Sanjiv Khanna: ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ ಸಂಜೀವ್ ಖನ್ನಾ ಪ್ರಮಾಣವಚನ ಸ್ವೀಕಾರ
ಸುಪ್ರೀಂ ಕೋರ್ಟ್‌ನ ಹಿರಿಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಇಂದು ಭಾರತದ 51ನೇ ಮುಖ್ಯ ನ್ಯಾಯಮೂರ್ತಿಯಾಗಿ(CJI) ಪ್ರಮಾಣವಚನ ಸ್ವೀಕರಿಸಿದ್ದಾರೆ.
ಸುಪ್ರೀಂ ಕೋರ್ಟ್‌ನ ಹಿರಿಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಇಂದು ಭಾರತದ 51ನೇ ಮುಖ್ಯ ನ್ಯಾಯಮೂರ್ತಿಯಾಗಿ(CJI) ಪ್ರಮಾಣವಚನ ಸ್ವೀಕರಿಸಿದ್ದಾರೆ. 1960ರ ಮೇ 14ರಂದು ದೆಹಲಿ ಹೈಕೋರ್ಟ್‌ನ ಮಾಜಿ ನ್ಯಾಯಮೂರ್ತಿಯಾದ ದೇವ್ ರಾಜ್ ಖನ್ನಾ ಅವರ ಮಗನಾಗಿ ಜನಿಸಿದ ಸಂಜೀವ್ ಖನ್ನಾ ದೆಹಲಿಯ ಪ್ರತಿಷ್ಠಿತ ಮಾಡರ್ನ್ ಸ್ಕೂಲ್‌ನಲ್ಲಿ ಶಾಲಾ ಶಿಕ್ಷಣವನ್ನು ಪೂರ್ಣಗೊಳಿಸಿದರು.
1980ರಲ್ಲಿ ದೆಹಲಿ ವಿಶ್ವವಿದ್ಯಾಲಯದಿಂದ ಪದವಿ ಮತ್ತು ಅನಂತರ ದೆಹಲಿ ವಿಶ್ವವಿದ್ಯಾಲಯದಿಂದ ಕಾನೂನು ಪದವಿಯನ್ನು ಪಡೆದರು. ಚುನಾವಣಾ ಬಾಂಡ್ ರದ್ದತಿ, ಕಣಿವೆ ರಾಜ್ಯ ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ 370 ವಿಧಿ ರದ್ದತಿ ಎತ್ತಿ ಹಿಡಿದಂತಹ ಪ್ರಮುಖ ವಿಷಯಗಳ ತೀರ್ಪು ಪ್ರಕಟಿಸಿದ್ದ ನ್ಯಾ| ಸಂಜೀವ್ ಖನ್ನಾ ಅವರು ಸುಪ್ರೀಂಕೋರ್ಟ್‌ನ 51ನೇ ಮುಖ್ಯ ನ್ಯಾಯಮೂರ್ತಿಯಾಗಿ ಇಂದು ಸೋಮವಾರ ರಾಷ್ಟ್ರಪತಿ ಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ನಿರ್ಗಮಿತ ನ್ಯಾಯಮೂರ್ತಿಡಿ.ವೈ ಚಂದ್ರಚೂಡ್ ಅವರಿಂದ ತೆರವಾದ ಸ್ಥಾನಕ್ಕೆ ಈಗ ಸಂಜೀವ್ ಖನ್ನಾ ಏರುತ್ತಿದ್ದು, ಮೇ. 13, 2025 ರವರೆಗೆ ಅಧಿಕಾರದಲ್ಲಿ ಇರಲಿದ್ದಾರೆ. ನ್ಯಾ. ಖನ್ನಾ ಅವರ ತಂದೆ ದೇವ್‌ರಾಜ್ ಖನ್ನಾ ಕೂಡ ದೆಹಲಿ ಹೈಕೋರ್ಟ್‌ನಲ್ಲಿ ನ್ಯಾಯಮೂರ್ತಿಯಾಗಿದ್ದರು.
ಮತ್ತಷ್ಟು ಓದಿ: Sanjiv Khanna: ಡಿವೈ ಚಂದ್ರಚೂಡ್ ನಿವೃತ್ತಿ ನಂತರ ಸಿಜೆಐ ಆಗಲಿರುವ ಸಂಜೀವ್ ಖನ್ನಾ ಯಾರು?
2004 ರಲ್ಲಿ ದೆಹಲಿ ಸರ್ಕಾರದ ಸ್ಥಾಯಿ ಸಲಹೆಗಾರರಾಗಿ (ಸಿವಿಲ್) ನೇಮಕಗೊಂಡಿದ್ದ ಅವರು, ದೆಹಲಿ ಹೈಕೋರ್ಟ್‌ನಲ್ಲಿ ಹೆಚ್ಚುವರಿ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿ ಮತ್ತು ಅಮಿಕಸ್ ಕ್ಯೂರಿ ಆಗಿ ಹಲವಾರು ಕ್ರಿಮಿನಲ್ ಪ್ರಕರಣಗಳಲ್ಲಿ ಹಾಜರಾಗಿ, ವಾದಿಸಿದ್ದಾರೆ. ಅವರ ಚಿಕ್ಕಪ್ಪ ಎಚ್.ಆರ್.ಖನ್ನಾ ಸುಪ್ರೀಂಕೋರ್ಟ್ ನ್ಯಾಯಮೂರ್ತಿಯಾಗಿ ಕಾರ್ಯ ನಿರ್ವಹಿಸಿದ್ದರು.
ಪ್ರಕರಣಗಳು ಬಾಕಿ ಉಳಿಯುವುದನ್ನು ಕಡಿಮೆ ಮಾಡುವುದು ಹಾಗೂ ನ್ಯಾಯ ನೀಡುವುದನ್ನು ತರಿತಗೊಳಿಸುವುದು ನ್ಯಾ. ಸಂಜೀವ್ ಕುಮಾರ್ ಅವರ ಆದ್ಯತೆ ಎಂದು ಹೇಳಲಾಗುತ್ತಿದೆ.
ಸಂಜೀವ್ ಖನ್ನಾ ಚಿಕ್ಕಪ್ಪ ದಿ. ನ್ಯಾಯಮೂರ್ತಿ ಎಚ್‌ಆರ್ ಖನ್ನಾ ಅವರಿಗೆ ಮುಖ್ಯ ನ್ಯಾಯಮೂರ್ತಿಯಾಗುವ ಅವಕಾಶವನ್ನು ಒಂದು ಕಾರಣಕ್ಕಾಗಿ ನಿರಾಕರಿಸಲಾಯಿತ. ಅವರು 1975-1977ರ ತುರ್ತು ಪರಿಸ್ಥಿತಿಯ ವಿರುದ್ಧ ನಿಲ್ಲಲು ಧೈರ್ಯಮಾಡಿದ ಏಕೈಕ ಧ್ವನಿಯಾಗಿದ್ದರು. ದಮನಕಾರಿ ಆಡಳಿತವು ಇಂದಿರಾ ಗಾಂಧಿಯವರ ಕಬ್ಬಿಣದ ಹಿಡಿತದಲ್ಲಿ ಭಿನ್ನಾಭಿಪ್ರಾಯ ಮತ್ತು ಪ್ರಜಾಪ್ರಭುತ್ವವನ್ನು ಹತ್ತಿಕ್ಕಿತು.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 10:15 am, Mon, 11 November 24