯಾ.ಅಭಯ್ ಓಕಾ
ಅಭಯ್ ಎಸ್ ಓಕಾImage Credit source: Bar and bench
ನಯನಾ ರಾಜೀವ್
|

Updated on:May 20, 2025 | 9:58 AM

Share

ನವದೆಹಲಿ, ಮೇ 20: ‘‘ನ್ಯಾಯಮೂರ್ತಿಗಳು ಕೂಡ ಮನುಷ್ಯರೇ, ಅವರಿಂದಲೂ ತಪ್ಪಾಗಬಹುದು’’ ಎಂದು ಸುಪ್ರೀಂಕೋರ್ಟ್​ನ ನ್ಯಾ. ಅಭಯ್ ಎಸ್ ಓಕಾ ಹೇಳಿದ್ದಾರೆ.2016ರಲ್ಲಿ ಬಾಂಬೆ ಹೈಕೋರ್ಟ್​ನ ನ್ಯಾಯಮೂರ್ತಿಗಳಾಗಿ ಕೌಟುಂಬಿಕ ಹಿಂಸಾಚಾರ ಕಾಯ್ದೆಗೆ ಸಂಬಂಧಿಸಿದ ಪ್ರಕರಣದಲ್ಲಿ ತೀರ್ಪು ನೀಡುವಾಗ ತಾವು ಕೂಡ ತಪ್ಪು ಮಾಡಿರುವುದಾಗಿ ಅವರು ಒಪ್ಪಿಕೊಂಡರು. ನ್ಯಾಯಮೂರ್ತಿಗಳಿಗೆ ಇದು ನಿರಂತರ ಕಲಿಕಾ ಪ್ರಕ್ರಿಯೆ ಎಂದರು.

ನ್ಯಾಯಮೂರ್ತಿ ಓಕಾ, ಅವರು ಸ್ವತಃ ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಅವರನ್ನೊಳಗೊಂಡ ಪೀಠದ ಪರವಾಗಿ ತೀರ್ಪು ನೀಡಿದ್ದರು. ಕೌಟುಂಬಿಕ ಹಿಂಸಾಚಾರ ಕಾಯ್ದೆಯ ಸೆಕ್ಷನ್ 12(1) ರ ಅಡಿಯಲ್ಲಿ ಸಲ್ಲಿಸಲಾದ ಅರ್ಜಿಯ ವಿಚಾರಣೆಯನ್ನು ರದ್ದುಗೊಳಿಸಲು ಹೈಕೋರ್ಟ್​ಗೆ ಅಧಿಕಾರವಿದೆ ಎಂದು ಹೇಳಿದ್ದರು.

ಸಿಆರ್​ಪಿಸಿ ಸೆಕ್ಷನ್ 482ರ ಅಡಿಯಲ್ಲಿ, ಸಂತ್ರಸ್ತ ಮಹಿಳೆ ಪರಿಹಾರ ಪಾವತಿಯಂತಹ ಪ್ರಕ್ರಿಯೆಗೆ ಮ್ಯಾಜಿಸ್ಟ್ರೇಟ್​ ಸಂಪರ್ಕಿಸಬಹುದು ಎಂದು ಅದು ಹೇಳುತ್ತದೆ.ಕೌಟುಂಬಿಕ ಹಿಂಸಾಚಾರ ಕಾಯ್ದೆಯು ಕಲ್ಯಾಣ ಕಾನೂನಾಗಿದ್ದು, ಕೌಟುಂಬಿಕ ಹಿಂಸಾಚಾರದಿಂದ ಬಳಲುತ್ತಿರುವ ಮಹಿಳೆಯರಿಗೆ ನ್ಯಾಯ ಒದಗಿಸಲು ವಿಶೇಷವಾಗಿ ವಿನ್ಯಾಸಗೊಳಿಸಲಾಗಿದೆ ಎಂಬುದನ್ನು ಹೈಕೋರ್ಟ್​ಗಳು ನೆನಪಿನಲ್ಲಿಟ್ಟುಕೊಳ್ಳಬೇಕು ಎಂದು ಸುಪ್ರೀಂಕೋರ್ಟ್​ ಹೇಳಿದೆ. ಆಗ ಇವರ ತಪ್ಪುಗಳನ್ನು ಅದೇ ಹೈಕೋರ್ಟ್​ ಮತ್ತೊಂದು ಪೀಠ ಎತ್ತಿ ಹಿಡಿದಿತ್ತು.

ಇದನ್ನೂ ಓದಿ
Image
ರಾಹುಲ್ ಗಾಂಧಿಯ ಪೌರತ್ವ ರದ್ದುಗೊಳಿಸಲು ಕೋರಿ ಸಲ್ಲಿಸಿದ್ದ ಅರ್ಜಿ ವಜಾ
Image
ಅಶ್ಲೀಲಕ್ಕೂ ಒಂದು ಮಿತಿ ಇರಬೇಕ: ಪ್ರಜ್ವಲ್​ ರೇವಣ್ಣಗೆ ಹೈಕೋರ್ಟ್‌ ಚಾಟಿ
Image
ಸಹಕಾರ ಸಂಘಗಳ ಕಾಯ್ದೆ ತಿದ್ದುಪಡಿ ಸಂವಿಧಾನಬಾಹಿರ: ಹೈಕೋರ್ಟ್ ಮಹತ್ವದ ತೀರ್ಪು
Image
ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕ ಮಂಡನೆ: ಕನ್ನಡ ಭಾಷೆ ಕಾಯ್ದೆ ಅನುಷ್ಠಾನ ಮಾಡದಿದ್ದರೆ ದಂಡ

ಮತ್ತಷ್ಟು ಓದಿ: ‘ಕಾನೂನು ಕುರುಡಲ್ಲ’; ಸುಪ್ರೀಂ ಕೋರ್ಟ್‌ನಲ್ಲಿ ಕಣ್ಣು ತೆರೆದ ಹೊಸ ನ್ಯಾಯದೇವತೆ ಪ್ರತಿಮೆ ಅನಾವರಣ

ಆದ್ದರಿಂದ ಸೆಕ್ಷನ್ 12(1)ರ ಅಡಿಯಲ್ಲಿನ ವಿಚಾರಣೆಯನ್ನು ರದ್ದುಗೊಳಿಸಲು ಸೆಕ್ಷನ್ 482ರ ಅಡಿಯಲ್ಲಿ ನ್ಯಾಯ ನೀಡುವಾಗ ಹೈಕೋರ್ಟ್​ ನಿಧಾನವಾಗಿ ಜಾಗರೂಕವಾಗಿರಬೇಕು. ಕಾನೂನು ಪ್ರಕ್ರಿಯೆಯ ಸಂಪೂರ್ಣ ಅಕ್ರಮ ಅಥವಾ ದುರುಪಯೋಗದ ಸ್ಪಷ್ಟ ಪ್ರಕರಣವಿದ್ದಲ್ಲಿ ಮಾತ್ರ ಹಸ್ತಕ್ಷೇಪ ಮಾಡಬಹುದು ಎಂದು ಪೀಠ ಹೇಳಿದೆ.

ಹೈಕೋರ್ಟ್ ಸಂಯಮ ತೋರಿಸದ ಹೊರತು, 2005 ರ ಕೌಟುಂಬಿಕ ಹಿಂಸಾಚಾರ ಕಾಯ್ದೆಯನ್ನು ಜಾರಿಗೆ ತರುವ ಮೂಲ ಉದ್ದೇಶ ವಿಫಲಗೊಳ್ಳುತ್ತದೆ ಎಂದು ಪೀಠ ಹೇಳಿದೆ. ಒಂಬತ್ತು ವರ್ಷಗಳ ಹಿಂದೆ ಹೈಕೋರ್ಟ್ ನ್ಯಾಯಮೂರ್ತಿಗಳಾಗಿ ತೆಗೆದುಕೊಂಡಿದ್ದ ಮತ್ತು ಹೈಕೋರ್ಟ್‌ಗಳ ಆದೇಶಗಳನ್ನು ಸರಿಪಡಿಸಿದ ನ್ಯಾಯಮೂರ್ತಿ ಓಕಾ, ಕೌಟುಂಬಿಕ ಹಿಂಸಾಚಾರ ಕಾಯ್ದೆಯ ಸೆಕ್ಷನ್ 12(1) ರ ಅಡಿಯಲ್ಲಿ ವಿಚಾರಣೆಗಳನ್ನು ರದ್ದುಗೊಳಿಸಲು CrPC ಯ ಸೆಕ್ಷನ್ 482 ರ ಅಡಿಯಲ್ಲಿ ಅಧಿಕಾರ ಇರುವುದಿಲ್ಲ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:50 am, Tue, 20 May 25

ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ